AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಿಎಂ ಸಿದ್ದರಾಮಯ್ಯ ಬುಡಕ್ಕೆ!

ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಆರೋಪ ಮಾಡಿದ ಬೆನ್ನಲ್ಲೇ ಮಾಜಿ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ, ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಮತ ಖರೀದಿ ಆರೋಪ ಮಾಡಿದ್ದು, ಇದೀಗ ಇದನ್ನೇ ಅಸ್ತ್ರ ಮಾಡಿಕೊಂಡಿರುವ ವಿಪಕ್ಷ ಬಿಜೆಪಿ ಚುನಾವಣಾ ಆಯೋಗದ ಮೆಟ್ಟಿಲೇರಿದೆ. ಇದರೊಂದಿಗೆ ತಮ್ಮ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳ್ಳತನ ಆರೋಪ ಇದೀಗ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ.

ರಾಹುಲ್ ಗಾಂಧಿ ಮತಗಳ್ಳತನ ಆರೋಪ ಸಿಎಂ ಸಿದ್ದರಾಮಯ್ಯ ಬುಡಕ್ಕೆ!
Rahul Gandhi And Siddaramaiah
ಕಿರಣ್​ ಹನಿಯಡ್ಕ
| Edited By: |

Updated on: Aug 21, 2025 | 2:36 PM

Share

ಬೆಂಗಳೂರು, (ಆಗಸ್ಟ್ 21): ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಮತಗಳ್ಳತನ ಆರೋಪ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬುಡಕ್ಕೆ ಬಂದಿದೆ. ಹೌದು…2018ರ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2028) ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿ ಮಾಡಿದ್ದರಿಂದ ಸಿದ್ದರಾಮಯ್ಯನವರು ಗೆದ್ದದ್ದು ಎಂದು ಸಿ.ಎಂ. ಇಬ್ರಾಹಿಂ (CM Ibrahim) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದೇ ಹೇಳಿಕೆಯನ್ನು ಆಧರಿಸಿ ರಾಜ್ಯ ಬಿಜೆಪಿ, ರಾಜ್ಯ ಚುನಾವವಣಾ ಆಯೋಗಕ್ಕೆ (karnataka election commission) ದೂರು ನೀಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ 3000 ಮತ ಖರೀದಿ ಕುರಿತು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಹೇಳಿಕೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ 7 ಕೋಟಿ ರೂ. ಹಂಚಿಕೆ ಕುರಿತು ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿಕೆಯನ್ನು ಆಧರಿಸಿ ಬಿಜೆಪಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.

ಇದನ್ನೂ ಓದಿ: 3000 ಮತ ಖರೀದಿ: ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಚುನಾವಣಾ ಆಯೋಗಕ್ಕೆ ಲೇಹರ್ ಸಿಂಗ್ ಪತ್ರ

ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ, ಮಾಜಿ ಎಂಎಲ್ಸಿಗಳಾದ ಕ್ಯಾ. ಗಣೇಶ್ ‌ಕಾರ್ಣಿಕ್, ಅರುಣ್ ಶಹಾಪುರ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠ ಸಂಚಾಲಕ ವಸಂತಕುಮಾರ್ ಅವರನ್ನೊಳಗೊಂಡ ಬಿಜೆಪಿ ತಂಡ, ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಇಬ್ರಾಹಿಂ ಮತ್ತು ಶಿವಲಿಂಗೇಗೌಡ ಹೇಳಿಕೆಗಳ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದೆ.

ಕೇಂದ್ರ ಚುನಾವಣೆ ಆಯೋಗಕ್ಕೂ ಪತ್ರ

ರಾಹುಲ್ ಗಾಂಧಿ ಮತಗಳ್ಳತನದ ಆರೋಪ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೆಂಗಳೂರಿನಲ್ಲಿ ಪ್ರತಿಭಟನಾ ಸಮಾವೇಶ ನಡೆಸಿ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಕೆಲ ಅಂಕಿ-ಸಂಖ್ಯೆ ಬಿಡುಗಡೆಗೊಳಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದ ಸಿ.ಎಂ. ಇಬ್ರಾಹಿಂ, ಸಿದ್ದರಾಮಯ್ಯ ವಿರುದ್ಧ ಮತ ಖರೀದಿ ಆರೋಪ ಮಾಡಿದ್ದರು. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಬಿಜೆಪಿ, ಸಿದ್ದರಾಮಯ್ಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದೆ. ಈ ಸಂಬಂಧ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಹ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಸಿ.ಎಂ.ಇಬ್ರಾಹಿಂ (CM Ibrahim) ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇಬ್ರಾಹಿಂ ಹೇಳಿದ್ದೇನು?

“2018ರ ಅಸೆಂಬ್ಲಿ ಚುನಾವಣೆಯಲ್ಲಿ ಏನಾಗಿತ್ತು ಗೊತ್ತಾ? ಚಾಮುಂಡೇಶ್ವರಿಯಲ್ಲಿನ ಗ್ರೌಂಡ್ ರಿಪೋರ್ಟ್ ಸರಿಯಿರಲಿಲ್ಲ, ಅದಕ್ಕಾಗಿ ಬಾದಾಮಿಯಲ್ಲೂ ಸಿದ್ದರಾಮಯ್ಯ ಕಣಕ್ಕಿಳಿದಿದ್ದರು. ಎರಡು ಕಡೆ ಸ್ಪರ್ಧಿಸಿದ್ದರು. ಬಾದಾಮಿಯಲ್ಲಿ, ಮೂರು ಸಾವಿರ ಮತವನ್ನು ಖರೀದಿಸದಿದ್ದರೆ ಅಲ್ಲೂ ಸೋಲುತ್ತಿದ್ದರು” ಎಂದು ಸಿಎಂ ಇಬ್ರಾಹಿಂ ಹೇಳಿದ್ದರು.

ಬಾದಾಮಿಯಲ್ಲಿ ನಾನು ಬುದ್ದಿವಂತಿಕೆಯಿಂದ ಕೆಲಸ ಮಾಡಿದೆ. ಅಲ್ಲಿನ ಪರಿಸ್ಥಿತಿಯೂ ಸಿದ್ದರಾಮಯ್ಯನವರಿಗೆ ಪೂರಕವಾಗಿರಲಿಲ್ಲ. ನಾನು ಬೇರೆ ಕಡೆ ಸಾಲ ಮಾಡಿ ಮೂರು ಸಾವಿರ ಮತಗಳನ್ನು ಖರೀದಿ ಮಾಡಿದ್ದೆ. ಆ ಕಾರಣಕ್ಕಾಗಿ, ಅವರು ಅಲ್ಪಮತದಲ್ಲಿ ಗೆಲುವು ಸಾಧಿಸಿದರು. ಆರು ತಿಂಗಳ ನಂತರ, ಸಿದ್ದರಾಮಯ್ಯ ನಾನು ಖರ್ಚು ಮಾಡಿದ್ದ ದುಡ್ಡನ್ನು ವಾಪಸ್ ಕೊಟ್ಟರು ಎಂದು ಎಂದಿದ್ದಾರೆ.

ನಾನು ಹೇಳುತ್ತಿರುವುದು ನಿಜ, ನಾನು ಎಲ್ಲಿ ಬೇಕಾದರೂ ಪ್ರಮಾಣ ಮಾಡುತ್ತೇನೆ. ಆದರೆ, ಮೇಲ್ಮನೆಯಲ್ಲಿ ನನ್ನನ್ನು ಗೌರವದಿಂದ ಕಾಣಲಿಲ್ಲ, ಆ ಕಾರಣಕ್ಕಾಗಿ ರಾಜೀನಾಮೆ ನೀಡಿದೆ ಎಂದು ಇಬ್ರಾಹಿಂ ಹೇಳಿದ್ದಾರೆ. ಆ ಮೂಲಕ, ಮತದಾರರಿಗೆ ದುಡ್ಡು ಕೊಟ್ಟು ಮತ ಚಲಾಯಿಸಿಕೊಂಡಿದ್ದನ್ನು ಪರೋಕ್ಷವಾಗಿ ಹೇಳಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ