ರಾಜ್ಯಪಾಲರಿಂದ ಡಿಕೆ ಶಿವಕುಮಾರ್ಗೆ ಮತ್ತೊಂದು ಶಾಕ್ ಕೊಡಿಸಲು ಬಿಜೆಪಿ ಪ್ಲ್ಯಾನ್..!
ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೆ ಕೇಂದ್ರ ಸರ್ಕಾರ ರೆಡ್ ಸಿಗ್ನಲ್ ತೋರಿಸಿದೆ. ಇದರಿಂದ ಸರ್ಕಾರಕ್ಕೆ ಮೊದಲ ಹಂತದಲ್ಲಿ ಹಿನ್ನಡೆಯಾಗಿದೆ. ಅದರಲ್ಲೂ ಈ ವಿಚಾರದಲ್ಲಿ ಮಹತ್ವದ ಆಸಕ್ತಿ ತೋರಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ ಹಿನ್ನಡೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್ಗೆ ಮತ್ತೊಂದು ಶಾಕ್ ಕೊಡಲು ಬಿಜೆಪಿ ನಾಯಕರು ಭರ್ಜರಿ ಪ್ಲ್ಯಾನ್ ಮಾಡಿದ್ದಾರೆ.

ಬೆಂಗಳೂರು, (ಮಾರ್ಚ್ 19): ರಾಮನಗರ (Ramanagara) ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರ ಕನಸಿನ ಗ್ರೇಟರ್ ಬೆಂಗಳೂರು ವಿಧೇಯಕ (greater bengaluru bill ) ವಿರುದ್ಧ ಬಿಜೆಪಿ ಶಾಸಕರ ನಿಯೋಗ ರಾಜಭವನದ ಕದ ತಟ್ಟಿ, ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ.
ಬೆಂಗಳೂರು, (ಮಾರ್ಚ್ 19): ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಿಣ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಪ್ರಸ್ತಾಪವನ್ನ ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ಕೇಂದ್ರ ಸರ್ಕಾರ ತಣ್ಣೀರೆರಚಿಸಿದೆ. ಇದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರ ಕನಸಿನ ಗ್ರೇಟರ್ ಬೆಂಗಳೂರು ವಿಧೇಯಕ ವಿರುದ್ಧ ಬಿಜೆಪಿ ಶಾಸಕರ ನಿಯೋಗ ರಾಜಭವನದ ಕದ ತಟ್ಟಿ, ರಾಜ್ಯಪಾಲರಿಗೆ ದೂರು ಸಲ್ಲಿಕೆ ಮಾಡಿದೆ.
ಇದನ್ನೂ ಓದಿ: ಡಿಕೆ ಶಿವಕುಮಾರ್ಗೆ ಹಿನ್ನಡೆ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ನಕಾರ
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ವಿರುದ್ಧ ಇಂದು (ಮಾರ್ಚ್ 9) ರಾಜ್ಯ ಬಿಜೆಪಿ ನಿಯೋಗ, ರಾಜಪಾಲರಿಗೆ ದೂರು ನೀಡಿದ್ದು, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ದೂರು ಸಲ್ಲಿಕೆ ಮಾಡಲಾಗಿದೆ. ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಕೀಳು ಬುದ್ಧಿಯ ಕಾಂಗ್ರೆಸ್ ಪಾಠ ಕಲಿಸ್ತೀವಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸಲು, ಬೆಂಗಳೂರಿನ ಸಾಂಸ್ಕೃತಿಕ ಗುರುತನ್ನು ಕಾಪಾಡಿಕೊಳ್ಳಲು ಮತ್ತು ದಕ್ಷ ನಗರ ಆಡಳಿತವನ್ನು ಖಚಿತಪಡಿಸಿಕೊಳ್ಳಲು ರಾಜ್ಯಪಾಲರು, ಗ್ರೇಟರ್ ಬೆಂಗಳೂರು ಮಸೂದೆ ತಿರಸ್ಕರಿಸಬೇಕು ಎಂದು ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಏಳು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆಯನ್ನು ಇತ್ತೀಚೆಗೆ ರಾಜ್ಯ ವಿಧಾನಮಂಡಲದ ಎರಡೂ ಸದನಗಳಲ್ಲಿ ಅಂಗೀಕರಿಸಿಲಾಗಿದೆ. ವಿಧಾನಮಂಡಲದ ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದ್ದು, ಈಗ ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ. ಆದ್ರೆ, ಇದಕ್ಕೆ ಸಹಿ ಹಾಕಬೇಡಿ ಎಂದಿದೆ.
ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ನಿಯಮಾನುಸಾರವಿಲ್ಲದೆ ಅಂಗೀಕರಿಸಿರುವ ಗ್ರೇಟರ್ ಬೆಂಗಳೂರು ಮಸೂದೆ ಪರಿಷ್ಕರಿಸುವಂತೆ ಮನವಿ ಮಾಡಿದ್ದೇವೆ. ಬೆಂಗಳೂರನ್ನು ಒಡೆಯಬಾರದು. ಈ ವಿಚಾರವನ್ನ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯಪಾಲರು ಸಹ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೀಳು ಬುದ್ಧಿಯ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು
ತೆರಿಗೆದಾರರ ಮೇಲೆ ಹೊರೆಯಾಗುವ ಮತ್ತು ಬೆಂಗಳೂರಿನ ಬೆಳವಣಿಗೆಗೆ ಅಡ್ಡಿಯಾಗುವ ಅನಗತ್ಯ ಮಹಾನಗರಗಳ ಮತ್ತು ಸಮಿತಿಗಳ ರಚನೆಯನ್ನು ನಿಲ್ಲಿಸುವಂತೆ ಸರ್ಕಾರವನ್ನು ವಿನಂತಿಸುತ್ತಾ, ಆಡಳಿತ ಸುಧಾರಣೆಗಳು ಕನ್ನಡಿಗ ಗುರುತು, ಸಂಪ್ರದಾಯಗಳು ಮತ್ತು ಭಾಷಾ ಪ್ರಾತಿನಿಧ್ಯವನ್ನು ದುರ್ಬಲಗೊಳಿಸದಂತೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಆರ್ಥಿಕ ಕೇಂದ್ರೀಕರಣವನ್ನು ತಡೆಗಟ್ಟಿ ನಗರದ ಅಭಿವೃದ್ಧಿಗೆ ನ್ಯಾಯಯುತ ಮತ್ತು ಪಾರದರ್ಶಕ ನಿಧಿಯ ವಿತರಣೆಯನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.
ಒಟ್ಟಿನಲ್ಲಿ ಬಿಬಿಎಂಪಿಯನ್ನು ಏಳು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆ ಮೊನ್ನೇ ರಾಜ್ಯ ವಿಧಾನಮಂಡಲದ ಎರಡೂ ಸದನಗಳಲ್ಲಿ ಅಂಗೀಕರವಾಗಿದ್ದು, ಇದೀಗ ರಾಜ್ಯಪಾಲರು ಇದಕ್ಕೆ ಸಹಿ ಹಾಕುತ್ತಾರಾ ಅಥವಾ ವಾಪಸ್ ಕಳುಹಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.