Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ: ಡೆತ್​ನೋಟ್​ನಲ್ಲೇನಿದೆ?

ಕರ್ನಾಟಕ ರಾಜ್ಯ ಬಿಜೆಪಿಯ ಮಹಿಳಾ ಜನರಲ್ ಸೆಕ್ರೆಟರಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನಿವಾಸದಲ್ಲೇ ನೇಣು ಬಿಗಿದಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಆತ್ಮಹತ್ಯೆಗೂ ಮುನ್ನವೇ ಅವರು ಡೆತ್​ನೊಟ್​ ಬರೆದಿಟ್ಟಿದ್ದಾರೆ. ಹಾಗಾದ್ರೆ, ಮಂಜುಳಾ ಬರೆದಿಟ್ಟ ಡೆತ್​ನೋಟ್​ನ್ಲಲೇನಿದೆ? ಮಂಜುಳಾ ಏಕೆ ಈ ನಿರ್ಧಾರ ಕೈಗೊಂಡರು? ಆತ್ಮಹತ್ಯೆಗೆ ಕಾರಣವೇನು?

ಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ: ಡೆತ್​ನೋಟ್​ನಲ್ಲೇನಿದೆ?
Manjula
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on:Mar 11, 2025 | 7:08 PM

ಬೆಂಗಳೂರು, (ಮಾರ್ಚ್​ 11): ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ (Karnataka BJP General secretary) ಮಂಜುಳಾ (Manjula) ಅವರು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಇಂದು (ಮಾರ್ಚ್​ 11) ಬೆಂಗಳೂರಿನ(Bengaluru)  ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ. ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮತ್ತಿಕೆರಯ ಮನೆಯಲ್ಲಿ ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂತರ, ಸಾವಿನ ಸ್ಥಳವನ್ನು ಪರಿಶೀಲನೆ ಮಾಡಿದಾಗ ಪೊಲೀಸರಿಗೆ ಮಂಜುಳಾ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದ್ದು, ಈ ಬಗ್ಗೆ ತನಿಖೆ ನಡೆಸಿದ್ದಾರೆ.

ಇನ್ನು ಮಂಜುಳಾ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್ ನೋಟ್‌ ಬರೆದಿಟ್ಟಿದ್ದು, ಜೀವನದಲ್ಲಿ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಉಲ್ಲೇಖ ಮಾಡಿದ್ದಾರಂತೆ. ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್​ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಬೆಳೆದು ಬಂದಿದ್ದ ಮಂಜುಳಾ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಹುದ್ದೆ ಸಿಕ್ಕಿತ್ತು.ಆದ್ರೆ, ಇತ್ತೀಚೆಗೆ ಮಂಜುಳಾ ಅವರು ಗಂಡನನ್ನು ಕಳೆದುಕೊಂಡಿದ್ದಳು. ಬಳಿಕ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಮಂಜುಳಾ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ಪಾಲ್ಗೊಳ್ಳಲಾಗದೇ ದೂರವಿದ್ದರು. ಗಂಡನ ಸಾವು ನೋವಿನಿಂದ ಹೊರಬಾರಲಾಗದೇ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:10 pm, Tue, 11 March 25