ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಅರುಣ್ ಸಿಂಗ್, ಯಡಿಯೂರಪ್ಪ ಬಗ್ಗೆ ಹೇಳಿದ್ದೇನು?

Arun Singh: ಕರ್ನಾಟಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ; ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ

ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಅರುಣ್ ಸಿಂಗ್, ಯಡಿಯೂರಪ್ಪ ಬಗ್ಗೆ ಹೇಳಿದ್ದೇನು?
ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಅರುಣ್ ಸಿಂಗ್, ಯಡಿಯೂರಪ್ಪ ಬಗ್ಗೆ ಹೇಳಿದ್ದೇನು?

ದೆಹಲಿ: ರಾಜ್ಯದಲ್ಲಿ ಕಳೆದ ಭಾನುವಾರ ಇದ್ದಕ್ಕಿದ್ದಂತೆ ಎದ್ದಿದ್ದ ಕರ್ನಾಟಕ ನಾಯಕತ್ವ ಬದಲಾವಣೆ ಸುದ್ದಿಗೆ ಗುದ್ದು ಕೊಟ್ಟಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯ ಬದಲಾವಣೆ ಇಲ್ಲ; ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕೇವಲ ಕಾಲ್ಪನಿಕ ಎಂದ ಅರುಣ್ ಸಿಂಗ್ ಅವರು ರಾಜ್ಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಬಿಎಸ್‌ವೈ ಬದಲಾವಣೆ ಬಗ್ಗೆ ನಿರ್ಧಾರ ಮಾಡಿಲ್ಲ. ಹೈಕಮಾಂಡ್ ಮಟ್ಟದಲ್ಲಿ ಬದಲಾವಣೆಯ ನಿರ್ಧಾರ ಮಾಡಿಲ್ಲ ಎದು ದೆಹಲಿಯಲ್ಲಿ ಅರುಣ್ ಸಿಂಗ್ ಅವರು ಟಿವಿ9 ಜೊರೆ ಮಾತನಾಡುತ್ತಾ ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಅವರಿಗೆ ಪಕ್ಷದ ಬಗ್ಗೆ ಇರುವ ಬದ್ದತೆ ಎತ್ತಿತೋರಿಸುತ್ತದೆ: ಅರುಣ್ ಸಿಂಗ್

ಬಿಜೆಪಿ ಹೈಕಮಾಂಡ್ ಬಯಸಿದರೆ ಸಿಎಂ ಸ್ಥಾನದಿಂದ ಕೆಳಗಡೆ ಇಳಿಯುತ್ತೀನಿ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೈಮಾಂಡ್ ಹೇಳಿದ್ರೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ. ನಾವು ಪಕ್ಷದ ನಿರ್ಧಾರಗಳಿಗೆ ತಲೆಬಾಗಿ ಎಲ್ಲರೂ ಕೆಲಸ ಮಾಡೋದು. ಇದು ಪಕ್ಷಕ್ಕಿರೋ ಅವರ ಬದ್ದತೆ ತೋರಿಸುತ್ತದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ

BS Yediyurappa reacts to change in leadership talks in karnataka before cabinet meeting in bengaluru

ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು  ದಿಢೀರ್​ ಬೆಳವಣಿಗೆಯಲ್ಲಿ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಕಳೆದ ವಾರ ವಿಧಾನಸೌಧದಲ್ಲಿ ಹೇಳಿದ್ದರು. ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದೂ ಪ್ರಕಟಿಸಿದ್ದರು.

ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಬಿಎಸ್​ವೈ ಹೇಳಿದ್ದರು.

ಕೆಲ ಸಚಿವರಿಂದ ನಾಯಕತ್ವ ಬದಲಾವಣೆ ಕೆಲಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದ ಅವರು ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡುವುದಿಲ್ಲ. ನನ್ನ ಮೇಲೆ ಹೈಕಮಾಂಡ್‌ಗೆ ವಿಶ್ವಾಸವಿರುವವರೆಗೆ ಇರುತ್ತೇನೆ. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುತ್ತೇನೆ. ಯಡಿಯೂರಪ್ಪ ನೀವು ಬೇಡ ಅಂದ್ರೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದರು.

(karnataka bjp incharge arun singh clarifies no change in leadership in the state)

(ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಎಂಬ ಸಿಎಂ ಮಾತಿನ ಹಿಂದೆ ಅಡಗಿದೆ ವಿರೋಧಿಗಳಿಗೆ ತಕ್ಕ ಉತ್ತರ.. ಸಿಎಂ ಈ ಹೇಳಿಕೆ ನೀಡಿದ್ದು ಏಕೆ ಗೊತ್ತಾ?)