ಸಿಡಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದರಲ್ಲಿದೆ – ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಇದೇ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ಅವಧಿಯಲ್ಲಿ ಭ್ರಷ್ಟಾಚಾರದ ಸರ್ಕಾರವಿತ್ತು. ಷಡ್ಯಂತ್ರ, ಸುಳ್ಳಿನಲ್ಲಿ ನಂಬಿಕೆ ಇಟ್ಟಿರುವುದು ಕಾಂಗ್ರೆಸ್ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾತ್ರವೂ ಇದರಲ್ಲಿದೆ. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ಅರುಣ್ ಹೇಳಿದ್ದಾರೆ.

  • TV9 Web Team
  • Published On - 11:40 AM, 1 Apr 2021
ಸಿಡಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದರಲ್ಲಿದೆ - ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಸಿಡಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದರಲ್ಲಿದೆ - ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಇತ್ತ ರಾಜ್ಯದಲ್ಲಿ ಹೊತ್ತಿಕೊಂಡು ಉರಿಯುತ್ತಿದೆ. ಈ ಮಧ್ಯೆ, ಪ್ರಕರಣದ ಬಗ್ಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್ ಅವರು ಯುವತಿ ದೂರು ಆಧರಿಸಿ ತನಿಖೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾತ್ರವೂ ಇದರಲ್ಲಿದೆ ಎಂದು ಕ್ಲುಪ್ತವಾಗಿ ಹೇಳಿದ್ದು, ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ಅವಧಿಯಲ್ಲಿ ಭ್ರಷ್ಟಾಚಾರದ ಸರ್ಕಾರವಿತ್ತು. ಷಡ್ಯಂತ್ರ, ಸುಳ್ಳಿನಲ್ಲಿ ನಂಬಿಕೆ ಇಟ್ಟಿರುವುದು ಕಾಂಗ್ರೆಸ್ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾತ್ರವೂ ಇದರಲ್ಲಿದೆ. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಟಿವಿ9 ಪ್ರತಿನಿಧಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಸೂಕ್ತ ಸಮಯದಲ್ಲಿ ಇನ್ನುಳಿದ 9 ಆಡಿಯೋ ಸಾಕ್ಷ್ಯ ಬಿಡುಗಡೆ ಮಾಡ್ತೇವೆ; ಅದರಲ್ಲಿ ಶಿವಕುಮಾರ್​ ಹೆಸರೂ ಇದೆ -ಸಂತ್ರಸ್ತೆ ಸಹೋದರ

ಇದನ್ನೂ ಓದಿ: ಈಶ್ವರಪ್ಪ ಹಿರಿಯ ಸಚಿವರು, ಏನೇ ಮನಸ್ತಾಪವಿದ್ದರೂ ಸಿಎಂ ಜೊತೆ ಚರ್ಚಿಸಬೇಕಿತ್ತು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ