DB Chandregowda Passes Away: ಮಾಜಿ ಸಚಿವ, ಬಿಜೆಪಿ ನಾಯಕ ಡಿಬಿ ಚಂದ್ರೇಗೌಡ ನಿಧನ

| Updated By: Digi Tech Desk

Updated on: Nov 07, 2023 | 9:33 AM

DB Chandregowda death: ಮಾಜಿ ಸಚಿವ, ರಾಜಕೀಯ ಮುತ್ಸದ್ದಿ ಡಿಬಿ ಚಂದ್ರೇಗೌಡ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ (87) ಇಂದು ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

DB Chandregowda Passes Away: ಮಾಜಿ ಸಚಿವ, ಬಿಜೆಪಿ ನಾಯಕ ಡಿಬಿ ಚಂದ್ರೇಗೌಡ ನಿಧನ
ಡಿ.ಬಿ.ಚಂದ್ರೇಗೌಡ
Follow us on

ಚಿಕ್ಕಮಗಳೂರು, (ನವೆಂಬರ್ 07): ಮಾಜಿ ಸಚಿವ, ಬಿಜೆಪಿ ನಾಯಕ ಡಿಬಿ ಚಂದ್ರೇಗೌಡ (DB Chandregowda) ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿಬಿ ಚಂದ್ರೇಗೌಡ (87) ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ  ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರು ಹಾಗೂ ಸ್ಪೀಕರ್​ ಆಗಿ ಕಾರ್ಯನಿರ್ವಹಿಸಿದ್ದರು. ಇನ್ನು ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ, ಬದಲಾದ ಸನ್ನಿವೇಶದಲ್ಲಿ ಬಿಜೆಪಿ ಸೇರಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು. ಇನ್ನು ಡಿ.ಬಿ.ಚಂದ್ರೇಗೌಡ ನಿಧನಕ್ಕೆ ವಿವಿಧ ಪಕ್ಷಗಳ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಇಂದಿರಾ ಗಾಂಧಿ ಸಲುವಾಗಿ ಎಂಪಿಗೆ ರಾಜೀನಾಮೆ ನೀಡಿದ್ದ ಡಿಬಿ ಚಂದ್ರೇಗೌಡ್ರ ರಾಜಕೀಯ ಜೀವನ

ಪ್ರಲ್ಹಾದ್ ಜೋಶಿ ಸಂತಾಪ

ಇನ್ನು ಚಂದ್ರೇಗೌಡ ಅವರ ನಿಧನಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂತಾಪ ಸೂಚಿಸಿದ್ದು, ರಾಜಕಾರಣದಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ ನಮ್ಮನ್ನ ಅಗಲಿರುವುದು ನೋವಿನ ಸಂಗತಿ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಈ ದುಃಖವನ್ನ ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

Published On - 6:55 am, Tue, 7 November 23