ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ
N Ravikumar
Edited By:

Updated on: Jan 03, 2026 | 9:22 PM

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಇವಿಎಂ ಕುರಿತ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ 5 ಸಾವಿರಕ್ಕೂ ಹೆಚ್ಚು ಜನರನ್ನು ಮಾತಾಡಿಸಿ ಸಮೀಕ್ಷೆ ಮಾಡಲಾಗಿತ್ತು. ಶೇ. 84ರಷ್ಟು ಜನ ಇವಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ವರದಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ ಉಂಟುಮಾಡಿದೆ. ಹೀಗಾಗಿ, ಈಗ ಸಮೀಕ್ಷೆಯನ್ನೇ ಸರ್ಕಾರ ಡಿಲೀಟ್ ಮಾಡಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ