ಕರ್ನಾಟಕ ಬಿಜೆಪಿ ಬಣ ಬಡಿದಾಟಕ್ಕೆ ಹೊಸ ಟ್ವಿಸ್ಟ್: ರಾಜೀನಾಮೆಗೆ ಮುಂದಾದ ಸುನಿಲ್ ಕುಮಾರ್..!

|

Updated on: Jan 19, 2025 | 11:46 AM

ಕರ್ನಾಟಕ ಕೇಸರಿ ಕೋಟೆಯಲ್ಲಿ ಕಮಲಾಧ್ಯಕ್ಷರ ಬದಲಾವಣೆಗೆ ಕೂಗೂ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಹೀಗಾಗಿ ರಾಜಾಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಲು ಮುಹೂರ್ತ ಫಿಕ್ಸ್ ಆಗೋ ಮೊದಲೇ ಕುರ್ಚಿ ಕದನ ಜೋರಾಗಿದೆ. ವಿಜಯೇಂದ್ರರನ್ನ ಇಳಿಸಲೇ ಬೇಕು ಎಂದು ತೊಡೆ ತಟ್ಟಿ ನಿಂತಿರೋ ಯತ್ನಾಳ್ ಬಣ, ವಿಜಯೇಂದ್ರ ವಿರುದ್ಧವೇ ಸ್ಪರ್ಧಿಸಿ ಸೋಲುಣಿಸಲು ಖೆಡ್ಡಾ ರೆಡಿ ಮಾಡುತ್ತಿದೆ. ಈ ಮಧ್ಯೆ ಬಿಜೆಪಿ ಅಧ್ಯಕ್ಷರ ಚುನಾವಣಾ ಉಸ್ತುವಾರಿಯಾಗಿರೋ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು, ಯಾವುದೇ ಗೊಂದಲವಿಲ್ಲ. ಶೀಘ್ರವೇ ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಎಂದಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕ ಬಿಜೆಪಿಯಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ.

ಕರ್ನಾಟಕ ಬಿಜೆಪಿ ಬಣ ಬಡಿದಾಟಕ್ಕೆ ಹೊಸ ಟ್ವಿಸ್ಟ್: ರಾಜೀನಾಮೆಗೆ ಮುಂದಾದ ಸುನಿಲ್ ಕುಮಾರ್..!
V Sunil Kumar
Follow us on

ಬೆಂಗಳೂರು, (ಜನವರಿ 19): ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್​ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಹೌದು…ಕೇಸರಿ ಮನೆಯಲ್ಲಿನ ಬಣ ಬಡಿದಾಟಕ್ಕೆ ಮೇಜರ್ ಹೊಸ ಟ್ವಿಸ್ಟ್ ಸಿಕ್ಕಿದ್ದು, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯಲು ಮುಂದಾಗಿದೆ. ಈ ಬಗ್ಗೆ ಸ್ವತಃ ಅವರೇ ತಮ್ಮನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಗೊಳಿಸುವಂತೆ ಹೈಕಮಾಂಡ್​ಗೆ ಮೌಖಿಕವಾಗಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನಲ್ಲೇ ಸುನಿಲ್ ಅವರ ಈ ನಡೆ ಅಚ್ಚರಿ ಮೂಡಿಸಿದೆ.

ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಹುದ್ದೆಯಿಂದ ಇಳಿದ ಬಳಿಕ ಹೈಕಮಾಂಡ್​ ವಿಜಯೇಂದ್ರ ಅವರಿಗೆ ಪಟ್ಟ ಕಟ್ಟಿತ್ತು. ಬಳಿಕ ವಿಜಯೇಂದ್ರ ತಮ್ಮದೇ ಒಂದು ತಂಡ ಕಟ್ಟಿದ್ದಾರೆ. ತಮ್ಮ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಯುವ ನಾಯಕರುಗಳಿಗೆ ಆಯಾ ಕಟ್ಟಿನ ಹುದ್ದೆ ನೀಡಿದ್ದಾರೆ. ಅದರಂತೆ ಸುನಿಲ್​ ಕುಮಾರ್​ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಆದ್ರೆ, ಇದೀಗ ಅದ್ಯಾಕೋ ಸುನಿಲ್ ಕುಮಾರ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ಮುಂದಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಶೀಘ್ರದಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಿವರಾಜ್ ಸಿಂಗ್ ಚೌಹಾಣ್

ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಾಹಿಸುತ್ತಿರುವ ಸುನಿಲ್ ಕುಮಾರ್ ​, ವಿಜಯೇಂದ್ರ ತಂಡದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆ ಸುನಿಲ್​ ಕುಮಾರ್ ಯಾವುದೇ ವಿರಸವು ಇಲ್ಲ. ಸಮರಸವು ಇಲ್ಲ. ಆದ್ರೆ, ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ವಿಜಯೇಂದ್ರ ಜೊತೆ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿಲ್ಲ. ಈಗ ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ಬೆನ್ನೆಲ್ಲೇ ಸುನಿಲ್ ಕುಮಾರ್, ಹುದ್ದೆಯಿಂದ ಮುಕ್ತಿಗೊಳಿಸುವಂತೆ ಹೈಕಮಾಂಡ್​ಗೆ ಈ ಮನವಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಆದ್ರೆ, ಹೈಕಮಾಂಡ್ , ಸುನಿಲ್ ಕುಮಾರ್ ಅವರ ಮನವಿ ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ.

ಸುನಿಲ್ ಕುಮಾರ್ ಸ್ಥಾನಕ್ಕೆ ಯಾರು..?

ಒಂದು ವೇಳೆ ಹೈಕಮಾಂಡ್​ ಸುನಿಲ್ ಕುಮಾರ್ ಅವರ ಮನವಿಯನ್ನು ಎಕ್ಸೆಪ್ಟ್ ಮಾಡಿದ್ರೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಯಾರು ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಈ ಹುದ್ದೆಗೆ ಇಬ್ಬರ ಪ್ರಬಲ ನಾಯಕರಿದ್ದಾರೆ. ಈ ಹಿಂದೆಯೇ ಪ್ರಧಾನ ಕಾರ್ಯದರ್ಶಿ ಹುದ್ದೆ ನಿಭಾಸಿದ್ದ ಎನ್ ರವಿ ಕುಮಾರ್​ ಹಾಗೂ ಡಿಎಸ್ ಅರುಣ್​ ರೇಸ್​ನಲ್ಲಿದ್ದು, ಬಹುತೇಕ ರವಿ ಕುಮಾರ್ ಅವರಿಗೆ ಮತ್ತೆ ಪ್ರಧಾನ ಕಾರ್ಯದರ್ಶಿ ಹುದ್ದೆ ಸಿಗುವ ಎಲ್ಲಾ ಸಾಧ್ಯತೆಗಳಿವೆ. ಯಾಕಂದ್ರೆ ರನಿ ಕುಮಾರ್ ಓರ್ವ ಸಂಘನೆಗಾರ. ಈ ಹಿಂದೆ ಅವರು ಇದೇ ಪ್ರಧಾನ ಕಾರ್ಯದರ್ಶಿ ಹುದ್ದೆ ನಿಭಾಯಿಸಿದ ಅನುಭವ ಇದೆ. ಹಾಗೇ ಅವರು ತಮ್ಮ ಸಂಘಟಯಿಂದಾಗಿಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸೋಲುವಂತಾಗಿತ್ತು.

ಬಿಜೆಪಿಯಲ್ಲಿ ಬಣದಾಟ ಜೋರು

ಬಿಜೆಪಿಯ ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡೆದ್ದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣದ ನಾಯಕರು ನೇರ ಟಕ್ಕರ್ ನೀಡಲು ಸಜ್ಜಾಗುತ್ತಿದ್ದು, ಮುಂಬರುವ ರಾಜ್ಯಾಧ್ಯಕ್ಷ ಹುದ್ದೆಯ ಚುನಾವಣೆಗೆ ಯತ್ನಾಳರನ್ನೇ ಅಭ್ಯರ್ಥಿಯಾಗಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಯತ್ನಾಳ ಬಣದಲ್ಲಿ ಬಿರುಸಿನ ಚಟುವಟಿಕೆ ನಡೆದಿದ್ದು, ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರ ಮುಂದಿನ ಹಾದಿ ಸುಗಮವಾಗಿರಬಾರದು ಎಂಬ ನಿಲುವಿಗೆ ಬಣದ ನಾಯಕರು ಬಂದಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಯ ಚುನಾವಣೆ ಎಂದರೆ ಇತರ ಸಾಮಾನ್ಯ ಚುನಾವಣೆಗಳಂತೆ ಅಲ್ಲದಿದ್ದರೂ ಒಂದು ಹಂತದ ಭರಾಟೆ ಇದ್ದೇ ಇರುತ್ತದೆ. ಪರೋಕ್ಷವಾಗಿ ಮತದಾನದಂತೆ ಪ್ರಕ್ರಿಯೆ ನಡೆಯುತ್ತದೆ. ಒಬ್ಬರಿಗಿಂತ ಹೆಚ್ಚು ಮಂದಿ ಪ್ರಬಲ ಆಕಾಂಕ್ಷೆ ವ್ಯಕ್ತಪಡಿಸಿದಲ್ಲಿ ಅಥವಾ ಪ್ರತಿಸ್ಪರ್ಧಿಗಳಿದ್ದಲ್ಲಿ ಆಗ ರಾಜ್ಯ ಪದಾಧಿಕಾರಿಗಳು, ರಾಜ್ಯ ಪರಿಷತ್ ಸದಸ್ಯರು ಹಾಗೂ ಶಾಸಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಬೇಕಾಗುತ್ತದೆ. ಈ ಮೂಲಕ ರಾಜ್ಯ ಬಿಜೆಪಿ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಮುಂದೆ ಏನೆಲ್ಲಾ ಬೆಳವಣಿಗೆಗಳು ಆಗಲಿವೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:36 am, Sun, 19 January 25