ದೆಹಲಿಗೆ ಬರುವ ಕರ್ನಾಟಕದ ಬಿಜೆಪಿ ನಾಯಕರು ನನ್ನನ್ನು ಭೇಟಿಯಾಗಲೇಬೇಕಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 04, 2024 | 10:33 AM

ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ, ಒಂದಿಬ್ಬರ ಜಗಳವನ್ನು ಪಕ್ಷದ ಕಲಹ ಅಂತ ಹೇಳಬಾರದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹದ್ದುಮೀರಿದೆ, ಹಾಗಾಗಿ ಯತ್ನಾಳ್ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಭಿನ್ನಾಭಿಪ್ರಾಯವನ್ನು ದೊಡ್ಡದಾಗಿ ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಅಗರವಾಲ್ ಹೇಳಿದರು.

ದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅಗರವಾಲ್ ಅವರಿಗೆ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತವರ ತಂಡ ದೆಹಲಿಗೆ ಆಗಮಿಸಿದ್ದು ಗೊತ್ತೇ ಇಲ್ಲ. ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನು ರಾಜ್ಯದ ಉಸ್ತುವಾರಿ ಆಗಿರುವ ಕಾರಣಕ್ಕೆ ದೆಹಲಿಗೆ ಬಂದವರೆಲ್ಲ ತನ್ನನ್ನು ಭೇಟಿಯಾಗಲೇಬೇಕು ಅಂತೇನಿಲ್ಲ, ತಮ್ಮ ಕೆಲಸಗಳಿಗಾಗಿ ಅವರು ಬಂದಿರಬಹುದು. ಓಂ ಪಾಠಕ್ ಅವರು ಪಕ್ಷದ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ, ಅಶಿಸ್ತಿಗೆ ಸಂಬಂಧಿಸಿದ ವಿಷಯವನ್ನು ಅವರೇ ಗಮನಿಸುತ್ತಾರೆ ಎಂದು ಅಗರ್​ವಾಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜಗದಾಂಬಿಕಾ ಪಾಲ್​​ ಭೇಟಿಯಾದ ಯತ್ನಾಳ್​​ ಟೀಂ: ಏನೆಲ್ಲಾ ಚರ್ಚೆ ಆಯ್ತು?

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.