AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಮಾಡಾಳ್​​ ವಿರೂಪಾಕ್ಷಪ್ಪ

ಪುತ್ರನ​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಮಾಡಾಳ್​​ ವಿರೂಪಾಕ್ಷಪ್ಪ
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (ಎಡಚಿತ್ರ) ಮತ್ತು ಲೋಕಾಯುಕ್ತ ದಾಳಿ ವೇಳೆ ಜಪ್ತಿ ಮಾಡಿದ ಹಣ (ಬಲ ಚಿತ್ರ-ANI)
TV9 Web
| Edited By: |

Updated on:Mar 06, 2023 | 11:53 AM

Share

ಬೆಂಗಳೂರು: ಲೋಕಾಯುಕ್ತ ದಾಳಿಯಲ್ಲಿ ಪುತ್ರನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(Madal Virupakshappa) ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಅಲ್ಲಿಸಿದ್ದಾರೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Lokayukta: ನಾಪತ್ತೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗಾಗಿ 3 ವಿಶೇಷ ತಂಡ ರಚನೆ 

ಇಂದೇ (ಮಾರ್ಚ್ 06) ವಿಚಾರಣೆಗೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲ ಸಂದೀಪ್ ಪಾಟೀಲ್ ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಹೈಕೋರ್ಟ್​ ನ್ಯಾಯಮೂರ್ತಿ ಕೆ.ನಟರಾಜನ್ ಅವರು ನಾಳೆಗೆ(ಮಾರ್ಚ್ 07) ವಿಚಾರಣೆ ನಿಗದಿಪಡಿಸಿದ್ದಾರೆ.

ವಿರೂಪಾಕ್ಷಪ್ಪಗಾಗಿ ಮೂರು ತಂಡ ರಚನೆ

ಶಾಸಕ ಮಾಡಾಳ್​ ಪುತ್ರನ​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಬೆನ್ನಲ್ಲೇ ಇಂದಿಗೆ ಐದು ದಿನಗಳು ಆದರೂ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರತ್ಯಕ್ಷವಾಗಿಲ್ಲ. ಪುತ್ರನ ಬಂಧನದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಮತ್ತೆಗೆ ಲೋಕಾಯುಕ್ತ ಅಧಿಕಾರಿಗಳು ತಂಡ ಕಟ್ಟಿಕೊಂಡು ಕಾರ್ಯಚರಣೆ ನಡೆಸಿದ್ದಾರೆ.

ಪತ್ತೆಗೆ ಲೋಕಾಯುಕ್ತ ಮೂರು ತಂಡ ರಚಿಸಿದೆ. ಮೂವರು ಡಿವೈಎಸ್ ಪಿ ಗಳ ನೇತೃತ್ವದಲ್ಲಿ ಸುಮಾರು ಹದಿನೈದು ಜನರ ಅಧಿಕಾರಿಗಳ ಒಳಗೊಂಡಿರುವ ಮೂರು ಟೀಮ್​ ರಚನೆ ಮಡಲಾಗಿದ್ದು, ಮಾಡಾಳ್​ಗಾಗಿ ಹುಡುಕಾಟ ಆರಂಭಿಸಿವೆ.

ಪೊಲೀಸರು ನೋಟಿಸ್ ನೀಡಿದ ಬಳಿಕ ವಿಚಾರಣೆಗೆ ಹಾಜರಾಗುವ ಲೆಕ್ಕಾಚಾರದಲ್ಲಿ ಮಾಡಾಳ್​ ಇದ್ದಾರೆ. ಆದ್ರೆ, ನೋಟಿಸ್ ನೀಡದೇ ಎಂಎಲ್​ಎ ಲಾಕ್ ಮಾಡಲು ಲೋಕಾಯುಕ್ತ ಅಧಿಕಾರಿಗಳ ಪ್ಲಾನ್ ಮಾಡಿದ್ದಾರೆ. ನೋಟಿಸ್​ ನೀಡಿದ ತಕ್ಷಣ ಬಂಧನ ಮಾಡುವಂತಿಲ್ಲ. ಕನಿಷ್ಠ ಮೂರು ಬಾರಿ ವಿಚಾರಣೆ ಮಾಡಿ ನಂತರ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಅರೆಸ್ಟ್ ಮಾಡಬಹುದು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನೋಟಿಸ್​ ನೀಡದೇ ಮಾಡಾಳ್​ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುವ ಚಿಂತನೆ ನಡೆಸಿದೆ.

ಇದೀಗ ಮಾಡಾಳ್ ಅಜ್ಞಾತ ಸ್ಥಳದಿಂದಲೇ ಜಾಮೀನಿಗಾಗಿ ಕೋರ್ಟ್​ ಮೊರೆ ಹೋಗಿದ್ದು, ನಾಳೆ ಜಾಮೀನು ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

Published On - 11:40 am, Mon, 6 March 23

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ