ಬರ ಅಧ್ಯಯನ ನಡೆಸಲು ಬಿಜೆಪಿ ತಯಾರಿ: 16 ನಾಯಕರ ನೇತೃತ್ವದಲ್ಲಿ ತಂಡಗಳ ರಚನೆ 

ವಿಪಕ್ಷ ಬಿಜೆಪಿ ಬರ ಅಧ್ಯಯನ ನಡೆಸಲು ಮುಂದಾಗಿದೆ. 16 ನಾಯಕರ ನೇತೃತ್ವದಲ್ಲಿ ಬರ ಅಧ್ಯಯನ ತಂಡಗಳ ರಚನೆ ಮಾಡಲಾಗಿದೆ. ವಿಪಕ್ಷ ಬಿಜೆಪಿ ಬರ ಪೀಡಿತ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ. ಮುಂದಿನ ವಾರದಲ್ಲಿ ಬರ ಪ್ರವಾಸಕ್ಕೆ ದಿನಾಂಕ ನಿಗದಿ ಮಾಡಲಾಗುತ್ತದೆ.

ಬರ ಅಧ್ಯಯನ ನಡೆಸಲು ಬಿಜೆಪಿ ತಯಾರಿ: 16 ನಾಯಕರ ನೇತೃತ್ವದಲ್ಲಿ ತಂಡಗಳ ರಚನೆ 
ಬಿಜೆಪಿImage Credit source: India Today
Follow us
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ

Updated on: Oct 29, 2023 | 8:45 AM

ಬೆಂಗಳೂರು ಅ.29: ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿ ಬರಗಾಲ (Drought) ಆವರಿಸಿದೆ. ಕರ್ನಾಟಕದ (Karnataka) 216 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ರಾಜ್ಯ ಸರ್ಕಾರ (Karnataka Government) ಘೋಷಣೆ ಮಾಡಿದೆ. ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿ ಅಧ್ಯಯನ ಮಾಡಿ ಹೋಗಿದೆ. ಬರಗಾಲದ ಪರಿಹಾರ ಎಂದು 4860 ಕೋಟಿ ರೂ. ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಕೇಂದ್ರ ಸರ್ಕಾರ ಇನ್ನೂ ಬರ ಪರಿಹಾರ ನೀಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದರು. ಈ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಕೌಂಟರ್​ ಕೊಡಲು ವಿಪಕ್ಷ ಬಿಜೆಪಿ (BJP) ಬರ ಅಧ್ಯಯನ ನಡೆಸಲು ಮುಂದಾಗಿದೆ.

16 ನಾಯಕರ ನೇತೃತ್ವದಲ್ಲಿ ಬರ ಅಧ್ಯಯನ ತಂಡಗಳ ರಚನೆ ಮಾಡಲಾಗಿದೆ. ವಿಪಕ್ಷ ಬಿಜೆಪಿ ಬರ ಪೀಡಿತ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಲಿದೆ. ಮುಂದಿನ ವಾರದಲ್ಲಿ ಬರ ಪ್ರವಾಸಕ್ಕೆ ದಿನಾಂಕ ನಿಗದಿ ಮಾಡಲಾಗುತ್ತದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದಿಲ್ಲ ಎಂಬ ಸಿಎಂ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಕೌಂಟರ್ ಕೊಡಲು ಬಿಜೆಪಿ ಮುಂದಾಗಿದೆ.

ಇದನ್ನೂ ಓದಿ: ಮತ್ತೆ 21 ತಾಲೂಕುಗಳಲ್ಲಿ ಬರ: ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

ಬರ ಅಧ್ಯಯನ ತಂಡದಲ್ಲಿ ರೆಬೆಲ್ ನಾಯಕರಿಗಿಲ್ಲ ಅವಕಾಶ

ಇನ್ನು ಈ ಬರ ಅಧ್ಯಯನ ತಂಡದಲ್ಲಿ ಪಕ್ಷದ ವಿರುದ್ಧ ಅಸಮಾಧಾನಗೊಂಡ ನಾಯಕರಿಗೆ ಅವಕಾಶ ನೀಡಿಲ್ಲ. ಶಾಸಕ ಎಸ್.ಟಿ. ಸೋಮಶೇಖರ್, ಮಾಜಿ ಸಚಿವರಾದ ವಿ. ಸೋಮಣ್ಣ ಮತ್ತು ಎಂ.ಪಿ. ರೇಣುಕಾಚಾರ್ಯಗೆ ಅವಕಾಶ ನೀಡಿಲ್ಲ. ಪಕ್ಷದ ನಾಯಕರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮೂವರನ್ನು ಪ್ರವಾಸ ತಂಡದಿಂದ ಕೈಬಿಡಲಾಗಿದೆ.

ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಗರಂ

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಕೇಂದ್ರ ಸರ್ಕಾರ ನಯಾಪೈಸೆ ಪರಿಹಾರ ಬಿಡುಗಡೆಮಾಡಿಲ್ಲ. ಪ್ರಧಾನಿ ಮೋದಿ ಅವರೇ ಜಗತ್ತಿನ ದುಃಖಕ್ಕೆಲ್ಲ ಮಿಡಿಯುವ ನಿಮ್ಮ ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ ಎಂದು ಎಕ್ಸ್​ನಲ್ಲಿ ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು.

ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ. ಈವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ’ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ? ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ಕಿಡಿಕಾರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ