AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಗಳು: ಉಚ್ಛಾಟಿತರ ಮರು ಸೇರ್ಪಡೆಗೆ ತೆರೆಮರೆಯ ಕಸರತ್ತು! ಸಿಕ್ತು ಸುಳಿವು

ಕರ್ನಾಟಕ ಬಿಜೆಪಿಯಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆರ್. ಅಶೋಕ್ ಅವರ ದೆಹಲಿ ಭೇಟಿ, ಬಸನಗೌಡ ಪಾಟೀಲ್ ಯತ್ನಾಳ್ ಮಾತುಗಳು, ಯಡಿಯೂರಪ್ಪ-ಈಶ್ವರಪ್ಪ ಅವರ ಸಾರ್ವಜನಿಕ ಭೇಟಿ ಹಾಗೂ ವಿಜಯೇಂದ್ರ ಪರ ಕಾರ್ಯಕರ್ತರ ಘೋಷಣೆಗಳು ಉಚ್ಛಾಟಿತ ನಾಯಕರ ಮರು ಸೇರ್ಪಡೆ ಕುರಿತ ಚರ್ಚೆಗೆ ಮತ್ತಷ್ಟು ವೇಗ ನೀಡಿವೆ.

ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಗಳು: ಉಚ್ಛಾಟಿತರ ಮರು ಸೇರ್ಪಡೆಗೆ ತೆರೆಮರೆಯ ಕಸರತ್ತು! ಸಿಕ್ತು ಸುಳಿವು
ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆಗಳು (ಸಾಂದರ್ಭಿಕ ಚಿತ್ರ)
ಕಿರಣ್​ ಹನಿಯಡ್ಕ
| Edited By: |

Updated on: Oct 24, 2026 | 6:52 PM

Share

ಮುಖ್ಯಾಂಶಗಳು

  • ಬಿಜೆಪಿಯಲ್ಲಿ ಉಚ್ಛಾಟಿತರ ಮರು ಸೇರ್ಪಡೆ ಚರ್ಚೆ
  • ದೆಹಲಿಯಲ್ಲಿ ಅಮಿತ್ ಶಾ ಭೇಟಿಯ ಗುಟ್ಟುಬಿಟ್ಟುಕೊಡದ ಅಶೋಕ್
  • ಈಶ್ವರಪ್ಪ ಮರು ಸೇರ್ಪಡೆ ಬಗ್ಗೆ ರಾಜಕೀಯ ಕುತೂಹಲ

ಬೆಂಗಳೂರು, ಅಕ್ಟೋಬರ್ 24: ಕರ್ನಾಟಕ ಬಿಜೆಪಿಯಲ್ಲಿ ಆಂತರಿಕ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಪಕ್ಷದಿಂದ ಉಚ್ಛಾಟನೆಗೊಂಡಿರುವ ನಾಯಕರನ್ನು ಮರಳಿ ಕರೆತರುವ ಪ್ರಯತ್ನಗಳು ನಡೆಯುತ್ತಿವೆಯೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿದೆ. ವಿಪಕ್ಷ ನಾಯಕ ಆರ್. ಅಶೋಕ್ ಅವರ ದೆಹಲಿ ಭೇಟಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ದೆಹಲಿ ಪ್ರವಾಸ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಭೇಟಿಗಳು ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರ ಕಾರ್ಯಕರ್ತರ ಘೋಷಣೆಗಳು ಈ ಬೆಳವಣಿಗೆಗಳಿಗೆ ಮತ್ತಷ್ಟು ಕುತೂಹಲ ಮೂಡಿಸಿವೆ.

ನವೆಂಬರ್‌ನಲ್ಲಿ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷಗಳನ್ನು ಪೂರ್ಣಗೊಳಿಸಲಿದ್ದಾರೆ. ಅದಕ್ಕೂ ಮುನ್ನವೇ ಇದೀಗ ಆರ್. ಅಶೋಕ್ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿರುವುದು ಮಹತ್ವ ಪಡೆದಿದೆ. ರಾಜ್ಯ ರಾಜಕೀಯದ ಬೆಳವಣಿಗೆಗಳ ಬಗ್ಗೆ ಮೂರು ತಿಂಗಳಿಗೊಮ್ಮೆ ವರದಿ ನೀಡಲು ದೆಹಲಿಗೆ ಹೋಗುತ್ತೇನೆ ಎಂದು ಅಶೋಕ್ ಹೇಳಿದ್ದರೂ, ಈ ಭೇಟಿಯಲ್ಲಿ ರಾಜ್ಯ ಬಿಜೆಪಿಯ ಆಂತರಿಕ ವಿಚಾರಗಳೂ ಚರ್ಚೆಯಾಗಿವೆಯೇ ಎಂಬ ಪ್ರಶ್ನೆ ಮೂಡಿದೆ. ಆದರೆ ಅಮಿತ್ ಶಾ ಅವರೊಂದಿಗಿನ ಮಾತುಕತೆಯ ವಿವರಗಳನ್ನು ಅಶೋಕ್ ಬಹಿರಂಗಪಡಿಸಿಲ್ಲ.

ಯತ್ನಾಳ್ ದೆಹಲಿ ಭೇಟಿ; ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚೆಯಾಗಿಲ್ಲ ಎಂದ ಶಾಸಕ

ರಾಣಿ ಚೆನ್ನಮ್ಮ ಕಾರ್ಯಕ್ರಮದಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಕೇಂದ್ರ ಸಚಿವ ವಿ. ಸೋಮಣ್ಣ ಅವರ ನಿವಾಸಕ್ಕೂ ಭೇಟಿ ನೀಡಿದ್ದಾರೆ. ಈ ಭೇಟಿ ಬಿಜೆಪಿಯ ಆಂತರಿಕ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗಮನ ಸೆಳೆದಿದೆ.

ಆದರೆ, ದೆಹಲಿಯಲ್ಲಿ ಆತ್ಮೀಯರನ್ನು ಭೇಟಿಯಾಗಿದ್ದೇನೆ ಹೊರತು ಬಿಜೆಪಿ ಸೇರ್ಪಡೆ ವಿಚಾರವಾಗಿ ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ಬಿ.ವೈ. ವಿಜಯೇಂದ್ರ ಅವರನ್ನು ಭೇಟಿಯಾದಾಗಲೂ ಪಕ್ಷಕ್ಕೆ ಮರಳುವ ಕುರಿತು ಮಾತುಕತೆ ನಡೆದಿಲ್ಲ. ಯಾರೂ ತಮ್ಮನ್ನು ಪಕ್ಷಕ್ಕೆ ಮರಳುವಂತೆ ಆಹ್ವಾನಿಸಿಲ್ಲ ಎಂದೂ ಅವರು ಹೇಳಿದ್ದಾರೆ. ಯತ್ನಾಳ್ ಅವರ ಈ ಸ್ಪಷ್ಟನೆಯ ನಡುವೆಯೂ ಉಚ್ಛಾಟಿತ ನಾಯಕರ ಮರು ಸೇರ್ಪಡೆ ವಿಚಾರ ಬಿಜೆಪಿಯೊಳಗೆ ಚರ್ಚೆಯ ವಿಷಯವಾಗಿದೆ.

ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ: ಕಾರ್ಯಕರ್ತರ ಘೋಷಣೆ

ಇನ್ನೊಂದೆಡೆ, ದೊಡ್ಡಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ‘‘ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೇ ಮುಂದಿನ ಮುಖ್ಯಮಂತ್ರಿ’’ ಎಂದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ವಿಚಾರವಾಗಿ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ಘೋಷಣೆ ಗಮನ ಸೆಳೆದಿದೆ. ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಅವಧಿ ಮೂರು ವರ್ಷಗಳನ್ನು ಪೂರ್ಣಗೊಳಿಸುವ ಹಂತದಲ್ಲಿರುವುದರಿಂದ, ಪಕ್ಷದ ಮುಂದಿನ ರಾಜಕೀಯ ಕಾರ್ಯತಂತ್ರ ಮತ್ತು ನಾಯಕತ್ವದ ಕುರಿತು ಚರ್ಚೆಗಳು ಮಹತ್ವ ಪಡೆದಿವೆ.

ಯಡಿಯೂರಪ್ಪ-ಈಶ್ವರಪ್ಪ ಮುಖಾಮುಖಿ

ನವರಾತ್ರಿ ಕಾರ್ಯಕ್ರಮವೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಮತ್ತೊಂದು ಪ್ರಮುಖ ಬೆಳವಣಿಗೆ. ಈ ಬೆಳವಣಿಗೆಯ ಬೆನ್ನಲ್ಲೇ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಜೊತೆ ಬಿ.ವೈ. ವಿಜಯೇಂದ್ರ ಕೆಲವು ದಿನಗಳ ಹಿಂದೆ ಮಾತುಕತೆ ನಡೆಸಿದ್ದಾರೆ ಎಂಬ ಚರ್ಚೆಯೂ ಕೇಳಿಬರುತ್ತಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕೆ.ಎಸ್. ಈಶ್ವರಪ್ಪ ಅವರ ಬಿಜೆಪಿ ಮರು ಸೇರ್ಪಡೆ ಪ್ರಕ್ರಿಯೆ ಮುಂದುವರಿದಿದೆಯೇ ಎಂಬ ಚರ್ಚೆಗಳೂ ಮುನ್ನೆಲೆಗೆ ಬಂದಿವೆ.

ಇದನ್ನೂ ಓದಿ: ‘ವಿಜಯೇಂದ್ರ ನಾಯಕತ್ವ ಬದಲಾವಣೆ ಬಳಿಕವೇ ಮುಂದಿನ ಮಾತು’: ಊಹಾಪೋಹಗಳಿಗೆ ತೆರೆ ಎಳೆದ ಯತ್ನಾಳ್​​

ಒಟ್ಟಾರೆ, ಬಿಜೆಪಿಯಿಂದ ದೂರವಾಗಿರುವ ನಾಯಕರನ್ನು ಮತ್ತೆ ಪಕ್ಷದ ತೆಕ್ಕೆಗೆ ಕರೆತರುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆಯೇ ಎಂಬ ಪ್ರಶ್ನೆ ಇತ್ತೀಚಿನ ಬೆಳವಣಿಗೆಗಳಿಂದ ಉದ್ಭವವಾಗಿದೆ. ಆರ್. ಅಶೋಕ್ ಅವರ ದೆಹಲಿ ಭೇಟಿ, ಯತ್ನಾಳ್ ಅವರ ಹೇಳಿಕೆಗಳು, ಯಡಿಯೂರಪ್ಪ-ಈಶ್ವರಪ್ಪ ಅವರ ಸಾರ್ವಜನಿಕ ಭೇಟಿ ಹಾಗೂ ಕಾಂತೇಶ್ ಜೊತೆ ವಿಜಯೇಂದ್ರ ಮಾತುಕತೆ ನಡೆಸಿದ್ದಾರೆ ಎನ್ನಲಾದ ಬೆಳವಣಿಗೆಗಳು ರಾಜಕೀಯ ಕುತೂಹಲ ಹೆಚ್ಚಿಸಿವೆ. ಮುಂದಿನ ಏಪ್ರಿಲ್-ಮೇ ವೇಳೆಗೆ ಈ ಬೆಳವಣಿಗೆಗಳಿಗೆ ಅಂತಿಮ ರೂಪ ಸಿಗಬಹುದು ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ