AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ?; ಟ್ವಿಟ್ಟರ್​ನಲ್ಲಿ ರಾಜ್ಯ ಬಿಜೆಪಿ ಪ್ರಶ್ನೆ

ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ?; ಟ್ವಿಟ್ಟರ್​ನಲ್ಲಿ ರಾಜ್ಯ ಬಿಜೆಪಿ ಪ್ರಶ್ನೆ
ಡಿ.ಕೆ. ಶಿವಕುಮಾರ್
TV9 Web
| Edited By: sandhya thejappa|

Updated on:Jul 10, 2021 | 11:16 AM

Share

ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾರಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಟ್ವಿಟ್ಟರ್​ನಲ್ಲಿ ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ? ಎಂದು ಪ್ರಶ್ನಿಸಿದೆ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಗತಕಾಲದ ನೆನಪು ಕಾಡಿತೇ? ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದು ಪ್ರಶ್ನಿಸಿದ ರಾಜ್ಯ ಬಿಜೆಪಿ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡುವುದು ಅಕ್ಷಮ್ಯ ಎಂದು ತಿಳಿಸಿದೆ. ಅಲ್ಲದೆ ‘ರೌಡಿಡಿಕೆಶಿ’ ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದೆ.

ಆಗಿದ್ದೇನು? ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹಿಂಭಾಗ ಬರುತ್ತಿದ್ದರು. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಡಿಕೆಶಿ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ವಿಷಯದಲ್ಲಿ ನಾನು ಯಾವುದೇ ತಪ್ಪು ಮಾತಾಡಿಲ್ಲ, ನಾನ್ಯಾಕೆ ಕ್ಷಮೆ ಕೇಳಲಿ: ರಾಕ್​ಲೈನ್ ವೆಂಕಟೇಶ್

(Karnataka BJP questioned that DK shivakumar you are a politician or Rowdy)

Published On - 11:14 am, Sat, 10 July 21

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು