ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ?; ಟ್ವಿಟ್ಟರ್​ನಲ್ಲಿ ರಾಜ್ಯ ಬಿಜೆಪಿ ಪ್ರಶ್ನೆ

| Updated By: sandhya thejappa

Updated on: Jul 10, 2021 | 11:16 AM

ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ?; ಟ್ವಿಟ್ಟರ್​ನಲ್ಲಿ ರಾಜ್ಯ ಬಿಜೆಪಿ ಪ್ರಶ್ನೆ
ಡಿ.ಕೆ. ಶಿವಕುಮಾರ್
Follow us on

ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾರಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಟ್ವಿಟ್ಟರ್​ನಲ್ಲಿ ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ? ಎಂದು ಪ್ರಶ್ನಿಸಿದೆ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಗತಕಾಲದ ನೆನಪು ಕಾಡಿತೇ? ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದು ಪ್ರಶ್ನಿಸಿದ ರಾಜ್ಯ ಬಿಜೆಪಿ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡುವುದು ಅಕ್ಷಮ್ಯ ಎಂದು ತಿಳಿಸಿದೆ. ಅಲ್ಲದೆ ‘ರೌಡಿಡಿಕೆಶಿ’ ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದೆ.

ಆಗಿದ್ದೇನು?
ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹಿಂಭಾಗ ಬರುತ್ತಿದ್ದರು. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಡಿಕೆಶಿ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ವಿಷಯದಲ್ಲಿ ನಾನು ಯಾವುದೇ ತಪ್ಪು ಮಾತಾಡಿಲ್ಲ, ನಾನ್ಯಾಕೆ ಕ್ಷಮೆ ಕೇಳಲಿ: ರಾಕ್​ಲೈನ್ ವೆಂಕಟೇಶ್

(Karnataka BJP questioned that DK shivakumar you are a politician or Rowdy)

Published On - 11:14 am, Sat, 10 July 21