ಶಿವಮೊಗ್ಗ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ತಲ್ವಾರ್‌, ಚೂರಿ ಝಳಪಿಸಿದ ವಿಡಿಯೋ ಹರಿಬಿಟ್ಟ ಬಿಜೆಪಿ

ಶಿವಮೊಗ್ಗದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ, ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ಮುಸ್ಲಿಂ ಯುವಕರು ಚಾಕು, ತಲ್ವಾರ್ ಹಿಡಿದು ಡಾನ್ಸ್ ಮಾಡಿರುವ ವಿಡಿಯೋವನ್ನು ರಿಲೀಸ್ ಮಾಡಿದೆ.

ಶಿವಮೊಗ್ಗ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ತಲ್ವಾರ್‌, ಚೂರಿ ಝಳಪಿಸಿದ ವಿಡಿಯೋ ಹರಿಬಿಟ್ಟ ಬಿಜೆಪಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 02, 2023 | 3:40 PM

ಬೆಂಗಳೂರು (ಅ.02): ಶಿವಮೊಗ್ಗದಲ್ಲಿ (Shivamogga) ಈದ್‌ ಮಿಲಾದ್‌ ಮೆರವಣಿಗೆ ಸಂದರ್ಭದಲ್ಲಿ ನಡೆದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ಈ ಘಟನೆ ಬಗ್ಗೆ ಬಿಜೆಪಿ(BJP), ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇದೀಗ ಈದ್‌ ಮಿಲಾದ್‌ ಮೆರವಣಿಗೆಯಲ್ಲಿ ತಲ್ವಾರ್‌, ಚಾಕು, ಚೂರಿ ಹಾಗೂ ಇತರೆ ಆಯುಧಗಳನ್ನು ಜಿಹಾದಿಗಳು ಝಳಪಿಸಿದ್ದರೂ, ಸೆಕ್ಯೂಲರ್‌ ಸಿದ್ದರಾಮಯ್ಯ ತಲೆಮರೆಸಿಕೊಂಡಿದ್ದಾರೆ ಎಂದು ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದೆ.

ಜಿಹಾದಿಗಳು ಶಿವಮೊಗ್ಗದ ಬೀದಿಗಳಲ್ಲಿ ಕತ್ತಿ ಮತ್ತು ಆಯುಧಗಳನ್ನು ಝಳಪಿಸುತ್ತಾ ‘ಸೆಕ್ಯುಲರ್’ ಆಗಿ ಓಡುತ್ತಾರೆ. ಆದರೆ, ಈ ಘಟನೆಯ ನಂತರವೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆಮರೆಸಿಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿದೆ. ಯಾವುದೇ ಕ್ರಮದ ಭಯವಿಲ್ಲದೆ ಹಿಂದೂಗಳನ್ನು ಭಯಭೀತಗೊಳಿಸಲು ಜಿಹಾದಿ ಸಂಘಟನೆಗಳು ಅಡಗಿ ಕುಳಿತಿವೆ. ಕಾಂಗ್ರೆಸ್‌ ಜಿಹಾದಿಗಳಿಗೆ ಶರಣಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಿಹಾದಿ ಸರ್ಕಾರವಲ್ಲದೆ ಬೇರೇನೂ ಅಲ್ಲ ಎಂಬುದು ದುರದೃಷ್ಟಕರ ಎಂದು ಬಿಜೆಪಿ ಟ್ವೀಟ್‌ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಇದನ್ನೂ ಓದಿ: ಶಿವಮೊಗ್ಗ ಗಲಭೆ: ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದಿದ್ಯಾಕೆ? ಕಾರಣ ಬಿಚ್ಚಿಟ್ಟ ಸಂಸದ ರಾಘವೇಂದ್ರ

ಬಿಜೆಪಿ ಬಿಡುಗಡೆ ಮಾಡಿದ ವಿಡಿಯೋ ಇಲ್ಲಿದೆ

ಶಿವಮೊಗ್ಗ ಗಲಭೆ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾಧ್ಯಮಗಳ ಜೊತೆ ಮಾತನಾಡಿ, ಈ ಸರ್ಕಾರ ಪೊಲೀಸರ ರಕ್ಷಣೆ ಮಾಡುತ್ತದೆ ಎಂಬ ಬಗ್ಗೆ ನನಗೆ ಅನುಮಾನ ಇದೆ. ಗೃಹ ಸಚಿವರು ತಮ್ಮ ಇಲಾಖೆಯನ್ನು ರಕ್ಷಣೆ ಮಾಡುವ ಜವಾಬ್ದಾರಿ ಹೊರಬೇಕು. ಶಿವಮೊಗ್ಗದಲ್ಲಿ ನಡೆದಿರುವುದು ಹಿಂದೂ ಮುಸ್ಲಿಂ ಗಲಾಟೆ ಅಲ್ಲ. ಚಿತ್ರಣದಲ್ಲಿ ಹಿಂದೂಗಳು ಇಲ್ಲ ಎಂಬ ಕಾರಣಕ್ಕೆ ಹಿಂದೂಗಳ ಮನೆಗಳ ಮೇಲೆ ದಾಳಿ ನಡೆಸಲಗಿದೆ. ಇದು ಮುಸ್ಲಿಂ ಮತ್ತು ಪೊಲೀಸರ ನಡುವಿನ ಗಲಾಟೆ ಎಂದಿದ್ದಾರೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ