AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕಮಾಂಡ್‌ ಬುಲಾವ್, ದೆಹಲಿಗೆ ತೆರಳಿದ ವಿಜಯೇಂದ್ರ: ಸೋಮಣ್ಣ ಮನೆ ಪೂಜೆ ನೆಪದಲ್ಲಿ ದೆಹಲಿ ಸೇರಿದ ಯತ್ನಾಳ್‌!

ಕರ್ನಾಟಕ ಬಿಜೆಪಿ ಬಂಡಾಯ ಮತ್ತೊಮ್ಮೆ ದೆಹಲಿಗೆ ಸ್ಥಳಾಂತರಗೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೇಂದ್ರ ಸಚಿವ ಸೋಮಣ್ಣ ಅವರ ಮನೆ ಪೂಜೆಗೆ ಹೋಗಿದ್ದೇವೆ ಎಂದು ಮುಖಂಡರು ಹೇಳಿದ್ದರೂ, ಯಾರನ್ನೂ ಆಹ್ವಾನಿಸಿಲ್ಲ ಎಂದು ಸೋಮಣ್ಣ ಹೇಳಿದ್ದು ಅಚ್ಚರಿ ಮೂಡಿಸಿದೆ.

ಹೈಕಮಾಂಡ್‌ ಬುಲಾವ್, ದೆಹಲಿಗೆ ತೆರಳಿದ ವಿಜಯೇಂದ್ರ: ಸೋಮಣ್ಣ ಮನೆ ಪೂಜೆ ನೆಪದಲ್ಲಿ ದೆಹಲಿ ಸೇರಿದ ಯತ್ನಾಳ್‌!
ಯತ್ನಾಳ್‌, ನಡ್ಡಾ, ವಿಜಯೇಂದ್ರ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on:Feb 10, 2025 | 8:15 AM

Share

ಬೆಂಗಳೂರು, ಫೆಬ್ರವರಿ 10: ಕರ್ನಾಟಕ ಬಿಜೆಪಿ ಅಂತಃಕಲಹ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ರಾಜ್ಯಾಧ್ಯಕ್ಷ ಪಟ್ಟದಿಂದ ವಿಜಯೇಂದ್ರರನ್ನು ಕೆಳಕ್ಕಿಳಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ನೇತೃತ್ವದ ನಾಯಕರ ಗುಂಪು ಶತಪ್ರಯತ್ನ ಮಾಡುತ್ತಿದೆ. ಆದರೆ, ಇದಕ್ಕೆ ಕೌಂಟರ್‌ ಕೊಡುತ್ತಿರುವ ವಿಜಯೇಂದ್ರ, ನಾನಾ ವ್ಯೂಹ ಹೆಣೆಯುತ್ತಿದ್ದಾರೆ. ಇದೇ ಹೊತ್ತಲ್ಲೇ ವಿಜಯೇಂದ್ರ ಮತ್ತು ಯತ್ನಾಳ್‌ ಇಬ್ಬರೂ ಕೇಂದ್ರ ಸಚಿವ ಸೋಮಣ್ಣ ಮನೆ ಪೂಜೆ ನೆಪದಲ್ಲಿ ದೆಹಲಿಯಲ್ಲಿ ತಂತ್ರಗಾರಿಕೆ ಮಾಡುತ್ತಿದ್ದಾರೆ.

ಸೋಮಣ್ಣ ಮನೆ ಪೂಜೆಗೆ ಹೋಗುತ್ತಿದ್ದೇವೆ ಎಂದು ಎರಡೂ ಬಣದ ನಾಯಕರು ಹೇಳಿದ್ದರೆ, ಅತ್ತ ‘ನಾನು ಯಾರನ್ನೂ ಕರೆದಿಲ್ಲ’ ಎಂದು ಸೋಮಣ್ಣ ಖಡಾಖಂಡಿತವಾಗಿ ಹೇಳಿದ್ದಾರೆ. ಹೀಗಾಗಿ, ಹೈಕಮಾಂಡ್‌ ಭೇಟಿಗೆ ಇಬ್ಬರೂ ಮುಂದಾಗಿದ್ದಾರಾ ಎಂಬ ಅನುಮಾನ ಸಹಜವಾಗಿ ಮೂಡಿದೆ. ದಾವಣಗೆರೆ ಪ್ರವಾಸಕ್ಕೆ ಹೋಗುತ್ತಿದ್ದ ವಿಜಯೇಂದ್ರಗೆ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಹೀಗಾಗಿ ದಾವಣಗೆರೆ ಪ್ರವಾಸ ರದ್ದು ಮಾಡಿದ ದೆಹಲಿ ವಿಮಾನ ಹತ್ತಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಯತ್ನಾಳ್ ಬಣದ ಮೀಟಿಂಗ್

ಯತ್ನಾಳ್‌ ಬಣ ದೆಹಲಿಯಿಂದ ವಾಪಸ್‌ ಆಗಿ ವಾರವೂ ಆಗಿಲ್ಲ. ದಾವಣಗೆರೆಯ ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಗೆಸ್ಟ್‌ ಹೌಸ್‌ನಲ್ಲಿ ಯತ್ನಾಳ್‌ ಬಣದ ನಾಯಕರು ಭಾನುವಾರ ಸಭೆ ಸೇರಿದ್ದಾರೆ. ಮುಂದಿನ ಹೋರಾಟಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಂಸದ ಬಸವರಾಜ್‌ ಬೊಮ್ಮಾಯಿ ಜೊತೆಗೆ ವಾಲ್ಮೀಕಿ ಜಾತ್ರೆಯ ವೇದಿಕೆ ಹಂಚಿಕೊಂಡಿದ್ದಾರೆ. ಬೊಮ್ಮಾಯಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಯತ್ನಾಳ್, ತಟಸ್ಥ ಬಣವೂ ಪರಿವರ್ತನೆಯಾಗಿದೆ ಎಂದಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಮಾತನಾಡಿದ ಯತ್ನಾಳ್, ನಾನು ರಾಜ್ಯಾಧ್ಯಕ್ಷ ರೇಸ್‌ನಲ್ಲಿದ್ದೇನೆ ಎಂದಿದ್ದಾರೆ. ವಿಜಯೇಂದ್ರ ಕೂಡಾ ದೆಹಲಿಗೆ ಹೋಗುವ ಮುನ್ನ ಟಾಂಗ್ ಕೊಟ್ಟಿದ್ದು, ಯತ್ನಾಳ್ ಹೇಳಿದ್ದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ

ರಾಜ್ಯ ಬಿಜೆಪಿ ರಾಜಕಾರಣ ದೆಹಲಿಗೆ ಸ್ಥಳಾಂತರ ಆಗಿರುವ ಹೊತ್ತಲ್ಲೇ ಪ್ರಯಾಗ್‌ ರಾಜ್‌ನಲ್ಲಿ ಯತ್ನಾಳ್ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಯತ್ನಾಳ್ ರಾಜ್ಯಾಧ್ಯಕ್ಷರಾಗಲಿ ಎಂದು ಪ್ರಾರ್ಥಿಸಿದ್ದಾರೆ. ದೆಹಲಿಯಲ್ಲಿ ಯಾರು ಯಾರ ಮನೆಗೆ ಹೋಗಲಿದ್ದಾರೆ? ಯಾರು ಯಾರನ್ನ ಭೇಟಿಯಾಗಲಿದ್ದಾರೆ ಎಂಬುದು ಇವತ್ತು ಗೊತ್ತಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:06 am, Mon, 10 February 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ