Janotsav: ಸೆ.11 ರಂದು ‘ಜನೋತ್ಸವ’ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

| Updated By: ನಯನಾ ರಾಜೀವ್

Updated on: Aug 18, 2022 | 10:54 AM

ಬರುವ ಸೆಪ್ಟೆಂಬರ್ 11 ರಂದು ಜನೋತ್ಸವ ಕಾರ್ಯಕ್ರಮವನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.

Janotsav: ಸೆ.11 ರಂದು ಜನೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ
BJP
Follow us on

ಬರುವ ಸೆಪ್ಟೆಂಬರ್ 11 ರಂದು ಜನೋತ್ಸವ ಕಾರ್ಯಕ್ರಮವನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ವರಿಷ್ಠರ ಸಮಯ ನಿಗದಿಪಡಿಸಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ, ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ ಜನೋತ್ಸವ ಸಮಾವೇಶ ನಡೆಯಲಿದೆ.

ಜನೋತ್ಸವದ ಪೂರ್ವ ಸಿದ್ದತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಸಭೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಜನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು.

ಈ ಹಿಂದೆ ನಿಗದಿಯಾಗಿದ್ದ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಲಿದೆ. ಜು.28ರಂದು ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿತ್ತು. ಸೆಪ್ಟೆಂಬರ್ 11ರಂದು ದೊಡ್ಡಬಳ್ಳಾಪುರದಲ್ಲಿಯೇ ಜನೋತ್ಸವ ಕಾರ್ಯಕ್ರಮ ನಿಗದಿಯಾಗಿದೆ.

ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸುವ ಉದ್ದೇಶವಿದ್ದು, ಯಾವ ರೀತಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎನ್ನುವ ಚರ್ಚೆ ನಡೆಸಲಾಗಿತ್ತು.

ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.

 

 

Published On - 10:44 am, Thu, 18 August 22