ಕಾಂಗ್ರೆಸ್​ನಲ್ಲಿ ಇರೋದು 68 ಶಾಸಕರು, ಆದರೆ ‘ಮುಂದಿನ ಮುಖ್ಯಮಂತ್ರಿ’ ಆಕಾಂಕ್ಷಿಗಳು 100ಕ್ಕೂ ಅಧಿಕ!  ಟ್ವೀಟ್​ ಮಾಡಿ ಕುಟುಕಿದ ಬಿಜೆಪಿ

Karnataka Congress: ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್‌ ತಪ್ಪಿಸಿತ್ತು.

ಕಾಂಗ್ರೆಸ್​ನಲ್ಲಿ ಇರೋದು 68 ಶಾಸಕರು, ಆದರೆ ‘ಮುಂದಿನ ಮುಖ್ಯಮಂತ್ರಿ’ ಆಕಾಂಕ್ಷಿಗಳು 100ಕ್ಕೂ ಅಧಿಕ!  ಟ್ವೀಟ್​ ಮಾಡಿ ಕುಟುಕಿದ ಬಿಜೆಪಿ
ದುರ್ಬಲ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್​ಗೆ ಈಗ ಸಿದ್ದರಾಮಯ್ಯ ಬೆಂಬಲಿಗರ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 28, 2021 | 3:25 PM

ಬೆಂಗಳೂರು: ತಮ್ಮ ಪಕ್ಷದಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ ಕೂಗು ತಣ್ಣಗಾಗುತ್ತಿದ್ದಂತೆ ಬಿಜೆಪಿ ಪಕ್ಷವು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ರಾಮಾಯಣ ಎಬ್ಬಿಸಿರುವ ‘ಮುಂದಿನ ಮುಖ್ಯಮಂತ್ರಿ’ ಕೂಗಿನ ಬಗ್ಗೆ  ಟ್ವಿಟರ್​ನಲ್ಲಿ ಕಾಂಗ್ರೆಸ್ ವಿರುದ್ಧ ರಣಕಹಳೆ ಮೊಳಗಿಸಿದೆ. ಕಾಂಗ್ರೆಸ್​​ನಲ್ಲಿ ಎದ್ದಿರುವ ಮುಂದಿನ ಸಿಎಂ ಬಿರುಗಾಳಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಅರಾಜಕತೆ ಎಷ್ಟಿದೆ ಎಂದರೆ, ಇರೋದು 68 ಶಾಸಕರು, ಆದರೆ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಗಳು ಮಾತ್ರ ನೂರಕ್ಕೂ ಅಧಿಕ!!! ಕಾಂಗ್ರೆಸ್ ಪಕ್ಷದ ಅಧಿಕೃತ ಮೂಲದಿಂದಲೇ ನೂರಕ್ಕೂ ಹೆಚ್ಚು ಜನ ಸಿಎಂ ಕುರ್ಚಿಯ ಆಕಾಂಕ್ಷಿಗಳು ನಮ್ಮಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗುತ್ತಿದೆ! ಎಂದು ಕುಟುಕಿದೆ.

ಕಾಂಗ್ರೆಸ್ ಪಕ್ಷದೊಳಗಿನ ಒಳ‌ಜಗಳ ಈಗ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ಮೂಲ‌ ಕಾಂಗ್ರೆಸ್ಸಿಗರು ಒಟ್ಟಾಗುತ್ತಿದ್ದಾರೆ. ಮುನಿಯಪ್ಪ ಅವರ ಮನೆಯಲ್ಲಿ ನಡೆದ ಗೌಪ್ಯ ಸಭೆಯೇ ಅದಕ್ಕೆ ಸಾಕ್ಷಿಯಾಗಿದೆ. ಉಸ್ತುವಾರಿ ಸುರ್ಜೆವಾಲ ಮಾತಿಗೆ ಕವಡೆ ಕಾಸಿನ‌ ಕಿಮ್ಮತ್ತು ಇಲ್ಲದಂತಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಯಾವುದೇ ಬಣವಿಲ್ಲ ಎಂದು ಪಂಚತಂತ್ರ ಕತೆ ಹೆಣೆಯುತ್ತಿದ್ದ ಸಿದ್ಧರಾಮಯ್ಯ ಅವರೇ ಮಾಜಿ ಸಚಿವ ಮುನಿಯಪ್ಪ‌‌‌ ಅವರ ನಿವಾಸದಲ್ಲಿ ಪರಮೇಶ್ವರ್, ಹರಿಪ್ರಸಾದ್ ಸಭೆ ನಡೆಸಿದ್ದು ಏಕೆ? ಎಂದು ಟ್ವೀಟ್ ಮಾಡಿ ಬಿಜೆಪಿ ವ್ಯಂಗ್ಯವಾಗಿ ಪ್ರಶ್ನಿಸಿದೆ.​

ದುರ್ಬಲ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್​ಗೆ ಈಗ ಸಿದ್ದರಾಮಯ್ಯ ಬೆಂಬಲಿಗರ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ:

ಕಾಂಗ್ರೆಸ್ ದೇಶದ ವಿರುದ್ಧ ಟೂಲ್‌ಕಿಟ್‌ ಮಾಡುವ ಬದಲು ತನ್ನಲ್ಲಿರುವ ಬಣಗಳ ಟೂಲ್‌ಕಿಟ್‌ ತಯಾರಿಸಿ. ದುರ್ಬಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಸಿದ್ದರಾಮಯ್ಯ ಬೆಂಬಲಿಗರನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಇದರ ನಡುವೆ ಮೂಲ ಕಾಂಗ್ರೆಸ್‌ ನಾಯಕರು ಕೂಡಾ ತಮ್ಮ ದಾಳ ಉರುಳಿಸುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಈಗ ದಿನಕ್ಕೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ದಲಿತ ನಾಯಕರಿಗೆ ಒಲಿದು ಬಂದಿದ್ದ ಮುಖ್ಯಮಂತ್ರಿ ಸ್ಥಾನವನ್ನು ಕುತಂತ್ರದಿಂದ ಕಾಂಗ್ರೆಸ್‌ ತಪ್ಪಿಸಿತ್ತು. ಈ ನಡುವೆ ಮುಸ್ಲಿಮರಿಗೂ ಅವಕಾಶ ನೀಡಿ ಎಂದು ಸಿ.ಎಂ. ಇಬ್ರಾಹಿಂ ಹೇಳುತ್ತಿದ್ದಾರೆ. ದಲಿತ ಸಿಎಂ ಕೂಗನ್ನು ದಮನಿಸಿರುವ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಕೂಗನ್ನು ಅಡಗಿಸುವುದು ದೊಡ್ಡ ಕೆಲಸವೇನಲ್ಲ ಎಂದು ಬಿಜೆಪಿ ಜರಿದಿದೆ.

(Karnataka bjp tweets on karnataka congress leadership debate)