AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ: 18 ನಾಯಕರಿಗೆ ಪ್ರಮುಖ ಹುದ್ದೆ

ಕರ್ನಾಟಕ ಸರ್ಕಾರವು ನಿಗಮ, ಮಂಡಳಿಗಳಿಗೆ 428 ನಿರ್ದೇಶಕರು/ಸದಸ್ಯರನ್ನು ನೇಮಿಸಿದ ನಂತರ, ಕಾಂಗ್ರೆಸ್ ಹೈಕಮಾಂಡ್ ಇದೀಗ 18 ಪ್ರಮುಖ ನಾಯಕರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಮುಖ್ಯ ಸಚೇತಕರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳನ್ನು ಹಂಚಿಕೆ ಮಾಡಿದೆ. ತನ್ವೀರ್ ಸೇಠ್, ಬೇಲೂರು ಗೋಪಾಲಕೃಷ್ಣ ಸೇರಿದಂತೆ ಹಲವರಿಗೆ ಸ್ಥಾನ ಸಿಕ್ಕಿದ್ದು, ಅಸಮಾಧಾನ ಶಮನಗೊಳಿಸಲು ಮತ್ತು ಪ್ರಾದೇಶಿಕ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗಿದೆ.

ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ: 18 ನಾಯಕರಿಗೆ ಪ್ರಮುಖ ಹುದ್ದೆ
ಕಾಂಗ್ರೆಸ್​​ ನಾಯಕರು
ಪ್ರಮೋದ್​ ಶಾಸ್ತ್ರಿ ಜಿ.
| Edited By: |

Updated on:Nov 21, 2026 | 11:50 AM

Share

ಬೆಂಗಳೂರು, ನ.21: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳಿಗೆ ಬರೋಬ್ಬರಿ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ ಬೆನ್ನಲ್ಲೆ ಇದೀಗ ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಅಧಿಕೃತ ಲೆಟರ್‌ಹೆಡ್‌ನಲ್ಲಿ ರಾಜ್ಯದ 18 ಪ್ರಮುಖ ನಾಯಕರ ಹೆಸರುಗಳನ್ನು ಉಲ್ಲೇಖಿಸಿ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ.

ಹೈಕಮಾಂಡ್ ಪಟ್ಟಿಯಲ್ಲಿರುವ 18 ನಾಯಕರು ಮತ್ತು ಹುದ್ದೆಗಳ ಸಂಪೂರ್ಣ ವಿವರ

ಕ್ರಮ ಸಂಖ್ಯೆ ನಾಯಕರ ಹೆಸರು ನೇಮಕಗೊಂಡ ಹುದ್ದೆ / ನಿಗಮ-ಮಂಡಳಿ
1 ತನ್ವೀರ್ ಸೇಠ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ
2 ಬೇಲೂರು ಗೋಪಾಲಕೃಷ್ಣ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ
3 ಮಂಜುನಾಥ ಭಂಡಾರಿ ವಿಧಾನಪರಿಷತ್‌ ಸರ್ಕಾರಿ ಮುಖ್ಯ ಸಚೇತಕ
4 ಬಿ. ಶಿವಣ್ಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷ
5 ಕೆ. ಷಡಕ್ಷರಿ ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ
6 ಪಿ.ಎಂ. ಅಶೋಕ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ
7 ಎ.ಆರ್. ಕೃಷ್ಣಮೂರ್ತಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ
8 ಹಂಪನಗೌಡ ಬಾದರ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ
9 ಡಿ.ಜಿ. ಶಾಂತನಗೌಡ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಅಧ್ಯಕ್ಷ
10 ಜಿ.ಎಚ್. ಶ್ರೀನಿವಾಸ್ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ
11 ಮಹಾಂತೇಶ ಕೌಜಲಗಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಅಧ್ಯಕ್ಷ
12 ಎಸ್‌.ಎನ್‌. ಸುಬ್ಬಾರೆಡ್ಡಿ ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್ (MSIL) ಅಧ್ಯಕ್ಷ
13 ಎನ್‌.ಎಚ್‌. ಕೋನರಡ್ಡಿ ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ
14 ಬಸನಗೌಡ ದದ್ದಲ್ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ
15 ಅಲ್ಲಮಪ್ರಭು ಪಾಟೀಲ್ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷ
16 ಶ್ಯಾಮ್ ನಾಟೇಕರ್ ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ
17 ಎಚ್‌.ಸಿ. ಲಲಿತ್ ರಾಘವ್ ಕರ್ನಾಟಕ ವಿದ್ಯುತ್ ಕಾರ್ಖಾನೆ (KAVIKA) ಅಧ್ಯಕ್ಷ
18 ಸುಭಾಷ್ ರಾಠೋಡ್ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಾದ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ, ಬೇಲೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ ಹಾಗೂ ಮಂಜುನಾಥ ಭಂಡಾರಿ ಅವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವ ಮೂಲಕ ಹೈಕಮಾಂಡ್ ಅಸಮಾಧಾನ ಶಮನಗೊಳಿಸಲು ಮುಂದಾಗಿದೆ.

ಇದನ್ನೂ ಓದಿ: ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಗಿಫ್ಟ್ ಕೊಟ್ಟ ಸರ್ಕಾರ: ನಿಗಮ ಮಂಡಳಿ, ಪ್ರಾಧಿಕಾರಗಳಿಗೆ 428 ಕಾರ್ಯಕರ್ತರ ನೇಮಕ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಬಸನಗೌಡ ದದ್ದಲ್, ಬಿಎಂಟಿಸಿಗೆ ಎ.ಆರ್. ಕೃಷ್ಣಮೂರ್ತಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬಿ. ಶಿವಣ್ಣ ಅವರನ್ನು ನೇಮಿಸುವ ಮೂಲಕ ಹಳೆ ಮೈಸೂರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಿಗೆ ಸಮಾನ ಪ್ರಾತಿನಿಧ್ಯ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 am, Sat, 21 November 26

Follow Us
ಪ್ರಮೋದ್​ ಶಾಸ್ತ್ರಿ ಜಿ.
ಪ್ರಮೋದ್​ ಶಾಸ್ತ್ರಿ ಜಿ.
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?