ಕಳೆದ ಐದಾರು ತಿಂಗಳಿನಿಂದ ಖಾಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಆಯ್ಕೆ ಆಗಿದ್ದಾರೆ. ಲಿಂಗಾಯತ ಸಮುದಾಯ ಪಕ್ಷದ ಹಿಡಿತದಿಂದ ತಪ್ಪಿಹೋಗದಂತೆ ಬಿ.ವೈ.ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆಯೂ ಸಿದ್ಧತೆ ನಡೆದಿದೆ. ಮತ್ತೊಂದೆಡೆ ವರ್ಷಕ್ಕೊಮ್ಮೆ ದರ್ಶನ ನೀಡುವ ಶಕ್ತಿದೇವತೆ ಹಾಸನಾಂಬೆ ಸನ್ನಿಧಿಯಲ್ಲಿ ನಿನ್ನೆ ಧರ್ಮದರ್ಶನದ ಸಾಲಿನಲ್ಲಿ ತಳ್ಳಾಟ, ನೂಕಾಟ ಉಂಟಾಗಿ ಬ್ಯಾರಿಕೇಡ್ನ ಕಂಬಿಗಳು ಮುರಿದು ಕರೆಂಟ್ ವೈಯರ್ಗೆ ಕಬ್ಬಿಣದ ತಂತಿ ಟಚ್ ಆಗಿ ಕಂಬಿ ಹಿಡಿದಿದ್ದ ಮಹಿಳೆಯರಿಗೆ ಕರೆಂಟ್ ಶಾಕ್ ಹೊಡೆದಿತ್ತು. ಸದ್ಯ ಎಲ್ಲರೂ ಪ್ರಯಾಪಾಯದಿಂದ ಪಾರಾಗಿದ್ದಾರೆ. ಇದೆಲ್ಲದರ ಜೊತೆಗೆ ರಾಜ್ಯದ ಪ್ರಮುಖ ಸುದ್ದಿಗಳ ಮಾಹಿತಿಗಾಗಿ ಟಿವಿ9 ಡಿಜಿಟಲ್ ಲೈವ್ ಫಾಲೋ ಮಾಡಿ.
ಪಕ್ಷ ದೊಡ್ಡ ಜವಾಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿದೆ. ಈ ಸಂದರ್ಭದಲ್ಲಿ ಪರಮ ಪೂಜ್ಯರ ಆಶೀರ್ವಾದ ಅತ್ಯಗತ್ಯ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡು ಎಂದು ನಿರ್ಮಲಾನಂದ ಶ್ರೀ ಆಶೀರ್ವಾದ ಮಾಡಿದ್ದಾರೆ. ನಾಳೆ ಸಿದ್ದಗಂಗಾ ಮಠ ಮತ್ತು ಮನೆ ದೇವರು ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುತ್ತೇನೆ. ಪದಗ್ರಹಣ ದಿನಾಂಕ ಎಲ್ಲವೂ ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ತೀರ್ಮಾನ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಯಲ್ಲಾಪುರದಲ್ಲಿ ಬೈಎಲೆಕ್ಷನ್ ನಡೆಯುವುದು ನನ್ನ ರಾಜೀನಾಮೆ ಮೇಲೆ ನಿಂತಿದೆ ಎಂದು ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಶಕ್ತಿ, ಧೈರ್ಯ ಇದ್ದಾಗ ರಾಜೀನಾಮೆಯಂತಹ ನಿರ್ಧಾರ ಕೈಗೊಳ್ಳುತ್ತೇನೆ.
ಯಲ್ಲಾಪುರದಲ್ಲಿ ಬೈಎಲೆಕ್ಷನ್ ನಡೆಯುವುದು ನನ್ನ ರಾಜೀನಾಮೆ ಮೇಲೆ ನಿಂತಿದೆ: ಶಾಸಕ ಶಿವರಾಮ್ ಹೆಬ್ಬಾರ್
ನವೆಂಬರ್ 15ರಂದು ಕೇರಳದಲ್ಲಿ ಜೆಡಿಎಸ್ ಕಾರ್ಯಕಾರಣಿ ಸಭೆ ಆಯೋಜಿಸಿದ್ದು, ಸಭೆಯಲ್ಲಿ ಯಾರು ಹಾಜರಾಗದಂತೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಂದ ಪತ್ರ ಬರೆಯಲಾಗಿದೆ. ಕರೆದಿರುವ ಸಭೆ ಅಧಿಕೃತ ಸಭೆ ಅಲ್ಲ, ಯಾರು ಕೂಡ ಹಾಜರಾಗಬಾರದು ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಿಗೆ ಪತ್ರ ಬರೆಯಲಾಗಿದೆ.
ನ 15ರಂದು ಕೇರಳದಲ್ಲಿ ಜೆಡಿಎಸ್ ಕಾರ್ಯಕಾರಣಿ ಸಭೆ: ಯಾರು ಹಾಜರಾಗಬೇಡಿ ಎಂದ ಹೆಚ್ಡಿ ದೇವೇಗೌಡ
ನಾಳೆ ಬೆಳಗ್ಗೆ 9.30ಕ್ಕೆ ಸಿದ್ಧಗಂಗಾ ಮಠಕ್ಕೆ ಬಿ.ವೈ.ವಿಜಯೇಂದ್ರ ಭೇಟಿ ನೀಡಲಿದ್ದಾರೆ. ಸಿದ್ಧಗಂಗಾ ಸ್ವಾಮೀಜಿ ಆಶೀರ್ವಾದ ಪಡೆಯಲಿದ್ದಾರೆ. ನಂತರ ಎಡೆಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟನ್ನು ಉದ್ಘಾಟಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದಾರೆ.
ಮುಖ್ಯಮಂತ್ರಿ @siddaramaiah ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ… pic.twitter.com/dC0oG3MQMd
— CM of Karnataka (@CMofKarnataka) November 11, 2023
ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ ಕಿಕ್ಕಿರಿದು ಸೇರಿದೆ. ಅನುಮತಿ ಇಲ್ಲದೆ ಏಕೆ ಒಳಬಿಟ್ರಿ, ಇದು ಸರಿಯಲ್ಲ ಹೊರಹೋಗಿ ಎಂದು ಅನುಮತಿ ಇಲ್ಲದೆ ದೇವಿ ದರ್ಶನಕ್ಕೆ ಬಂದವರನ್ನು ಹಾಸನ ಡಿಸಿ ಸತ್ಯಭಾಮಾ ಹೊರಕಳಿಸಿದ್ದಾರೆ.
ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರೌಂಡ್ಸ್ ಹಾಕಿದ್ದು, ಸ್ಥಗಿತಗೊಂಡಿರುವ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ. ಬಳಿಕ ಶಾಸಕ ಎಸ್.ಮುನಿರಾಜು ಮನೆಯಲ್ಲಿ ಊಟ ಮಾಡಿದ್ದಾರೆ. ಬಳಿಕ ಶಾಸಕರ ಕುಟುಂಬ, ಪೊಲೀಸರು, ಮಹಿಳೆಯರ ಜೊತೆಯಲ್ಲಿ ಯಡಿಯೂರಪ್ಪ ಫೋಟೋಗೆ ಪೋಜ್ ನೀಡಿದ್ದಾರೆ.
ಯುವಕರನ್ನ ಅನುಭವಸ್ಥರನ್ನ ಬಿಜೆಪಿ ವರಿಷ್ಠರು ಆಯ್ಕೆ ಮಾಡಿದ್ದು ಸ್ವಾಗತ. ರಾಜ್ಯದ ಉದ್ದಗಲಕ್ಕೂ ಪಕ್ಷ ಸಂಘಟನೆ ಮಾಡಿ ಪಕ್ಷ ಅಧಿಕಾರಕ್ಕೆ ತರಲಿಕ್ಕೆ ಯೋಗ್ಯರಿದ್ದಾರೆ ಎಂದು ಬೀದರ್ನಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.
ಕುಟುಂಬ ರಾಜಕಾರಣದ ಬಗ್ಗೆ ಈಗ ಮಾತನಾಡುವುದು ತಪ್ಪಾಗುತ್ತೆ. ಎಲ್ಲೆಲ್ಲೆಗೊ ಕನೆಕ್ಟ್ ಆಗುತ್ತೆ ಇಗ ಉತ್ತರಿಸುವುದಿಲ್ಲ. ನಾನು ಪಕ್ಷದ ಕಟ್ಟಾಳು. ಪಕ್ಷದ ನಿರ್ಣಯದ ವಿರುದ್ದ ಮಾತಾಡಿಲ್ಲಾ. ನಿರ್ಣಯ ಸರಿಯಿಲ್ಲ ಅನಿಸಿದರೆ ವೇದಿಕೆ ಇದೆ ಎಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಎಲ್ಲಾ ಹಿರಿಯ ನಾಯಕರು, ಶಾಸಕರ ಸಹಕಾರ ಕೋರಿದ್ದೇನೆ ಎಂದು ಟಿವಿ9ಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಎಲ್ಲರೂ ಸಹಕಾರ ನೀಡುವ ವಿಶ್ವಾಸ ಇದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಬೇಕಿದೆ. ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಸಿಕೊಂಡು ಹೋಗುವೆ ಎಂದಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಹೊಂದಾಣಿಕೆ ಆಗುವ ಪ್ರಶ್ನೆಯೇ ಇಲ್ಲ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕಡ್ಡಿ ಮುರಿದಂತೆ ಹೇಳಿದ್ದಾರೆ. ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು ನಮ್ಮ ಹಂತದಲ್ಲಿ ಏನೂ ಇಲ್ಲ. ನಾನು ಯಾವುದೇ ಹುದ್ದೆಯ ಕ್ಲೈಮ್ ಮತ್ತು ಡಿಮ್ಯಾಂಡ್ ಮಾಡಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ನಮ್ಮ ನಿವಾಸಕ್ಕೆ ಹಲವು ಬಾರಿ ಬಂದಿದ್ದಾರೆ. ಪಕ್ಷದ ವಿಚಾರ ಮತ್ತು ಅಭಿವೃದ್ಧಿ ವಿಚಾರದ ಕುರಿತು ಚರ್ಚೆ ಆಗಿದೆ. ಮೈಸೂರಿಗೆ ಹೋಗುವ ಉದ್ದೇಶ ಬೇರೆ, ಡಿಕೆ ಭೇಟಿಯಾದ ಉದ್ದೇಶ ಬೇರೆ. ಅಡ್ಜಸ್ಟ್ಮೆಂಟ್ ಎನ್ನುವ ಪ್ರಶ್ನೆ ಇಲ್ಲ. ಲೋಕಸಭೆ ಚುನಾವಣೆಯಾದ ಬಳಿಕ ಚರ್ಚೆಗೆ ಬರಬಹುದು. ಚುನಾವಣೆ ಬಳಿಕ ಯಾವ ಹೊಸ ವಿಚಾರ ಬರುತ್ತಾವೆಂದು ಕಾದುನೋಡೋಣ ಎಂದರು.
ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ್ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಡ್ಯಾಂ ಅನ್ನು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದ್ದಾರೆ. ಮೂರು ತಾಲೂಕು ಹಾಗೂ 45 ಗ್ರಾಮಗಳಿಗೆ ಈ ಡ್ಯಾಂ ಕುಡಿಯುವ ನೀರು ಒದಗಿಸಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಹೆಚ್ ಮುನಿಯಪ್ಪ, ಬೈರತಿ ಸುರೇಶ್ ಸೇರಿ ಜಿಲ್ಲೆಯ ಶಾಸಕರುಗಳು ಸಾಥ್ ನೀಡಿದರು.
ಹಾಸನಾಂಬೆ ದೇವಸ್ಥಾನದ ಗರ್ಭಗುಡಿ ಪ್ರವೇಶಕ್ಕೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮತ್ತು ಕುಟುಂಬಸ್ಥರಿಗೆ ಅನುಮತಿ ನೀಡಲಾಗಿದೆ. ಅರ್ಚಕರನ್ನು ಹೊರತುಪಡಿಸಿ ಉಳಿದವರಿಗೆ ಗರ್ಭಗುಡಿ ಪ್ರವೇಶ ನಿಷೇಧ ಎಂದು ನಿನ್ನೆ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು. ಆದರೆ ಸಚಿವರಿಗಾಗಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಆದೇಶ ಉಲ್ಲಂಘನೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಒಳ್ಳೆಯ ಬೆಳವಣಿಗೆ ಎಂದು ಮೈಸೂರಿನಲ್ಲಿ ಜೆಡಿಎಸ್ ಪಕ್ಷದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಬಿಎಸ್ವೈ ಸಿಎಂ ಆಗಬೇಕೆಂದು 50,000 ಜನ ಸೇರಿಸಿದವನು ನಾನು. ಯಡಿಯೂರಪ್ಪ ಮುಖ್ಯಮಂತ್ರಿ ಆದ ಮೇಲೆ ವೀರಶೈವ ಮಾತ್ರವಲ್ಲ, ಎಲ್ಲಾ ಸಮುದಾಯದವರನ್ನು ಸೇರಿಸಿಕೊಂಡು ಒಟ್ಟಾಗಿ ಹೋಗಿದ್ದಾರೆ. BSY, HDK ಒಟ್ಟಾಗಿ ಹೋದ ಕಾರಣಕ್ಕಾಗಿಯೇ ಅಧಿಕಾರ ಸಿಕ್ಕಿದ್ದು. ಇಬ್ಬರೂ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಈಗ ಅದೇ ರೀತಿ BSY ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಾಗಿದೆ. ಮತ್ತೊಂದು ಕಡೆ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದಾರೆ. ಇಬ್ಬರೂ ಒಟ್ಟಾಗಿ ಹೋದರೆ ಕಾಂಗ್ರೆಸ್ ವಿರುದ್ಧ ಹೋರಾಟ ಸುಲಭವಾಗುತ್ತೆ. ಬಿ.ವೈ.ವಿಜಯೇಂದ್ರ ಯುವ ನಾಯಕ, ಸಮುದಾಯದ ಬೆಂಬಲ ಇದೆ. ಯಡಿಯೂರಪ್ಪ ಸಿಎಂ ಆಗಲು ವಿಜಯೇಂದ್ರ ಚಾಣಾಕ್ಷತನವೂ ಇದೆ. BSY ಮೂಲೆ ಗುಂಪು ಅನ್ನೋ ಕಾರಣಕ್ಕೆ ಬಿಜೆಪಿಗೆ ಹಿನ್ನಡೆಯಾಗಿತ್ತು. ಆದ್ದರಿಂದ ಬಿ.ವೈ.ವಿಜಯೇಂದ್ರ ಆಯ್ಕೆ ಸೂಕ್ತವಾಗಿದೆ ಎಂದರು.
ಪಂಡಿತ್ ಪುಟ್ಟರಾಜ ಕವಿ ಗವಾಯಿಗಳ ಮಠದ ಶ್ರೀಗಳ ಭವಿಷ್ಯವಾಣಿ ನಿಜವಾಗಿದೆ. ಗದಗ ಗವಾಯಿಗಳ ಮಠದ ಪೀಠಾಧಿಪತಿ ಕಲ್ಲಯ್ಯನವರು ನವೆಂಬರ್ 8 ರಂದು ಬಿ.ವೈ. ವಿಜಯೇಂದ್ರ ಅವರಿಗೆ ಕರೆ ಮಾಡಿ ಹುಟ್ಟಹಬ್ಬಕ್ಕೆ ಶುಭ ಕೋರಿದ್ದರು. ಈ ವೇಳೆ ನೀವು ಅಧ್ಯಕ್ಷರಾಗ್ತಿರಿ ಎಂದು ಹಾರೈಕೆ ಮಾಡಿದ್ದರು. ಅದರಂತೆ ಎರಡೇ ದಿನದಲ್ಲಿ ಶ್ರೀಗಳ ಭವಿಷ್ಯವಾಣಿ ನಿಜವಾಗಿದೆ. ನಿನ್ನೆ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವ್ರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಶ್ರೀಗಳ ಭವಿಷ್ಯವಾಣಿ ಫುಲ್ ವೈರಲ್ ಆಗಿದೆ.
ದೀಪಾವಳಿ ಕೊಡುಗೆಯಾಗಿ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದೆ. 5 ದಶಕಗಳ ಕಾಲ ಯಡಿಯೂರಪ್ಪನವರು ಪಕ್ಷ ಸಂಘಟನೆ ಮಾಡಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಬಿ.ವೈ.ವಿಜಯೇಂದ್ರ ಪಡೆದಿದ್ದಾರೆ. ಸೋಮಣ್ಣ, ಸಿ.ಟಿ.ರವಿ, ಅಶೋಕ್, ಅಶ್ವತ್ಥ್ ನಾರಾಯಣ್ ರೇಸ್ನಲ್ಲಿದ್ರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಲಿಂಗಾಯತ ಸಮಾಜ 100ಕ್ಕೆ 90 ಪರ್ಸೆಂಟೇಜ್ ಬಿಜೆಪಿ ಪರ ಇದ್ದಾರೆ. ವೀರಶೈವ-ಲಿಂಗಾಯತರನ್ನು ಒಡೆಯುವ ಕುತಂತ್ರ ಕಾಂಗ್ರೆಸ್ ಮಾಡಿತ್ತು. ಲಿಂಗಾಯತರು ಬೇರೆ, ವೀರಶೈವರು ಬೇರೆ ಅನ್ನೋ ಕುತಂತ್ರ ಮಾಡಿತ್ತು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ವಿರುದ್ಧ ಮುರುಗೇಶ್ ನಿರಾಣಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಜಯೇಂದ್ರ ರಾಜಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಖುಷಿಯಾಗಿದೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಬೂತ್ ಅಧ್ಯಕ್ಷ ಶಶಿಧರ್ ತಿಳಿಸಿದ್ದಾರೆ. ವಿಜಯೇಂದ್ರ ನಮ್ಮ ಮನೆಗೆ ಬರುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಯಡಿಯೂರಪ್ಪ ಪ್ರೇರಣೆಯಿಂದ ನಾನು ಬಿಜೆಪಿಗೆ ಬಂದಿದ್ದು ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.
ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕೆಂದು ಗುರಿ ಇಟ್ಟಿದ್ದೇವೆ. ಮೋದಿ ಮತ್ತೆ ಪ್ರಧಾನಿಯಾಗಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ನಾನು ಯಾರ ಬಳಿಯೂ ಮನವಿ ಮಾಡಿಲ್ಲ. ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡುವಂತೆ ಮನವಿ ಮಾಡಿಲ್ಲ. ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರು.
ರಾಜ್ಯ ಬಿಜೆಪಿ ಘಟಕ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ಹಿನ್ನೆಲೆ ನ.15 ಅಥವಾ 16ರಂದು ಅಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ ಸಾಧ್ಯತೆ. ನ.17ರಂದು ಶಾಸಕಾಂಗ ಸಭೆ ನಡೆಸಿ ದೆಹಲಿಗೆ ತೆರಳುವ ವಿಜಯೇಂದ್ರ.
ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಬೂತ್ ಗೆದ್ದರೇ ರಾಷ್ಟ್ರ ಗೆಲ್ತೇವೆ ಎಂದು ನಡ್ಡಾ ಅವರ ಕಲ್ಪನೆ ಇದೆ. ಹೀಗಾಗಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ. ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಹೆಗಲ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ್ದಾರೆ. ಯಡಿಯೂರಪ್ಪ ಹಾಗು ವಿಜಯೇಂದ್ರ ಅವರಿಗೆ ಜೈಕಾರ ಕೂಗಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ಹಿನ್ನೆಲೆ ಬೆಂಗಳೂರಿನ ಡಾಲರ್ಸ್ ಕಾಲನಿಯ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ನಿರಾಣಿ, ಸಿದ್ದೇಶ್ವರ್ ಆಗಮಿಸಿ ಬಿ.ವೈ.ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಬೂತ್ ಅಧ್ಯಕ್ಷರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ನೇಮಕ ಹಿನ್ನೆಲೆ ಬೆಂಗಳೂರಿನಲ್ಲಿ ಸಂಸದ ಪಿ.ಸಿ. ಮೋಹನ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯೇಂದ್ರ ಪಕ್ಷದಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಅವರ ನೇತೃತ್ವದಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆಲವರ ಆಸೆಗಳು ಸಹಜ. ಹಾಗಂತ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಶಕ್ತಿ ವಿಜಯೇಂದ್ರಗಿದೆ ಎಂದರು.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ಘಟನೆ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು ಎಂದು ತಿಳಿದು ಬಂದಿದೆ.
ಬಂಗಾರಪೇಟೆ ಮಾಜಿ ಶಾಸಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನಲೆ ಕೋಲಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ದಾಖಲಾಗಿದ್ರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಾಸನಾಂಬೆ ದರ್ಶನಕ್ಕೆ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್ ವಿಚಾರ ಸಂಬಂಧ ಕರೆಂಟ್ ಶಾಕ್ನಿಂದ ಅಸ್ವಸ್ಥರಾಗಿದ್ದ 20 ಭಕ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಐವರು ಭಕ್ತರು ಚಿಕಿತ್ಸೆ ಪಡೆದು ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಂಜೆ 13 ಭಕ್ತರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮತ್ತಿಬ್ಬರು ಗಾಯಾಳುಗಳಿಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಹಕಾರ & ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್.ರಾಜಣ್ಣ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಎಲ್ಲರಿಗೂ ಊಟ ಮಾಡಿಸಿ, ದೇವಿ ದರ್ಶನ ಮಾಡಿಸಿ ಎಂದು ಸೂಚನೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು ಅಕ್ರಮವಾಗಿ ಸಂಗ್ರಹಿಸಿದ್ದ ಆನೆದಂತ, ಶ್ರೀಗಂಧ, ರಕ್ತಚಂದನ ಸೇರಿದಂತೆ 3 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ ಚಂದ್ರಶೇಖರ್ ಹಾಗೂ ತಮಿಳುನಾಡು ಮೂಲದ ಖಲೀಲ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌದೆ ವ್ಯಾಪಾರ ಮಾಡುವುದಾಗಿ ಹೇಳಿ ನಾರಾಯಣಪ್ಪ ಎಂಬುವರ ಮನೆ ಲೀಸ್ ಗೆ ಪಡೆದಿದ್ದ ಆರೋಪಿಗಳು.
Published On - 8:12 am, Sat, 11 November 23