ಜನವಸತಿ ಪ್ರದೇಶದ ಪಟಾಕಿ ಮಳಿಗೆ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಗಾಂಧಿ ಬಜಾರ್ನ ರಮೇಶ್ ಅಂಗಡಿ ಮೇಲೆ ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಪಟಾಕಿ ಮಾರಾಟಕ್ಕೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿತ್ತು. ಆದ್ರೆ, ಜಿಲ್ಲಾಡಳಿತದ ನಿಯಮ ಉಲ್ಲಂಘಿಸಿ ಜನವಸತಿ ಪ್ರದೇಶದಲ್ಲಿ ಮಾರಾಟ ಮಾಡಲಾಗ್ತಿತ್ತು. ಈ ವೇಳೆ ದಾಳಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಇಂದು ಮಾಜಿ ಸಿಎಂಗಳನ್ನು ಬಿ.ವೈ.ವಿಜಯೇಂದ್ರ ಭೇಟಿ ಮಾಡಲಿದ್ದಾರೆ. ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಹಾಗೇ, ಮಾಜಿ ಪ್ರಧಾನಿ ದೇವೇಗೌಡರನ್ನೂ ಭೇಟಿಯಾಗಲಿದ್ದಾರೆ. ಇದೆಲ್ಲದರ ಜೊತೆಗೆ ರಾಜ್ಯದ ಪ್ರಮುಖ ಸುದ್ದಿಗಳ ಮಾಹಿತಿಗಾಗಿ ಟಿವಿ9 ಫಾಲೋ ಮಾಡಿ.
ಎಲ್ಲಾ ಕಡೆ ಭೇಟಿ ಮಾಡಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದೇನೆ. ಸೋಮಣ್ಣ, ಯತ್ನಾಳ್ ಸೇರಿ ಎಲ್ಲಾ ಹಿರಿಯರನ್ನು ಭೇಟಿ ಮಾಡುತ್ತೇನೆ ಎಂದು ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪದಗ್ರಹಣ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15ರ ರಾತ್ರಿವರೆಗೂ ಮಧ್ಯಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಕಾಂತರಾಜು ಅವರು ಅವರ ಬುದ್ಧಿಶಕ್ತಿಗೆ ತಕ್ಕಂತೆ ಒಂದು ಸರ್ವೆ ಮಾಡಿಸಿದ್ದಾರೆ. ಜನರ ಅಭಿಪ್ರಾಯಗಳನ್ನ ಮಂತ್ರಿ ಮಂಡಲದಲಿಟ್ಟು ಅದರ ಚರ್ಚೆ ಮಾಡಿ ಒಪ್ಪುವಂತದ್ದನ್ನು ಒಪ್ಪುತ್ತೇವೆ. ಒಪ್ಪದೇ ಇರುವಂತಹದ್ದನ್ನು ತಿರಸ್ಕಾರ ಮಾಡುತ್ತೇವೆ. ಕಾಂತರಾಜು ವರದಿ ಬಂದಾಕ್ಷಣಕ್ಕೆ ಒಪ್ಪಲು ಅದೇನು ಭಾರತದ ಸಂವಿಧಾನನಾ? ಅದು ಕೇವಲ ಅವರ ಅಭಿಪ್ರಾಯ, ಸರ್ವೇ ಅಷ್ಟೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರವಾಗಿ ಪರೋಕ್ಷವಾಗಿ ಸಂಸದ ರಮೇಶ ಜಿಗಜಿಣಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು. ಅಸೆಂಬ್ಲಿಯಲ್ಲೂ ನೋಡಿದ್ದೇವೆ, ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡದೊಡ್ಡ ಗೌಡರು, ಸಾಹುಕಾರುಗಳು ಬಂದರು. ಅವರಿಗೆ, ಅವರ ಪರವಾಗಿ ಕೈ ಎತ್ತುತ್ತಲೇ ಇದ್ದೇವೆ ಎಂದಿದ್ದಾರೆ.
ನಮ್ಮ ಪಕ್ಷದಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ನಿರ್ಧರಿಸುತ್ತೆ. ಶಾಸಕರು ಅವರವರೇ ತೀರ್ಮಾನ ಮಾಡಿಕೊಳ್ಳಲಾಗಲ್ಲ ಎಂದು ಹಾಸನದಲ್ಲಿ ಮಾಗಡಿ ಕ್ಷೇತ್ರದ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿದ್ದಾರೆ. ಸಾಧಕ, ಬಾಧಕ ಚರ್ಚಿಸಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತೆ ಎಂದಿದ್ದಾರೆ.
ಕೇಂದ್ರ ನಾಯಕರಿಗೆ ಜ್ಞಾನೋದಯ ಆಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ ಎಂದು ತುಮಕೂರಿನಲ್ಲಿ ಸಹಕಾರ ಇಲಾಖೆ ಸಚಿವ ಕೆ.ಎನ್.ರಾಜಣ್ಣ ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರರನ್ನು ನೇಮಕ ಮಾಡಿದ್ದಕ್ಕೆ ಅಸಮಾಧಾನ ಹೊರಬರ್ತಿದೆ. ಯಾವುದೇ ನಾಲ್ಕು ಉಪ ಚುನಾವಣೆಗಳನ್ನು ಗೆಲ್ಲಿಸಿದ ಮಾತ್ರಕ್ಕೆ ಸಂಘಟನಾ ಚತುರ ಅಂತಾ ಸರ್ಟಿಫಿಕೇಟ್ ಕೊಡುವುದಕ್ಕೆ ಆಗಲ್ಲ ಎಂದಿದ್ದಾರೆ.
ಚಳಿಗಾಲ ಅಧಿವೇಶನದ ಒಳಗೆ ಯಾರೂ ಡಿಸಿಎಂ ಆಗುವುದಿಲ್ಲ ಎಂದು ಬೆಳಗಾವಿಯಲ್ಲಿ PWD ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಲು ಅವಕಾಶವಿದೆ. ಲೋಕಸಭೆ ಚುನಾವಣೆ ಬಳಿಕ ಡಿಸಿಎಂ ಮಾಡ್ತಾರಾ ಇಲ್ವೋ ಗೊತ್ತಿಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಬೇಕು ಎಂದಿದ್ದಾರೆ.
ವಿಜಯೇಂದ್ರರವರ ನೇಮಕ ನಾವಂತೂ ಮಾಡಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚನೆ ಮಾಡಿ, ಯಡಿಯೂರಪ್ಪ ಮಗನೇ ಆಗಬೇಕು ಅಂತಾ ಮಾಡಿದ್ದಾರೆ. ಅದರ ಪ್ರಕಾರ ವಿಜಯೇಂದ್ರ ಅಧ್ಯಕ್ಷ ಆಗಿದ್ದಾನೆ. ಅವರು ಆಗಿರೋದ್ರಿಂದ ನಮಗೇನೂ ಹೊಟ್ಟೆ ಉರಿ ಏನೂ ಇಲ್ಲ ಎಂದು ವಿಜಯಪುರದಲ್ಲಿ ಸಂಸದ ರಮೇಶ ಜಿಗಜಿಣಗಿ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಬೇಕು. ಅವರ ಕೈಗಳನ್ನು ಬಲಪಡಿಸಬೇಕು, ಮಾರ್ಗದರ್ಶನ ನೀಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಸಚಿವ ಎಸ್ಎಂ ಕೃಷ್ಣ ತಿಳಿಸಿದರು. ಹಿರಿಯರಾದ ನಾವು ಸಮನ್ವಯ ಸಾಧಿಸಿಕೊಂಡು ಹೋಗಬೇಕಾಗುತ್ತದೆ. ಇಂದಲ್ಲಾ ನಾಳೆ ಯುವಕರು ಹೊರ ಹೊಮ್ಮಿ ಸಾಧನೆ ಮಾಡಬೇಕು. ಈ ಯುವ ಮುಖಂಡನ ಹೆಗಲಿನ ಮೇಲೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ದೊಡ್ಡ ಜವಾಬ್ದಾರಿಗಳನ್ನು ಹೊರೆಸಿದ್ದಾರೆ. ಬಿ.ವೈ.ವಿಜಯೇಂದ್ರನ ಪ್ರತಿಭೆಯನ್ನ ಅವರಲ್ಲರೂ ಗುರುತಿಸಿದ್ದಾರೆ ಎಂದರು.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ. ಒಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕ. ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದ್ರೂ ನಾನು ಕೆಲಸ ಮಾಡ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ ವಿಚಾರ ಸಂಬಂಧ ಬಿ.ವೈ.ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಅಲ್ಲೇ ಗದ್ದಲ ಎದ್ದಿದೆ ಎಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ಎಷ್ಟೋ ಸೀನಿಯರ್ ಬಿಟ್ಟು ಜೂನಿಯರ್ ಮಾಡಿದ್ದಾರೆಂಬ ಭಾವನೆ. ಒಬ್ಬೊಬ್ಬರೇ ಹಿರಿಯ ನಾಯಕರು ಅಸಮಾಧಾನ ಹೊರ ಹಾಕ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಈ ಗಿಮಿಕ್ ಎಲ್ಲವೂ ನಡೆಯುವುದಿಲ್ಲ ಎಂದರು.
ನರಕ ಚತುರ್ದಶಿ ಹಿನ್ನೆಲೆ ರಾಯಚೂರಿನ ಮಂತ್ರಾಲಯ ಮಠದಲ್ಲಿ ವಿಶೇಷ ಪೂಜೆ ನೆರವೇರಿದೆ. ಮಠದಲ್ಲಿ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಪೂಜಾ ಕೈಂಕರ್ಯ, ಕಾರ್ತಿಕ ಮಹಾಮಂಗಳಾರತಿ ಮೂಲಕ ವಿಶೇಷ ಆಚರಣೆಗಳಿಗೆ ಚಾಲನೆ ನೀಡಿದರು. ರಾಯರ ಮೂಲ ಬೃಂದಾವನಕ್ಕೆ ಪೂಜೆ, ಬಳಿಕ ಗೋ ಪೂಜೆ ನೆರವೇರಿತು. ಬಳಿಕ ನಾರಿಕೃತ ನೀರಾಜನ, ತೈಲಾಭ್ಯಂಜನ ಕಾರ್ಯಕ್ರಮ ನೆರವೇರಿತು. ಇದೇ ವೇಳೆ ಮಠದಲ್ಲಿ ಸೇರಿದ ನೂರಾರು ಭಕ್ತರಿಗೆ ಶ್ರೀಗಳಿಂದ ಪ್ರವಚನ.
ನಾಡಿನೆಲ್ಲೆಡೆ ಲಕ್ಷ್ಮಿಪೂಜೆ ಹಾಗು ದೀಪಾವಳಿ ಸಂಭ್ರಮ ಮನೆ ಮಾಡಿದೆ. ಮುಸ್ಲಿಂ ವ್ಯಕ್ತಿಯೋರ್ವ ತನ್ನ ಮೊಬೈಲ್ ಅಂಗಡಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ. ಈ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಿದ್ದಾರೆ. ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಮೊಬೈಲ್ ಅಂಗಡಿಯಲ್ಲಿ ತನ್ವೀರ್ ಎಂಬ ಮುಸ್ಲಿಂ ಯುವಕ ಲಕ್ಷ್ಮಿ ಪೂಜೆ ಮಾಡಿದ್ದಾರೆ.
ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ವಿಜಯೇಂದ್ರ ಮಾತುಕತೆ ನಡೆಸಿದ್ದಾರೆ. ಕಳೆದ 20 ನಿಮಿಷದಿಂದ ಹೆಚ್ಡಿಡಿ ಜತೆ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ವಿಜಯೇಂದ್ರ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದಾರೆ.
ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಹತ್ತು ಗಂಟೆ ನಂತರ ದೇವಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ವಿಶೇಷ ದರ್ಶನದ ಸಾಲು ಹೊರತುಪಡಿಸಿ ಉಳಿದ ಸಾಲುಗಳು ಭರ್ತಿ ಆಗಿವೆ. ಸರತಿ ಸಾಲಿನಲ್ಲಿ ನಿಂತ ಭಕ್ತರಿಗೆ ಸ್ಥಳೀಯ ಶಾಸಕ ಸ್ವರೂಪ್ ಪ್ರಕಾಶ್ ಅವರು ಡ್ರೈಫ್ರೂಟ್ಸ್ ವಿತರಣೆ ಮಾಡುತ್ತಿದ್ದಾರೆ. ಒಣ ದ್ರಾಕ್ಷಿ, ಬಾದಾಮಿ, ಗೊಡಂಬಿ, ಒಣ ಕರ್ಜೂರ, ಚಾಕ್‌ಲೇಟ್ ವಿತರಿಸುತ್ತಿದ್ದಾರೆ.
ದೀಪಾವಳಿ ಹಬ್ಬ ಹಿನ್ನೆಲೆ ಪಟಾಕಿ ಅವಘಡ ಕೇಸ್ ಹೆಚ್ಚಳ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಪರಮೇಶ್ವರ್ ಮಾತನಾಡಿದ್ದು, ಗ್ರೀನ್ ಪಟಾಕಿ ಉಪಯೋಗಿಸಬೇಕು ಎಂದು ಸೂಚನೆ ನೀಡಿದ್ದೇವೆ. ಜನರೂ ಕೂಡ ನಮಗೆ ಸಹಕಾರ ನೀಡಬೇಕು. ಕೆಲವೆಡೆ ಪಟಾಕಿಯಿಂದ ಕಣ್ಣಿಗೆ ಗಾಯವಾಗಿರುವ ವರದಿ ಆಗಿದೆ. ಎಸಿಪಿಗಳ ಒಂದು ಟೀಂನಿಂದ ಎಲ್ಲಾ ಏರಿಯಾಗಳಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದರು.
ಬೊಮ್ಮಾಯಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೇಳಿದ್ದೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ಭೇಟಿ ಬಳಿಕ ವಿಜಯೇಂದ್ರ ಹೇಳಿದರು. ವರಿಷ್ಠರು ಒಳ್ಳೇ ನಿರ್ಧಾರ ಮಾಡಿದ್ದಾರೆ ಎಂದು ಸಂತೋಷಪಟ್ಟರು. ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿದ್ದಕ್ಕೆ ದೊಡ್ಡ ಶಕ್ತಿ ಬಂದಿದೆ ಎಂದ್ರು. ನಾನಷ್ಟೇ ಅಲ್ಲ, ಎಲ್ಲಾ ಹಿರಿಯರು ನಿನ್ನ ಜತೆ ಇರುತ್ತೇವೆ ಎಂದಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಒಗ್ಗಟ್ಟಾಗಿ ಎದುರಿಸಬೇಕಿದೆ. ಪ್ರವಾಸ ಮಾಡಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡೋಣ ಎಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಯಾವುದೇ ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದು ಹಾಸನಾಂಬೆ ದರ್ಶನದ ಬಳಿಕ ಶಾಸಕ ಸುರೇಶ್‌ಬಾಬು ತಿಳಿಸಿದ್ದಾರೆ. ಜೆಡಿಎಸ್ನ ಎಲ್ಲಾ 19 ಶಾಸಕರು ಒಂದಾಗಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಮಾತ್ರ ಶರಣಗೌಡ ವಿರೋಧ. ಅದು ಬಿಟ್ಟರೆ ಪಕ್ಷದ ಬಗ್ಗೆ ಶರಣಗೌಡ ಕಂದಕೂರುಗೆ ಭಿನ್ನಾಭಿಪ್ರಾಯವಿಲ್ಲ. ಆ ತರಹ ಬೆಳವಣಿಗೆಗಳು ಆಗಲಾರದು ಎಂಬುದು ನನ್ನ ಭಾವನೆ ಎಂದರು.
ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಅಪಘಾತ ಸಂಭವಿಸಿ ಬೈಕ್ನಲ್ಲಿದ್ದ ಸಿದ್ದಪ್ಪ(65), ಅರುಣ(23) ಮೃತಪಟ್ಟಿದ್ದಾರೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಇಎ ನೇಮಕಾತಿ ಪರೀಕ್ಷೆ ಅಕ್ರಮದ ಕೇಸ್ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಸಿಐಡಿ DySP ಶಂಕರಗೌಡ ಪಾಟೀಲ್, DySP ತನ್ವೀರ್ಗೆ ಹಸ್ತಾಂತರಿಸಿ ಪಿಐ ಅರುಣ ತನಿಖೆಯ ಮಾಹಿತಿ ವಿವರಿಸಿದ್ದಾರೆ. ಸಿಐಡಿ SP ರಾಘವೇಂದ್ರ ಹೆಗಡೆ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ. ಎಸ್ಪಿ ಆಗಮಿಸಿದ ನಂತರ ತನಿಖೆಯ ಹೊಣೆಗಾರಿಕೆ ಹಂಚಿಕೆ ಸಾಧ್ಯತೆ.
ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು ನಾಲ್ವರು ಮಕ್ಕಳು ಸೇರಿದಂತೆ 26 ಜನರಿಗೆ ಗಾಯವಾಗಿದೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ನೇತ್ರಾಲಯದ 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಹೊತ್ತಿಉರಿದ 4 ಅಂತಸ್ತಿನ ಕಟ್ಟಡ.
Published On - 8:00 am, Mon, 13 November 23