Karnataka Breaking Kannada News Highlights: ಹೆಚ್ಚುವರಿ ಅಕ್ಕಿ ಸಿಗುವವರೆಗೆ ಹಣ ಕೊಡುತ್ತೇವೆ: ಮುನಿಯಪ್ಪ
Breaking News Today Live Updates: ಲೋಕಸಭೆ ಚುನಾವಣೆಯಲ್ಲಿ ಹೇಗಾದರೂ ಅತೀ ಹೆಚ್ಚು ಕ್ಷೇತ್ರದಲ್ಲಿ ಗೆಲ್ಲುವ ಉದ್ದೇಶದಿಂದ ಉಭಯ ಪಕ್ಷಗಳು ತಯಾರಿ ನಡೆಸಿವೆ. ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ನೀಡಿದೆ. ಇದರ ಜೊತೆಗೆ ಮೈಸೂರು ಅರಮನೆಯಲ್ಲಿ ದಸರಾ ಹಬ್ಬ ಜೋರಾಗಿಯೇ ನಡೆಯುತ್ತಿದೆ. ಇನ್ನೊಂದೆಡೆ, ರಾಜ್ಯ ಹಲವೆಡೆ ಮಳೆಯಾಗುತ್ತಿದೆ. ಇಂತಹ ಮತ್ತಷ್ಟು ಕ್ಷಣಕ್ಷಣದ ಅಪ್ಡೇಟ್ಸ್ಗಾಗಿ ಟಿವಿ9 ಡಿಜಿಟಲ್ ಲೈವ್ ಫಾಲೋ ಮಾಡಿ.
Breaking News Live Updates: ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ಸಚಿವ ಸಂಪುಟ ಸಭೆ ನಡೆದಿದೆ. ಇದರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದೆ. ಇನ್ನು ವಿಶ್ವವಿಖ್ಯಾತ ಮೈಸೂರು ದಸರಾ((Mysuru Dasara) 2023 ರ ಭಾಗವಾಗಿ ಯುವ ದಸರಾ ನಡೆಯುತ್ತಿದ್ದು, ಇಂದು ಮೂರನೇ ದಿನವಾಗಿದೆ. ಈ ಹಿನ್ನಲೆ ಆಲ್ ಓಕೆ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಹಾಗೂ ಸಲೀಂ ಸುಲೈಮಾನ್ ತಂಡದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶ್ವಕಪ್ನ 18 ನೇ ಪಂದ್ಯವಾಗಿ ಆಸೀಸ್-ಪಾಕ್ ನಡುವೆ ಕಾದಾಟ ನಡೆಯಲಿರುವ ಸಂಬಂಧ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್.ಶೇಖರ್ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಇತ್ತ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯೂ ಮುಂದುವರೆದಿದೆ. ಇನ್ನೊಂದೆಡೆ, ರಾಜ್ಯ ಹಲವೆಡೆ ಮಳೆಯಾಗುತ್ತಿದೆ (Karnataka Rain). ಇನ್ನಿತರ ಕ್ಷಣಕ್ಷಣದ ಸುದ್ದಿಗಳನ್ನು ಟಿವಿ9 ಡಿಜಿಟಲ್ ಲೈವ್ನಲ್ಲಿ ಪಡೆಯಿರಿ.
LIVE NEWS & UPDATES
-
Karnataka Breaking News Live: ಆಸ್ಟ್ರೇಲಿಯಾ, ಪಾಕಿಸ್ತಾನ ಪಂದ್ಯ ವೀಕ್ಷಿಸುತ್ತಿರುವ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿ ಆಸ್ಟ್ರೇಲಿಯಾ, ಪಾಕಿಸ್ತಾನ ಪಂದ್ಯ ವೀಕ್ಷಿಸುತ್ತಿದ್ದಾರೆ. ಸಿದ್ದರಾಮಯ್ಯ ಜೊತೆ ಸಚಿವರಾದ ಭೈರತಿ ಸುರೇಶ್, ಎಂ.ಸಿ.ಸುಧಾಕರ್ ಇದ್ದಾರೆ.
-
Karnataka Breaking News Live: ಸಿಬಿಐ ತನಿಖೆನಾದ್ರು ಮಾಡಲಿ ಖುದ್ದು ಗೃಹಮಂತ್ರಿ ಅಮಿತಾ ಶಾ ತನಿಖೆ ಮಾಡಲಿ: ಶಿವಗಂಗಾ ಬಸವರಾಜ್
ದಾವಣಗೆರೆ: ಡಿಕೆ ಶಿವಕುಮಾರ್ ಪ್ರಕರಣ ಸಂಬಂಧ ಸಿಬಿಐ ತನಿಖೆನಾದರೂ ಮಾಡಲಿ ಅಥವಾ ಖುದ್ದು ಗೃಹಮಂತ್ರಿ ಅಮಿತಾ ಶಾ ತನಿಖೆ ಮಾಡಲಿ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ಸುಪ್ರೀಂ ಕೋರ್ಟ್ ಆರ್ಡರ್ ಸ್ವಾಗತ ಮಾಡುತ್ತೇವೆ. ನಾವು ಹೆದರುವಂತಹ ಅವಶ್ಯಕತೆ ಇಲ್ಲ. ಲೋಕಸಭಾ ಚುನಾವಣೆ ಬಂತು, ಸಾಲು ಸಾಲು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಇದನ್ನು ನೋಡಿ ಸಹಿಸಲಾರದೇ ಬಿಜೆಪಿ ಮಾಡುತ್ತಿರುವ ಕುತಂತ್ರ ಇದು. ಇನ್ನು ಮುಂದೆ ಕಾಂಗ್ರೆಸ್ನವರ ಮನೆ ಮೇಲೆ ಐಟಿ ದಾಳಿ ನಡೆಯುತ್ತದೆ ಎಂದರು. ಕೆಲವೊಂದು ಶಾಸಕರು ಡಿಕೆ ಶಿವಕುಮಾರ್ ಬೆಳಗಾವಿಗೆ ಬಂದಾಗ ಹೋಗಿಲ್ಲ, ಅದಕ್ಕೆ ಬೇರೆಯದ್ದೇ ಕಾರಣ ಇದೆ. ನಾವು 60 ಜನ ಯುವ ಶಾಸಕರು ಡಿಕೆಶಿಯವರ ಬೆಂಬಲಕ್ಕೆ ಇದ್ದೇವೆ. ನಾವೆಲ್ಲಾ ಎಲ್ಲಾ ರೀತಿಯ ಬೆಂಬಲಕ್ಕೆ ಸಿದ್ದರಿದ್ದೇವೆ. ನೂತನ ಶಾಸಕರೆ ಡಿಕೆಶಿ ಬೆಂಬಲಕ್ಕೆ ಇದ್ದೇವೆ. ಹಿರಿಯ ಶಾಸಕರು ಮತ್ತು ನಮ್ಮ ನಡುವೆ ಅಂತರವಿದೆ. ಅದನ್ನೇಲ್ಲಾ ಕೇಳಲು ಆಗಲ್ಲ ಎಂದು ಶಿವಗಂಗಾ ಬಸವರಾಜ್ ಹೇಳಿದರು.
-
Karnataka Breaking News Live: ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಕ್ರಮ
ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಕರಣಗಳ ಕಡತ ಸಂಪುಟ ಉಪ ಸಮಿತಿಯ ಮುಂದೆ ಕಡತ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಳಿಕ ಸಂಪುಟಕ್ಕೆ ತರುವಂತೆ ಗೃಹ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿ ನಾಡಿನ ರಕ್ಷಣೆಗೆ ನಡೆದ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುವಂತೆ ಎಂಎಲ್ಸಿ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದರು.
Karnataka Breaking News Live: ಆಡಿಯೋ ಏನೇ ಇರಲಿ ತನಿಖೆ ನಡೆಯಲಿದೆ: ಪ್ರಿಯಾಂಕ್ ಖರ್ಗೆ
ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜಿನಾಮೆ ಯಾಕೆ ಕೊಡಬೇಕು? ಆಡಿಯೋ ಏನೇ ಇರಲಿ ತನಿಖೆ ನಡೆಯಲಿದೆ. ಆತ ನನಗೆ ಪರಿಚಯವಿಲ್ಲವೆಂದು ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಸಾಲ ಆಗಿತ್ತು ಅಂತಾ ಕುಟುಂಬದವರೇ ವಿಡಿಯೋ ಹೇಳಿಕೆ ನೀಡಿದ್ದಾರೆ. ಶಿವಕುಮಾರ್ ಮೊಬೈಲ್ ಸಿಗಲಿ, ಮೊಬೈಲ್ ಇಲ್ಲ ಅಂತಾ ಹೇಳುತ್ತಿದ್ದಾರೆ. ಪಾರದರ್ಶಕವಾಗಿ ತನಿಖೆ ಮಾಡುವಂತೆ ಕಲಬುರಗಿ ಎಸ್ಪಿಗೆ ಹೇಳಿದ್ದೇನೆ. ಬಿಜೆಪಿಯವರು ಹೋರಾಟ ಮಾಡುವುದಕ್ಕೆ ನಮ್ಮ ವಿರೋಧ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಆಗುತ್ತೆ ಅಂತಾ ಗೊತ್ತಾಗಿರಬೇಕು. ಹಾಗಾಗಿ ಐಟಿ, ಇ ಡಿಯನ್ನ ನಮ್ಮ ನಾಯಕರ ವಿರುದ್ದ ಉಪಯೋಗ ಮಾಡುತ್ತಿದ್ದಾರೆ ಎಂದರು.
Karnataka Breaking News Live: ಎಲ್ಲಿವರೆಗೂ ಹೆಚ್ಚುವರಿ ಅಕ್ಕಿ ಸಿಗಲ್ಲವೋ ಅಲ್ಲಿವರೆಗೆ ಹಣ ಕೊಡ್ತೇವೆ: ಮುನಿಯಪ್ಪ
ಅಕ್ಕಿ ಬದಲು ಹಣ ಕೊಡಲು ಸಂಪುಟದಲ್ಲಿ ತೀರ್ಮಾನ ವಿಚಾರವಾಗಿ ಮಾತನಾಡಿದ ಸಚಿವ ಕೆಹೆಚ್ ಮುನಿಯಪ್ಪ, ಎಲ್ಲಿವರೆಗೂ ಹೆಚ್ಚುವರಿ ಅಕ್ಕಿ ಸಿಗಲ್ಲವೋ ಅಲ್ಲಿವರೆಗೆ ಹಣ ಕೊಡುತ್ತೇವೆ ಎಂದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯದಲ್ಲಿ ಅಕ್ಕಿ ಬೆಲೆ ಹೆಚ್ಚಿದೆ. FCI ಕೊಡುವ ದರಕ್ಕೆ ಕೇಳುತ್ತಿದ್ದೇವೆ, ಆ ದರಕ್ಕೆ ಅವರು ಕೊಡುತ್ತಿಲ್ಲ. ನಮ್ಮ ದರಕ್ಕೆ ಅಕ್ಕಿ ಸಿಗುತ್ತಿಲ್ಲ, ಅಕ್ಕಿ ಸಿಕ್ಕಿದ ತಕ್ಷಣ ವಿತರಿಸುತ್ತೇವೆ ಎಂದರು.
Karnataka Breaking News Live: ಯಾವ ತನಿಖೆ ಮಾಡಿದರೂ ನ್ಯಾವ್ಯಾರು ಹೆದರಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ: ನಗರದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗುತ್ತಾರೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿದ್ದಾರೆ. ನೋಡಿ ಯಾವ ಯಾವ ತರ ಬೇಕೋ ಆ ರೀತಿ ತನಿಖೆ ಮಾಡಲಿ. ಹಣದ ವಿಚಾರ ಬಗ್ಗೆ ಮಾಹಿತಿ ಬೇಕು ಅಂತ CBI ಕೇಳಿದೆ. ಸಿಬಿಐ ತನಿಖೆಗೆ ಸಹಕರಿಸುವೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸಿಬಿಐ, ಐಟಿ, ಇಡಿ ಯಾವ ತನಿಖೆ ಮಾಡಿದರೂ ನ್ಯಾವ್ಯಾರು ಹೆದರಲ್ಲ ಎಂದರು.
Karnataka Breaking News Live: KPCL ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ
ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ KPCL ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಉಪಸ್ಥಿತರಿದ್ದಾರೆ.
Karnataka Breaking News Live: ಎಲ್ಲಾ ಎಟಿಎಂ ಅವರದ್ದೇ: ಬಿಜೆಪಿಗೆ ಟಾಂಗ್ ಕೊಟ್ಟ ಡಿಕೆ ಶಿವಕುಮಾರ್
ಬಿಜೆಪಿಯಿಂದ ಎಟಿಎಂ ಸರ್ಕಾರ ಎಂದು ಪೋಸ್ಟರ್ ರಿಲೀಸ್ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಲ್ಲಾ ಎಟಿಎಂ ಅವರದ್ದೇ ಎಂದಿದ್ದಾರೆ. ಜನ ತೀರ್ಪು ಕೊಟ್ಟಿದ್ದಾರೆ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ರಾಜ್ಯದ ಜನತೆ ಬಿಜೆಪಿ ತಿರಸ್ಕರಿಸಿದ್ದಾರೆ. ಬಿಜೆಪಿ ಮುಖಂಡರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಹಾಗಾಗಿ ಬಿಜೆಪಿಯವರು ಇಂತಹ ಆರೋಪ ಮಾಡುತ್ತಿದ್ದಾರೆ ಎಂದರು.
Karnataka Breaking News Live: ಬಿಜೆಪಿ ಸೋಲಲು ಭ್ರಷ್ಟಾಚಾರವೇ ಕಾರಣ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಬಿಜೆಪಿ ಒತ್ತಾಯ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯತ, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಲು ಕಾರಣವೇನು? ಬಿಜೆಪಿ ಸೋಲಲು ಭ್ರಷ್ಟಾಚಾರವೇ ಕಾರಣ. ಕಾಂಗ್ರೆಸ್ ಮೇಲೆ ಆರೋಪ ಮಾಡಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
Karnataka Breaking News Live: ಮಹಿಷ ದಸರಾ ಆಚರಣೆ ವಿವಾದ: DSS ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ
ಚಿಕ್ಕಮಗಳೂರು: ಮಹಿಷ ದಸರಾ ಆಚರಣೆಗೆ ಮುಂದಾದ ಕಾರ್ಯಕರ್ತರ ಬಂಧನ ಖಂಡಿಸಿ DSS ಸಂಘಟನೆಯ ಕಾರ್ಯಕರ್ತರು ಹನುಮಂತಪ್ಪ ಸರ್ಕಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಮಹಿಷ ದಸರಾಕ್ಕೆ ಅನುಮತಿ ನೀಡದ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
Karnataka Breaking News Live: ಪೂರ್ಣಿಮಾಗೆ ಟಿಕೆಟ್ ತಪ್ಪಲು ನಾನೂ ಸ್ವಲ್ಪ ಕಾರಣ: ಸಿದ್ದರಾಮಯ್ಯ
ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್ ತಪ್ಪಲು ನಾನೂ ಸ್ವಲ್ಪ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಕೆಟ್ ತಪ್ಪಿಸಿದ್ದು ನಾನೇ ಅಂತಾ ಗೊತ್ತಿದ್ದರೂ ಸಿಟ್ಟು ಮಾಡಿಕೊಂಡಿಲ್ಲ, ಭೈರತಿ ಬಸವರಾಜಗೆ ಟಿಕೆಟ್ ಕೊಡಿಸಲು ಹೋಗಿ ಇವರಿಗೆ ತಪ್ಪಿತು. ಬಿಜೆಪಿ ಶಾಸಕರಾದರೂ ಕಾಂಗ್ರೆಸ್ ರಕ್ತ ಪೂರ್ಣಿಮಾರಲ್ಲಿ ಹರಿಯುತ್ತಿತ್ತು. ಶ್ರೀನಿವಾಸ್ ಕೂಡ ಒಲ್ಲದ ಮನಸ್ಸಿನಿಂದಲೇ ಬಿಜೆಪಿಯಲ್ಲಿ ಇದ್ದರು. ಕೃಷ್ಣಪ್ಪ, ಶ್ರೀನಿವಾಸ್ ಇಬ್ಬರೂ ಸಾಮಾಜಿಕ ನ್ಯಾಯದ ಪರ ಇರುವವರು. ಕಾಂಗ್ರೆಸ್ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಸಮಾಜವನ್ನು ಜಾತಿ ಧರ್ಮದ ಆಧಾರದ ಮೇಲೆ ಒಡೆಯುವ ಪಕ್ಷವಲ್ಲ ಎಂದರು.
Karnataka Breaking News Live: ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಪಕ್ಷ ಸೇರ್ಪಡೆ
ಬೆಂಗಳೂರು: ಮಾಜಿ ಶಾಸಕಿ ಪೂರ್ಣಿಮಾ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿಯೇ ಪಕ್ಷ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಸಿಎಂ ಮೊಯ್ಲಿ, ಶಾಸಕ ಜಯಚಂದ್ರ ಭಾಗಿಯಾಗಿದ್ದಾರೆ.
Karnataka Breaking News Live:ಕಿತ್ತೂರು ಉತ್ಸವ ಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ
ಬೆಳಗಾವಿ: 2023ರ ಕಿತ್ತೂರು ಉತ್ಸವ ಜ್ಯೋತಿಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ ಮಾಡಲಾಗಿದ್ದು, ಈ ವೇಳೆ ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಉತ್ಸವ ಜ್ಯೋತಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು. ಡೊಳ್ಳು ಕುಣಿತ, ಕರಡಿ ಕುಣಿತ ಕಲಾವಿದರಿಂದ ಜ್ಯೋತಿಗೆ ಸ್ವಾಗತ ಕೋರಲಾಯಿತು. ಈ ವೇಳೆ ಕಿತ್ತೂರು ಉತ್ಸವ ಜ್ಯೋತಿಗೆ ಪೂಜೆ ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್, ಮೇಯರ್, ಉಪ ಮೇಯರ್, ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಭಾಗಿಯಾಗಿದ್ದಾರೆ.
Karnataka Breaking News Live: ತುಮಕೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಪರಮೇಶ್ವರ್ ರಿಯಾಕ್ಷನ್
ಬೆಂಗಳೂರು: ತುಮಕೂರಿನಲ್ಲಿ ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ವಿಚಾರ ‘ಈಗಾಗಲೇ ಅವನನ್ನ ಅರೆಸ್ಟ್ ಮಾಡಿ , ಪೋಕ್ಸೋ ಕೇಸ್ ಹಾಕಲಾಗಿದೆ. ಇನ್ನು ತುಮಕೂರಿನಲ್ಲಿ ಆಟೋಗಳು ಹೆಚ್ಚಾಗಿರುವ ಹಿನ್ನೆಲೆ ಆರ್ಟಿಒ ಆಫೀಸ್ ನಲ್ಲಿ ಆಟೋಗಳ ದಾಖಲೆ ಸಿಗುತ್ತೆ. ಅದನ್ನ ಪೊಲೀಸರು ತಗೊಂಡು ಬೇಕಾದ ಮಾಹಿತಿ ತೆಗೆದುಕೊಳ್ತಾರೆ. ಕೆಲವೊಂದು ಆಟೋಗಳು ತಾಲೂಕುಗಳಲ್ಲಿ ರಿಜಿಸ್ಟೇಶನ್ ಮಾಡಿಸಿರ್ತಾರೆ. ತುಮಕೂರಿಗೆ ಪ್ಯಾಸೆಂಜರ್ ಬಾಡಿಗೆ ಬಂದಾಗ ಆ ದಿನ ತುಮಕೂರಿನಲ್ಲಿಯೇ ಬಾಡಿಗೆ ಹೊಡೆತಾರೆ. ಈಗಾಗಲೇ ಡಿಸಿ ಅವರು ಗಮನಹರಿಸಿದ್ದಾರೆ. ಅದನ್ನ ಇನ್ನು ಹೆಚ್ಚಿನ ಪರಿಣಾಮಕಾರಿಯಾಗಿ ಮಾಡಬೇಕು ಎಂದು ತುಮಕೂರಿನಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
Karnataka Breaking News Live:ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿ; ಧನ್ಯವಾದ ತಿಳಿಸಿದ ಸಿಎಂ
ಬೆಂಗಳೂರು: ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಈ ಕುರಿತು ರಾಜ್ಯ ಹಾಗೂ ಬೆಂಗಳೂರು ಜನತೆ ಪರವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಅವರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ಮಾತನಾಡಿದ ಅವರು ‘ನೂತನ ಮೆಟ್ರೋ ಮಾರ್ಗದಿಂದ ಜನರಿಗೆ ಮತ್ತಷ್ಟು ಅನುಕೂಲವಾಗಲಿದೆ. ಮೆಟ್ರೋ ಮಾರ್ಗಕ್ಕೆ ರಾಜ್ಯ ಸರ್ಕಾರ 5,630 ಕೋಟಿ ರೂ. ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಮೆಟ್ರೋ ಯೋಜನೆ ಕೈಗೊಂಡಿದೆ. ಎರಡು ಹಂತದಲ್ಲಿ ಸುಮಾರು 74 ಕಿ.ಮೀ. ಮೆಟ್ರೋ ಮಾರ್ಗ ವಿಸ್ತರಣೆ ಮಾಡಲಾಗಿದೆ ಎಂದರು.
Karnataka Breaking News Live:ನಿರ್ಗತಿಕ ಮಹಿಳೆಯರಿಗೆ ಮಲಬಾರ್ ಗ್ರೂಪ್ನಿಂದ ಅಜ್ಜಿ ಮನೆ ನಿರ್ಮಾಣ; ಉದ್ಘಾಟನೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ನಗರದ ಹೊಸಕೇರೆಹಳ್ಳಿಯಲ್ಲಿ ನಿರ್ಗತಿಕ ಮಹಿಳೆಯರಿಗೆ ಮಲಬಾರ್ ಗ್ರೂಪ್ನಿಂದ ಅಜ್ಜಿ ಮನೆ ನಿರ್ಮಾಣ ಮಾಡಲಾಗಿದ್ದು, ಅದನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉದ್ಘಾಟನೆ ಮಾಡಿದರು. ಇಲ್ಲಿ ಉಚಿತವಾಗಿ ಆಹಾರ ಮತ್ತು ವೈದ್ಯಕೀಯ ನೆರವನ್ನು ನೀಡಲಾಗುತ್ತದೆ.
Karnataka Breaking News Live: ಡಿಕೆಶಿ ವಿರುದ್ಧ ಸಿಬಿಐ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗ್ತಿಲ್ಲ; ಹಾದಿ ಬೀದಿಯಲ್ಲಿ ಹೋಗುವವರಿಗೆ ಉತ್ತರ ನೀಡಲು ತಯಾರಿಲ್ಲ
ಬೆಂಗಳೂರು: ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗ್ತಿಲ್ಲ ಎಂಬ ಬಿಜೆಪಿ ನಾಯಕರ ಆರೋಪ ವಿಚಾರ ‘ ಹಾದಿ ಬೀದಿಯಲ್ಲಿ ಹೋಗುವವರಿಗೆ ಉತ್ತರ ನೀಡಲು ತಯಾರಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೋರ್ಟ್ ಏನು ಹೇಳುತ್ತದೆ, ಕೋರ್ಟ್ ಪ್ರಕಾರ ಗೌರವ ಕೊಡಬೇಕು ಅಷ್ಟೇ, ಹಾಗೆ ಹೀಗೆ ಹೇಳ್ತಾರೆ ಎಂದು ಉತ್ತರ ನೀಡಲಾಗದು ಎಂದ ಡಿಕೆ ಶಿವಕುಮಾರ್ ಹೇಳಿದರು.
Karnataka Breaking News Live:ಸರ್ಕಾರ ಒಳ್ಳೆ ಆಡಳಿತವನ್ನ ಕೊಟ್ಟಿದೆ ಸಂಪುಟ ಬದಲಾಗೋದ್ರಲ್ಲಿ ತಪ್ಪೇನಿಲ್ಲ; ಶಾಸಕ ಹ್ಯಾರೀಸ್
ಬೆಂಗಳೂರು: ಎರಡುವರೆ ವರ್ಷದ ನಂತರ ಸಂಚಿವ ಸಂಪುಟ ಬದಲಾಗೋದರ ಕುರಿತು ‘ಸರ್ಕಾರ ಒಳ್ಳೆ ಆಡಳಿತವನ್ನ ಕೊಟ್ಟಿದೆ. ಸಂಪುಟ ಬದಲಾಗೋದ್ರಲ್ಲಿ ತಪ್ಪೇನಿಲ್ಲ ಎಂದು ಶಾಂತಿನಗರದ ಶಾಸಕ ಹ್ಯಾರೀಸ್ ಹೇಳಿದ್ದಾರೆ. ‘ನಾವು ಕೆಲಸ ಮಾಡಿದ್ದೇವೆ. ಸಚಿವ ಸ್ಥಾನ ಕೊಡಬೇಕು, ಕೊಡ್ತಿವಿ ಅಂತ ಹೇಳಿದ್ದಾರೆ ನೋಡೋಣ ಎಂದರು.
Karnataka Breaking News Live:ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಪೋಸ್ಟರ್ ಬಿಡುಗಡೆ ಮಾಡಿದೆ. ಹೌದು, ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂಬ ಪೋಸ್ಟರ್ನ್ನು ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ, ಶಾಸಕ ರವಿಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರು ಬಿಡುಗಡೆ ಮಾಡಿದರು.
Live : ಪತ್ರಿಕಾಗೋಷ್ಠಿ
ಸ್ಥಳ : ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ https://t.co/xahIBWXovX
— BJP Karnataka (@BJP4Karnataka) October 20, 2023
Karnataka Breaking News Live: ಹೊಸ ಬಾಂಬ್ ಸಿಡಿಸಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ
ಬೆಂಗಳೂರು: ಎರಡುವರೆ ವರ್ಷ ಆದ ಮೇಲೆ ಸಚಿವ ಸಂಪುಟ ಬದಲಾವಣೆ ಮಾಡೋದಾಗಿ ಸುರ್ಜೇವಾಲ ಹೇಳಿದ್ದಾರೆ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ ಹೊಸ ಬಾಂಬ್ ಸಿಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಸಚಿವ ಸಂಪುಟ ಬದಲಾವಣೆ ಮಾಡೋ ಪ್ರೋಸಲ್ ಇದೆ ಎಂದು ಹೇಳಿದ್ದಾರೆ. ಎಲ್ಲರಿಗೂ ಒಟ್ಟಿಗೆ ಮಾಡೋಕೆ ಆಗೊಲ್ಲ. ಹೀಗಾಗಿ ಎರಡೂವರೆ ವರ್ಷದ ಬಳಿಕ ಮಾಡೋದಾಗಿ ಹೇಳಿದ್ದಾರೆ.
Karnataka Breaking News Live: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್; ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿದ K.S.ಈಶ್ವರಪ್ಪ
ರಾಯಚೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ K.S.ಈಶ್ವರಪ್ಪ ಆಗ್ರಹಿಸಿದ್ದಾರೆ. ನನ್ನ ಹೆಸರು ಬರೆದಿಟ್ಟು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ಕಾಂಗ್ರೆಸ್ ನಾಯಕರು ನನ್ನ ರಾಜೀನಾಮೆಗೆ ಪಟ್ಟು ಹಿಡಿಯಲಿಲ್ಲ. ನಾನೇ ಪ್ರಧಾನಿ ಮೋದಿ, ಅಮಿತ್ ಶಾಗೆ ಹೇಳಿ ರಾಜೀನಾಮೆ ಕೊಟ್ಟೆ. ತನಿಖೆ ಬಳಿಕ ನಿರ್ದೋಷಿ ಎಂದು ತೀರ್ಮಾನ ಆಯ್ತು. ‘ನಾನು ಸಚಿವ ಶರಣಪ್ರಕಾಶ್ ಪಾಟೀಲ್ ದೋಷಿ ಅಂತಾ ಹೇಳಲ್ಲ, ಅವರ ಹೆಸರು ಬರೆದಿಟ್ಟು ಸತ್ತಿರುವುದರಿಂದ ರಾಜೀನಾಮೆ ಕೊಡಲಿ. ನಿರ್ದೋಷಿಯಾದ ಬಳಿಕ ನಂತರ ಮಂತ್ರಿ ಆಗಲಿ ಎಂದರು.
Karnataka Breaking News Live: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಟ್ವೀಟ್ ಮೂಲಕ ವ್ಯಂಗ ಮಾಡಿದ ಬಿಜೆಪಿ
ಬೆಂಗಳೂರು: ರಾಜ್ಯಕ್ಕೆ ಆಗಮಿಸಿದ್ದ ಹೈಕಮಾಂಡ್‌ನ ಕಲೆಕ್ಷನ್ ಏಜೆಂಟರುಗಳಾದ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ನಿಗಮ ಮಂಡಳಿಗಳ ನೇಮಕಕ್ಕೆ ರೇಟ್ ಕಾರ್ಡ್ ಫಿಕ್ಸ್ ಮಾಡಿ ಹೋಗಿದ್ದಾರೆ ಎಂದು ಕಾಂಗ್ರೆಸ್ನ್ನು ಟ್ಯಾಗ್ ಮಾಡುವ ಮೂಲಕ ವ್ಯಂಗ್ಯ ಮಾಡಿದ್ದಾರೆ.
ರಾಜ್ಯಕ್ಕೆ ಆಗಮಿಸಿದ್ದ ಹೈಕಮಾಂಡ್‌ನ ಕಲೆಕ್ಷನ್ ಏಜೆಂಟರುಗಳಾದ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ನಿಗಮ ಮಂಡಳಿಗಳ ನೇಮಕಕ್ಕೆ ರೇಟ್ ಕಾರ್ಡ್ ಫಿಕ್ಸ್ ಮಾಡಿ ಹೋಗಿದ್ದಾರೆ.@INCKarnataka ಸ್ನೇಹಿತರು ಕೊಟ್ಟಿರುವ ನಿಗಮ ಮಂಡಳಿಗಳ ರೇಟ್ ಕಾರ್ಡ್ ಇಂತಿದೆ.
▪️ಬಿಡಿಎ – ₹50 ಕೋಟಿ ▪️ಬಿಡಬ್ಲೂಎಸ್ಎಸ್ಬಿ – ₹45 ಕೋಟಿ…
— BJP Karnataka (@BJP4Karnataka) October 20, 2023
Karnataka Breaking News Live:ಲೋಕಸಭೆ ಚುನಾವಣೆ ವೇಳೆ ಒಳಗೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇರಲ್ಲ; ಈಶ್ವರಪ್ಪ
ರಾಯಚೂರು: ಲೋಕಸಭೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದುಹೋಗತ್ತೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು ‘ದೇಶದಲ್ಲೇ ಕಾಂಗ್ರೆಸ್ನವ್ರಿಗೆ ಅಧಿಕಾರ ಇರ್ಲಿಲ್ಲ, ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಮೋಸ ಮಾಡಿ ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಡಿಕೆಶಿ ಕೇಸ್ ಬಂದಿದೆ. ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
Karnataka Breaking News Live:ಅಕ್ರಮ ಮರಳು ಸಾಗಾಟ ಮಾಡ್ತಿದ್ದ ಟ್ರಾಕ್ಟರ್ ವಶ
ತುಮಕೂರು: ಅಕ್ರಮ ಮರಳು ಸಾಗಾಟ ಮಾಡ್ತಿದ್ದ ಟ್ರಾಕ್ಟರ್ನ್ನು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬುಡ್ಡೇನಹಳ್ಳಿ ಗ್ರಾಮದಲ್ಲಿ ಸಿಇಎನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೊಗರಿಘಟ್ಟ ಗ್ರಾಮದ ಪವನ್ ಎಂಬುವರು ಅಕ್ರಮವಾಗಿ ಟ್ರಾಕ್ಟರ್ ನಲ್ಲಿ ಮರಳು ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ಪ್ರಸನ್ನ ಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು, ಟ್ರಾಕ್ಟರ್ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Karnataka Breaking News Live: 33 ಸಚಿವರಿಗೆ ಇನ್ನೋವಾ ಹೈಬ್ರೀಡ್ ಕಾರು ಖರೀದಿಸಿದ ರಾಜ್ಯ ಸರ್ಕಾರ
ಬೆಂಗಳೂರು: ನೂತನ 33 ಸಚಿವರಿಗಾಗಿ ಇನ್ನೋವಾ ಹೈಬ್ರೀಡ್ ಕಾರುಗಳನ್ನು ರಾಜ್ಯ ಸರ್ಕಾರ ಖರೀದಿಸಿದೆ. ಬರಗಾಲದ ಕಾರಣಕ್ಕೆ ಅನುತ್ಪಾದಕ ವೆಚ್ಚ ಕಡಿತ ಅಂತಿರುವ ಸರ್ಕಾರದಿಂದಲೇ ಕಾರು ಖರೀದಿಯಾಗಿರುವುದು ಎಲ್ಲೇಡೆ ಚರ್ಚೆಗೆ ಗ್ರಾಸವಾಗಿದೆ. ಬರೋಬ್ಬರಿ 9 ಕೋಟಿ 90 ಲಕ್ಷ ರೂ ವೆಚ್ಚದಲ್ಲಿ ಹೈಬ್ರೀಡ್ ಕಾರ್ ಖರೀದಿಸಲಾಗಿದೆ. ಅಗಸ್ಟ್ ತಿಂಗಳ 17 ರಂದೇ 33 ಕಾರು ಇನ್ನೋವಾ ಕಾರು ಖರೀದಿಗಾಗಿ ಹಣ ಬಿಡುಗಡೆ ಮಾಡಲಾಗಿತ್ತು. ದಸರಾ ಆರಂಭವಾಗ್ತಿದ್ದಂತೆ ಎಲ್ಲಾ ಸಚಿವರ ನಿವಾಸಕ್ಕೆ ಕಾರುಗಳು ಬಂದಿವೆ.
Karnataka Breaking News Live:ಇಂದು ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಲಿರುವ ಮೋದಿ
ಬೆಂಗಳೂರು: ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ. ಕೆ.ಆರ್.ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ- ಚಲ್ಲಘಟ್ಟ ವಿಸ್ತೃತ ಮಾರ್ಗವನ್ನು ಬೆಳಗ್ಗೆ 11.45ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಅಕ್ಟೋಬರ್ 9ರಿಂದಲೇ 2 ವಿಸ್ತೃತ ಮಾರ್ಗದಲ್ಲಿ ಮೆಟ್ರೋ ಸಂಚಾರ ಮಾಡುತ್ತಿದೆ.
Karnataka Breaking News Live: ವಿಜಯದಶಮಿ ಹಬ್ಬ; ಪ್ರಯಾಣಿಕರ ಅನುಕೂಲಕ್ಕೆ ಹೊಸ ಪ್ಲಾನ್ ರೂಪಿಸಿದ ಬಿಎಂಟಿಸಿ
ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕೆ ಬಿಎಂಟಿಸಿ ಹೊಸ ಪ್ಲಾನ್ ರೂಪಿಸಿದೆ. ಹೌದು, ಅಕ್ಟೋಬರ್ 23-24 ರಂದು ದಸರಾ ಹಬ್ಬದ ಪ್ರಯುಕ್ತ ಹೊರ ಜಿಲ್ಲೆಗಳಿಗೂ ಬಿಎಂಟಿಸಿ ಬಸ್ ಸಂಚಾರ ಮಾಡಲಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಇಷ್ಟು ದಿನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್ಗಳು, ಅ.21, 22, 23 ವರೆಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಮಾಡಲು ನಿರ್ಧಾರ ಮಾಡಿದೆ.
Karnataka Breaking News Live: ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ವಿಎಚ್ಪಿ ವಿರೋಧ
ಮಂಗಳೂರು: ನವರಾತ್ರಿ ಅಂಗವಾಗಿ ದಾಂಡಿಯಾ ನೃತ್ಯ ಆಯೋಜನೆ ಮಾಡಲಾಗಿದ್ದು, ಇದಕ್ಕೆ ವಿಶ್ವ ಹಿಂದೂ ಪರಿಷತ್ ವಿರೋಧ ವ್ಯಕ್ತಪಡಿಸಿದೆ. ದಾಂಡಿಯಾ ಧಾರ್ಮಿಕ ಕಾರ್ಯಕ್ರಮವಾಗಿದ್ದು, ಮಾದಕವಸ್ತು ಬಳಕೆ ಆರೋಪ ಕೇಳಿಬಂದಿದೆ. ಡ್ರಗ್ಸ್, ಮದ್ಯಪಾನ ಮಾಡಿ ಅಸಭ್ಯ ನೃತ್ಯ ಮಾಡುತ್ತಾರೆ. ಹೀಗಾಗಿ ದಾಂಡಿಯಾ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಮನವಿ ಮಂಗಳೂರು ಪೊಲೀಸ್ ಕಮಿಷನರ್ಗೆ ಸಂಘಟನೆ ಮನವಿ ಮಾಡಿದೆ.
Karnataka Breaking News Live:ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವರ್ಗಾವಣೆ;ಕಣ್ಣೀರು ಹಾಕಿದ ಅಂಗನವಾಡಿ ಕಾರ್ಯಕರ್ತೆಯರು
ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವರ್ಗಾವಣೆ ಹಿನ್ನಲೆ ಅಂಗನವಾಡಿ ಕಾರ್ಯಕರ್ತೆಯರು ಕಣ್ಣೀರು ಹಾಕಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಅನ್ನಪೂರ್ಣ ಎಂಬುವವರು ವರ್ಗಾವಣೆಯಾಗಿದ್ದರು. ನಿನ್ನೆ ಕುಂದಗೋಳದಲ್ಲಿ ಅಧಿಕಾರಿಗೆ ಬೀಳ್ಕೊಡುವ ಸಮಾರಂಭ ಹಮ್ಮಿಕೊಳ್ಳುಲಾಗಿತ್ತು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಕಣ್ಣೀರು ಹಾಕಿದ್ದಾರೆ.
Karnataka Breaking News Live: ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ
ಚಿಕ್ಕಮಗಳೂರು: ವಿರೋಧದ ನಡುವೆ ಚಿಕ್ಕಮಗಳೂರಿನಲ್ಲಿ ಮಹಿಷ ದಸರಾ ಆಚರಣೆಗೆ ಸಿದ್ದತೆ ಮಾಡಲಾಗಿದೆ. ಹೌದು, ಜಿಲ್ಲೆಯಾದ್ಯಂತ ತೀವ್ರ ವಿರೋಧ, ನಿಷೇಧಾಜ್ಞೆ ನಡುವೆಯೇ ಮಹಿಷ ದಸರಾಕ್ಕೆ ಸಿದ್ದತೆ ಮಾಡಿಕೊಂಡಿದೆ. ಹನುಮಂತಪ್ಪ ಸರ್ಕಲ್ನಿಂದ ಪ್ರಮುಖ ರಸ್ತೆಗಳಲ್ಲಿ ಮಹಿಷ ಮೆರವಣಿಗೆ ಜೊತೆಗೆ ಆಝಾದ್ ಪಾರ್ಕ್ ಬಳಿ ಬಹಿರಂಗ ಸಮಾವೇಶಕ್ಕೆ ಸಿದ್ದತೆ ನಡೆದಿದೆ. ಮಹಿಷ ದಸರಾಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತ ಅನುಮತಿ ನಿರಾಕರಣೆ ಮಾಡಿತ್ತು. ಈ ಹಿನ್ನಲೆ ಅ.19 ರಿಂದ 24 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Karnataka Breaking News Live: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಹೌದು, ಮಧ್ಯಾಹ್ನ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ. ಆದರೆ, ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ಕಾಡುಗೊಲ್ಲ ಸಮುದಾಯದ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.
Karnataka Breaking News Live: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭಧ್ರತೆ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ವರ್ಲ್ಡ್ ಕಪ್ ಪಂದ್ಯ ಇಂದು ನಡೆಯಲಿದ್ದು, ಪಾಕಿಸ್ತಾನ ಹಾಗೂ ಅಸ್ಟ್ರೇಲಿಯಾ ಮಧ್ಯೆ ಹಣಾಹಣಿ ಏರ್ಪಟ್ಟಿದೆ. ಈ ಹಿನ್ನಲೆ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಹಾಗೂ ಕೇಂದ್ರ ವಿಭಾಗ ಡಿಸಿಪಿ ಟಿ.ಹೆಚ್ ಶೇಖರ್ ನೇತೃತ್ವದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಪೊಲೀಸ್ ಭಧ್ರತೆ ಕೈಗೊಳ್ಳಲಾಗಿದೆ. ಹೌದು, ಶ್ವಾನದಳ ಮತ್ತು ಬಾಂಬ್ ಡಿಡೆಕ್ಟರ್ರಿಂದ ಭಧ್ರತಾ ಪರಿಶೀಲನೆ ನಡೆಸಲಾಗಿದೆ. ಕ್ರೀಡಾಂಗಣದಲ್ಲಿ ಒಟ್ಟು 623 ಜನ ಪೊಲೀಸರ ನಿಯೋಜನೆ ಮಾಡಲಾಗಿದೆ.
Karnataka Breaking News Live: ಕಾವೇರಿ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಬೆಂಬಲ
ಮಂಡ್ಯ: ಇಂದಿನಿಂದ ಕಾವೇರಿ ಹೋರಾಟ ಮತಷ್ಟು ತೀವ್ರಗೊಳ್ಳಲಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರು-ಕಾಲೇಜು ವಿದ್ಯಾರ್ಥಿಗಳ ಬೆಂಬಲ ನೀಡಲಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಹಿನ್ನೆಲೆ ಕಳೆದ 47 ದಿನಗಳಿಂದ ನಿರಂತರವಾಗಿ ರೈತ ಹಿತರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ನಡೆಸುತ್ತಿದೆ. ಇಂದಿನಿಂದ ಹೋರಾಟ ತೀವ್ರಗೊಳಿಸಲು ರೈತ ಹಿತರಕ್ಷಣಾ ಸಮಿತಿ ನಿರ್ಧಾರ ಮಾಡಿದೆ.
Published On - Oct 20,2023 8:00 AM