Karnataka Breaking Kannada News Highlights: ಗ್ಯಾರಂಟಿ ಅನುಷ್ಠಾನ ಆಗದಂತೆ ಮಾಡಲು ಬಿಜೆಪಿ ಷಡ್ಯಂತ್ರ ಮಾಡಿತ್ತು: ಸಚಿವ ಹೆಚ್ಕೆ ಪಾಟೀಲ್
Breaking News Today Highlights Updates: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಹಲವು ಮಹತ್ವದ ಬೆಳವಣಿಗೆಗಳು ಆಗುತ್ತಿವೆ. ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)ದ ಚಂದ್ರಯಾನ-3 ಯಶಸ್ವಿ ಬಳಿಕ ಗಗಯಾನಕ್ಕೆ ಕೈಹಾಕಿದೆ. ಇಂದು ಶನಿವಾರ ಬೆಳಗ್ಗೆ 7.30ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದರೊಂದಿಗೆ ಹವಾಮನ ಸೇರಿದಂತೆ ಇನ್ನಿತರ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿ ಟವಿ9 ಡಿಜಿಟಲ್ನಲ್ಲಿ...
Breaking News Highlights Updates: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಜೆಡಿಎಸ್ ನಾಯಕರ ನಡೆ ಸಾಕಷ್ಟು ಚರ್ಚೆಯಾಗುತ್ತಿದೆ. ಮತ್ತೊಂದಡೆ ಬೆಳಗಾವಿ ರಾಜಕಾರಣ ಮತ್ತೆ ಸದ್ದು ಮಾಡುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟ ಶುರುವಾಗಿದೆ. ಮತ್ತೊಂದಡೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹೈಕೋರ್ಟ್ ಸಿಬಿಐಗೆ ನೀಡಿದ್ದು, ಸಂಕಷ್ಟ ಎದುರಾಗಿದೆ. ಕಮಿಷನ್ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಿಪಕ್ಷಗಳು ಹರಿಹಾಯಿಯುತ್ತಿವೆ. ಇನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)ದ ಚಂದ್ರಯಾನ-3 ಯಶಸ್ವಿ ಬಳಿಕ ಗಗಯಾನಕ್ಕೆ ಕೈಹಾಕಿದೆ. ಇಂದು ಅ.21ರ ಶನಿವಾರ ಬೆಳಗ್ಗೆ 7.30ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ…
LIVE NEWS & UPDATES
-
Karnataka News Live: ನಾಲೆಗಳಿಗೆ ಹೇಮಾವತಿ ನೀರು ಹರಿಸಲು ಒತ್ತಾಯಿಸಿ ಅಹೋರಾತ್ರಿ ಧರಣಿ
ನಾಲೆಗಳಿಗೆ ಹೇಮಾವತಿ ನೀರು ಹರಿಸಲು ಒತ್ತಾಯಿಸಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ನೇತೃತ್ವದಲ್ಲಿ ಹಾಸನದ ಗೊರೂರಿನಲ್ಲಿರುವ ಜಲಾಶಯದ ಮುಖ್ಯ ಇಂಜಿನಿಯರ್ ಕಚೇರಿ ಎದುರು ಅಹೋರಾತ್ರಿ ಧರಣಿ ಮಾಡಲಾಗುತ್ತಿದೆ. ಅಧಿಕಾರಿಗಳ ಮನವೊಲಿಕೆಗೂ ಜಗ್ಗದೇ H.D.ರೇವಣ್ಣ, ಬೆಂಬಲಿಗರಿಂದ ಧರಣಿ ಮಾಡಲಾಗುತ್ತಿದೆ.
-
Karnataka News Live: ಪಬ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಬಿಬಿಎಂಪಿ ಅಧಿಕಾರಿಗಳ ಪರಿಶೀಲನೆ
ಪಬ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಬಿಬಿಎಂಪಿ ಅಧಿಕಾರಿಗಳ ಪರಿಶೀಲನೆ ಮಾಡಲಾಗಿದೆ. ಬಿಬಿಎಂಪಿಯ 8 ವಲಯಗಳಲ್ಲೂ ಆರೋಗ್ಯಾಧಿಕಾರಿಗಳಿಂದ ತಪಾಸಣೆ ಮಾಡಿದ್ದು, 280 ಪಬ್, ಬಾರ್, ರೆಸ್ಟೋರೆಂಟ್‌ಗಳಲ್ಲಿ ಅಧಿಕಾರಿಗಳ ಪರಿಶೀಲನೆ ಮಾಡಲಾಗಿದೆ. ನಿಯಮ ಪಾಲಿಸದ 21 ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಬೀಗಮುದ್ರೆ ಹಾಕಲಾಗಿದೆ. 167 ಪಬ್, ಬಾರ್, ರೆಸ್ಟೋರೆಂಟ್‌ಗೆ ಪಾಲಿಕೆ ಅಧಿಕಾರಿಗಳಿಂದ ನೋಟಿಸ್ ನೀಡಿದ್ದಾರೆ.
-
Karnataka News Live: ನಮ್ಮಲ್ಲಿ ಯಾವುದೇ ಬಣ ಇಲ್ಲ, ನಮ್ಮಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ
ನಮ್ಮಲ್ಲಿ ಯಾವುದೇ ಬಣ ಇಲ್ಲ, ನಮ್ಮಲ್ಲಿರುವುದು ಕಾಂಗ್ರೆಸ್ ಬಣ ಮಾತ್ರ ಎಂದು ದಾವಣಗೆರೆಯಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. 136 ಶಾಸಕರೂ ಒಟ್ಟಾಗಿದ್ದೇವೆ, ಡಿಸಿಎಂ ಡಿಕೆ ಶಿವಕುಮಾರ್ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
Karnataka News Live: ಲೋಕಸಭೆ ಎಲೆಕ್ಷನ್ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಪಾಟೀಲ್ ಹೇಳಿದ್ದೇನು?
Karnataka News Live: ಎಲ್ಲಾ ಅಕ್ರಮಗಳ ಬಗ್ಗೆ ತನಿಖೆಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ
ಪೌರಕಾರ್ಮಿಕರ ನೇಮಕಾತಿಯಲ್ಲೂ ಅಕ್ರಮ ನಡೆಸಲಾಗಿದೆ. ಎಲ್ಲಾ ಅಕ್ರಮಗಳ ಬಗ್ಗೆ ತನಿಖೆಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಜೈಕಿಸಾನ್ ಖಾಸಗಿ ತರಕಾರಿ ಮಾರುಕಟ್ಟೆಗೆ ಅನುಮತಿ ವಿಚಾರವಾಗಿ ಮಾತನಾಡಿದ್ದು, ಸನ್ಮಾನ್ಯ ಶ್ರೀ ಶ್ರೀ ಶ್ರೀ ಅಭಯ್ ಪಾಟೀಲ್ರದ್ದು ಎಂದು ವ್ಯಂಗ್ಯವಾಡಿದ್ದಾರೆ. ವಿಶ್ವದಲ್ಲಿ ಎಲ್ಲೂ ನಡೆಯದ ಘಟನೆ ಬೆಳಗಾವಿಯಲ್ಲಿ ನಡೆದಿದೆ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Karnataka News Live: ಇದಕ್ಕೆಲ್ಲ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಿಂದೆ ಇದ್ದಾರೆ
ತೆರಿಗೆ ಏರಿಕೆ ಸಂಬಂಧ ಮೂರು ವರ್ಷಗಳಿಂದ ಪತ್ರ ವ್ಯವಹಾರ ನಡೆದಿದೆ. ಕರ ಹೆಚ್ಚಳದ ಪತ್ರದಲ್ಲಿ ತಿದ್ದುಪಡಿ ಆಗಿದೆ ಎಂಬ ವಿಚಾರಕ್ಕೆ ಘರ್ಷಣೆ ಇದು. ಭ್ರಷ್ಟಾಚಾರ, ಕಳವು ಅಲ್ಲ ದಿನಾಂಕ ಸಂಬಂದ ಇಷ್ಟು ದೊಡ್ಡ ಗಲಾಟೆ. ಇದಕ್ಕೆಲ್ಲ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹಿಂದೆ ಇದ್ದಾರೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಸಭೆಯ ಬಳಿಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
Karnataka News Live: ಕೇಂದ್ರದ ನಿಯಮಾವಳಿ ಪ್ರಕಾರ 5,000 ಕೋಟಿ ಪರಿಹಾರಕ್ಕೆ ಮನವಿ
ಕರ್ನಾಟಕಕ್ಕೆ ಅಕ್ಕಿ ನೀಡದೆ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದರು. ಆದರೂ ನಾವು ಘೋಷಿಸಿದಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದೆವು. ರಾಜ್ಯದಲ್ಲಿ ಬರಗಾಲದಿಂದ 34 ಸಾವಿರ ಕೋಟಿ ಮೌಲ್ಯದ ಬೆಳೆ ಹಾನಿಯಾಗಿದ್ದು, ಕೇಂದ್ರದ ನಿಯಮಾವಳಿ ಪ್ರಕಾರ 5,000 ಕೋಟಿ ರೂ. ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದರು.
Karnataka News Live: ಹಣ ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಹಣ ಪೂರೈಸಲಿಲ್ಲ
ಗ್ಯಾರಂಟಿ ಅನುಷ್ಠಾನ ಆಗದಂತೆ ಮಾಡಲು ಬಿಜೆಪಿ ಷಡ್ಯಂತ್ರ ಮಾಡಿತ್ತು ಎಂದು ಹಾವೇರಿಯಲ್ಲಿ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕಾಗಿ ಹೆಚ್ಚುವರಿ ಅಕ್ಕಿ ಕೇಳಿದ್ದೆವು. ಹಣ ಕೊಡುತ್ತೇವೆ ಎಂದರೂ ಕೇಂದ್ರ ಸರ್ಕಾರ ಹಣ ಪೂರೈಸಲಿಲ್ಲ ಎಂದಿದ್ದಾರೆ.
Karnataka News Live: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ
ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಆ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ದಸರಾ ಹಬ್ಬದ ಗಿಫ್ಟ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಜುಲೈ 1, 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಮೂಲ ವೇತನದ ಶೇ. 35 ರಿಂದ ಶೇ. 38.75ಕ್ಕೆ ಹೆಚ್ಚಿಸಿ ಶನಿವಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ ನೀಡಿದ ಸರ್ಕಾರ: ಶೇ. 38.75 ತುಟ್ಟಿಭತ್ಯೆ ಹೆಚ್ಚಳ
Karnataka News Live: ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆಲಸ ಮಾಡಬೇಕಿದೆ
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾವು ಕೆಲಸ ಮಾಡಬೇಕಿದೆ. ಕೆಲವು ಕಾಮಗಾರಿಗಳ ಕೆಲಸ ವ್ಯತ್ಯಯವಾಗಿರಬಹುದು. ಗ್ಯಾರಂಟಿ ಯೋಜನೆ ಸೇರಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡೋಣ. ಈ ಸಲ ಹಾವೇರಿ ಲೋಕಸಭಾ ಕ್ಷೇತ್ರ ಗೆಲ್ಲೋಣ ಎಂದು S.S.ಮಲ್ಲಿಕಾರ್ಜುನ್ ಹೇಳಿದ್ದಾರೆ.
Karnataka News Live: ಕಾಂಗ್ರೆಸ್‌ನವರಿಂದಲೇ ಕಾಂಗ್ರೆಸ್ ಪಕ್ಷ ಸೋಲುತ್ತಿದೆ
ಕಾಂಗ್ರೆಸ್‌ನವರಿಂದಲೇ ಕಾಂಗ್ರೆಸ್ ಪಕ್ಷ ಸೋಲುತ್ತಿದೆ. ಬೇರೆಯವರಿಂದ ಕಾಂಗ್ರೆಸ್ ಸೋಲುತ್ತಿಲ್ಲ ಎಂದು ಹಾವೇರಿಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.
Karnataka News Live: ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಗೃಹ ಸಚಿವರಾದ ಡಾ. ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹಮದ್ ಅವರು ಈ ವೇಳೆ ಜತೆಗಿದ್ದರು.
ಮುಖ್ಯಮಂತ್ರಿ @siddaramaiah ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಗೃಹ ಸಚಿವರಾದ @DrParameshwara, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹಮದ್ ಅವರು ಈ ವೇಳೆ ಜತೆಗಿದ್ದರು. pic.twitter.com/plISUcAuQK
— CM of Karnataka (@CMofKarnataka) October 21, 2023
Karnataka News Live: ನವೆಂಬರ್ 2ರಿಂದ ಹಾಸನಾಂಬೆಯ ದರ್ಶನ ಆರಂಭ ಆಗಲಿದೆ
ನವೆಂಬರ್ 2ರಿಂದ ಹಾಸನಾಂಬೆಯ ದರ್ಶನ ಆರಂಭ ಆಗಲಿದೆ. ಕಳೆದ ವರ್ಷ 6 ಲಕ್ಷ ಭಕ್ತರು ಹಾಸನಾಂಬೆಯ ದರ್ಶನ ಪಡೆದಿದ್ದರು. ಪ್ರಸಕ್ತ ವರ್ಷ 10 ಲಕ್ಷ ಭಕ್ತರು ದರ್ಶನ ಪಡೆಯುವ ನಿರೀಕ್ಷೆ ಇದೆ ಎಂದು ವಿಧಾನಸೌಧದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹೇಳಿದ್ದಾರೆ.
Karnataka News Live: ಮಾಜಿ ಸಿಎಂ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್
ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ್ದಾರೆ.
Karnataka News Live: ಸಚಿವ ಭೈರತಿ ಸುರೇಶ್ ಕೂಡಲೇ ರಾಜೀನಾಮೆ ನೀಡಬೇಕು
ಈ ಸರ್ಕಾರದಲ್ಲಿ ಒಬ್ಬ ಸಚಿವರಿಗಿಂತ ಮತ್ತೊಬ್ಬರು ಕುಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಸಚಿವ ಭೈರತಿ ಸುರೇಶ್ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ನಕಲಿ ವೋಟರ್ ಐಡಿ: ಸಚಿವ ಭೈರತಿ ಸುರೇಶ್ ವಿರುದ್ಧ ಎನ್ ರವಿಕುಮಾರ್ ವಾಗ್ದಾಳಿ
Karnataka News Live: ನೇಕಾರರಿಗೆ 10 ಹೆಚ್ಪಿವರೆಗೆ ಉಚಿತ ವಿದ್ಯುತ್
ನೇಕಾರರಿಗೆ 10 ಹೆಚ್ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಹೆಚ್ಪಿವರೆಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ.
ನೇಕಾರರಿಗೆ ದಸರಾ ಉಡುಗೊರೆ ನೀಡಿದ ಸರ್ಕಾರ: ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ಪಾಟೀಲ್
Karnataka News Live: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನಿರಾಣಿ ಹೇಳಿದ್ದಿಷ್ಟು
Karnataka News Live: ಲೋಕಸಭಾ ಚುನಾವಣೆಗೂ ಮೊದಲೇ ಸಾಕಷ್ಟು ಬದಲಾವಣೆ ಆಗುತ್ತೆ
ಲೋಕಸಭಾ ಚುನಾವಣೆಗೂ ಮೊದಲೇ ಸಾಕಷ್ಟು ಬದಲಾವಣೆ ಆಗುತ್ತೆ. ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತೆ ಕಾದುನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
Karnataka News Live: ಬಿಜೆಪಿ ನಾಯಕರ ವಿರುದ್ಧ ಹೆಚ್ಡಿ ರೇವಣ್ಣ ಕಿಡಿ
ಬಿಜೆಪಿ ನಾಯಕರ ಮನೆ ಬಾಗಿಲು ಬಡೆದಿದ್ದು ನಾವಲ್ಲ. ಮುನಿಯಪ್ಪ ಅವರನ್ನು ಸೋಲಿಸಿದ್ದು ಯಾರು. ಇವರು ಬೇಕಾದಗ ಬಂದು ಕಾಲು ಕಟ್ತಾರೆ ಇದು ಇವರ ಸಂಸ್ಕೃತಿ ಎಂದು ಕಿಡಿಕಾರಿದ್ದಾರೆ. ವಿಧಾನಸಭೆ ಚುನಾವಣೆ ಆದಾಗ 2018 ರಲ್ಲಿ ದೇವೇಗೌಡರ ಪಾದಕ್ಕೆ ಯಾಕೆ ಬಿದ್ದರು ಎಂದು ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪ್ರಶ್ನಿಸಿದ್ದಾರೆ.
Karnataka News Live: ಸರ್ಕಾರಕ್ಕೆ ಬಡತನ ಇದ್ಯಾ ಅಥವಾ ಆರ್ಥಿಕವಾಗಿ ದಿವಾಳಿಯಾಗಿದ್ಯಾ
ಮೈಸೂರು ಬಿಟ್ಟರೇ ಶಿವಮೊಗ್ಗ ದಸರಾ ವೈಭವದಿಂದ ನಡೆಯುತ್ತದೆ ಎಂದು ಶಿವಮೊಗ್ಗದಲ್ಲಿ ಬಿಜೆಪಿಯ ಮಾಜಿ ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗ ದಸರಾ ಆಚರಣೆಗೆ ಸರ್ಕಾರ ಕೇವಲ 20 ಲಕ್ಷ ರೂ. ಕೊಟ್ಟಿದೆ. ಸರ್ಕಾರಕ್ಕೆ ಬಡತನ ಇದ್ಯಾ ಅಥವಾ ಆರ್ಥಿಕವಾಗಿ ದಿವಾಳಿಯಾಗಿದ್ಯಾ, ನೀವು ಹಣ ಕೊಡದಿದ್ದರೆ ಹೇಳಿ ಚಂದಾ ಎತ್ತಿ ಆಚರಣೆ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.
Karnataka News Live: ಅಶೋಕ್ ಪಟ್ಟಣ್ ಹೇಳಿಕೆ ಸಮರ್ಥಿಸಿಕೊಂಡ ರಾಮಲಿಂಗಾ ರೆಡ್ಡಿ
ಬೆಂಗಳೂರು: ಎರಡೂವರೆ ವರ್ಷದ ಬಳಿಕ ಸಂಪುಟ ಬದಲಾಗುತ್ತೆ ಎಂಬ ಅಶೋಕ್ ಪಟ್ಟಣ್ ಹೇಳಿಕೆ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ ಅನೇಕ ಹಿರಿಯದ್ದಾರೆ, ಐದಾರು ಟರ್ಮ್ ಗೆದ್ದವರು ಇದ್ದಾರೆ. ಅವರಿಗೆಲ್ಲ ಅವಕಾಶ ಕೊಡಬೇಕು ಅಂತ ಹೇಳಿದ್ದಾರೆ. ಅಶೋಕ್ ಹೇಳಿಕೆ ಬಗ್ಗೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದು ಹೇಳಿದರು.
Karnataka News Live: ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ; ಈಶ್ವರಪ್ಪ
ಶಿವಮೊಗ್ಗ: ಕ್ಯಾಬಿನೆಟ್ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಎರಡೂವರೆ ವರ್ಷದ ನಂತರ ಹಳಬರು ತೆಗೆದು ಹೊಸಬರು ಹಾಕುತ್ತೇವೆ ಅಂತಾರೆ. ಅಶೋಕ್ ಪಟ್ಟಣ್ ಕ್ಯಾಬಿನೆಟ್ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ಎಂ.ಬಿ.ಪಾಟೀಲ್, ಅಶೋಕ್ ಪಟ್ಟಣ್ ಹೇಳಲು ಯಾರು? ಒಬ್ಬೊಬ್ಬ ಮಂತ್ರಿ ಒಂದೊಂದು ಹೇಳಿಕೆ ಕೊಡೋದು ಒಳ್ಳೆಯದಲ್ಲ. ಮುಖ್ಯಮಂತ್ರಿಗಳು ಗಮನ ಹರಿಸಲಿ ಈ ರೀತಿ ಸಚಿವರು ಹೇಳಿಕೆ ಕೊಡುವುದು ನಿಲ್ಲಿಸಲಿ. ಮೈಸೂರು ಬಿಟ್ಟರೆ ಶಿವಮೊಗ್ಗ ದಸರಾ ವೈಭವವಾಗಿ ನಡೆಯುತ್ತದೆ. ಆದರೆ ದಸರಾ ಆಚರಣೆಗೆ ಸರ್ಕಾರ ಕೇವಲ 20 ಲಕ್ಷ ರೂ. ಅಷ್ಟೇ ಕೊಟ್ಟಿದೆ. ಏಕೆ ಸರಕಾರಕ್ಕೆ ಬಡತನ ಇದೆಯಾ? ಸರಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ನೀವು ಹಣ ಕೊಡದಿದ್ದರೆ ಹೇಳಿ ನಾವು ಸಾರ್ವಜನಿಕರ ಬಳಿ ಚಂದಾ ಎತ್ತಿ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದರು.
Karnataka News Live: ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ; ಹೆಚ್ ಡಿ ಕುಮಾರಸ್ವಾಮಿ
ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುತ್ತೇನೆ. ಕಮಿಷನ್, ಪರ್ಸೆಂಟೇಜ್ನಿಂದ ಸಾರ್ವಜನಿಕರಿಗೆ ಮನೋರಂಜನೆ ಸಿಗುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಇದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ ಹಾಗೂ ಅಂತರ್ಜಲ ಕುಸಿತವಾಗಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು.
Karnataka News Live: ಅರಿಶಿನ, ಕುಂಕುಮ ಬಳಸದೆ ಸಿಎಂ ಕಚೇರಿಗೆ ಪೂಜೆ
ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕಚೇರಿಗೆ ಬಣ್ಣ ಬಣ್ಣದ ಹೂವುಗಳಿಂದ ಶೃಂಗರಿಸಿ ಅರಿಶಿನ, ಕುಂಕುಮ ಬಳಸದೆ ಪೂಜೆ ಮಾಡಲಾಗಿದೆ. ಮುಖ್ಯಮಂತ್ರಿ ಕಚೇರಿ ವಿಧಾನಸೌಧದ ಮೂರನೇ ಮಹಡಿಯಲ್ಲಿದೆ.
Karnataka News Live: ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಎರಡೂ ಅತಿ ಶೀಘ್ರದಲ್ಲೇ ಆಗುತ್ತೆ: ಬಿವೈ ವಿಜಯೇಂದ್ರ
ಚಿಕ್ಕೋಡಿ: ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆಯಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಬಿ.ವೈ.ವಿಜಯೇಂದ್ರಗೆ ಉತ್ತರಿಸಿ ಖಂಡಿತ ಇಲ್ಲ ಯಡಿಯೂರಪ್ಪ ಹಿರಿಯ ನಾಯಕರಿದ್ದಾರೆ, ಅವರು ಸ್ಚತಂತ್ರರು. ಅವರಿಗೆ ಯಾವಾಗ ಸರಿ ಅನಿಸುತ್ತೆ ಆಗ ಪ್ರವಾಸ ಮಾಡುತ್ತಾರೆ. ಬಿಎಸ್ ಯಡಿಯೂರಪ್ಪ ಎಲ್ಲಿ ಬೇಕಾದಲ್ಲಿ ಪ್ರವಾಸ ಮಾಡುತ್ತಾರೆ. ಯಾರೂ ಕೂಡ ಅದನ್ನ ತಡೆಯುವಂತಹ ಪ್ರಯತ್ನ ಮಾಡುವುದಿಲ್ಲ, ಮಾಡುವ ಅವಶ್ಯಕತೆಯೂ ಇಲ್ಲ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನ ಎರಡೂ ಒಟ್ಟಿಗೆ ಅತಿ ಶೀಘ್ರದಲ್ಲೇ ಆಗುತ್ತೆ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.
Karnataka News Live: ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಬೆಂಗಳೂರು: ಇಂಧನ ಇಲಾಖೆಗೆ ಸಂಬಂಧಿಸಿದಂತೆ ಲೋಡ್ ಶೆಡ್ಡಿಂಗ್, ವಿದ್ಯುತ್ ಖರೀದಿ ಮತ್ತಿತರ ವಿಚಾರಗಳ ಕುರಿತಾಗಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಮುಖ್ಯ ಕಚೇರಿ ಜೆ.ಪಿ. ಭವನದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಸುದ್ದಿಗೋಷ್ಠಿ ಇದಾಗಿದೆ.
Karnataka News Live: ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.
Gaganyaan Mission Test Live: ಸಮುದ್ರದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆದ ಮಾಡೆಲ್ಗಳು
ಇಸ್ರೋದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ಯಶಸ್ವಿಯಾಗಿದೆ. ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್ ಮಾಡೆಲ್ ಒಳಗೊಂಡ ರಾಕೆಟ್ ನಭಕ್ಕೆ ಹಾರಿತ್ತು. ರಾಕೆಟ್ನಿಂದ ಬೇರ್ಪಟ್ಟು ಎರಡೂ ಮಾಡೆಲ್ಗಳು ಪ್ಯಾರಚೂಟ್ ಮೂಲಕ ಭೂಮಿಗೆ ಬಂದಿಳಿದಿವೆ.
Gaganyaan Mission Test Live: ಇಸ್ರೋದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ಯಶಸ್ವಿ
ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ, ಗಗನಯಾನ ಯೋಜನೆಯ (Gaganyaan Mission Test Flight) ಪರೀಕ್ಷಾ ಹಾರಾಟವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
Gaganyaan Mission Test Live: ಇಸ್ರೋದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ 10ಕ್ಕೆ ರಿಶೆಡ್ಯೂಲ್ಡ್
ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಇಂದು ಬೆಳಗ್ಗೆ 10:00ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ, ಗಗನಯಾನ ಯೋಜನೆಯ (Gaganyaan Mission Test Flight) ಪರೀಕ್ಷಾ ಹಾರಾಟ ನಡೆಸಲಿದೆ. ಈ ಮುಂಚೆ ಬೆಳಿಗ್ಗೆ 8 ಗಂಟೆ ಸಮಯ ನಿಗದಿ ಮಾಡಲಾಗಿತ್ತು. ಆದರೆ ಹವಾಮಾನ ಮತ್ತು ತಾಂತ್ರಿಕ ದೋಷದಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ 10 ಗಂಟೆಗೆ ಪರೀಕ್ಷಾರ್ಥ ಹಾರಾಟ ನಡೆಸಲಿದೆ.
Reason for the launch hold is identified and corrected.
The launch is planned at 10:00 Hrs. today.
— ISRO (@isro) October 21, 2023
Karnataka News Live: ಲೋಕಸಭೆ ಚುನಾವಣೆ ವೇಳೆಗೆ ಕಾಂಗ್ರೆಸ್ಗೆ ಈಶ್ವರಪ್ಪ ಸೇರಿದರೂ ಅಚ್ಚರಿ ಪಡಬೇಕಾಗಿಲ್ಲ; ಎಂಬಿ ಪಾಟೀಲ್
ರಾಯಚೂರು: ಲೋಕಸಭೆ ಚುನಾವಣೆವೇಳೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಬಂದರೂ ಅಚ್ಚರಿಯಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ವಿಚಾರ ಮಾಡುತ್ತೇವೆ. ಈಶ್ವರಪ್ಪ ಬಹಳ ಮೇಧಾವಿಗಳು. ಅವರ ಹೇಳಿಕೆಗೆ ನಾನು ಉತ್ತರ ಕೊಡಲು ಬಯಸಲ್ಲ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಹೌದು ಸೇರಿದ್ದಾರೆ, ಈಶ್ವರಪ್ಪ ಬಂದರೂ ಅಚ್ಚರಿಯಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.
Karnataka News Live: ರಾಜ್ಯದ 2400 ಪೊಲೀಸ್ ಪೇದೆಗಳನ್ನು ನೇಮಕ; ಸಿಎಂ
ಬೆಂಗಳೂರು: ಶನಿವಾರ ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾದರು. ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುತ್ತೆ. 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ. ನಿವೃತ್ತಿ ಅಧಿಕಾರಿ ಮತ್ತು ಸಿಬ್ಬಂದಿ ಅವರ ಅವಲಂಬಿತ ಪತಿ, ಪತ್ನಿಯರ ಚಿಕಿತ್ಸೆಗಾಗಿ 25 ಕೋಟಿ ರೂ. ರಿಲೀಸ್ ಮಾಡಲಾಗಿದೆ. ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಓಪನ್ ಮಾಡಲಾಗುತ್ತಿದೆ. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಕರ್ತವ್ಯ ನಿರತ ಸಾವನ್ನಪ್ಪಿದ ಪೊಲೀಸರಿಗೆ 50 ಲಕ್ಷ ರೂ. ಪರಿಹಾರ ಕೊಡಲಾಗುತ್ತೆ ಎಂದು ಹೇಳಿದರು.
Gaganyaan Mission Test Live: ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ತಾತ್ಕಾಲಿಕ ಸ್ಥಗಿತ
ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)ದ ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟ ತಾತ್ಕಾಲಿಕ ಸ್ಥಗಿತ.
Gaganyaan Mission Test Live: ಹಾರಾಟದ ವೇಳೆ ಹಲವು ಮಾಡೆಲ್ಗಳ ಪರಿಶೀಲನೆ
ಗಗನಯಾನ ಮಿಷನ್‌ನ ಮೊದಲ ಪರೀಕ್ಷಾ ಹಾರಾಟದಲ್ಲಿ, ಇಸ್ರೋ ಸಿಬ್ಬಂದಿ ಮಾಡ್ಯೂಲ್ ಅನ್ನು ಬಾಹ್ಯಾಕಾಶಕ್ಕೆ ಕಳುಹಿಸುತ್ತದೆ, ನಂತರ ಅದನ್ನು ಭೂಮಿಗೆ ಹಿಂತಿರುಗಿಸಲಾಗುತ್ತದೆ. ಹಾರಾಟದ ಸಮಯದಲ್ಲಿ ನ್ಯಾವಿಗೇಷನ್, ಸೀಕ್ವೆನ್ಸಿಂಗ್, ಟೆಲಿಮೆಟ್ರಿ, ಎನರ್ಜಿ ಇತ್ಯಾದಿಗಳನ್ನು ಪರಿಶೀಲಿಸಲಾಗುತ್ತದೆ.
Gaganyaan Mission Test Live: ಎರಡು ಮಾಡೆಲ್ಗಳನ್ನು ಹೊತ್ತು ಸಾಗುವ ನೌಕೆ
ರಾಕೆಟ್ ಎರಡು ಮಾಡೆಲ್ಗಳನ್ನು ಹೊತ್ತು ಸಾಗಲಿದೆ. ಕ್ರ್ಯೂ ಮಾಡೆಲ್, ಕ್ರ್ಯೂ ಎಸ್ಕೇಪ್ ಮಾಡೆಲ್ ಒಳಗೊಂಡ ನೌಕೆ ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರುತ್ತದೆ. ಬಳಿಕ ನೌಕೆಯನ್ನು ಸಮುದ್ರಕ್ಕೆ ಬೀಳಿಸಲಾಗುತ್ತದೆ. ತುರ್ತು ಸಂದರ್ಭದಲ್ಲಿ ಯಾತ್ರಿಕರ ಸುರಕ್ಷಿತ ಲ್ಯಾಂಡಿಂಗ್ ಹಾಗೂ ನೌಕೆಯ ಸುರಕ್ಷತೆ ಬಗ್ಗೆ ಪ್ರಯೋಗಾರ್ಥ ಪರೀಕ್ಷೆಗಾಗಿ ಉಡಾವಣೆ ಮಾಡಲಾಗುತ್ತಿದೆ.
Gaganyaan Mission Test Live: ಗಗನಯಾನ ಯೋಜನೆಯ ಪರೀಕ್ಷಾರ್ಥ ಹಾರಾಟಕ್ಕೆ ಕ್ಷಣಗಣನೆ
ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO) ಅ.21ರ ಶನಿವಾರ ಬೆಳಗ್ಗೆ 8:00ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ಯೋಜನೆಯ (Gaganyaan Mission Test Flight) ಪರೀಕ್ಷಾ ಹಾರಾಟಕ್ಕೆ ಕ್ಷಣಗಣೆ ಆರಂಭವಾಗಿದೆ.
Published On - Oct 21,2023 7:55 AM