Karnataka Breaking Kannada News Highlights: ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಆಯೇಷಾ ಬಾನು
| Updated By: ಗಂಗಾಧರ​ ಬ. ಸಾಬೋಜಿ

Updated on:Nov 08, 2023 | 10:51 PM

Karnataka Breaking News Highlights: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಶುರುವಾಗಿದೆ. ಇದಕ್ಕೆ ಟಕ್ಕರ್ ಕೊಡಲು ಹೆಚ್​ಡಿ ಕುಮಾರಸ್ವಾಮಿ ಹೊಸ ಪ್ಲ್ಯಾನ್ ರೂಪಿಸಿದ್ದು, 3 ದಿನಗಳ ಕಾಲ ಹಾಸನದ ಖಾಸಗಿ ರೆಸಾರ್ಟ್​​​​ನಲ್ಲಿ ಕುಮಾರಸ್ವಾಮಿ ಜೆಡಿಎಸ್ ಶಾಸಕರ ಸಭೆ ಮಾಡಲು ಮುಂದಾಗಿದ್ದಾರೆ. ಇದರೊಂದಿಗೆ ಇಂದಿನ ಕ್ಷಣ ಕ್ಷಣದ ಮಾಹಿತಿ ಟಿವಿ9 ಡಿಜಿಟಲ್​ನಲ್ಲಿ.

Karnataka Breaking Kannada News Highlights: ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ಡಿ.ಕೆ.ಶಿವಕುಮಾರ್, ಸಂಸದ ತೇಜಸ್ವಿ ಸೂರ್ಯ

ರಾಜ್ಯದ ಹಲವೆಡೆ ವರುಣರಾಯನ ದರ್ಶನವಾಗಿದೆ (Karnataka Rains). ಕೆಲವೆಡೆ ಅವಘಡಗಳು ಕೂಡ ಸಂಭವಿಸಿವೆ. ಇನ್ನು ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ‌ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಮೈಸೂರಿನಲ್ಲಿ ಹುಲಿಯ ಕಾಟ ಮಿತಿಮೀರಿದೆ (Tiger). 7-8 ದಿನಗಳ ಅಂತರದಲ್ಲಿ ಹುಲಿ ಇಬ್ಬರ ಮೇಲೆ ದಾಳಿ ನಡೆಸಿದೆ. ಜಾನುವಾರುಗಳನ್ನು ಕೊಂದು ತಿಂದಿದೆ. ಹೀಗಾಗಿ ಮೈಸೂರಿನ ಕಾಡಂಚಿನ ಜನರಲ್ಲಿ ಆತಂಕ ಮನೆ ಮಾಡಿದೆ. ಮತ್ತೊಂದೆಡೆ ಇಂದು ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭೇಟಿ ನೀಡಲಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಿ ನಾಟಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದೆಲ್ಲದರ ಜೊತೆಗೆ ರಾಜ್ಯದ ಪ್ರಮುಖ ಸುದ್ದಿಗಳ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.

LIVE NEWS & UPDATES

The liveblog has ended.
  • 08 Nov 2023 10:35 PM (IST)

    Karnataka Breaking News Live: ಒಂದೇ ಮಳೆಗೆ ಹೇಗೆ ಬದಲಾಯ್ತು ನೋಡಿ ಸಹಕಾರ ನಗರದ ಚಿತ್ರಣ

  • 08 Nov 2023 09:48 PM (IST)

    Karnataka Breaking News Live: ಮೈಸೂರಿನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಾಳೆ ಧರಣಿ

    ಮೈಸೂರಿನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದಿಂದ ನಾಳೆ ಧರಣಿ ಮಾಡಲಾಗುತ್ತಿದ್ದು, ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಲಾಗಿದೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೃಹತ್ ಧರಣಿ ನಡೆಯಲಿದೆ.

  • 08 Nov 2023 09:14 PM (IST)

    Karnataka Breaking News Live: ಕ್ಯಾಪ್ಟನ್ ಇಲ್ಲದಿರುವ ಬರ ಅಧ್ಯಯನ ಪ್ರವಾಸಕ್ಕೆ ದಿಕ್ಕು ದೆಸೆ ಇರಲ್ಲ

    ಬಿಜೆಪಿ ಅವರಿಂದ ಬರ ಅಧ್ಯಯನ ಪ್ರವಾಸ ವಿಚಾರವಾಗಿ ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದು, ಬಿಜೆಪಿಯವರಿಗೆ ಕ್ಯಾಪ್ಟನ್ ಇಲ್ಲ, ಮೊದಲು ಕ್ಯಾಪ್ಟನ್ ರೆಡಿ ಮಾಡಿಕೊಳ್ಳಲಿ. ಕ್ಯಾಪ್ಟನ್ ಇಲ್ಲದಿರುವ ಬರ ಅಧ್ಯಯನ ಪ್ರವಾಸಕ್ಕೆ ದಿಕ್ಕು ದೆಸೆ ಇರಲ್ಲ ಎಂದು ಕಿಡಿಕಾರಿದ್ದಾರೆ.

  • 08 Nov 2023 08:44 PM (IST)

    Karnataka Breaking News Live: ಡಿ.ಕೆ.ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

    ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರನ್ನು ಸಂಸದ ತೇಜಸ್ವಿ ಸೂರ್ಯ ಭೇಟಿ ಮಾಡಿದ್ದಾರೆ.

  • 08 Nov 2023 07:47 PM (IST)

    Karnataka Breaking News Live: ಪಕ್ಷದಿಂದ ನನ್ನ ಹೊರ ಹಾಕಲು ಪ್ಲಾನ್ ಮಾಡಿದ್ದಾರೆ S.T ಸೋಮಶೇಖರ್ ಗರಂ

  • 08 Nov 2023 07:27 PM (IST)

    Karnataka Breaking News Live: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ

    ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಮಲ್ಲಸಂದ್ರ, ಸೇರಿದಂತೆ ಹಲವು ಏರಿಯಾಗಳಲ್ಲಿ ಭಾರಿ ಮಳೆ ಸುರಿದೆ. ಬಾಗಲಗುಂಟೆ ಆಟದ ಮೈದಾನಕ್ಕೆ ಆಡಲು ಬಂದಿದ್ದ ಮಕ್ಕಳಿಗೆ ನಿರಾಶೆ ಆಗಿದ್ದು, ಆಟದ ಮೈದಾನದ ತುಂಬೆಲ್ಲ ನೀರು ತುಂಬಿದೆ. ಸುರಿಯುತ್ತಿರುವ ಮಳೆಗೆ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ.

  • 08 Nov 2023 06:56 PM (IST)

    Karnataka Breaking News Live: ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ

    ಕೆಇಎ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ಅರ್ಜಿಯನ್ನು ಕಲಬುರಗಿ 5ನೇ ಜೆಎಂಎಫ್‌ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶ ಹೊರಡಿಸಿದೆ. ಬಂಧಿತ ತ್ರಿಮೂರ್ತಿ, ಅಂಬರೀಶ್‌ ಜಾಮೀನು ಅರ್ಜಿ ತಿರಸ್ಕಾರ ಮಾಡಿದ್ದು, ಇಬ್ಬರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

  • 08 Nov 2023 06:37 PM (IST)

    Karnataka Breaking News Live: ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು

    ಚೈತ್ರಾ ಆ್ಯಂಡ್​ ಗ್ಯಾಂಗ್​ನಿಂದ 5 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣದಲ್ಲಿ ಅಭಿನವ ಹಾಲಶ್ರೀ ಮೂರನೇ ಆರೋಪಿಯಾಗಿದ್ದರು.

  • 08 Nov 2023 06:27 PM (IST)

    Karnataka Breaking News Live: ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ

    ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ನಡುವೆಯೂ ಭಕ್ತರು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಹಾಸನಾಂಬೆ ದೇವಿ ದರ್ಶನದ 6ನೇ ದಿನವಾದ ಇಂದು ಭಕ್ತಸಾಗರ ಹರಿದುಬಂದಿದೆ.

  • 08 Nov 2023 05:54 PM (IST)

    Karnataka Breaking News Live: ಬಿಜೆಪಿ ನಾಯಕ ಸದಾನಂದ ಗೌಡ ರಾಜಕೀಯಕ್ಕೆ ಗುಡ್​ ಬೈ

    ಬಿಜೆಪಿಯ ಹಿರಿಯ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ಚುನಾವಣಾ ರಾಜಕೀಯಕ್ಕೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ಹೇಳಿದ್ದಾರೆ.

    ಮಾಜಿ ಸಿಎಂ, ಬಿಜೆಪಿ ನಾಯಕ ಸದಾನಂದ ಗೌಡ ಚುನಾವಣಾ ರಾಜಕೀಯದಿಂದ ನಿವೃತ್ತಿ

  • 08 Nov 2023 05:06 PM (IST)

    Karnataka Breaking News Live: ಜೆಡಿಎಸ್ ಪಾರ್ಟಿ ಈಗ ಭಾರತೀಯ ಜನತಾ ಪಕ್ಷದ ಮಿತ್ರ ಪಕ್ಷ

    ಜೆಡಿಎಸ್ ಪಾರ್ಟಿ ಈಗ ಭಾರತೀಯ ಜನತಾ ಪಕ್ಷದ ಮಿತ್ರ ಪಕ್ಷ. ನಮಗೆ ಸಲಹೆ ನೀಡಲು ಹೆಚ್​.ಡಿ.ಕುಮಾರಸ್ವಾಮಿಗೆ ಅಧಿಕಾರ ಇದೆ. ಜೆಡಿಎಸ್​-ಬಿಜೆಪಿ ಎರಡೂ ಪಕ್ಷಗಳು ಹೊಂದಾಣಿಕೆಯಲ್ಲಿ ಇದ್ದೇವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

  • 08 Nov 2023 04:17 PM (IST)

    Karnataka Breaking News Live: ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತು ಸಚಿವ ಡಾ.ಜಿ.ಪರಮೇಶ್ವರ್ ಸಭೆ

    ಬರ ಪರಿಸ್ಥಿತಿ ಹಾಗೂ ಕಂದಾಯ ವಿಷಯಗಳ ಕುರಿತು ತುಮಕೂರು ‌ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಸಭೆ ಮಾಡಿದ್ದಾರೆ. ಮೂರು ತಾಲೂಕುಗಳ ಸಭೆ ನಡೆಸುತ್ತಿದ್ದಾರೆ.

  • 08 Nov 2023 03:45 PM (IST)

    Karnataka Breaking News Live: ಅಧಿಕಾರಿಗಳಿಗೆ ಸಚಿವೆ ಹೆಬ್ಬಾಳ್ಕರ್​ ಕ್ಲಾಸ್

  • 08 Nov 2023 03:09 PM (IST)

    Karnataka Breaking News Live: ಶಾಸಕ ಎಸ್​​.ಟಿ.ಸೋಮಶೇಖರ್ ಟೀಕಿಸೋದು ನನ್ನ ಉದ್ದೇಶ ಅಲ್ಲ

    ಸೋಮಶೇಖರ್ ಪಕ್ಷದಿಂದ ಹೊರ ಹೋಗಲಿ ಎಂದು ಹೇಳಿಲ್ಲ. ಹಾಗೇ ಹೇಳಲು ನಾನ್ಯಾರು? ಅನೇಕರು ಜಾಮೂನು ತಿಂದಿದ್ದಾರೆ, ವಿಷ ಕುಡಿದವರು ಇದ್ದಾರಾ? ಜಾಮೂನು ತಿಂದು ಮಂತ್ರಿಗಳಾಗಿದ್ದರು. ಮತ್ತೆ ನಮ್ಮ ಸರ್ಕಾರ ಬಂದಿದ್ದರೆ ಅವರು ಈ ಮಾತು ಹೇಳುತ್ತಿದ್ರಾ? ಶಾಸಕ ಎಸ್​​.ಟಿ.ಸೋಮಶೇಖರ್ ಟೀಕಿಸೋದು ನನ್ನ ಉದ್ದೇಶ ಅಲ್ಲ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

  • 08 Nov 2023 02:32 PM (IST)

    Karnataka Breaking News Live: ಯಾವುದೇ ಅಸಮಾಧಾನ ಇಲ್ಲ, ಪಕ್ಷಕ್ಕೆ ಬಂದವರು ಖುಷಿಯಾಗಿದ್ದಾರೆ

    ಯಾವುದೇ ಅಸಮಾಧಾನ ಇಲ್ಲ, ಪಕ್ಷಕ್ಕೆ ಬಂದವರು ಖುಷಿಯಾಗಿದ್ದಾರೆ. ಶಾಸಕ ಎಸ್​​.ಟಿ.ಸೋಮಶೇಖರ್​ಗೆ ಸಮಸ್ಯೆಯಿದ್ದರೆ ಚರ್ಚಿಸಬಹುದು. ಪಕ್ಷವು ಸಾಮಾನ್ಯ ಕಾರ್ಯಕರ್ತನನ್ನೂ ಒಳ್ಳೆಯ ರೀತಿ ನಡೆಸಿಕೊಳ್ಳುತ್ತೆ. ಎಸ್​ಟಿಎಸ್​ ಜತೆ ಬಿಎಸ್​​ವೈ, ಬೊಮ್ಮಾಯಿ ಚರ್ಚಿಸಿ ಸರಿಪಡಿಸುತ್ತಾರೆ. ಎಸ್​​.ಟಿ.ಸೋಮಶೇಖರ್​ಗೆ ಅನ್ಯಾಯವಾಗಿದ್ದರೆ ಸರಿ ಮಾಡುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಟಿವಿ9ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

  • 08 Nov 2023 02:07 PM (IST)

    Karnataka Breaking News Live: 15 ದಿನದೊಳಗೆ ಎಲ್ಲರ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    15 ದಿನದೊಳಗೆ ಎಲ್ಲರ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

  • 08 Nov 2023 01:57 PM (IST)

    Karnataka Breaking News Live: ಮಲ್ಲೇಶ್ವರಂ ಬೆಂಗಳೂರು ಒನ್ ಸೆಂಟರ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ

    ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಗೃಹಲಕ್ಷ್ಮೀ ‌ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಬೆಂಗಳೂರು ಒನ್ ಸೆಂಟರ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ನಡೆಸಿ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯಲ್ಲೇ 14 ಸಾವಿರ ‘ಗೃಹಲಕ್ಷ್ಮೀ’ ಅರ್ಜಿ ಬಾಕಿ ಇದೆ. ಈ ಹಿನ್ನೆಲೆ ಕಲಬುರಗಿ ಸಿಡಿಪಿಒಗೆ ತರಾಟೆ ತೆಗೆದುಕೊಂಡಿದ್ದಾರೆ. ಆದಷ್ಟು ಬೇಗ ಅರ್ಜಿಯನ್ನು ವಿಲೇವಾರಿ ‌ಮಾಡಲು ಏನು ಸಮಸ್ಯೆ? ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ವಾರದೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ CDPO ತಿಳಿಸಿದ್ದಾರೆ.

  • 08 Nov 2023 01:24 PM (IST)

    Karnataka Breaking News Live: ಚೈತ್ರಾ ಕುಂದಾಪುರ ಕೇಸ್; 9 ಆರೋಪಿಗಳ ವಿರುದ್ಧ ಸಿಸಿಬಿಯಿಂದ ಚಾರ್ಜ್​​ಶೀಟ್ ಸಲ್ಲಿಕೆ

    ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್​​ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದೆ.

  • 08 Nov 2023 01:09 PM (IST)

    Karnataka Breaking News Live: ತುಮಕೂರಿನಲ್ಲಿ ಸರ್ಕಾರಿ ನೌಕರ ಅನುಮಾನಾಸ್ಪದವಾಗಿ ಸಾವು

    ತುಮಕೂರಿನ ಉಪ್ಪಾರಹಳ್ಳಿಯ ಸರ್ವೋದಯ ಶಾಲೆ ಬಳಿ ಸರ್ಕಾರಿ ನೌಕರ ಎಫ್​ಡಿಎ ಹರೀಶ್​(45) ರಸ್ತೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹರೀಶ್​​ ರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾರೆ. ಮೇಲ್ನೋಟಕ್ಕೆ ಕಂಠಪೂರ್ತಿ ಕುಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

  • 08 Nov 2023 12:39 PM (IST)

    Karnataka Breaking News Live: ಜೆಡಿಎಸ್​ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ -ಹೆಚ್​ಡಿಕೆ

    ಜೆಡಿಎಸ್​ನ ಯಾವುದೇ ಶಾಸಕರು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಹಾಸನದಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ H​.D.ಕುಮಾರಸ್ವಾಮಿ ಹೇಳಿದರು. ನಿನ್ನೆ ಸಭೆಯಲ್ಲಿ 19 ಶಾಸಕರ ಪೈಕಿ 18 ಶಾಸಕರು ಭಾಗಿಯಾಗಿದ್ದರು. ಶಾಸಕ ಶರಣಗೌಡ ಕಂದಕೂರ್​ ಭಾಗಿಯಾಗಿರಲಿಲ್ಲ. ಕಂದಕೂರ್​ ನಮ್ಮ ಮನೆಯ ಮಗ, ಅವರಲ್ಲಿ ಸ್ವಲ್ಪ ಗೊಂದಲ ಇದೆ. ಅವರನ್ನು ಕರೆದು ಮಾತನಾಡ್ತೇನೆ. ಶಾಸಕರು ಪಕ್ಷ ಬಿಟ್ಟು ಹೋಗ್ತಾರೆಂದು ಗೊಂದಲ ಸೃಷ್ಟಿ ಮಾಡ್ತಿದ್ದಾರೆ. ನಮ್ಮ ಶಾಸಕರ ಮೇಲೆ ಯಾವುದೇ ಅನುಮಾನ ಇಲ್ಲ. ಕಾಂಗ್ರೆಸ್​ ಆಮಿಷಕ್ಕೆ ಒಳಗಾಗಿ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ಎಂದರು.

  • 08 Nov 2023 12:31 PM (IST)

    Karnataka Breaking News Live: ಚಲಿಸ್ತಿದ್ದ ಫ್ಲೈಟ್‌ನಲ್ಲಿ ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ

    ಚಲಿಸ್ತಿದ್ದ ಫ್ಲೈಟ್‌ನಲ್ಲಿ ಸಹಪ್ರಯಾಣಿಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ. ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಲುಫ್ತಾನ್ಸ್‌ ಏರ್‌ಲೈನ್ಸ್‌ನ LH 0754 ವಿಮಾನದಲ್ಲಿ ಪಕ್ಕದ ಸೀಟ್‌ನಲ್ಲಿದ್ದ ವ್ಯಕ್ತಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಅಸಭ್ಯ ವರ್ತನೆ ತೋರಿದ್ದಾನೆ. ಸೀಟ್‌ನಲ್ಲಿ ನಿದ್ದೆಗೆ ಜಾರಿದ್ದ ತಿರುಪತಿ ಮೂಲದ ಮಹಿಳೆಗೆ ಸಹ ಪ್ರಯಾಣಿಕ ರಂಗನಾಥ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್‌ಪೋರ್ಟ್‌ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

  • 08 Nov 2023 12:28 PM (IST)

    Karnataka Breaking News Live: ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ -ಡಿಕೆಶಿ

    ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ಮಾರ್ಕೆಟ್​ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ನವದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ​ಬಿಜೆಪಿಯವರು ನಮ್ಮ ಶಾಸಕರನ್ನೂ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ ಎಂದ ಕಿಡಿಕಾರಿದರು.

  • 08 Nov 2023 12:24 PM (IST)

    Karnataka Breaking News Live: ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನ ಪಡೆಯುತ್ತಿರುವ ಗಣ್ಯರು

    ಹಲವು ಗಣ್ಯರು ದಾರದಹಳ್ಳಿ ಗ್ರಾಮದ ನಿವಾಸದಲ್ಲಿ ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

  • 08 Nov 2023 11:38 AM (IST)

    Karnataka Breaking News Live: ಮೆಗ್ಗಾನ್ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಸಭೆ

    ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಬಡವರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಜಿಲ್ಲಾಸ್ಪತ್ರೆಯಲ್ಲಿ ಸೌಲಭ್ಯಗಳ ಕೊರತೆ ಇದೆ ಎಂದು ಆರೋಪ ಹಿನ್ನೆಲೆ ಸಭೆ ನಡೆಸಿ ಬಡ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

  • 08 Nov 2023 11:21 AM (IST)

    Karnataka Breaking News Live: ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು -ಡಿ.ಕೆ.ಶಿವಕುಮಾರ್

    ಮೇಕೆದಾಟು ವಿಚಾರವನ್ನು CWMA ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ‘ಸುಪ್ರೀಂ’ ಆದೇಶದಂತೆ ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲು ಎಂದು ನವದೆಹಲಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ನೀರು ಮೀಸಲಿಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ‘ಸುಪ್ರೀಂ’ ಅನುಮತಿ ಪಡೆದು ಪ್ರತಿವರ್ಷ 24 ಟಿಎಂಸಿ ನೀರು ಮೀಸಲಿಟ್ಟು ಆದೇಶ ಹೊರಡಿಸಿದ್ದೇವೆ. ಮುಂದಿನ ವಾರ ಮೇಕೆದಾಟು ಯೋಜನೆ ವಿಚಾರ ಚರ್ಚೆಗೆ ಬರಲಿದೆ ಎಂದರು.

  • 08 Nov 2023 10:20 AM (IST)

    Karnataka Breaking News Live: ಬೆಂಗಳೂರಿನಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ಸಿಸಿಬಿ ದಾಳಿ

    ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಸಿಸಿಬಿ ದಾಳಿ ನಡೆಸಿದೆ. ರೌಡಿಶೀಟರ್​ಗಳ ಮನೆಯಲ್ಲಿದ್ದ ಲಾಂಗ್, ಮಚ್ಚು, ದಾಖಲೆ ವಶಕ್ಕೆ ಪಡೆಯಲಾಗಿದೆ. ವಾರಂಟ್​ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಬೆಂಗಳೂರಿನಲ್ಲಿ 20ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ರೇಡ್ ಮಾಡಲಾಗಿದೆ.

  • 08 Nov 2023 09:53 AM (IST)

    Karnataka Breaking News Live: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ

    ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ ಮಾಡಲಾಗಿದೆ. ಸಿ.ಎಸ್.ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಹಿನ್ನೆಲೆ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

  • 08 Nov 2023 09:20 AM (IST)

    Karnataka Breaking News Live: ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ

    ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ. 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ 15 ಅಧಿಕಾರಿಗಳ ತಂಡದಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

  • 08 Nov 2023 09:14 AM (IST)

    Karnataka Breaking News Live: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

    ಚಿಕ್ಕಮಗಳೂರು ತಾಲೂಕಿನ ಹೆಡದಾಳು ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಮೀನಾ(45) ಮೃತಪಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಮೀನಾ ಮೇಲೆ ಕಾಡಾನೆ ದಾಳಿ ಮಾಡಿದ್ದು ಮೀನಾ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • 08 Nov 2023 08:58 AM (IST)

    Karnataka Breaking News Live: ವಿಸಿ ನಾಲೆಗೆ ಉರುಳಿ ಐವರು ಜಲಸಮಾಧಿ, ಸ್ಥಳಕ್ಕೆ ಮಾಜಿ ಸಚಿವ ಭೇಟಿ

    ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬನಘಟ್ಟ ಬಳಿ ವಿಸಿ ನಾಲೆಗೆ ಉರುಳಿ ಐವರು ಜಲಸಮಾಧಿ ಹಿನ್ನೆಲೆ ಘಟನಾ ಸ್ಥಳಕ್ಕೆ ಮಾಜಿ ಸಚಿವ ಸಿ‌ಎಸ್ ಪುಟ್ಟರಾಜು ಭೇಟಿ ನೀಡಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

  • 08 Nov 2023 08:43 AM (IST)

    Karnataka Breaking News Live: ಜೇನುಮತ್ತಿಮರ ಪ್ರದೇಶಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ

    ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ದಾಳಿ ಹೆಚ್ಚಾಗಿದೆ. ಹಸು, ದನಗಾಹಿ ವೀರಭದ್ರ ಬೋವಿಯ ಮೇಲೆ ಹುಲಿ ದಾಳಿ ಹಿನ್ನೆಲೆ ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೇಟಿ ಮಾಡಿದ್ದಾರೆ. ಜೇನುಮತ್ತಿಮರ ಪ್ರದೇಶಕ್ಕೆ ಭೇಟಿ ನೀಡಿದರು. ಘಟನೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದರು. ಈ ವೇಳೆ ಅರಣ್ಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದು ಹುಲಿ ಕಾಣಿಸಿಕೊಂಡಿದ್ದರ ಬಗ್ಗೆ ಜನ ಮಾಹಿತಿ ನೀಡಿದ್ರೂ ಯಾಕೆ ಕ್ರಮವಿಲ್ಲ ಎಂದು ಗುಡುಗಿದ್ದಾರೆ.

  • 08 Nov 2023 08:06 AM (IST)

    Karnataka Breaking News Live: ಇಂದು ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

    ಇಂದು ಚಿತ್ರದುರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಿ ತರಳಬಾಳು ಮಠ ಆಯೋಜಿಸಿರುವ ನಾಟಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಪಂಡಿತಾರಾಧ್ಯ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಸಂಜೆ 6ಕ್ಕೆ ನಾಟಕೋತ್ಸವ ಸಮಾರೋಪ ಕಾರ್ಯಕ್ರಮ‌ ನಡೆಯಲಿದೆ.

  • 08 Nov 2023 08:04 AM (IST)

    Karnataka Breaking News Live: ಇಂದು ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅಂತ್ಯಕ್ರಿಯೆ

    ಇಂದು ಮಧ್ಯಾಹ್ನ ಪೂರ್ಣಚಂದ್ರ ಎಸ್ಟೇಟ್​ನಲ್ಲಿ ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ಅಂತ್ಯಕ್ರಿಯೆ ನಡೆಯಲಿದೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿ ಬಳಿಯ ಪೂರ್ಣಚಂದ್ರ  ಎಸ್ಟೇಟ್​ನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆದಿದೆ. ವಿವಿಧ ಪಕ್ಷಗಳ ನಾಯಕರು ಅಂತಿಮ ದರ್ಶನ ಮಾಡಲಿದ್ದಾರೆ.

  • 08 Nov 2023 08:03 AM (IST)

    Karnataka Breaking News Live: ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ

    ರಾಜ್ಯಾದ್ಯಂತ 4 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ‌ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೂಡ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.  ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಸೇರಿ ರಾಜ್ಯದ 6 ಜಿಲ್ಲೆಗಳಿಗೆ ಎರಡು ದಿನ ಯಲ್ಲೋ ಅಲರ್ಟ್​ ಘೋಷಿಸಲಾಗಿದೆ.

  • Published On - Nov 08,2023 8:02 AM

    Follow us
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್