Karnataka Breaking Kannada News Highlights: ಟ್ವೀಟ್​ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ವಿವೇಕ ಬಿರಾದಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 13, 2023 | 10:56 PM

Breaking News Today highlights: ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಹೆಚ್ಚಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸರ್ಕಾರದ ವಿರುದ್ಧ ರೈತರು ಹಾಗೂ ವಿವಿಧ ಸಂಘಟನೆ ಪ್ರತಿಭಟನೆ ನಡೆಸುತ್ತಿವೆ. ಇನ್ನು ರಾಜ್ಯದಲ್ಲಿ ವಾಡಿಕೆ ಪ್ರಮಾಣದಲ್ಲಿ ಮಳೆಯಾಗದೆ ಬರಗಾಲ ಆವರಿಸಿದೆ. ಸಚಿವ ಡಿ.ಸುಧಾಕರ ವಿರುದ್ಧ ಭೂಕಬಳಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ರಾಜ್ಯದ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​ಗಾಗಿ ಟಿವಿ9 ಡಿಜಿಟಲ್ ಲೈವ್ ವೀಕ್ಷಿಸಿ.

Karnataka Breaking Kannada News Highlights: ಟ್ವೀಟ್​ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ ಖರ್ಗೆ

ಕರ್ನಾಟಕದಲ್ಲಿ ಕಾವೇರಿ ಕಿಚ್ಚು ಹೆಚ್ಚಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿವಸ 5000 ಕ್ಯೂಸೆಕ್ ನೀರು ಬಿಡಬೇಕೆಂದು ಮಂಗಳವಾರ ರಾಜ್ಯಕ್ಕೆ ಆದೇಶಿಸಿದೆ. ಇದರಿಂದ ಕಾವೇರಿ ತೀರದ ರೈತರಿಗೆ ಬರಸಿಡಲು ಬಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶಗೊಂಡಿದ್ದು, ರಸ್ತೆಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮತ್ತೊಂದಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಕೃಪೆ ಇಲ್ಲದೇ ಭೂಮಿ ಬರಡಾಗುತ್ತಿದೆ. ಬರಗಾಲ ಆವರಿಸಿದ್ದು, ಪ್ರತಿಪಕ್ಷಗಳು ಬರಗಾಲ ಪೀಡಿತ ತಾಲೂಕುಗಳ ಹೆಸರು ಘೋಷಣೆ ಮಾಡುವಂತೆ ಪಟ್ಟು ಹಿಡಿದಿವೆ. ಇನ್ನ ಸಚಿವ ಡಿ. ಸುಧಾಕರ್​ ವಿರುದ್ಧ ಭೂಕಬಳಿಕೆ, ಜಾತಿ ನಿಂದನೆ ಆರೋಪದ ಅಡಿ ಪ್ರಕರಣ ದಾಖಲಾಗಿದ್ದು, ಕೂಡಲೆ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಪ್ರತಿಪಕ್ಷಗಳು ಆಗ್ರಹಿಸಿವೆ. ಇದರೊಂದಿಗೆ ಇಂದಿ ಲೇಟೆಸ್ಟ್​ ಅಪ್ಡೇಟ್ಸ್​ ಇಲ್ಲಿದೆ… ​

LIVE NEWS & UPDATES

The liveblog has ended.
  • 13 Sep 2023 09:37 PM (IST)

    Karnataka News Live: ಜೆಡಿಎಸ್‌, ಬಿಜೆಪಿ ಮೈತ್ರಿ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಆಕ್ರೋಶ

    ಹಾಸನ: ಜೆಡಿಎಸ್‌, ಬಿಜೆಪಿ ಮೈತ್ರಿ ಬಗ್ಗೆ ಮಾಜಿ ಶಾಸಕ ಪ್ರೀತಂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವಪಕ್ಷದ ನಾಯಕರ ವಿರುದ್ಧವೇ ಹರಿಹಾಯ್ದ ಮಾಜಿ ಶಾಸಕ ಪ್ರೀತಂಗೌಡ ಅವರು ‘2028ರ ಚುನಾವಣೆಯಲ್ಲಿ ಬಿಜೆಪಿ 130 ಸ್ಥಾನ ಗೆಲ್ಲಿಸುವಂತಹ ತಂಡ ಇದೆ. ಜೆಡಿಎಸ್‌ ಜೊತೆ ಹೋದರೆ ಸರ್ಕಾರ ಮಾಡ್ತೀವಿ ಅಂತಾ ಮನಸ್ಥಿತಿ ಇದ್ದವರು, ಅದರಿಂದ ಹೊರಬರಲಿ ಎಂದಿದ್ದಾರೆ.

  • 13 Sep 2023 08:43 PM (IST)

    Karnataka News Live: ಬಿಜೆಪಿಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಬಿಜೆಪಿ ನಿಜವಾಗಿಯೂ ಚಿಂತಿಸಬೇಕಾಗಿರುವುದು ಇವುಗಳ ಬಗ್ಗೆ ಎಂದು ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ. 1) ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನಿಲ್ಲ. 2)ವಿಧಾನ ಪರಿಷತ್’ನಲ್ಲಿ ಪ್ರತಿಪಕ್ಷದ ನಾಯಕನಿಲ್ಲ. 3)ಕಳಪೆ ಪ್ರದರ್ಶನ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷನ ಬದಲಾವಣೆ. 4)ಪ್ರತಿಪಕ್ಷವಾಗಿ ಬಿಜೆಪಿಯ ಸ್ಥಾನ ಕಸಿದುಕೊಳ್ಳುತ್ತಿರುವ ಜೆಡಿಎಸ್. 5) ದೊಡ್ಡ ಸಂಖ್ಯೆಯ ಬಿಜೆಪಿ ನಾಯಕರ ಮತ್ತು ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ ಹೀಗೆ ಇನ್ನಿತರ ಬಿಜೆಪಿಯ ಲೋಪವನ್ನು ಬರೆದು ಟಾಂಗ್​ ನೀಡಿದ್ದಾರೆ.

  • 13 Sep 2023 08:11 PM (IST)

    Karnataka News Live: ಮೈಸೂರು ನಗರದಲ್ಲಿ ಮತ್ತೆ ಚಿರತೆ ಆತಂಕ

    ಮೈಸೂರು: ನಗರದಲ್ಲಿ ಮತ್ತೆ ಚಿರತೆ ಆತಂಕ ಶುರುವಾಗಿದೆ. ಮೈಸೂರಿನ ಪೊಲೀಸ್ ಬಡಾವಣೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು, ಬಡಾವಣೆಯ ತಿಪ್ಪಯ್ಯನಕೆರೆ ಹಾಗೂ ಪಕ್ಕದ ಪಾರ್ಕಿನಲ್ಲಿ ಚಿರತೆಯ ಹೆಜ್ಜೆ ಗುರುತು ಆಧಾರಿಸಿ ಬೋನು ಇರಿಸಿದ್ದಾರೆ.

  • 13 Sep 2023 07:24 PM (IST)

    Karnataka News Live: ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ

    ನವದೆಹಲಿ: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗಿಯಾಗಲು ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆ ಯಶಸ್ಸು ಹಿನ್ನೆಲೆ ಪ್ರಧಾನಿಗೆ ಬಿಜೆಪಿ ನಾಯಕರು, ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಬಿಜೆಪಿಯ ಹಲವು ನಾಯಕರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದಾರೆ.

  • 13 Sep 2023 07:06 PM (IST)

    Karnataka News Live: ಬೆಂಗಳೂರಿನ ಹಲವೆಡೆ ಭರ್ಜರಿ ಮಳೆ

    ಬೆಂಗಳೂರು: ನಗರದಲ್ಲಿ ವರುಣನ ಅಬ್ಬರ ಸುರುವಾಗಿದ್ದು, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ ಮಲ್ಲಸಂದ್ರ, ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಮಳೆ ಸುರಿಯುತ್ತಿದ್ದು. ಮಳೆಯಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟವಾಗಿದೆ.

  • 13 Sep 2023 06:32 PM (IST)

    Karnataka News Live: ದೇವನಹಳ್ಳಿ ಆರ್​ಟಿಓ ಕಛೇರಿ ಮೇಲೆ ಲೋಕಾಯುಕ್ತ ದಾಳಿ

    ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ಆರ್​ಟಿಓ ಕಛೇರಿ ಮೇಲೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಎಸ್ಪಿ ಪವನ್ ನಜೀರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಸತತ 2 ಗಂಟೆಗೂ ಅಧಿಕ ಅವಧಿಯಿಂದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಆರ್​ಟಿಓ ಶ್ರೀನಿವಾಸ್ ಹಾಗೂ ಅಧಿಕಾರಿಗಳನ್ನು ಕೂರಿಸಿಕೊಂಡು ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ.

  • 13 Sep 2023 05:53 PM (IST)

    Karnataka News Live: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ; ರಾಜ್ಯದ ಎಲ್ಲಾ ಸಂಸದರು ನರಸತ್ತವರು-ನಾರಾಯಣ ಗೌಡ

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ‘ ರಾಜ್ಯದ ಎಲ್ಲಾ ಸಂಸದರು ನರಸತ್ತವರು, ಸಂಸದರ ಮನೆಗೆ ಕರವೇ ಕಾರ್ಯಕರ್ತರನ್ನು ನುಗ್ಗಿಸುತ್ತೇವೆ ಎಂದಿದ್ದಾರೆ.

  • 13 Sep 2023 05:16 PM (IST)

    Karnataka News Live: ಬಿಜೆಪಿ, ಜೆಡಿಎಸ್​​ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ; ಹೆಚ್​ಡಿ ಕುಮಾರಸ್ವಾಮಿ

    ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರ ‘ ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ, ಸದ್ಯದಲ್ಲೇ ದೆಹಲಿಗೆ ಹೋಗುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಮಾತನಾಡಿದ ಅವರು ‘ ಸಿದ್ದರಾಮಯ್ಯ ನನ್ನ ಹೆಣವೂ ಬಿಜೆಪಿ ಕಚೇರಿಗೆ ಹೋಗಲ್ಲ ಅಂತಾರೆ, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ ಎಂದರು.

  • 13 Sep 2023 04:13 PM (IST)

    Karnataka News Live: ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ; ಬಿಎಸ್​ವೈ

    ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರ ‘ ಮೈತ್ರಿ ಬಗ್ಗೆ ಮಾತುಕತೆ ಆಗದೆ ಪ್ರತಿಕ್ರಿಯೆ ನೀಡಲು ಇಷ್ಟ ಪಡಲ್ಲ ಎಂದು ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಹೇಳಿದರು. ‘ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರು ಎಂದರು.

  • 13 Sep 2023 03:57 PM (IST)

    Karnataka News Live: ಕೇಂದ್ರೀಯ ಚುನಾವಣಾ ಸಮಿತಿ ಸಭೆ; ಯಾವ ವಿಷಯಗಳನ್ನು ಚರ್ಚೆ ಮಾಡ್ತಾರೆ ಗೊತ್ತಿಲ್ಲ; ಬಿಎಸ್​ವೈ

    ನವದೆಹಲಿ: ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ದೆಹಲಿಗೆ ಬಂದಿದ್ದೇನೆ ಎಂದು ನವದೆಹಲಿಯಲ್ಲಿ ಮಾಜಿ ಸಿಎಂ ಬಿ.ಎಸ್​​.ಯಡಿಯೂರಪ್ಪ ಹೇಳಿದರು. ‘ಯಾವ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತಾರೆ ಅಂತಾ ಗೊತ್ತಿಲ್ಲ. ಯಾವ ವಿಷಯ ಚರ್ಚಿಸಬೇಕೆಂಬುದು ಮೋದಿ, ಶಾಗೆ ಬಿಟ್ಟದ್ದು. ಇವತ್ತಿನ ಸಭೆಯಲ್ಲಿ ಎಲ್ಲ ನಾಯಕರನ್ನು ಭೇಟಿಯಾಗ್ತೇನೆ. ನಾಳೆ ಬೆಂಗಳೂರಿಗೆ ವಾಪಸಾಗುತ್ತೇನೆ ಎಂದರು.

  • 13 Sep 2023 03:45 PM (IST)

    Karnataka News Live: ಕರ್ನಾಟಕದಲ್ಲಿ ಕಣ್ಣೀರಿನ ಪರಿಸ್ಥಿತಿ ನಿರ್ಮಾಣ, ನಮ್ಮ ರೈತರಿಗೆ ನೀರಿಲ್ಲ; ವಾಟಾಳ್​ ನಾಗರಾಜ್​

    ಬೆಂಗಳೂರು: ಕರ್ನಾಟಕದಲ್ಲಿ ಕಣ್ಣೀರಿನ ಪರಿಸ್ಥಿತಿ ನಿರ್ಮಾಣ ಆಗಿದ್ದು, ನಮ್ಮ ರೈತರಿಗೆ ನೀರಿಲ್ಲ ಎಂದು ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬೆಂಗಳೂರಿಗೆ ಕುಡಿಯಲು ನೀರಿಲ್ಲ, ದೆಹಲಿಯಲ್ಲಿರುವ ನಿರ್ವಹಣಾ ಸಮಿತಿ ಪ್ರತಿದಿನ ಐದು ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಹೇಳಿಬಿಟ್ಟರೆ ಆಗೋದಿಲ್ಲ. ಮಂಡಳಿ ಸದಸ್ಯರು ರಾಜ್ಯದ ಯಾವುದೇ ಜಲಾಶಯಗಳನ್ನು ನೋಡಿಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಜನ ಏನು ತೊಳೆಯಲು ನೀರು ಇರೋದಿಲ್ಲ ಎಂದಿದ್ದಾರೆ.

  • 13 Sep 2023 03:40 PM (IST)

    Karnataka News Live: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ; ನವದೆಹಲಿಗೆ ಆಗಮಿಸಿದ ಬಿಎಸ್​ವೈ

    ನವದೆಹಲಿ: ಇಂದು ಸಂಜೆ 7 ಗಂಟೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು, ಪುತ್ರ ಬಿ.ವೈ.ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ.

  • 13 Sep 2023 02:34 PM (IST)

    Karnataka News Live: ನಿಫಾ ವೈರಸ್; ಅಲರ್ಟ್​ ಘೋಷಿಸಿದ ಆರೋಗ್ಯ ಇಲಾಖೆ

    ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್​ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಶಂಕಿತ ಪ್ರಕರಣದ ಕುರಿತು ಕಣ್ಗಾವಲು ಕಚೇರಿಗೆ ಮಾಹಿತಿ‌ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್​​ಗಳನ್ನು ತೆರೆಯಬೇಕು ಎಂದು ಸುತ್ತೋಲೆ ಹೊರಡಿಸಿದೆ.

  • 13 Sep 2023 01:32 PM (IST)

    Karnataka News Live: ನೋಟಿಸ್​ಗೆ ಏನು ಉತ್ತರ ಕೊಡಬೇಕೆಂಬುದು ಬಿಕೆ ಹರಿಪ್ರಸಾದ್​ಗೆ ಬಿಟ್ಟ ವಿಚಾರ: ಸತೀಶ್​ ಜಾರಕಿಹೊಳಿ

    ಬೆಂಗಳೂರು: ನೋಟಿಸ್​ಗೆ ಏನು ಉತ್ತರ ಕೊಡಬೇಕೆಂಬುದು ಅವರಿಗೆ ಬಿಟ್ಟ ವಿಚಾರ. ಇದು ಎಐಸಿಸಿ ಹಾಗೂ ಬಿಕೆ ಹರಿಪ್ರಸಾದ್ ಅವರಿಗೆ ಸಂಬಂಧಿಸಿದ್ದು. ಇದಕ್ಕೆ ಉತ್ತರಿಸಲು ನಾನು ಸಮರ್ಥವಲ್ಲ. ಪ್ರಜಾಪ್ರಭುತ್ವದ ಅಡಿಯಲ್ಲಿ ಬಿ.ಕೆ.ಹರಿಪ್ರಸಾದ್​​ ಮಾತನಾಡಿದ್ದಾರೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

  • 13 Sep 2023 12:39 PM (IST)

    Karnataka News Live: ನೀರು ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ

    ಮಂಡ್ಯ: ಕಾವೇರಿ ನೀರನ್ನು ಪಡೆಯುವಲ್ಲಿ ಕಾಂಗ್ರೆಸ್​​ ಸರ್ಕಾರ ಮೈಮರೆತಿದೆ. ಸರ್ಕಾರಕ್ಕೆ ಕುಡಿಯುವ ನೀರು ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಡಿಎಂಕೆ ಜೊತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಕೈಜೋಡಿಸಿದೆ. ಕೋರ್ಟ್​ಗೆ ನೀರಿನ ಪರಿಸ್ಥಿತಿ ತಿಳಿಸಲು ಕಾಂಗ್ರೆಸ್​​ಗೆ ಸಾಧ್ಯವಾಗಿಲ್ಲ. ನೀರು ಬಿಡುವ ಮುನ್ನ ಯಾಕೆ ಸರ್ವಪಕ್ಷದ ಸಭೆಯನ್ನು ಕರೆದಿಲ್ಲ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಕಾವೇರಿ ವಿಚಾರವಾಗಿ ದುರಂಕಾರದ ಮಾತು ಆಡಿದ್ದಾರೆ. ನೀರು ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್​. ಅಶ್ವತ್ಥ್ ನಾರಾಯಣ ಹೇಳಿದರು.

  • 13 Sep 2023 12:06 PM (IST)

    Karnataka News Live: ಸರ್ಕಾರಕ್ಕೆ ರಾಜ್ಯದ ಜನರ ಹಿತ ಕಾಪಾಡುವ ತಾಕತ್ತು, ಧಮ್ ಇಲ್ಲ

    ಬೆಂಗಳೂರು: ಇವರು ರಾಮಾಯಣ ಅನ್ವೇಷಣೆ ಮಾಡಿದವರು, ಪ್ರಶಸ್ತಿ ಸಹ ಸಿಕ್ಕಿದೆ. ಟ್ರಿಬ್ಯುನಲ್​ನಿಂದ ಹೇಗೆ ಮಾರಕ ಆಯಿತು ಅಂತ ಅವರಿಗೆ ಗೊತ್ತಿದೆ. ಕಾವೇರಿ ಟ್ರಿಬ್ಯುನಲ್ ರಚನೆಗೆ ಈ ಮಹಾನುಭಾವನ ಕೊಡುಗೆ ಏನು ಎಲ್ಲಾ ಪ್ರಾಜೆಕ್ಟ್‌ ಮಾಡಿದ್ದು ನಾನೇ ಅಂತ ವೀರಪ್ಪ ಮೊಯ್ಲಿ ಹೇಳಿದ್ದಾರೆ. ನೀರು ಬಿಡಲ್ಲ ಅಂತ ಏಕೆ ಸುಪ್ರೀಂಕೋರ್ಟ್​ಗೆ ಮೊದಲೇ ಹೇಳಿಲ್ಲ. ರಾಜ್ಯ ಸರ್ಕಾರವು ಈ ವ್ಯಕ್ತಿಯನ್ನು ಕರೆದು ಸಲಹೆ ಪಡೆದುಕೊಳ್ಳಲಿ. ಕುವೆಂಪುಗಿಂತ ಹೆಚ್ಚಾಗಿ ಅನ್ವೇಷಣೆ ಮಾಡಿದವರು ವೀರಪ್ಪ ಮೊಯ್ಲಿ. ಇಂತಹವರ ಮಧ್ಯೆ ನಾವೇನು ಸಲಹೆ ಕೊಡಲಿ. ಸರ್ಕಾರಕ್ಕೆ ರಾಜ್ಯದ ಜನರ ಹಿತ ಕಾಪಾಡುವ ತಾಕತ್ತು, ಧಮ್ ಇಲ್ಲ. ವೀರಪ್ಪ ಮೊಯ್ಲಿ ಸಲಹೆ ಪಡೆದು ಉದ್ಧಾರ ಮಾಡಿ ನೋಡೋಣ ಎಂದು ಮಣ್ಣಿನ ಮಕ್ಕಳಿಂದ ಕಾವೇರಿ ನೀರು ದ್ರೋಹ ಆಗಿದೆ ಎಂಬ ವೀರಪ್ಪ ಮೊಯ್ಲಿ ಹೇಳಿಕೆಗೆ  ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

  • 13 Sep 2023 11:45 AM (IST)

    Karnataka News Live: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಅವಕಾಶ ಕೊಡುತ್ತಿಲ್ಲ

    ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ್ ಪ್ರತಿಷ್ಠಾಪನೆಗೆ ನಿರ್ಧರಿಸಿದ್ದೇವೆ. ಗಣೇಶ ಮೂರ್ತಿ ಕೂರಿಸಲು ಕಳೆದ ಬಾರಿ ‘ಸುಪ್ರೀಂ ಕೋರ್ಟ್​​ ಅವಕಾಶ ನೀಡಿದೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಅವಕಾಶ ಕೊಡುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತಿಲ್ಲ. ಸಿದ್ದರಾಮಯ್ಯನವರು ಜಗತ್ತಿಗೆ ಬೇಡವಾದ ಟಿಪ್ಪು ಜಯಂತಿ ಮಾಡಿದ್ದಾರೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮನವಿ ಮಾಡಿದರೇ ಅವಕಾಶ ಕೊಡುತ್ತಿಲ್ಲ. ನಾವು ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ಒಂದು ತಿಂಗಳ ಹಿಂದೆಯೇ ಸರ್ಕಾರಕ್ಕೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈದ್ಗಾ ಮೈದಾನ ಪಾಲಿಕೆ ಜಾಗ, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಬರಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಹೇಳಿದರು.

  • 13 Sep 2023 11:38 AM (IST)

    Karnataka News Live: ಉರುಳು ಸೇವೆ ಮಾಡುವ ಮೂಲಕ ಮಹಿಳೆಯರ ಆಕ್ರೋಶ

    ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಹಿಳೆಯರು ಉರುಳು ಸೇವೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.  420 ಡಿಕೆ ಶಿವಕುಮಾರ್​, ಸಿದ್ದರಾಮಯ್ಯ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರುಗಳ ಕೆಳಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.

  • 13 Sep 2023 10:43 AM (IST)

    Karnataka News Live: ನವದೆಹಲಿಗೆ ತೆರಳಿದ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ

    ಬೆಂಗಳೂರು: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಇಂದು ದೆಹಲಿಗೆ ತೆರಳುತ್ತಿದ್ದಾರೆ.

  • 13 Sep 2023 10:08 AM (IST)

    Karnataka News Live: ಬಿಜೆಪಿಯಿಂದ ಕಾವೇರಿ ರಕ್ಷಣಾ ಯಾತ್ರೆ

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ರಕ್ಷಣಾ ಯಾತ್ರೆಗೆ ವಿಪಕ್ಷ ಬಿಜೆಪಿ ಮುಂದಾಗಿದೆ. ಯಾತ್ರೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ ನಡೆಯಲಿರುವ ಯಾತ್ರೆ ಬಿಜೆಪಿ ನಾಯಕರು ಮೂರು ತಂಡಗಳಲ್ಲಿ ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ರಾಮನಗರ ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಕಾವೇರಿ ಹೋರಾಟ ನಡೆಯಲಿದೆ.  ಯಾತ್ರೆ ಕುರಿತು ಸೆಪ್ಟೆಂಬರ್ 15 ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.

  • 13 Sep 2023 09:45 AM (IST)

    Karnataka News Live: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು; ಹೆಚ್​ಡಿ ಕುಮಾರಸ್ವಾಮಿ

    ಬೆಂಗಳೂರು ಸೆ.13: ಮತ್ತೆ 15 ದಿನ ನೀರು ಹರಿಸುವಂತೆ ಸರ್ಕಾರಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ಕೊಟ್ಟಿರುವ ನಿರ್ದೇಶನ ಆಘಾತಕಾರಿಯಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು. ಕಷ್ಟಸೂತ್ರವೇ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ ಎಂದು ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

  • 13 Sep 2023 09:26 AM (IST)

    Karnataka News Live: ಬೆಂಗಳೂರಲ್ಲಿ ಸೆ.14 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

    ಬೆಂಗಳೂರು: ಸೆ.14 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ, ಬೈಲದನಹಳ್ಳಿ ರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ , ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನ ಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ, ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಅಡ್ಡರಸ್ತೆ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ. & 9ನೇ ಮುಖ್ಯ, ಹಂಪಿ ನಗರ, ಆರ್‌ಪಿಸಿ ಲೇಔಟ್‌, ನೇತಾಜಿ L/o ಮತ್ತು ಅತ್ತಿಗುಪ್ಪೆ ಪವರ್​ ಕಟ್​ ಆಗಲಿದೆ.

  • 13 Sep 2023 09:09 AM (IST)

    Karnataka News Live: ಇಂದು ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ

    ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂಧನ ಇಲಾಖೆಯ ಕೆಲವು ಕಾಮಗಾರಿ ಹಿನ್ನೆಲೆ ಸೆಪ್ಟೆಂಬರ್ 13, ಬುಧವಾರ ಈ ಪ್ರದೇಶಗಳಲ್ಲಿ ಪವರ್​ ಕಟ್​ ಆಗಲಿದೆ. ಬಾತಿ ಇಂಡಸ್ಟ್ರೀಸ್, ಗುಡ್ಡದ ಕ್ಯಾಂಪ್, ಚರ್ಚ್ ಕ್ಯಾಂಪ್, ಹಳೇ ಬಾತಿ, ದೊಡ್ಡಬಾತಿ ಗ್ರಾಮ ಮಿತಿ, ಹಳೇ ಚಿಕ್ಕನಹಳ್ಳಿ, ಹೊಸ ಚಿಕ್ಕನಹಳ್ಳಿ, ಒಬ್ಬಾಜಿಹಳ್ಳಿ, ಹೊಸ ಕಡಲೇಬಾಳು, ಹಳೇ ಕಡಲೇಬಾಳು, ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ವೆಂಕಟೇಶ, ಗೊಲ್ಲರಹಳ್ಳಿ, ಜಿ. ಪಿಲಾಲಿ, ಸೂರಪ್ಪನಹಟ್ಟಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್ ಎಚ್ ಪಾಳ್ಯ, ಬೋರಸಂದ್ರ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದೊಡ್ಡಸೀಬೆಹಳ್ಳಿ, ಸೀಬಿ ಅಗ್ರಹಾರ, ಡಿ.ಉರಗದಹಳ್ಳಿ, ಡಿ. ಟಿಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ ಬ್ಯಾಡರಹಳ್ಳಿ ಪೈಪ್‌ಲೈನ್ ಮತ್ತು ವಿಜಯನಗರದಲ್ಲಿ ಕರೇಂಟ್​ ಇರುವುದಿಲ್ಲ.

  • 13 Sep 2023 09:06 AM (IST)

    Karnataka News Live: ಲಿಂಗಾಬುದಿ ಕೆರೆಯ ಜಲಚರಗಳು ಸಾವು; ಸಮಿತಿ ರಚನೆ

    ಮೈಸೂರು: ಲಿಂಗಾಬುದಿ ಕೆರೆಯ ಜಲಚರಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಿಂದ ತಜ್ಞರ ಜಂಟಿ ಸಮಿತಿ ರಚಿಸಲಾಗಿದೆ. ಕೆರೆಗೆ ಕೊಳಚೆ ನೀರು ಸೇರುತ್ತಿರುವುದಕ್ಕೆ ಕಾರಣ,  ಮೀನುಗಳ ಸಾವಿಗೆ ಕಾರಣ ತಿಳಿದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಮೀನುಗಳು ಸಾವಿನ ನಿಖರ ಮಾಹಿತಿ ಕಲೆ ಹಾಕಲಿದೆ.

  • 13 Sep 2023 08:32 AM (IST)

    Karnataka News Live: ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 97.74 ಅಡಿಗೆ ಕುಸಿತ

    ಮಂಡ್ಯ: ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 97.74 ಅಡಿಗೆ ಕುಸಿದೆ. ಕೆಆರ್​ಎಸ್​​ ಜಲಾಶಯದ ಇಂದಿನ ನೀರಿನ ಮಟ್ಟ 97.74 ಅಡಿ. ಕೆಆರ್​ಎಸ್​​ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ. ಒಳಹರಿವು 2741 ಕ್ಯೂಸೆಕ್, ಹೊರಹರಿವು 4498 ಕ್ಯೂಸೆಕ್ ಆಗಿದೆ.

  • 13 Sep 2023 08:13 AM (IST)

    Karnataka News Live: ಕಾವೇರಿ ವಿವಾದ; ಕನ್ನಡಪರ ಒಕ್ಕೂಟ ಸಂಘಟನೆಗಳಿಂದ ಪ್ರತಿಭಟನೆ

    ರಾಮನಗರ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಪ್ರಾಧಿಕಾರ ಆದೇಶ ಹಿನ್ನೆಲೆಯಲ್ಲಿ ಕನ್ನಡಪರ ಒಕ್ಕೂಟ ಸಂಘಟನೆಗಳು  ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಬೆಳಿಗ್ಗೆ 10:30ಕ್ಕೆ ಕುಂಬಳಗೋಡು ಬಳಿಯ ಕಣಮಿಣಕೆ ಟೋಲ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

  • 13 Sep 2023 08:08 AM (IST)

    Karnataka News Live: ಕಾವೇರಿ ವಿವಾದ; ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ

    ಬೆಂಗಳೂರು: ತಮಿಳುನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದು ಸೆ.13 ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 12:30 ಕ್ಕೆ ವಿಶೇಷ ಸಭೆ ಕರೆಯಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾವಹಿಸಲಿದ್ದಾರೆ.

  • Published On - Sep 13,2023 8:04 AM

    Follow us
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್