Latest Breaking Karnataka News in Kannada Highlights Updates: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಅಬ್ಬರದ ನಂತರ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ನಾಡಿನಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಸಾಕಷ್ಟು ಪ್ರಮಣಾದಲ್ಲಿ ಹಾನಿಯಾಗುತ್ತಿದೆ. ವಿವಿಧ ಜಿಲ್ಲೆಗಳಲ್ಲಿ ಸಿಡಿನಿಂದ ದನ-ಕರುಗಳು, ಮನಷ್ಯರು ಪ್ರಾಣ ಕಳೆದುಕೊಂಡಿದೆ. ಇನ್ನು ಮರಗಳು ಧರೆಗೆ ಉರುಳಿ ರಸ್ತೆ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಇದಲ್ಲದೇ ಅಪಘಾತ ಪ್ರಕರಣಗಳು ಹೆಚ್ಚಾಗಿವೆ, ಅದೇ ರೀತಿಯಾಗಿ ಅಪರಾಧ ಪ್ರಕರಣಗಳು ಕೂಡ ಜನರನ್ನು ಭಯಭೀಳಿಸಿವೆ. ಇದೊಂದಡೆಯಾದರೆ ರಾಜಕೀಯ ವಲಯದಲ್ಲಿ ನೋಡುವುದಾರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳದ್ದೇ ಚರ್ಚೆ. ಈ ಚರ್ಚೆಗೆ ನಾಳೆ (ಜೂನ್.1) ತೆರೆ ಬೀಳುವ ಸಾಧ್ಯತೆ ಇದೆ. ಇದರೊಂದಿಗೆ ಇಂದಿನ ಲೇಟೆಸ್ಟ್ ಅಪ್ಡೇಟ್ಸ್
ಸಿಎಂ ಸಿದ್ದರಾಮಯ್ಯ ಕೂಡ ಒಬ್ಬ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. ವಕೀಲರು ಅನುಭವಿಸುವ ಕಷ್ಟ ಸಿಎಂ ಸಿದ್ದರಾಮಯ್ಯರಿಗೆ ಗೊತ್ತಿದೆ ಎಂದು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಹೇಳಿದರು. ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಸಾಕಷ್ಟು ಹೋರಾಟ ಮಾಡಿದ್ದೇವೆ. ಸಿದ್ದರಾಮಯ್ಯ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವ ವಿಶ್ವಾಸವಿದೆ. ವಕೀಲರ ವಿಮೆ ಜಾರಿಗೆ ತರಬೇಕು, ಎಲ್ಲಾ ಸೌಲಭ್ಯ ಸಮಯಕ್ಕೆ ಸಿಗಲಿ ಎಂದರು.
ಸಿಎಂ ಸಿದ್ಧರಾಮಯ್ಯ ತಮ್ಮ ಬಳಿ ಉಳಿಸಿಕೊಂಡಿದ್ದ ಹೆಚ್ಚುವರಿ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಸಚಿವರಾದ ಎಂ.ಬಿ.ಪಾಟೀಲ್ಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಅಭಿವೃದ್ಧಿ ಖಾತೆ ಮತ್ತು ಪ್ರಿಯಾಂಕ್ ಖರ್ಗೆ ಐಟಿ-ಬಿಟಿ ಖಾತೆ ಹೆಚ್ಚುವರಿ ಹೊಣೆ ನೀಡಿದ್ದಾರೆ.
ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ ಅಷ್ಟೇ ಎಂದು ಬೀಳ್ಕೊಡುಗೆ ಸಮಾರಂಭದಲ್ಲಿ ನ್ಯಾಯಮೂರ್ತಿ ಬಿ.ವೀರಪ್ಪ ಹೇಳಿದರು. ನ್ಯಾಯಮೂರ್ತಿ ಆದಾಗ ಆದ ಖುಷಿಗಿಂತ ಈಗ ಹೆಚ್ಚು ಖುಷಿ ಆಗ್ತಿದೆ. ಚಿಕ್ಕವನಿದ್ದಾಗ ತಂಬೂರಿಯವನು ನಮ್ಮ ತಾಯಿ ಬಳಿ ಭವಿಷ್ಯ ಹೇಳಿದ್ದ. ನಿನ್ನ ಮಗ ಬಹಳ ತಲೆಹರಟೆ ಇದ್ದಾನೆ, ಮುಂದೆ ಕಷ್ಟ ಎಂದು ಹೇಳಿದ್ದರು.
ಸಿಎಂ ಸಿದ್ದರಾಮಯ್ಯ ಮಾತನಾಡಿ, ನ್ಯಾಯಮೂರ್ತಿಯಾಗಿ ಬಿ.ವೀರಪ್ಪ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ನಾನು ಸಿಎಂ ಆಗಿದ್ದಾಗ ವೀರಪ್ಪ ಹೈಕೋರ್ಟ್ ನ್ಯಾಯಮೂರ್ತಿ ಆದರು. ಇಂದು ಸಿಎಂ ಆಗಿದ್ದೇನೆ, ನಿವೃತ್ತಿ ಹೊಂದುತ್ತಿದ್ದಾರೆ, ಇದು ಕಾಕತಾಳೀಯ. ವ್ಯವಸ್ಥೆಯಲ್ಲಿ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸವಲತ್ತುಗಳು ಸಿಗಬೇಕು ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗ ದೊಡ್ಡ ಸ್ಥಾನದಲ್ಲಿದೆ. ನ್ಯಾಬಿ.ವೀರಪ್ಪನವರ ಕಾರ್ಯದಿಂದ ರಾಜಕಾರಣಿ ಕಲಿಯುವುದು ಸಾಕಷ್ಟಿದೆ. ನ್ಯಾ.ಬಿ.ವೀರಪ್ಪ ತಮ್ಮ ಕೆಲಸದ ಮೂಲಕ ರಾಜ್ಯದ ಹೃದಯ ಗೆದ್ದಿದ್ದಾರೆ. ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ನಮ್ಮ ಸರ್ಕಾರ ಪ್ರಯತ್ನ ಮಾಡುತ್ತೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಬಿ.ವೀರಪ್ಪರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸಾಂಕೇತಿಕವಾಗಿ ಗ್ಯಾರಂಟಿ ಯೋಜನೆಗೆ ಸರ್ಕಾರ ಚಾಲನೆ ನೀಡಲಿದ್ದು, ಎಐಸಿಸಿ ಅಧ್ಯಕ್ಷ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾಗೆ ಆಹ್ವಾನಿಸಲು ರಾಜ್ಯ ನಾಯಕರ ನಿರ್ಧರಿಸಿದ್ದಾರೆ. ಬೆಂಗಳೂರು ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ಚಿಂತನೆ ನಡೆಸಲಾಗುತ್ತಿದೆ.
ಬೆಂಗಳೂರು: ವರುಣ ಕ್ಷೇತ್ರದ ಜನರಿಗೆ ತಮ್ಮ ಸರ್ಕಾರಿ ನಿವಾಸಕ್ಕೆ ಬರಲು ಸಿಎಂ ಸಿದ್ಧರಾಮಯ್ಯ ಅವಕಾಶ ಕಲ್ಪಿಸಿದ್ದಾರೆ. ವರುಣಾ ಕ್ಷೇತ್ರದ ಜನರು ತಮ್ಮ ವಿಳಾಸ ತೋರಿಸಿ ಬರಬಹುದು. ಆಧಾರ್ ಕಾರ್ಡ್ ಹಾಗೂ ಐಡಿಯನ್ನು ಪೊಲೀಸರು ಚೆಕ್ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ಆಗಿರುವ ಮಳೆ ಹಾನಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ ಎಂದು ಬೆಂಗಳೂರಿನಲ್ಲಿ ಕಂದಾಯ ಖಾತೆ ಸಚಿವ ಕೃಷ್ಣಭೈರೇಗೌಡ ಹೇಳಿದರು. ಇಲಾಖೆಯ ಮುಖ್ಯಸ್ಥರ ಜತೆ ಸಭೆ ನಡೆಸಿ ಕೆಲ ತೀರ್ಮಾನ ಆಗಿದೆ. ಮಾರ್ಚ್, ಮೇ ತಿಂಗಳಿನಲ್ಲಿ ಕೆಲಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಜನವರಿಯಿಂದ ಈವರೆಗೆ ಸುರಿದ ಮಳೆಗೆ 69 ಜನ ಮೃತಪಟ್ಟಿದ್ದಾರೆ ಎಂದರು.
5 ಗ್ಯಾರಂಟಿ ಯೋಜನೆ ಜಾರಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಶುಕ್ರವಾರ ಸಂಪುಟ ಸಭೆ ನಂತರ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ಮಾಡಲಿದ್ದಾರೆ. 5 ಗ್ಯಾರಂಟಿ ಜಾರಿ ಬಗ್ಗೆ ಸಂಪುಟದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯರಿಂದಲೇ ಘೋಷಣೆ ಸಾಧ್ಯತೆ ಇದೆ.
ಅಕ್ಕಿಯನ್ನು ಓಪನ್ ಮಾರ್ಕೆಟ್ನಿಂದ ಆದರೂ ತರುತ್ತೇವೆ. ಬಿಜೆಪಿಗೆ ಒಬ್ಬ ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಆಗಿಲ್ಲ. ಬಿಜೆಪಿಯವರಿಂದ ನಾವು ಕಲಿಯಬೇಕಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. JDS, ಬಿಜೆಪಿಯವರು ಪ್ರಚೋದನೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಸೋಲಿನ ಹತಾಶೆಯಿಂದ ಈ ರೀತಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಗ್ಯಾರಂಟಿ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳ ವಿರೋಧ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಜಾರಿ ಸದ್ಯಕ್ಕೆ ಕಷ್ಟ ಅಂತಾ ಅಧಿಕಾರಿಗಳ ಅಭಿಪ್ರಾಯಪಟ್ಟಿದ್ದು, ಅನುದಾನ ಹೊಂದಿಸುವುದು ಕಷ್ಟ ಎಂದು ಹಣಕಾಸು ಇಲಾಖೆ ತಿಳಿಸಿದೆ. ಆದರೆ ಗ್ಯಾರಂಟಿ ಜಾರಿ ಮಾಡಲು ಸಭೆಯಲ್ಲಿ ಸಚಿವರು ಪಟ್ಟು ಹಿಡಿದಿದ್ದಾರೆ.
ಬೆಂಗಳೂರು: ಬೇಸಿಗೆ ಹಿನ್ನೆಲೆ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರು ಅಗತ್ಯವಿದೆ. ಹಾಗಾಗಿ 6 ಟಿಎಂಸಿ ನೀರು ಬಿಡುಗಡೆ ಕೋರಿ ಮಹಾರಾಷ್ಟ್ರ ಸರ್ಕಾರಕ್ಕೆ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.
5 ಗ್ಯಾರಂಟಿಗಳ ಜಾರಿ ಬಗ್ಗೆ ಸಭೆಯಲ್ಲಿ ಸಂಪೂರ್ಣವಾಗಿ ಚರ್ಚೆ ಆಗಿದೆ ಎಂದು ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡುತ್ತೇವೆ. 5 ಗ್ಯಾರಂಟಿಗಳ ವಿಚಾರವಾಗಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮಾನದಂಡ ಇಲ್ಲದೆ ಯಾವ ಯೋಜನೆ ಇದೆ ಹೇಳಿ ನೋಡೋಣ. ಜನರಿಗೆ ನಾವು ಲೆಕ್ಕ ಕೊಡಬೇಕು ಅಲ್ವಾ ಎಂದಿದ್ದಾರೆ.
ಬೆಂಗಳೂರು: 5 ಗ್ಯಾರಂಟಿಗಳನ್ನು ಜಾರಿ ಮಾಡುವುದು ಗ್ಯಾರಂಟಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಿಗದಿಯಾಗಿದೆ. 5 ಗ್ಯಾರಂಟಿಗಳ ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡ್ತೇವೆ. ಇಂದಿನ ಸಭೆಯಲ್ಲಿ ಗ್ಯಾರಂಟಿಗಳ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದರು.
ಮಂಗಳೂರು: ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ನಿರಂಜನ್ ಅವರ ಮಂಗಳೂರಿನ ಅಪಾರ್ಟ್ಮೆಂಟ್ ಮತ್ತು ಲ್ಯಾಬ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡಿಡಿ ಆಗಿದ್ದ ನಿರಂಜನ್, ಇತ್ತೀಚಿಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು.
ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿ ಸಂಬಂಧ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ ಅಗತ್ಯ ಹಿನ್ನೆಲೆ ನಾಳೆಯೂ ಕೂಡ ಅಧಿಕಾರಿಗಳು, ಸಚಿವರು ಪ್ರತ್ಯೇಕ ಸಭೆ ಮಾಡಲಿದ್ದಾರೆ.
ತುಮಕೂರು: ಪೊಲೀಸರು ಠಾಣೆಗೆ ದೇವರುಗಳನ್ನು ಕರೆಸಿ ವಿಶೇಷ ಪೂಜೆ ಮಾಡಿರುವ ಘಟನೆ ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪೊಲೀಸರು ಸಮವಸ್ತ್ರದಲ್ಲಿಯೇ ಠಾಣೆಯ ಎದುರಿನ ಹಳ್ಳಿಕಟ್ಟೆಯಿಂದ ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಶ್ರೀ ಭೂತರಾಯ ದೇವರುಗಳನ್ನು ಹೊತ್ತು ತಂದು ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಬಳಿಕ ಇಡೀ ದಿನ ವಿಶೇಷ ಅಲಂಕಾರ, ಪೂಜೆ ಪುನಸ್ಕಾರ ಮಾಡಿ ಆರತಿ ಎಡೆ ಸೇವೆ ನೇರವೇರಿಸಿದ್ದಾರೆ. ಪೂಜೆ ನಂತರ ಸಾರ್ವಜನಿಕರಿಗೆ ಪಾನಕ ಫಲಹಾರ ನೀಡಿದ್ದಾರೆ.
ಹುಬ್ಬಳ್ಳಿ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಮೇ.31) ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಅವರೊಂದಿಗೆ ಗೌಪ್ಯ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಡಿಕೆ ಶಿವಕುಮಾರ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ. ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಡಿಕೆಶಿ ಸಂತೋಷ ವ್ಯಕ್ತಪಡಿಸಿದರು. ಮುಂಬರುವ ಚುನಾವಣೆ ಕುರಿತು ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶಾಸಕ ಲಕ್ಷ್ಮಣ್ ಸವದಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು ಬೆಳಗಾವಿಯಲ್ಲಿ ಹೇಳಿದ್ದಾರೆ.
ಯಾರು ನಮ್ಮ ಜೊತೆ ಧೈರ್ಯ ಮಾಡಿ ಕೈ ಜೋಡಿಸಿದ್ದಾರೆ ಯಾರನ್ನೂ ಕೈ ಬಿಡುವ ಪ್ರಶ್ನೆ ಬರಲ್ಲ, ಲೋಕಸಭೆ ಚುನಾವಣೆ ಟಾರ್ಗೆಟ್ ಮಾಡಿ ಇಬ್ಬರೂ ನಾಯಕರ ಬಳಕೆ ಮಾಡುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮ ಪಕ್ಷದ ನಾಯಕರು, ಅವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಗೆದ್ದಿರಬಹುದು, ಸೋತಿರಬಹುದು ಅವರು ನಮ್ಮ ನಾಯಕರು ಎಂದಿದ್ದಾರೆ.
ಬೆಳಗಾವಿ: ಹೆಡೆ ಎತ್ತಿ ನಿತ್ತ ಹಾವಿನಿಂದ ಪವಾಡ ಸದೃಶ್ಯ ರೀತಿ ಬಾಲಕಿ ಬಚಾವ್ ಆದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ನಡೆದಿದೆ. ಸೋಮವಾರ (ಮೇ.29) ಸಂಜೆ ಮನೆಯ ಬಾಗಿಲಿನ ಹೊಸ್ತಿಲಿನಲ್ಲಿ ನಾಗರ ಹಾವೊಂದು ಬರುತ್ತಿತ್ತು. ಇದನ್ನು ಗಮನಿಸದೇ ಪಕ್ಕದ ಮನೆಯ ಬಾಲಕಿ ಮನೆಯೊಳಗೆ ತೆರಳುತ್ತಿದ್ದಳು. ಬಾಲಕಿ ಹೊಸ್ತಿಲು ಬಳಿ ಬರುತ್ತಿದ್ದಂತೆ ಹಾವು ಹೆಡೆ ಎತ್ತಿದ್ದು, ಹಾವು ನೋಡಿದ ಬಾಲಕಿ ಹೆದರಿ ಮನೆಯೊಳಗೆ ಓಡಿದ್ದಾಳೆ. ಈ ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಜಯಪುರ: ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್ ಬಂಕ್ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ (ಮೇ.30) ರಂದು ನಡೆದಿದೆ.
ಬೆಳಗಾವಿ: ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತುಕತೆ ನಡೆಸಲಿದ್ದಾರೆ. ಹುಬ್ಬಳ್ಳಿಯಲ್ಲಿರುವ ಜಗದೀಶ್ ಶೆಟ್ಟರ್ ನಿವಾಸಕ್ಕೆ ಇಂದು(ಮೇ 31) ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ.
ಮಂಗಳೂರು: ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ವೇಳೆ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳು, ಆಸ್ಪತ್ರೆ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಿದ್ದಾರೆ.
Published On - 10:05 am, Wed, 31 May 23