Kannada News Highlights: ಸಂಜೆಯಾಗುತ್ತಲೇ ಕರ್ನಾಟಕದ ಹಲವೆಡೆ ಸುರಿದ ಮಳೆ, ಇಬ್ಬರು ರೈತರು ಸಾವು

ವಿವೇಕ ಬಿರಾದಾರ
| Updated By: Ganapathi Sharma

Updated on:Jun 09, 2023 | 11:25 PM

Karnataka Kannada News Today Live Updates: ಕರ್ನಾಟಕದಲ್ಲಿನ ರಾಜಕೀಯ, ಹವಾಮಾನ, ಅಪರಾಧ ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಕುರಿತಾದ ಲೇಟೆಸ್ಟ್​​ ಅಪ್​ಡೇಟ್ಸ್ ಇಲ್ಲಿದೆ.

Kannada News Highlights: ಸಂಜೆಯಾಗುತ್ತಲೇ ಕರ್ನಾಟಕದ ಹಲವೆಡೆ ಸುರಿದ ಮಳೆ, ಇಬ್ಬರು ರೈತರು ಸಾವು
ಕರ್ನಾಟಕದಲ್ಲಿ ಮಳೆ

ಕರ್ನಾಟಕದ ಕರಾವಳಿ ಬಿಸಿಲ ಧಗೆಗೆ ನಲುಗಿ ಹೋಗಿದ್ದು, ನೀರಿಗಾಗಿ ಜನರು ತತ್ತರಿಸುತ್ತಿದ್ದಾರೆ. ಎಲ್ಲೆಡೆ ನೀರಿಗಾಗಿ ಹಾಹಾಕಾರ ಕೇಳಿ ಬರುತ್ತಿದೆ. ಈ ನಡುವೆ ನಿನ್ನೆ (ಜೂ.09) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಬಿರು ಬಿಸಿಲಿನಿಂದ ಬೇಯುತ್ತಿದ್ದ ಜನರಿಗೆ ಮಳೆರಾಯ ತಂಪೆರೆದ್ದಿದ್ದಾನೆ. ಇನ್ನು ರಾಜ್ಯ ರಾಜಕೀಯದಲ್ಲಂತೂ ಗೋಹತ್ಯ ನಿಷೇಧ, ಸರ್ಕಾರದ 5 ಗ್ಯಾರೆಂಟಿ ಯೋಜನಗಳ ಜಾರಿ ಮತ್ತು ಪಠ್ಯ ಪುಸ್ತಕ್ತ ಮರು ಪರೀಷ್ಕರಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿವೆ. ರಾಜ್ಯದಲ್ಲಿ ಭೀಕರ ಅಪಘಾತ, ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳಲ್ಲದೆ ಇನ್ನು ಅನೇಕ ಬೆಳವಣಿಗೆಗಳು ನಡೆಯುತ್ತಿದ್ದು, ಇವಲ್ಲೆದರ ಕುರಿತಾದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ…

LIVE NEWS & UPDATES

The liveblog has ended.
  • 09 Jun 2023 10:03 PM (IST)

    Breaking Kannada News Live: ಚಿಂಚೋಳಿ ತಾಲೂಕಿನ ಹಲವೆಡೆ ಮಳೆ ಅಬ್ಬರ

    ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಮಳೆಯಿಂದ ನೀರಿನ ರಭಸಕ್ಕೆ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದಲ್ಲಿ ಕಿರು ಸೇತುವೆ ಕೊಚ್ಚಿ ಹೋಗಿದೆ. ದೇಗಲಮಡಿ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು ಸೇತುವೆ ಇದಾಗಿದೆ. ಇನ್ನೊಂದೆಡೆ, ಸುರಿದ ಮಳೆಗೆ ಜನರು ಸಂತಸಗೊಂಡಿದ್ದಾರೆ.

  • 09 Jun 2023 10:02 PM (IST)

    Breaking Kannada News Live: ಪುನೀತ್ ರಾಜ್​ಕುಮಾರ್​ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ: ಸಿದ್ದರಾಮಯ್ಯ

    ಪುನೀತ್ ರಾಜ್​ಕುಮಾರ್​ ಜನರ ಪ್ರೀತಿ ಗಳಿಸಿದ್ದ ಅಪರೂಪದ ನಟ. ಪುನೀತ್ ಹೆಸರಿನಲ್ಲಿ ಸ್ಕಾಲರ್​ಶಿಪ್​ ನೀಡುತ್ತಿರುವುದು ಒಳ್ಳೆಯ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಡಾ.ರಾಜ್​ಕುಮಾರ್​​ IAS ಅಕಾಡೆಮಿಯಲ್ಲಿ ಪೃಥ್ವಿ ಸ್ಕಾಲರ್​ಶಿಪ್​ ಲಾಂಛನದ ಮೇಲೆ ಸಹಿ ಹಾಕಿದ ನಂತರ UPSC ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಿದರು. ಬಳಿಕ  ಮಾತನಾಡಿದ ಅವರು, ಸರ್ಕಾರಿ ಕೆಲಸ ದೇವರ ಕೆಲಸವೆಂದು ಭಾವಿಸಿ ಕೆಲಸ ಮಾಡಿ. ನೀವು ಮಾಡುವ ಕೆಲಸದಲ್ಲಿ ದೇವರನ್ನು ಕಾಣಿ ಎಂದು ಸಲಹೆ ನೀಡಿದರು.

  • 09 Jun 2023 10:00 PM (IST)

    Breaking Kannada News Live: ತರಳಬಾಳು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

    ಬೆಂಗಳೂರು: ಆರ್.ಟಿ.ನಗರದ ತರಳಬಾಳು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಸಿಎಂಗೆ ಸಚಿವರಾದ ಭೈರತಿ ಸುರೇಶ್‌, ಎಸ್.ಎಸ್.ಮಲ್ಲಿಕಾರ್ಜುನ್ ಸಾಥ್ ನೀಡಿದರು.

  • 09 Jun 2023 08:04 PM (IST)

    Breaking Kannada News Live: ರಾಯಚೂರು ಜಿಲ್ಲಾ ಉಸ್ತುವಾರಿ ಬದಲಾವಣೆಗೆ ವಿವಿಧ ಸಂಘಟನೆಗಳ ಆಗ್ರಹ

    ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಡಾ.ಶರಣಪ್ರಕಾಶ್‌ ಪಾಟೀಲ್ ಅವರನ್ನು ನೇಮಿಸಿದ್ದಕ್ಕೆ ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕುತ್ತಿದ್ದು, ಅಂಬೇಡ್ಕರ್‌ ಸರ್ಕಲ್‌ನಲ್ಲಿ ಧರಣಿ ನಡೆಸಲಾಯಿತು. ಏಮ್ಸ್‌ ಹೋರಾಟ ಸಮಿತಿ, ಕರವೇ ಸೇರಿ 5 ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದೆ. ಇತ್ತೀಚೆಗಷ್ಟೇ ಏಮ್ಸ್‌ ಕಲಬುರಗಿಗೆ ಬೇಕೆಂದು ಶರಣಪ್ರಕಾಶ್‌ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಜಿಲ್ಲೆಗೆ ಏಮ್ಸ್‌ಗಾಗಿ ಕಳೆದ 393 ದಿನಗಳಿಂದ ಹೋರಾಟ ನಡೆಸುತ್ತಿದ್ದೇವೆ. ಡಾ.ಶರಣಪ್ರಕಾಶ್‌ ನಮ್ಮ ಹೋರಾಟದ ವಿರುದ್ಧ ಹೇಳಿಕೆ ನೀಡಿದ್ದಾರೆ. ಇಂತಹ ಸಚಿವರು ನಮ್ಮ ಜಿಲ್ಲೆಗೆ ಬೇಡವೆಂದು ಸಂಘಟನೆಗಳಿಂದ ಧರಣಿ ನಡೆಸಿ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಆಗ್ರಹಿಸಿದರು. ಇಲ್ಲದಿದ್ದರೆ ಗೋ ಬ್ಯಾಕ್ ಚಳವಳಿ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

  • 09 Jun 2023 08:00 PM (IST)

    Breaking Kannada News Live: ದಾವಣಗೆರೆಯಲ್ಲಿ ಸಿಡಿಲು ಬಡಿದು ಇಬ್ಬರು ರೈತರು ಸಾವು

    ದಾವಣಗೆರೆ: ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರಿನಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಕಾಟಲಿಂಗಪ್ಪ (43), ರಾಜು (35) ಮೃತ ದುರ್ದೈವಿಗಳು. ಸ್ಥಳಕ್ಕೆ ಶಾಸಕ ಬಿ.ದೇವೇಂದ್ರಪ್ಪ, ತಹಶೀಲ್ದಾರ್‌ ಸಂತೋಷ್ ಭೇಟಿ ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.

  • 09 Jun 2023 07:57 PM (IST)

    Breaking Kannada News Live: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಮಳೆ

    ಬಿಪರ್​ಜಾಯ್​​ ಚಂಡಮಾರುತ ಪ್ರಭಾವದಿಂದಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳ, ಅಂಕೋಲ, ಕುಮಟಾ, ಕಾರವಾರ ತಾಲೂಕಿನ ಹಲವೆಡೆ ಇಂದು ಸಂಜೆ ಮಳೆಯಾಗಿದೆ. ಇನ್ನೂ 3 ದಿನಗಳ ಕಾಲ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಲಾಗಿದೆ.

  • 09 Jun 2023 06:14 PM (IST)

    Breaking Kannada News Live: ಬೆಂಗಳೂರಿನಲ್ಲಿ ಸಂಜೆ ವೇಳೆ ಆರಂಭವಾದ ಮಳೆ

    ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಸಂಜೆ ಹೊತ್ತಿಗೆ ಮಳೆ ಆರಂಭವಾಗಿದೆ. ಇನ್ನು ಕೆಲವೆಡೆ ಮೋಡ ಕವಿದ ವಾತಾವರಣ ಇದೆ.

  • 09 Jun 2023 06:03 PM (IST)

    Breaking Kannada News Live: ಜುಲೈ 3ರಂದು ವಿಧಾನಮಂಡಲದ ಅಧಿವೇಶನ

    ಜುಲೈ 3ರಂದು ವಿಧಾನಮಂಡಲದ ಅಧಿವೇಶನ ಆರಂಭಗೊಳ್ಳಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

  • 09 Jun 2023 05:49 PM (IST)

    Breaking Kannada News Live: ಕೊವಿಡ್‌ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ: ಡಿಕೆಶಿಗೆ ಹೈಕೋರ್ಟ್ ರಿಲೀಫ್

    ಕೊವಿಡ್‌ ನಿಯಮ ಮೀರಿ ಮೇಕೆದಾಟು ಪಾದಯಾತ್ರೆ ನಡೆಸಿದ್ದ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ. ಒಂದು ಪ್ರಕರಣ ರದ್ದುಗೊಂಡಿದ್ದು, ಎರಡು ಕೇಸ್‌ಗಳಿಗೆ ತಡೆಯಾಜ್ಞೆ ನೀಡಿ ಆದೇಶಿಸಲಾಗಿದೆ. ಪ್ರಕರಣ ರದ್ದು ಕೋರಿ ಡಿಕೆ ಶಿವಕುಮಾರ್ ಹೈಕೋರ್ಟ್​​ ಮೆಟ್ಟಿಲೇರಿದ್ದರು.

  • 09 Jun 2023 05:11 PM (IST)

    Breaking Kannada News Live: ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಆಯ್ಕೆ; ಶಹಾಪುರ ನಗರದಲ್ಲಿ ಸಂಭ್ರಮಾಚರಣೆ

    ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಆಯ್ಕೆ ಹಿನ್ನೆಲೆ ಶಹಾಪುರ ನಗರದಲ್ಲಿ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಸಚಿವ ದರ್ಶನಾಪುರ ಪರ ಜೈಕಾರಗಳನ್ನು ಹಾಕಲಾಗುತ್ತಿದೆ.

  • 09 Jun 2023 04:28 PM (IST)

    Breaking Kannada News Live: ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ

    ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿ ನಗರದಲ್ಲಿ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದಿಂದ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದೆ. ವಿಧಾನಸಭೆ ‌ಚುನಾವಣೆ ವರೆಗೆ ಕನಿಷ್ಠ ‌ಶುಲ್ಕ 90 ರೂಪಾಯಿ ಇತ್ತು. ಮತದಾನ ಮರುದಿನವೇ KERC ಕನಿಷ್ಠ ಶುಲ್ಕ 140 ರೂ.ಗೆ ಏರಿಕೆ ಮಾಡಲಾಗಿದೆ. ಕೆಇಆರ್‌ಸಿ ನಿರ್ಧಾರಕ್ಕೆ ರಾಜ್ಯ ಸರ್ಕಾರ ತಕ್ಷಣವೇ ತಡೆ ನೀಡಬೇಕು. ಹೆಚ್ಚಳವಾಗಿರುವ ಶುಲ್ಕ ಕೈಬಿಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆ ನೀಡಲಾಗಿತ್ತು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ತಾವು ನೀಡಿದ ಭರವಸೆ ಈಡೇರಿಸುವಂತೆ ಆಗ್ರಹಿಸುತ್ತಿದ್ದಾರೆ. ಸಾಲಕ್ಕೆ ಬೇಸತ್ತು ರಾಜ್ಯದ 42 ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ‌ ನೇಕಾರ ಕುಟುಂಬಕ್ಕೆ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಬೇಕು. 10 ಎಚ್‌ಪಿವರೆಗೆ ಉಚಿತ ವಿದ್ಯುತ್ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.

  • 09 Jun 2023 04:14 PM (IST)

    Breaking Kannada News Live: ವಿದ್ಯುತ್​ ದರ ಹೆಚ್ಚಳ: ಧಾರವಾಡದಲ್ಲಿ ಉದ್ಯಮಗಳ ಸಂಘದಿಂದ ಧರಣಿ

    ವಿದ್ಯುತ್​ ದರ ಹೆಚ್ಚಳ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಉದ್ಯಮಗಳ ಸಂಘವು ಧರಣಿ ನಡೆಸುತ್ತಿದೆ. ಕೂಡಲೇ ವಿದ್ಯುತ್​ ದರ ಏರಿಕೆ ಆದೇಶ ಹಿಂಪಡೆಯುವಂತೆ ಆಗ್ರಹಿಸಲಾಗುತ್ತಿದೆ. ಅಲ್ಲದೆ ವಿದ್ಯುತ್ ದರ ಏರಿಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಲಾಗುತ್ತಿದೆ. ಈ ಹಿಂದೆ ಯೂನಿಟ್‌ಗೆ ರೂ. 95 ಇತ್ತು. ಇದೀಗ 140 ರೂ. ಆಗಿದೆ. ಯೂನಿಟ್‌ಗೆ 45 ರೂಪಾಯಿ ಹೆಚ್ಚಳವಾಗಿದೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

  • 09 Jun 2023 03:39 PM (IST)

    Breaking Kannada News Live: ನಾಳೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಕೃತಜ್ಞತಾ ಸಮಾವೇಶ

    ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿನಲ್ಲಿ ಕೃತಜ್ಞತಾ ಸಮಾವೇಶ ಹಮ್ಮಿಕೊಂಡಿದ್ದಾರೆ. ವರುಣ ಕ್ಷೇತ್ರದ ಜನತೆಗೆ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಸಮಾವೇಶ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11.30 ಬೆಂಗಳೂರಿನಿಂದ ತೆರಳುವ ಸಿಎಂ ಸಿದ್ದರಾಮಯ್ಯ, ಮಧ್ಯಾಹ್ನ 12.20ಕ್ಕೆ ಸುತ್ತೂರು ಹೆಲಿಪ್ಯಾಡ್​​ಗೆ ತಲುಪಲಿದ್ದಾರೆ. ಮಧ್ಯಾಹ್ನ 12.35ಕ್ಕೆ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶ ಬಳಿಕ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಹೆಲಿಕ್ಯಾಪ್ಟರ್ ಮೂಲಕ ಮೈಸೂರಿಗೆ ಆಗಮಿಸಿ ನಾಳೆ ಸಂಜೆ 4 ಗಂಟೆಗೆ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೋಡಿ ಜೂ.11ರ ಬೆಳಗ್ಗೆ ಹೆಲಿಕಾಪ್ಟರ್​​ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

  • 09 Jun 2023 03:00 PM (IST)

    Breaking Kannada News Live: ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್​ಎಸ್​ಎಸ್​ ನಾಯಕರದ್ದು ಯಾಕೆ ಓದಬಾರದು?: ಸಿಟಿ ರವಿ ಪ್ರಶ್ನೆ

    ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್​ಎಸ್​ಎಸ್​ ನಾಯಕರದ್ದು ಯಾಕೆ ಓದಬಾರದು? ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಶ್ನಿಸಿದ್ದಾರೆ. ಇವರ ನೆರವು ಇಲ್ಲದೆ ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದು, ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ. ಆರ್​ಎಸ್​ಎಸ್​ ವಿಚಾರದಲ್ಲಿ ನೆಹರು, ಇಂದಿರಾ ಸೋತಿದ್ದಾರೆ. ಸುಳ್ಳು ಮತ್ತು ಕಾಂಗ್ರೆಸ್ ನಾಣ್ಯದ ಎರಡು ಮುಖಗಳು. ಕಾಂಗ್ರೆಸ್ ನಾಯಕರು ಕುರ್ಚಿಗೆ ಅಂಗಲಾಚಿದ್ದರು. ಕಾಂಗ್ರೆಸ್ ನವರನ್ನು ಯಾಕೆ‌ ಅಂಡಮಾನ್ ಜೈಲಿಗೆ ಹಾಕಲಿಲ್ಲ ಎಂದು ಪ್ರಶ್ನಿಸಿದರು.

  • 09 Jun 2023 02:58 PM (IST)

    Breaking Kannada News Live: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ: ಸಿಟಿ ರವಿ

    ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ

    ದೆಹಲಿ: ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿ ಪಕ್ಷ ಅಧಿಕಾರ ಕಳೆದುಕೊಂಡಿತು. ಹೊಂದಾಣಿ ರಾಜಕಾರಣದಿಂದ ಬಿಜೆಪಿ ಸೋತಿದೆ. ಈ ನಡೆ ಅನುಸರಿಸದಿದ್ದಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಮ್ಮ ಪಕ್ಷದ ನಾಯಕರ ವಿರುದ್ಧವೇ ಸಿ.ಟಿ‌ ರವಿ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.

  • 09 Jun 2023 02:54 PM (IST)

    Breaking Kannada News Live: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರುತನಿಖೆ ನಡೆಸಲು ಮುಂದಾದ ರಾಜ್ಯ ಸರ್ಕಾರ

    ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣವನ್ನು ಮರುತನಿಖೆ ನಡೆಸಲು ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯ ಇರುವುದರಿಂದ ತನಿಖೆ ಮಾಡಬೇಕಿದೆ. ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ನಮ್ಮ ಹೊಸ ಸರ್ಕಾರ ಬಂದಿರುವುದರಿಂದ ಮರು ತನಿಖೆಗೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

  • 09 Jun 2023 02:51 PM (IST)

    Breaking Kannada News Live: ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಸಿಎಂ  ಸೂಚನೆ: ಕೃಷ್ಣಭೈರೇಗೌಡ

    ಕಳೆದ 6 ತಿಂಗಳಲ್ಲಿ ಹಂಚಿಕೆ, ಮಂಜೂರಾದ ಭೂಮಿ ಪರಿಶೀಲನೆಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾಗಿ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಯಾರಿಗೆಲ್ಲ ಸರ್ಕಾರಿ ಭೂಮಿ ಹಂಚಿಕೆಯಾಗಿದೆ ಎಂದು ಪರಿಶೀಲನೆ ನಡೆಸಲು ಸೂಚಿಸದ್ದಾರೆ. ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೆಐಎಡಿಬಿಯಿಂದ ಜಮೀನು ನೀಡಿದ್ದಾರೆ. ತರಾತುರಿಯ ತೀರ್ಮಾನಗಳ ಬಗ್ಗೆ ಮರು ಪರಿಶೀಲನೆಗೆ ನಿರ್ಧರಿಸಿದ್ದೇವೆ ಎಂದು ಹೇಳಿದರು.

  • 09 Jun 2023 02:46 PM (IST)

    Breaking Kannada News Live: ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್​​ ರಾಜಕಾರಣ: ಕೋಟ ಶ್ರೀನಿವಾಸ್ ಪೂಜಾರಿ

    ಉಡುಪಿ: ಶಾಲಾ ಪಠ್ಯ ಪುಸ್ತಕ ವಿಚಾರದಲ್ಲಿ ಕಾಂಗ್ರೆಸ್​​ ರಾಜಕಾರಣ ಮಾಡುತ್ತಿದೆ ಎಂದು ಉಡುಪಿಯಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸರ್ಕಾರ ಯಾವಾಗಲೂ ವ್ಯಕ್ತಿಗಳ ಆಧಾರದಲ್ಲಿ ನಡೆಯುವುದಿಲ್ಲ. ಶಾಸನದ ಆಧಾರದಲ್ಲಿ ಸರ್ಕಾರ ನಡೆಯುವುದು. ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು ಮಾಡುವುದು ಸರಿಯಲ್ಲ. ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ, 2009ರಲ್ಲಿ ಯುಪಿಎ ಸರ್ಕಾರ ಬನ್ನಂಜೆ ಅವರಿಗೆ ಪದ್ಮಶ್ರೀ ನೀಡಿತ್ತು. ಹೆಡ್ಗೆವಾರ್​ ಪಾಠವನ್ನು ಸರ್ಕಾರ ವಾಪಸ್​​ ಪಡೆಯುವುದಾಗಿ ಹೇಳಿದೆ. ಚಕ್ರವರ್ತಿ ಸೂಲಿಬೆಲೆ ಪಾಠ ವಾಪಸ್ ಪಡೆಯುವುದಾಗಿ ಹೇಳುತ್ತಿದ್ದಾರೆ. ವೈಚಾರಿಕ ವಿಚಾರದ ಮೇಲೆ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಎಲ್ಲ ಬೆಳವಣಿಗೆಗಳನ್ನೂ ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದನದ ಒಳಗೆ ಮತ್ತು ಹೊರಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

  • 09 Jun 2023 01:39 PM (IST)

    Breaking Kannada News Live: ಮಂಗಳೂರಿನ ಸಮುದ್ರ ತೀರಕ್ಕೆ ಹೋಗದಂತೆ ಪ್ರವಾಸಿಗರಿಗೆ ಸೂಚನೆ

    ಮಂಗಳೂರು: ಬಿಪರ್​ಜಾಯ್ ಚಂಡಮಾರುತದ ಆತಂಕ ಹಿನ್ನೆಲೆ ಮಂಗಳೂರಿನ ಸಮುದ್ರ ತೀರಕ್ಕೆ ಹೋಗದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಉಳ್ಳಾಲ ಕಡಲ ತೀರದಲ್ಲಿ ಭಾರೀ ವೇಗವಾಗಿ ಗಾಳಿ ಬೀಸುತ್ತಿದೆ. ಭಾರೀ ಗಾಳಿಯ ಕಾರಣಕ್ಕೆ ಬೀಚ್​​ಗಳ ಬಳಿಯ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

  • 09 Jun 2023 01:00 PM (IST)

    Breaking Kannada News Live: ವೀಕೆಂಡ್ ಶಾಕ್, ಜೂ9ರಿಂದ 11ರವರೆಗೆ ಪವರ್​ ಕಟ್​​

    ಬೆಂಗಳೂರು: ಜೂನ್ 9ರಿಂದ 11ರ ವರೆಗೆ 3 ದಿನಗಳ ಕಾಲ ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ತಿಳಿಸಿದೆ. ಇನ್ನು ಜೂನ್ 9ರಿಂದ ಜೂ.11ರ ವರೆಗೆ ಯಾವೆಲ್ಲ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎನ್ನುವ ವಿವರ ಈ ಕೆಳಗಿನಂತಿದೆ.

    ಜೂ9ರಿಂದ 11ರವರೆಗೆ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲೆ?

  • 09 Jun 2023 11:31 AM (IST)

    Breaking Kannada News Live: ಆಸ್ತಿ ವಿವರ ಸಲ್ಲಿಸುವಂತೆ ಕರ್ನಾಟಕದ 224 ಶಾಸಕರಿಗೂ ಡೆಡ್​​ಲೈನ್

    ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಡೆಡ್​ಲೈನ್ ನೀಡಿದ್ದಾರೆ.

  • 09 Jun 2023 11:23 AM (IST)

    Breaking Kannada News Live: ಬೆಂಗಳೂರಿನ ಭಾರತ್ ಇನ್​ಫ್ರಾ ಕಂಪನಿ ಮೇಲೆ ಇಡಿ ರೇಡ್

    ಬೆಂಗಳೂರು: ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಸಂಸ್ಥೆಯ  ಬೆಂಗಳೂರು ಹಾಗೂ ದಾವಣಗೆರೆ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂ ಸಾಲ ಬಾಕಿ ಉಳಿಸಿಕೊಂಡ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ಕೊಟ್ಟ ಆರೋಪ ಭಾರತ್ ಇನ್​ಫ್ರಾ ಮೇಲಿದೆ. ಈ ಪ್ರಕರಣದ ಮೇಲೆ ಇಡಿ ಅಧಿಕಾರಿಗಳ ತಂಡಗಳು ಜೂನ್ 5ರಂದು ರೇಡ್ ನಡೆಸಿರುವುದು ತಿಳಿದುಬಂದಿದೆ. ಜೂನ್ 7ರಂದು ಇಡಿ ಈ ರೇಡ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

  • 09 Jun 2023 10:31 AM (IST)

    Breaking Kannada News Live: ಕುಸಿಯುವ ಹಂತ ತಲುಪಿದ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆ

    ಚಿಕ್ಕಮಗಳೂರು: ಲಕ್ಕವಳ್ಳಿಯ ಭದ್ರಾ ಜಲಾಶಯದ ಬಲದಂಡೆ ನಾಲೆಯ ತಡೆಗೋಡೆ ಕುಸಿಯುವ ಹಂತ ತಲುಪಿದೆ. ತರೀಕೆರೆ ತಾಲೂಕಿನ ಬರಗೇನಹಳ್ಳಿ ಗ್ರಾಮದ ಬಳಿ ಸುಮಾರು 5 ಕಿಮೀವರೆಗೂ ನಾಲೆಯ ತಡೆಗೋಡೆ ಕುಸಿಯುವ ಹಂತಕ್ಕೆ ತಲುಪಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

  • 09 Jun 2023 09:49 AM (IST)

    Karnataka Breaking News Live: ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಗೃಹ ಲಕ್ಷ್ಮಿ ಯೋಜನೆ ಲಾಂಚ್

    ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಮೊಟ್ಟಮೊದಲ ಯೋಜನೆಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ನೀಡುವ ‘ಶಕ್ತಿ’ ಈ ರೀತಿ ಉದ್ಘಾಟನೆಗೊಳ್ಳಲಿದೆ. ಇದೇ ಭಾನುವಾರ (ಜೂ.11) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ರೀತಿ ಟಿಕೆಟ್‌ ವಿತರಿಸುವ ಮೂಲಕ ಈ ಮಹಾತ್ವಾಕಾಂಕ್ಷಿ ಯೋಜನೆಗೆ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಲಿದ್ದಾರೆ.

  • 09 Jun 2023 09:42 AM (IST)

    Karnataka Breaking News Live: ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

    ಬೆಂಗಳೂರು: ಬಿಪರ್​ಜಾಯ್ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದೆ, ಇದರ ಪರಿಣಾಮ ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳಲ್ಲಾಗಲಿದೆ. ಮುಂದಿನ 3-4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ, ಗೋವಾ, ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ರಾಜಸ್ಥಾನ, ಅಸ್ಸಾಂ, ಮಿಜೋರಾಂ, ಮಣಿಪುರ, ಅರಿಣಾಚಲಪ್ರದೇಶ, ಮೇಘಾಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

  • Published On - Jun 09,2023 9:41 AM

    Follow us
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
    ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್