Karnataka News Live: ಬೆಳಗಾವಿಯಲ್ಲಿ ಹೆಚ್ಚಿದ ರೈತರ ಕಾವು: ಸಿಎಂ ಆಗಮನದ ದಿನವೇ ಕಬ್ಬು ಬೆಳೆಗಾರರ ಧರಣಿ!
TV9 kannada Breaking News Today Live Updates: ಬೆಳಗಾವಿಯ ಗುರ್ಲಾಪುರದಲ್ಲಿ ಪ್ರತಿ ಟನ್ ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಬ್ಬು ಬೆಳೆಗಾರರಿಂದ ಅಹೋರಾತ್ರಿ ಧರಣಿ ಆರಂಭವಾಗಿದೆ. ಇದರೊಂದಿಗೆ ರಾಜ್ಯದ ಇಂದಿನ ಹವಾಮಾನ ವರದಿ ಮತ್ತು ಕೊಪ್ಪಳದ ಹುಲಿಗೆಮ್ಮ ದೇವಸ್ಥಾನದಲ್ಲಿ ನಡೆದ ಸೀಗೆ ಹುಣ್ಣಿಮೆ ಮಹೋತ್ಸವದ ಪ್ರಮುಖ ಮುಖ್ಯಾಂಶಗಳು ಹಾಗೂ ಲೈವ್ ಅಪ್‌ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಖರ್ಗೆ ಹೇಳಿಕೆ ಬೆನ್ನಲ್ಲೇ ಸತ್ಯ ಬಿಚ್ಚಿಟ್ಟ ಸಂತ್ರಸ್ತ ಸಂತೋಷ್!
“ಮೋದಿ ಕಾ ಬಾಪ್ ಭಿ ಜಾಯೇಗಾ” ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ದೇಶಾದ್ಯಂತ ಭಾರಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಂದೆಯವರಿಗೆ ಮಾಡಿದ ಅಪಮಾನ ಇದಾಗಿದೆ ಎಂದು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದೆ.ಆದರೆ, ಈ ಇಡೀ ಪ್ರಕರಣಕ್ಕೆ ಕಾರಣ ಎನ್ನಲಾದ ಮತ್ತು ಇತ್ತೀಚೆಗೆ ಥಳಿತಕ್ಕೊಳಗಾಗಿದ್ದ ಸಂತೋಷ್ ಕುಮಾರ್ ಎಂಬ ವ್ಯಕ್ತಿ ಇದೀಗ ಸ್ಫೋಟಕ ಸತ್ಯ ಬಹಿರಂಗಪಡಿಸಿದ್ದು, ಪ್ರಕರಣಕ್ಕೊಂದು ಅಚ್ಚರಿಯ ತಿರುವು ಸಿಕ್ಕಿದೆ. ಖರ್ಗೆಯವರು ಆಡಿದ ಮಾತುಗಳನ್ನು ಮತ್ತು ತಾನು ಹೇಳಿದ ಸಂದರ್ಭವನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಆತ ಸ್ಪಷ್ಟಪಡಿಸಿದ್ದಾನೆ. ಮತ್ತಷ್ಟು ಓದಿ
-
ಹೆಣ್ಣೂರು-ಬಾಗಲೂರು ವೈಟ್ ಟ್ಯಾಪಿಂಗ್ ರಸ್ತೆ ಪರಿಶೀಲಿಸಲಿರುವ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಬೆಳಗ್ಗೆ 10:30ಕ್ಕೆ ಹೆಣ್ಣೂರು-ಬಾಗಲೂರು ರಸ್ತೆಯ ವೈಟ್ ಟ್ಯಾಪಿಂಗ್ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ರಸ್ತೆ ನಿರ್ಮಾಣದ ಪ್ರಗತಿ, ಕಾಮಗಾರಿಯ ಗುಣಮಟ್ಟ ಹಾಗೂ ಅನುಷ್ಠಾನದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
-
-
ಕೋಲಾರ: ಹೈಟೆಕ್ ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ, 20 ಜನರ ಬಂಧನ!
ಕೋಲಾರದ ಮುಳಬಾಗಿಲು ಟೌನ್ ಕ್ಲಬ್ ಜೂಜು ಅಡ್ಡೆ ಮೇಲೆ ಎಎಸ್‌ಪಿ ಮೋನಿಷಾ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 20 ಜನರನ್ನು ಬಂಧಿಸಿ, ₹61,000 ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ ಆರೋಪಿ ಲಕ್ಷ್ಮೀನಾರಾಯಣನ ಪತ್ನಿ ಹಾಗೂ ಮಕ್ಕಳ ವಿರುದ್ಧವೂ ಮುಳಬಾಗಿಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News Today Live Updates in Kannada: ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ರಾಜ್ಯ ಹೆದ್ದಾರಿ ತಡೆದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಇಂದು ಸಿಎಂ ಡಿ.ಕೆ ಶಿವಕುಮಾರ್ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ಕ ಕರೆದಿರುವ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಮುಖ್ಯಮಂತ್ರಿಗಳ ಗಮನ ಸೆಳೆಯಲು ರೈತರು ಈ ಹೋರಾಟಕ್ಕಿಳಿದಿದ್ದಾರೆ.ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಒಣ ಹವೆ ಮತ್ತು ಚಳಿಯ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ವಾತಾವರಣ ಇರಲಿದೆ. ಸೀಗೆ ಹುಣ್ಣಿಮೆ ಪ್ರಯುಕ್ತ ಕೊಪ್ಪಳದ ಐತಿಹಾಸಿಕ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಹರಿದು ಬಂದಿದ್ದು, ದರ್ಶನಕ್ಕಾಗಿ ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಿದ ಘಟನೆ ನಡೆದಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Oct 26,2026 8:42 AM




