
ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇಯ ಮೈಲಿಗಲ್ಲು 91ರ ಬಳಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳು ಸರಣಿ ಡಿಕ್ಕಿಗೊಳಗಾಗಿವೆ. ದೆಹಲಿಯಿಂದ ಸುಲ್ತಾನ್‌ಪುರ ನ್ಯಾಯಾಲಯದ ವಿಚಾರಣೆಗೆ ತೆರಳುತ್ತಿದ್ದಾಗ ಮುಂಭಾಗದ ವಾಹನ ದಿಢೀರ್ ಬ್ರೇಕ್ ಹಾಕಿದ್ದರಿಂದ ಈ ಅವಘಡ ಸಂಭವಿಸಿದೆ.
ಬಿಎಂಟಿಸಿಯು ತನ್ನ ನೌಕರರ ಕಲ್ಯಾಣಕ್ಕಾಗಿ ವೈಯಕ್ತಿಕ ಅಪಘಾತ ವಿಮಾ ಪರಿಹಾರವನ್ನು ₹50 ಲಕ್ಷದಿಂದ ₹1 ಕೋಟಿಗೆ ಹೆಚ್ಚಿಸಿದೆ. ಯೂನಿಯನ್ ಬ್ಯಾಂಕ್ ಸಹಯೋಗದಲ್ಲಿ ಮಾಡಿಕೊಂಡಿರುವ ಈ ನೂತನ ಒಪ್ಪಂದದಿಂದ ಸಾವಿರಾರು ಸಾರಿಗೆ ಸಿಬ್ಬಂದಿ ಹಾಗೂ ಅವರ ಕುಟುಂಬಗಳಿಗೆ ಬಲವಾದ ಆರ್ಥಿಕ ಭದ್ರತೆ ದೊರೆತಿದೆ. ಮತ್ತಷ್ಟು ಓದಿ
ಕನ್ನಡಿಗರಿಗೆ ಉದ್ಯೋಗಾವಕಾಶದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದ ಸಿಎಂ ಹೇಳಿಕೆಗೆ ಉದ್ಯಮಿ ಮೋಹನ್‌ದಾಸ್ ಪೈ ಪ್ರತಿಕ್ರಿಯಿಸಿದ್ದಾರೆ. ಉದ್ಯೋಗ ನೀಡುವ ಮೊದಲು ಕಲ್ಯಾಣ ಕರ್ನಾಟಕದ ಕಡಿಮೆ GER, ಸಾಫ್ಟ್ ಸ್ಕಿಲ್ಸ್ ಕೊರತೆ ಹಾಗೂ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರ ಅವಲಂಬನೆ ಸರಿದೂಗಿಸಿ, ಶಿಕ್ಷಣ-ಕೌಶಲ ಸುಧಾರಿಸಲು ಸಿಎಂಗೆ ಸಲಹೆ ನೀಡಿದ್ದಾರೆ. ಮತ್ತಷ್ಟು ಓದಿ
ಕೊಚ್ಚಿಯಲ್ಲಿ ನ್ಯಾಯಾಧೀಶರ 17 ವರ್ಷದ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಅಪ್ರಾಪ್ತನಿಗೆ ಕೆಲವೇ ಗಂಟೆಗಳಲ್ಲಿ ಜಾಮೀನು ಸಿಕ್ಕಿದ್ದು, ತನಿಖೆ ಹಾದಿತಪ್ಪಿಸಿ ಸಾಕ್ಷ್ಯ ನಾಶಪಡಿಸಲು ನ್ಯಾಯಾಧೀಶರು ಪ್ರಭಾವ ಬೀರುತ್ತಿದ್ದಾರೆ ಎಂದು ಮೃತನ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮತ್ತಷ್ಟು ಓದಿ
ಮೂರನೇ ಮದುವೆಯಾದ ಬೆನ್ನಲ್ಲೇ ನಟ ಆಮಿರ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿದ್ದು, ‘ಲವ್ ಜಿಹಾದ್’ ಆರೋಪದಡಿ ನಟನ ನಿವಾಸದ ಬಳಿ ವಾರಗಟ್ಟಲೆ ರೆಕಿ ನಡೆಸಿದ್ದಾರೆ. ಟೈಗರ್ ಶ್ರಾಫ್ ಶೂಟೌಟ್ ತನಿಖೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ಬಾಲಿವುಡ್‌ನಲ್ಲಿ ಆತಂಕ ಸೃಷ್ಟಿಸಿದೆ.
ಬೆಂಗಳೂರಿನ ಹೊಸಗುಡ್ಡದಹಳ್ಳಿಯಲ್ಲಿ ಒಂಟಿಯಾಗಿದ್ದ ವೆಂಕಟಲಕ್ಷ್ಮಮ್ಮ (70) ಎಂಬ ವೃದ್ಧೆಯ ತಲೆಗೆ ಹೊಡೆದು ಭೀಕರವಾಗಿ ಕೊಲೆ ಮಾಡಿ, ಮನೆಯಲ್ಲಿದ್ದ ಬೀರು ಒಡೆದು ಚಿನ್ನಾಭರಣ ದರೋಡೆ ಮಾಡಲಾಗಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
“ಮೋದಿ ಕಾ ಬಾಪ್ ಭಿ ಜಾಯೇಗಾ” ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ದೇಶಾದ್ಯಂತ ಭಾರಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಂದೆಯವರಿಗೆ ಮಾಡಿದ ಅಪಮಾನ ಇದಾಗಿದೆ ಎಂದು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದೆ.ಆದರೆ, ಈ ಇಡೀ ಪ್ರಕರಣಕ್ಕೆ ಕಾರಣ ಎನ್ನಲಾದ ಮತ್ತು ಇತ್ತೀಚೆಗೆ ಥಳಿತಕ್ಕೊಳಗಾಗಿದ್ದ ಸಂತೋಷ್ ಕುಮಾರ್ ಎಂಬ ವ್ಯಕ್ತಿ ಇದೀಗ ಸ್ಫೋಟಕ ಸತ್ಯ ಬಹಿರಂಗಪಡಿಸಿದ್ದು, ಪ್ರಕರಣಕ್ಕೊಂದು ಅಚ್ಚರಿಯ ತಿರುವು ಸಿಕ್ಕಿದೆ. ಖರ್ಗೆಯವರು ಆಡಿದ ಮಾತುಗಳನ್ನು ಮತ್ತು ತಾನು ಹೇಳಿದ ಸಂದರ್ಭವನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ಆತ ಸ್ಪಷ್ಟಪಡಿಸಿದ್ದಾನೆ. ಮತ್ತಷ್ಟು ಓದಿ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಬೆಳಗ್ಗೆ 10:30ಕ್ಕೆ ಹೆಣ್ಣೂರು-ಬಾಗಲೂರು ರಸ್ತೆಯ ವೈಟ್ ಟ್ಯಾಪಿಂಗ್ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ರಸ್ತೆ ನಿರ್ಮಾಣದ ಪ್ರಗತಿ, ಕಾಮಗಾರಿಯ ಗುಣಮಟ್ಟ ಹಾಗೂ ಅನುಷ್ಠಾನದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಕೋಲಾರದ ಮುಳಬಾಗಿಲು ಟೌನ್ ಕ್ಲಬ್ ಜೂಜು ಅಡ್ಡೆ ಮೇಲೆ ಎಎಸ್‌ಪಿ ಮೋನಿಷಾ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 20 ಜನರನ್ನು ಬಂಧಿಸಿ, ₹61,000 ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿದ ಆರೋಪಿ ಲಕ್ಷ್ಮೀನಾರಾಯಣನ ಪತ್ನಿ ಹಾಗೂ ಮಕ್ಕಳ ವಿರುದ್ಧವೂ ಮುಳಬಾಗಿಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News Today Live Updates in Kannada: ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ರಾಜ್ಯ ಹೆದ್ದಾರಿ ತಡೆದು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಇಂದು ಸಿಎಂ ಡಿ.ಕೆ ಶಿವಕುಮಾರ್ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ಕ ಕರೆದಿರುವ ಹಿನ್ನೆಲೆಯಲ್ಲಿ, ಸರ್ಕಾರ ಮತ್ತು ಮುಖ್ಯಮಂತ್ರಿಗಳ ಗಮನ ಸೆಳೆಯಲು ರೈತರು ಈ ಹೋರಾಟಕ್ಕಿಳಿದಿದ್ದಾರೆ.ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಒಣ ಹವೆ ಮತ್ತು ಚಳಿಯ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಒಳನಾಡಿನಲ್ಲಿ ಬಿರುಗಾಳಿ ಸಹಿತ ವಾತಾವರಣ ಇರಲಿದೆ. ಸೀಗೆ ಹುಣ್ಣಿಮೆ ಪ್ರಯುಕ್ತ ಕೊಪ್ಪಳದ ಐತಿಹಾಸಿಕ ಹುಲಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಹರಿದು ಬಂದಿದ್ದು, ದರ್ಶನಕ್ಕಾಗಿ ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಿದ ಘಟನೆ ನಡೆದಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 8:42 am, Mon, 26 October 26