Karnataka Breaking News Highlights: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​ನಲ್ಲಿ ಕ್ಲೀನ್ ಚಿಟ್​: ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ಬಿಗ್ ರಿಲೀಫ್

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 15, 2023 | 10:32 PM

Breaking News Today Highlights Updates: ಕರ್ನಾಟಕ ರಾಜಕೀಯ, ಮಳೆ, ಗೃಹಲಕ್ಷ್ಮಿ ಯೋಜನೆ ಸೇರಿದಂತೆ ರಾಜ್ಯದ ಪ್ರಮುಖ ಘಟನೆಗಳ ಕ್ಷಣ ಕ್ಷಣದ ಮಾಹಿತಿಯನ್ನು ಟಿವಿ9 ಡಿಜಿಟಲ್ ಲೈವ್​ ಮೂಲಕ ಪಡೆಯಿರಿ.

Karnataka Breaking News Highlights: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​ನಲ್ಲಿ ಕ್ಲೀನ್ ಚಿಟ್​: ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ಬಿಗ್ ರಿಲೀಫ್
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

Karnataka Breaking News Session Highlights: ಕರ್ನಾಟಕ ವಿಧಾನಸಭೆ ಮತ್ತು ವಿಧಾನಪರಿಷತ್ ಅಧಿವೇಶನ (Assembly Session) ನಡೆಯುತ್ತಿದ್ದು, ಸರ್ಕಾರ ಮತ್ತು ವಿಪಕ್ಷಗಳ ನಡುವೆ ವಾಗ್ವಾದಗಳು ನಡೆಯುತ್ತಿವೆ. ಇದರ ಜೊತೆಗೆ ಮಹತ್ವದ ಚರ್ಚೆಗಳು ಕೂಡ ನಡೆಯುತ್ತಿವೆ. ಇನ್ನು ಬೆಳಗಾವಿಯ ಚಿಕ್ಕೋಡಿಯ ಜೈನಮುನಿ ಹತ್ಯೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅಲ್ಲದೇ ರಾಜ್ಯದ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು (Karnataka Rains), ಕೆಲವು ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಮಳೆಯಾಗದೆ ರೈತರು ಕಂಗಾಲ ಆಗಿದ್ದಾರೆ. ರಾಜ್ಯದ ಇಂದಿನ ಪ್ರಮುಖ ವಿದ್ಯಮಾನಗಳ ಬಗೆಗಿನ ಲೇಟೆಸ್ಟ್​​ ಅಪ್ಡೇಟ್ಸ್​​ ಇಲ್ಲಿದೆ.

LIVE NEWS & UPDATES

The liveblog has ended.
  • 15 Jul 2023 10:00 PM (IST)

    Karnataka Breaking News Live: ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

    ಕೊಡವ ಬುಡಕಟ್ಟು ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಕೊಡವ ಮಂಡಳಿ ನಿಯೋಗದಿಂದ ಮನವಿ ಸಲ್ಲಿಸಲಾಗಿದೆ. ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

  • 15 Jul 2023 09:18 PM (IST)

    Karnataka Breaking News Live: ಕೆ.ಎಸ್.ಈಶ್ವರಪ್ಪ ಅಂದ್ರೆ ನಂಬಿಕೆ, ಇದೀಗ ತೀರ್ಪಿನಿಂದ ನಂಬಿಕೆ ಉಳಿದಿದೆ

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ರಿಲೀಫ್​​ ವಿಚಾರವಾಗಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪ ಪ್ರತಿಕ್ರಿಯಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪಿನಿಂದ ಬಹಳ ಸಂತಸವಾಗಿದೆ. ಈಶ್ವರಪ್ಪ ಮೇಲೆ ಆರೋಪ ಬಂದಾಗ ಕಾರ್ಯಕರ್ತರ ಮನಸ್ಸಿಗೆ ನೋವಾಗಿತ್ತು. ಕೆ.ಎಸ್.ಈಶ್ವರಪ್ಪ ಅಂದ್ರೆ ನಂಬಿಕೆ, ಇದೀಗ ತೀರ್ಪಿನಿಂದ ನಂಬಿಕೆ ಉಳಿದಿದೆ ಎಂದಿದ್ದಾರೆ.

  • 15 Jul 2023 08:39 PM (IST)

    Karnataka Breaking News Live: ಮಾಜಿ ಸಚಿವ ಕೆಎಸ್​ಈಶ್ವರಪ್ಪ ಹೇಳಿದಿಷ್ಟು

    ಶಿವಮೊಗ್ಗ: ನಾನು ನಂಬಿದ ನನ್ನ ಮನೆ ದೇವರು ಚೌಡೇಶ್ವರಿ ನಿರ್ದೋಷಿ ಅಂತಾ ನ್ಯಾಯ ಕೊಡಿಸಿದ್ದಾಳೆ. ನನಗೆ ದೇವಿಯ ಮೇಲೆ ನಂಬಿಕೆ ಇನ್ನು ಹೆಚ್ಚಾಯ್ತು. ನ್ಯಾಯಾಲಯದ ಮೇಲೆ ಗೌರವ ಹೆಚ್ಚಾಯ್ತು. ರಾಜ್ಯದಾದ್ಯಂತ ಪ್ರವಾಸ ಮಾಡಿ‌ ಪಕ್ಷ ಸಂಘಟನೆ ಮಾಡಲು ಮತ್ತಷ್ಟು ಶಕ್ತಿ ದೊರೆಯಿತು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

  • 15 Jul 2023 08:30 PM (IST)

    Karnataka Breaking News Live: ಮಾಜಿ ಸಚಿವ ಕೆಎಸ್​ ಈಶ್ವರಪ್ಪಗೆ ಬಿಗ್ ರಿಲೀಫ್

    ಬೆಂಗಳೂರು: ಗುತ್ತಿಗೆದಾರ ಸಂತೋಷ್​​ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಕೆ ಮಾಡಿದ್ದರು.

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪಗೆ ರಿಲೀಫ್

  • 15 Jul 2023 07:17 PM (IST)

    Karnataka Breaking News Live: ಯಾಕೆ ಅಳುತ್ತಾ ಕೂತ್ಕೊಬೇಕಿತ್ತಾ: ಪರಮೇಶ್ವರ್​ ಟಾಂಗ್

    ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ಕೊಡಬೇಕಿಲ್ಲ ಎಂದು​ ತುಮಕೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಹೇಳಿದರು. ಚುನಾವಣೆಯಲ್ಲಿ ನಾವು 136 ಸ್ಥಾನಗಳನ್ನು ಗೆದ್ದ ಜೋಶ್​​ನಲ್ಲಿದ್ದೇವೆ. ಯಾಕೆ ಅಳುತ್ತಾ ಕೂತ್ಕೊಬೇಕಿತ್ತಾ ಎಂದು ಡಾ.ಪರಮೇಶ್ವರ್​ ಟಾಂಗ್ ನೀಡಿದರು.

  • 15 Jul 2023 06:36 PM (IST)

    Karnataka Breaking News Live: ಧಾರಾಕಾರ ಮಳೆ: ರೈತರ ಮೊಗದಲ್ಲಿ ಮಂದಹಾಸ

    ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದ್ದು, ಚರಂಡಿ‌ ನೀರು ರಸ್ತೆಗೆ ನುಗ್ಗಿದೆ. ನಿನ್ನೆ ರಾತ್ರಿಯಿಂದ ಹೊಸಪೇಟೆ ತಾಲೂಕಿನ ಹಲವೆಡೆ ಉತ್ತಮ ಮಳೆ ಆಗಿದೆ.

  • 15 Jul 2023 06:04 PM (IST)

    Karnataka Breaking News Live: ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಅವ್ಯವಹಾರ ಆರೋಪ

    ತುಮಕೂರು ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದಿದೆ. ಪರಿಶೀಲನೆ ನಡೆಸಲಾಗುತ್ತಿದೆ, ಆ ರೀತಿ ಕಂಡುಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ತುಮಕೂರು ಸಿಟಿ ರೌಂಡ್ಸ್‌ ಬಳಿಕ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಪರಮೇಶ್ವರ್ ಹೇಳಿದರು.

  • 15 Jul 2023 05:42 PM (IST)

    Karnataka Breaking News Live: ಈ ಸರ್ಕಾರಕ್ಕೆ ಆಯಸ್ಸಿಲ್ಲ

    ಈ ಸರ್ಕಾರಕ್ಕೆ ಆಯಸ್ಸಿಲ್ಲ, ಡಿಸೆಂಬರ್ ಅಥವಾ ಜನವರಿಗೆ ಬಿದ್ದು ಹೋಗುತ್ತದೆ. ಕಾಂಗ್ರೆಸ್​ ಸರ್ಕಾರ ಪತನ ನಂತರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಕೋಲಾರದಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು.

  • 15 Jul 2023 05:18 PM (IST)

    Karnataka Breaking News Live: ತೆರಿಗೆ ಕಟ್ಟದವರನ್ನು ಮ್ಯಾಪಿಂಗ್ ಮಾಡಲು ಸೂಚನೆ

    ಯಾರು ತೆರಿಗೆ ಕಟ್ಟುತ್ತಿಲ್ಲವೋ ಅವರನ್ನು ಮ್ಯಾಪಿಂಗ್ ಮಾಡಲು ಸೂಚನೆ ನೀಡಲಾಗಿದೆ ಎಂದು ವಿಧಾನಸೌಧದಲ್ಲಿ ಸಂವಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್​​ ಹೇಳಿದರು. ಟೆಕ್ನಾಲಜಿ ಉಪಯೋಗಿಸಿಕೊಂಡು ಹೊಸ ಕಾರ್ಯಕ್ರಮ ನೀಡಬೇಕಿದೆ. ಬೆಂಗಳೂರಲ್ಲಿ ತೆರಿಗೆ ಕಟ್ಟದೆ ಕಳ್ಳಾಟ ಆಡುವವರನ್ನು ಟ್ರೇಸ್ ಮಾಡಬೇಕು ಎಂದರು.

  • 15 Jul 2023 04:37 PM (IST)

    Karnataka Breaking News Live: ಬಜೆಟ್​​ ಮಂಡನೆ ಬಳಿಕ ಕಡತ ವಿಲೇವಾರಿಗೆ ಮುಂದಾದ ಸಿಎಂ

    ಬಜೆಟ್​​ ಮಂಡನೆ ಬಳಿಕ ಕಡತ ವಿಲೇವಾರಿಗೆ ಸಿಎಂ ಸಿದ್ಧರಾಮಯ್ಯ ಮುಂದಾಗಿದ್ದು, ಬಜೆಟ್ ಮಂಡನೆ ಹಿನ್ನೆಲೆ ಸಿಎಂ ಕಡತ ವಿಲೇವಾರಿ ಮಾಡಿರಲಿಲ್ಲ. ಶಕ್ತಿಭವನದಲ್ಲಿ ಬಜೆಟ್ ಮಂಡನೆ ಬಳಿಕ ಕಡತ ವಿಲೇವಾರಿಯಲ್ಲಿ ತೊಡಗಿದ್ದಾರೆ.

  • 15 Jul 2023 03:55 PM (IST)

    Karnataka Breaking News Live: ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಎದುರೇ ಕೇಂದ್ರದ ವಿರುದ್ಧ ಟೀಕೆ

    ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಎದುರೇ ಕೇಂದ್ರದ ವಿರುದ್ಧ ಟೀಕೆ ಮಾಡುವ ಮೂಲಕ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಭಾಷಣದ ವೇಳೆ ಗೊಂದಲಕ್ಕಿ ಒಳಗಾಗಿದ್ದಾರೆ. ಕೇಂದ್ರ ಸರ್ಕಾರ ರೈತರ ಪರವಾಗಿ ನಿಲ್ಲಲಿಲ್ಲ ಎಂದು ಸಚಿವ ಮುನಿಯಪ್ಪ ಹೇಳಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಕೂಗಿದ್ದಾರೆ.

  • 15 Jul 2023 03:25 PM (IST)

    Karnataka Breaking News Live: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಜುಲೈ 19ರಂದು ಚಾಲನೆ

    ಗೃಹ ಲಕ್ಷ್ಮಿ ಯೋಜನೆಗೆ ಜುಲೈ 19 ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

  • 15 Jul 2023 02:55 PM (IST)

    Karnataka Breaking News Live: ಕೋಲಾರದಲ್ಲಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ

    ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಚಾಲನೆ ನೀಡಲಾಗಿದೆ. ವೇದಿಕೆ ಮೇಲೆ ಅನ್ನಭಾಗ್ಯ ಯೋಜನೆಯನ್ನು ಸಂಸದ ಮುನಿಸ್ವಾಮಿ ಟೀಕಿಸಿದ್ದಾರೆ. 10 ಕೆಜಿ ಅಕ್ಕಿ ಅಂತಾ ಹೇಳಿ ಈಗ 5 ಕೆಜಿ ಅಷ್ಟೇ ಅನ್ನೋದು ಸರಿಯಲ್ಲ ಎಂದಿದ್ದಾರೆ.

  • 15 Jul 2023 02:24 PM (IST)

    Karnataka Breaking News Live: ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಣೆ ಮಾಡ್ತೇವೆ

    ಮಳೆಯಾಗದ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ಮಳೆ ಕೊರತೆ ಹಿನ್ನೆಲೆ ಬರಪೀಡಿತ ಎಂದು ಘೋಷಣೆ ಮಾಡಬೇಕಿದೆ. ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಬರಪೀಡಿತ ಎಂದು ಸಿಎಂ ಘೋಷಣೆ ಮಾಡಲಿದ್ದಾರೆ ಎಂದರು.

  • 15 Jul 2023 01:27 PM (IST)

    Karnataka Breaking News Live: ವೇದಿಕೆ ಹಂಚಿಕೊಳ್ಳದ ಸಂಸದೆ ಸುಮಲತಾ, ಸಚಿವ ಚಲುವರಾಯಸ್ವಾಮಿ

    ಮಂಡ್ಯದಲ್ಲಿ ವಿಶ್ವವಿದ್ಯಾಲಯದ ಸಾಂಸ್ಕೃತಿಕ ಹಬ್ಬದ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಮತ್ತು ಸಚಿವ ಚಲುವರಾಯಸ್ವಾಮಿ ಅವರು ವೇದಿಕೆ ಹಂಚಿಕೊಂಡಿಲ್ಲ. ಚಲುವರಾಯಸ್ವಾಮಿಗೂ ಮುನ್ನ ಕಾರ್ಯಕ್ರಮದಲ್ಲಿ ಸುಮಲತಾ ಭಾಗಿಯಾಗಿದ್ದಾರೆ. ಕಾರ್ಯಕ್ರಮ ಉದ್ಘಾಟನೆಯಾಗದಿದ್ದರೂ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡಿ ತೆರಳಿದರು. ನಂತರ ಕಾರ್ಯಕ್ರಮಕ್ಕೆ ಆಗಮಿಸಿದ ಚಲುವರಾಯಸ್ವಾಮಿ, ಕಾರ್ಯಕ್ರಮ ಉದ್ಘಾಟಿಸಿದರು. ಸದ್ಯ ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಂಸದೆ ಸುಮಲತಾ ಅವರು ದಿಶಾ ಸಭೆ ನಡೆಸುತ್ತಿದ್ದಾರೆ.

  • 15 Jul 2023 01:24 PM (IST)

    Karnataka Breaking News Live: ಸುಮಲತಾ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಚಲುವರಾಯಸ್ವಾಮಿ

    ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಜೊತೆ ವೇದಿಕೆ ಹಂಚಿಕೊಳ್ಳದ ವಿಚಾರವಾಗಿ ಮಾತನಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸುಮಲತಾ ಜೊತೆ ಈಗಾಗಲೇ 2-3 ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಸುಮಲತಾ ಯಾವುದಾದರು ಸಮಸ್ಯೆ ಬಗ್ಗೆ ಗಮನಕ್ಕೆ ತಂದರೆ ಬಗೆಹರಿಸುತ್ತೇನೆ ಎಂದರು.

  • 15 Jul 2023 01:22 PM (IST)

    Karnataka Breaking News Live: ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

    ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ  ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ. ಜುಲೈ 1ರಿಂದಲೇ ಅನ್ವಯ ಆಗುವಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಸಹಕಾರಿ ಬ್ಯಾಂಕ್​ಗೆ 100 ವರ್ಷದ ಇತಿಹಾಸ ಹೊಂದಿದೆ.

  • 15 Jul 2023 01:20 PM (IST)

    Karnataka Breaking News Live: ನಂದಿಪರ್ವತ ಆಶ್ರಮಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ

    ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ನಂದಿಪರ್ವತ ಆಶ್ರಮಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ ನೀಡಿದರು. ಕಾಮಕುಮಾರ ನಂದಿ ಮಹಾರಾಜರಿಗೆ ಪುಷ್ಪನಮನ ಸಲ್ಲಿಸಿದ ಶ್ರದ್ಧಾಂಜಲಿ ಅರ್ಪಿಸಿದ ಶ್ರೀಗಳು, ಜೈನಮುನಿ ಪೂರ್ವಾಶ್ರಮದ ಸಂಬಂಧಿ, ಭಕ್ತರ ಜೊತೆ ಮಾತುಕತೆ ನಡೆಸಿದರು.

  • 15 Jul 2023 11:42 AM (IST)

    Karnataka Breaking News Live: ಬರಗಾಲ ಪೀಡಿತ ಪ್ರದೇಶ ಘೋಷಣೆ ನಿರ್ಧಾರ ಸರ್ಕಾರದ್ದು: ಸಚಿವ ಲಾಡ್

    ಧಾರವಾಡ: ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆ ವಿಚಾರವಾಗಿ ಮಾತನಾಡಿದ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಬರಗಾಲ ಪೀಡಿತ ಪ್ರದೇಶ ಘೋಷಣೆ ನಿರ್ಧಾರ ಸರ್ಕಾರ ಮಾಡುತ್ತದೆ. ಸರ್ವೆ ವರದಿ, ಮಳೆ ಅಂಕಿ ಸಂಖ್ಯೆ ನೋಡಿ ತೀರ್ಮಾನ ಆಗುತ್ತದೆ. ಈಗಾಗಲೇ ಸರ್ಕಾರ, ಸಂಬಂಧಿಸಿ ಸಚಿವರು ಎಲ್ಲ ಮಾಹಿತಿ ಪಡೆದಿದ್ದಾರೆ. ಸಂಬಂಧಿತ ಇಲಾಖೆಯ ಸಚಿವರೆ ತೀರ್ಮಾನ ಹೇಳುತ್ತಾರೆ. ಧಾರವಾಡ ಜಿಲ್ಲೆಯಲ್ಲಿಯೂ ಮಳೆ ಕಡಿಮೆ ಆಗುತ್ತಿದೆ. ಶೇ. 55ರಷ್ಟು ಮಳೆ ಕೊರತೆ ಇದೆ. ಮಳೆ ಆಗುವ ಸಾಧ್ಯತೆಯ ವರದಿ ಇತ್ತು. ಕಳೆದ ವಾರ ಆಗಬೇಕಿತ್ತು, ಆಗಿಲ್ಲ. ಹೀಗಾಗಿ ಬರಗಾಲ ಘೋಷಣೆ ನಿರೀಕ್ಷೆ ಮಾಡುತ್ತಿದ್ದೇವೆ ಎಂದರು.

  • 15 Jul 2023 11:32 AM (IST)

    Karnataka Breaking News Live: ಮಳೆ ಬರುತ್ತದೆ ಎಂಬ ನಂಬಿಕೆ ಇದೆ: ಕೃಷಿ ಸಚಿವ

    ಮಂಡ್ಯ: ಚಿಕ್ಕಮಗಳೂರಿಗೆ ಮಳೆಗಾಗಿ ಪೂಜೆ ಮಾಡಿ ಬಂದಿದ್ದೇವೆ. ಮಳೆ ಬರುತ್ತದೆ ಎಂಬ ನಂಬಿಕೆ ಇದೆ. ಈ ತಿಂಗಳ ಒಳಗೆ ಒಳ್ಳೆಯ ಮಳೆ ಬರಲಿದೆ ಎಂದ ವರದಿ ಇದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಆಶಾದಾಯಕವಾಗಿ ಇರಬೇಕಾದದ್ದು ಅನಿರ್ವಾಯತೆ. ಕೆಆರ್​ಎಸ್ ಒಳಹರಿವು ಕೂಡ ಕಡಿಮೆ ಆಗಿದೆ. ಸಮಸ್ಯೆಯಂತು ಇದೆ. ಮಳೆಯೇ ಬರದಿದ್ದಾಗ ಬರಗಾಲ ಘೋಷಣೆ ಮಾಡುವುದು. ಮೋಡ ಬಿತ್ತನೆ ಮಾಡುವ ಬಗ್ಗೆ ಸರ್ಕಾರ ಅಂತಿಮ ಹೆಜ್ಜೆ ಇಡುತ್ತದೆ. ಕ್ಯಾಬಿನೆಟ್ ಸಬ್ ಕಮಿಟಿ ಈಗಾಗಲೇ ಒಂದು ಸಭೆ ಮಾಡಿದೆ. ಕೆಲವೊಂದು ಮಾನದಂಡದ ನಂತರ ಬರಗಾಲ ಘೋಷಣೆ ಮಾಡಲಾಗುವುದು ಎಂದರು.

  • 15 Jul 2023 11:25 AM (IST)

    Karnataka Breaking News Live: ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ನೋಂದಣಿ ಆರಂಭ: ಲಕ್ಷ್ಮಿ ಹೆಬ್ಬಾಳ್ಕರ್

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್​ಟಿ ಪಾವತಿದಾರರಾಗಿರತಕ್ಕದ್ದಲ್ಲ. ರೇಷನ್ ಕಾರ್ಡ್​ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್​ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು.

  • 15 Jul 2023 11:22 AM (IST)

    Karnataka Breaking News Live: ‘ಗೃಹಲಕ್ಷ್ಮೀ’ಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರಿಗೆ ಆಹ್ವಾನ

    ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ರಾಷ್ಟ್ರೀಯ ನಾಯಕರನ್ನು ಆಹ್ವಾನ ಮಾಡಲಾಗಿದೆ. ಈ ಸಂಬಂಧ ರಾಷ್ಟ್ರೀಯ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಆಗಸ್ಟ್​ 16 ಅಥವಾ 17ರಂದು ಯಜಮಾನಿ ಖಾತೆಗೆ ಹಣ ಹಾಕುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

  • 15 Jul 2023 10:57 AM (IST)

    Karnataka Breaking News Live: ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಮೋದಿಗೆ ಬೆಂಬಲ ಕೊಡಬೇಕು: ಶೋಭ ಕರಂದ್ಲಾಜೆ

    ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುವ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ, ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು. ಭಾರತಕ್ಕೆ ಎದ್ದುನಿತ್ತು ಗೌರವ ನೀಡುತ್ತಿರುವುದು ಪ್ರಧಾನಿ ಮೋದಿ ಅವರ ಕಾರಣಕ್ಕೆ. ನರೇಂದ್ರ ಮೋದಿ ಅವರಿಗೆ ರಾಜಕೀಯ ಭಿನ್ನಮತಗಳನ್ನ ದೂರವಿಟ್ಟು ಬೆಂಬಲ ಕೊಡಬೇಕು. ಇಂತಹ ಅಪೇಕ್ಷೆ ಎಲ್ಲಾ ರಾಜಕೀಯ ಪಾರ್ಟಿಯಲ್ಲೂ ಇದೆ. ಇದೆ ಅಪೇಕ್ಷೆಯನ್ನ ಜೆಡಿಎಸ್​ನಿಂದ ನಿರೀಕ್ಷೆ ಮಾಡುತ್ತೇವೆ. ದೇಶದಲ್ಲಿರುವ ರಾಜಕೀಯ ಪಕ್ಷಗಳು ಪ್ರಧಾನಿ ಮೋದಿ ಜೊತೆ ಜೋಡಣೆ ಆಗುತ್ತಿದೆ. ಭಾರತ ನೂರನೇ ವರ್ಷದ ಸಂಭ್ರಮಾಚರಣೆಯ ದಿನ ವಿಶ್ವದಲ್ಲೇ ನಂಬರ್ ಓನ್ ಆಗಿರಬೇಕು ಎಂಬುದು ಮೋದಿ ಅವರ ಆಸೆ ಎಂದರು.

  • 15 Jul 2023 10:09 AM (IST)

    Karnataka Breaking News Live: ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವು

    ಚಿರತೆ ದಾಳಿಯಿಂದ ಗಂಭೀರ ಗಾಯಗೊಡಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ. ಸುಶೀಲಾ ಚಿಕಿತ್ಸೆ ಫಲಿಸದೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಬಾಲಕಿ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಸೋಲಿಗರ ಹಾಡಿಯಲ್ಲಿ ಚಿರತೆ ದಾಳಿ ನಡೆಸಿತ್ತು.

  • 15 Jul 2023 10:06 AM (IST)

    Karnataka Breaking News Live: ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸಮಿತಿ ಮೂಲಕ ನೇಮಕ: ಸಚಿವ ಲಾಡ್

    ನಿಗಮ ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಅಧ್ಯಕ್ಷರು ಅರ್ಜಿಗಳನ್ನು ಕೇಳಿದ್ದಾರೆ, ಸಮಿತಿ ಮೂಲಕ ನೇಮಕ ಮಾಡಲಾಗುವುದು ಎಂದರು. ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ ಆರೋಪ ವಿಚಾರವಾಗಿ ಮಾತನಾಡಿದ ಅವರು, ಕೊಡಬಾರದು ಅಂತ ನಿರ್ಣಯಿಸಿದರೆ ಅದು ಸರ್ಕಾರದ ನಿರ್ಧಾರ. ಇದು ಸೇಡಿನ ರಾಜಕಾರಣ ಆಗುವುದಿಲ್ಲ ಎಂದರು.

  • 15 Jul 2023 09:19 AM (IST)

    Karnataka Breaking News Live: ಲೋಕಸಭಾ ಟಿಕೆಟ್ ಮೇಲೆ ಮಾಜಿ ಸಚಿವ ವಿ.ಸೋಮಣ್ಣ ಕಣ್ಣು​

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಸಚಿವ ವಿ ಸೋಮಣ್ಣ ಅವರ ಕಣ್ಣು ಲೋಕಸಭೆ ಟಿಕೆಟ್ ಮೇಲೆ ಬಿದ್ದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಸೋಮಣ್ಣ ಹೇಳಿದ್ದಾರೆ.

  • 15 Jul 2023 09:17 AM (IST)

    Karnataka Breaking News Live: ಹಾವು ಕಚ್ಚಿ ಮಹಿಳೆ ಸಾವು

    ಕಲಬುರಗಿ: ಹಾವು ಕಡಿತಕ್ಕೊಳಗಾದ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೊಡೆಬಿರನಹಳ್ಳಿ ಗ್ರಾಮದಲ್ಲಿ ನಡೆದಿದೆ. ನರಸಮ್ಮ ನರಸಪ್ಪ( 35) ಮೃತ ಮಹಿಳೆ. ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿತ್ತು. ಆಸ್ಪತ್ರೆಗೆ ಕರೆದೋಯ್ಯೂವಾಗಲೇ ನರಸಮ್ಮ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸುಲೇಪೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 15 Jul 2023 09:15 AM (IST)

    Karnataka Breaking News Live: ದಾವಣಗೆರೆ SP ಕಚೇರಿಯಲ್ಲಿ ವಿಷಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

    ಆಸ್ತಿವಿವಾದ ನ್ಯಾಯ ಸಿಗದ ಹಿನ್ನೆಲೆ ಮಹಿಳೆಯೊಬ್ಬರು ದಾವಣಗೆರೆ ಎಸ್​ಪಿ ಕಚೇರಿಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ವೆಂಕಟೇಶ್ ಕಿರುಕಳಕ್ಕೆ ಬೇಸತ್ತು ಆತ್ಮಹತ್ಯಗೆ ಯತ್ನಿಸಿದ್ದಾರೆ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಎಸ್ಪಿ ಡಾ.ಕೆ ಅರುಣ್ ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.

  • 15 Jul 2023 08:43 AM (IST)

    Karnataka Breaking News Live: ಟ್ರೇಡ್‌ ಲೈಸೆನ್ಸ್​ಗಾಗಿ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

    ಟ್ರೇಡ್‌ ಲೈಸೆನ್ಸ್​ಗಾಗಿ ಲಂಚ ಪಡೆಯುತ್ತಿದ್ದ ಆಹಾರ ನಿರೀಕ್ಷಕ ಮಹಾಂತೇಗೌಡ ಅವರನ್ನು ಲೋಕಾಯುಕ್ತ ಪೊಲೀಸರು 15 ಕಿ.ಮೀ. ಚೇಸ್ ಮಾಡಿ ಹಿಡಿದಿದ್ದಾರೆ. ಕೆ.ಜಿ.ಸರ್ಕಲ್ ಬಳಿ ಇರುವ ತಹಶೀಲ್ದಾರ್​ ಕಚೇರಿಯಲ್ಲಿ ಆಹಾರ ನಿರೀಕ್ಷಕ ಆಗಿರುವ ಮಹಾಂತೇಗೌಡ ಅವರು ರಂಗದಾಮಯ್ಯ ಬಳಿ 1 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 43 ಸಾವಿರ ರೂ. ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಪರಿಯಾಗಿದ್ದಾರೆ. ಬೆನ್ನಟ್ಟಿದ ಲೋಕಾಯುಕ್ತ ಪೊಲೀಸರು 15 ಕಿಮೀ ದೂರದವರೆಗೆ ಚೇಸ್ ಮಾಡಿ ಸೆರೆಹಿಡಿದಿದ್ದಾರೆ.

  • 15 Jul 2023 08:40 AM (IST)

    Karnataka Breaking News Live: ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಸಿಎಂ ಆದೇಶ

    ಕೋಲಾರ: ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯತಗೋಳ ಗ್ರಾಮದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿಯು 160 ಕೋಟಿ ವೆಚ್ಚದಲ್ಲಿ ಯರಗೋಳ ಡ್ಯಾಂ ನಿರ್ಮಾಣ ಮಾಡಿದೆ. ಆದರೆ ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತಲೂ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಿದ ಆರೋಪ ಸಂಬಂಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ದೂರಿನ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ.

  • 15 Jul 2023 07:58 AM (IST)

    Karnataka Breaking News Live: ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ದ್ವೇಷದ ರಾಜಕಾರಣ?

    ಮೈಸೂರು: ಮಂಡ್ಯ ನಂತರ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದ್ವೇಷದ ರಾಜಕಾರಣದ ಆರೋಪ ಕೇಳಿಬಂದಿದೆ. K.R.ನಗರ ಶಾಸಕ ಡಿ.ರವಿಶಂಕರ್ ಮೇಲೆ ಈ ಆರೋಪ ಕೇಳಿ ಬಂದಿದೆ. ಅರಕೆರೆ ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆಯುವಂತೆ ಒತ್ತಡ ಹಾಕುತ್ತಿದ್ದು, ಬಿಡುವಂತೆ ಹೇಳುತ್ತಿರುವ ಪ್ರಿನ್ಸಿಪಾಲ್ ಸ್ವಾಮಿ ನೌಕರರಿಗೆ ಸೂಚಿಸುತ್ತಿದ್ದಾರೆ. ಕೆಲಸ ಬಿಡಿ ಇಲ್ಲ ಅಂದರೆ ಶಾಸಕ, ಶಾಸಕರ ಪಿಎರನ್ನು ಭೇಟಿ ಮಾಡಿ, ನಿಮ್ಮ ಸಮಸ್ಯೆ ಸರಿಪಡಿಸಿಕೊಂಡು ಬನ್ನಿ ಎಂದು ಹೇಳುತ್ತಿದ್ದು, ಮನನೊಂದ ನೌಕರ ಚಲುವರಾಜು ಅವರು ಕಣ್ಣೀರಿಟ್ಟಿದ್ದಾರೆ. ಚಲುವರಾಜು ಅವರಿಗೆ ಹೊರ ಗುತ್ತಿಗೆ ಆಧಾರದಲ್ಲಿ ಸಾ.ರಾ.ಮಹೇಶ್ ಅವರು ಕೆಲಸ ಕೊಡಿಸಿದ್ದರು. ಅದರಂತೆ 15 ವರ್ಷದಿಂದ ಮುಖ್ಯ ಅಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್ ಬೆಂಬಲಿತ ಎಂಬ ಕಾರಣಕ್ಕೆ ಕೆಲಸದಿಂದ ತೆಗೆಯುತ್ತಿರುವ ಆರೋಪ ಕೇಳಿಬಂದಿದೆ. ಇಷ್ಟು ದಿನ ಕೆಲಸ ಮಾಡಿದ್ದೀರಿ, ಈಗ ನಮ್ಮ ಬೆಂಬಲಿಗರಿಗೆ ಕೊಡಬೇಕು ಎಂದು ನೇರವಾಗಿ ಶಾಸಕ ಡಿ.ರವಿಶಂಕರ್ ಖಾಸಗಿ ಪಿಎ ನವೀನ್ ಹೇಳಿದ್ದಾರಂತೆ.

  • Published On - Jul 15,2023 7:53 AM

    Follow us
    ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
    ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
    ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
    ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
    ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
    ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
    ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
    ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
    ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
    ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
    ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
    ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
    ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
    ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
    ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
    ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
    ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
    ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
    ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
    ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ