2021ನೇ ಸಾಲಿನ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು (ಆಗಸ್ಟ್ 24) ರಂದು ದೆಹಲಿಯಲ್ಲಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಘೋಷಣೆ ಮಾಡಿದೆ. ದಕ್ಷಿಣ ಭಾರತದ ಹಲವು ಅತ್ಯುತ್ತಮ ಸಿನಿಮಾಗಳು ಈ ಬಾರಿ ಸ್ಪರ್ಧೆಯಲ್ಲಿದ್ದು, ಗೆದ್ದ ಸಿನಿಮಾಗಳು, ನಟರು ಹಾಗೂ ತಂತ್ರಜ್ಞರ ಪಟ್ಟಿ ಇಲ್ಲಿದೆ.
ಮಂಗಳೂರು: ‘777 ಚಾರ್ಲಿ’ ಸಿನಿಮಾಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಘೋಷಣೆ ಹಿನ್ನೆಲೆ ಟಿವಿ9 ಜೊತೆ ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್ ಸಂತಸ ಹಂಚಿಕೊಂಡಿದ್ದಾರೆ. ಅಮ್ಮನ ಜೊತೆ ಪ್ರಶಸ್ತಿಯ ಲೈವ್ ಅನೌನ್ಸ್ಮೆಂಟ್ ವಿಡಿಯೋ ನೋಡಿದ ಕಿರಣ್ ರಾಜ್ ಅವರು, ‘ಪ್ರಶಸ್ತಿ ಸಿಕ್ಕಿರೋದು ಬಹಳಷ್ಟು ಖುಷಿಯಾಗಿದೆ. ಇಡೀ ತಂಡಕ್ಕೆ ಚಾರ್ಲಿ ತುಂಬಾ ಸ್ಪೆಷಲ್ ಸಿನಿಮಾ. ಸುಮಾರು ವರ್ಷ ಇಡೀ ತಂಡ ಇದರ ಮೇಲೆ ಎಫರ್ಟ್ ಹಾಕಿದೆ. ದೊಡ್ಡ ಮಟ್ಟದಲ್ಲಿ ಜನ ಸಿನಿಮಾ ನೋಡಿ ಸಕ್ಸಸ್ ತಂದುಕೊಟ್ಟಿದ್ರು, ಇವಾಗ ರಾಷ್ಟ್ರಮಟ್ಟದಲ್ಲಿ ಗೌರವ ಸಿಕ್ತಾ ಇದೆ. ಪ್ರಶಸ್ತಿಯ ಬಗ್ಗೆ ಜಾಸ್ತಿ ನಿರೀಕ್ಷೆ ಇರಲಿಲ್ಲ
ದೊಡ್ಡ ಸಿನಿಮಾಗಳು ತುಂಬಾ ಇತ್ತು ಎಂದಿದ್ದಾರೆ.
ಬೆಂಗಳೂರು: ಇಂದು(ಆ.24) ದೆಹಲಿಯಲ್ಲಿ 2021 ರ ಸಾಲಿನ ಸಿನಿಮಾಗಳ ರಾಷ್ಟ್ರೀಯ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಅದರಲ್ಲಿ ನಮ್ಮ ಕನ್ನಡದ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದ್ದು, ಅನಿರುದ್ಧ್ ವಿಷ್ಣುವರ್ಧನ್ ನಿರ್ದೇಶನ ಮಾಡಿದ್ದ ‘ಬಾಳೆ ಬಂಗಾರ’ ಡಾಕ್ಯುಮೆಂಟರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ. ಇದರ ಜೊತೆಗೆ ಮತ್ತೊಬ್ಬರು ಅವಾರ್ಡ್ ಮುಡಿಗೇರಿಸಿಕೊಂಡಿದ್ದಾರೆ. ವಿವರ ನೋಡಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು: 2021 ರ ಸಾಲಿನ ಸಿನಿಮಾಗಳ ರಾಷ್ಟ್ರೀಯ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು. ಅದರಲ್ಲಿ ನಮ್ಮ ಕನ್ನಡದ ‘777 ಚಾರ್ಲಿ’ಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. ಈ ಕುರಿತು ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ ಖುಷಿ ಹಂಚಿಕೊಂಡಿದ್ದಾರೆ. ‘ನನಗೆ ಆಗ್ತಿರುವ ಸಂತಸವನ್ನು ಪದಗಳಲ್ಲಿ ಹೇಳಲು ಆಗ್ತಿಲ್ಲ. ಪ್ರಶಸ್ತಿ ಗೆದ್ದಿರುವುದು ನಮ್ಮ ಇಡೀ ತಂಡಕ್ಕೆ ಹೆಮ್ಮೆಯ ಕ್ಷಣ. ನಮ್ಮ ಶ್ರಮ ಫಲಿಸಿದೆ ಎಂದು ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.
Words cannot justify the happiness and delight this news has delivered! While I am ecstatic and overwhelmed, I am also feeling humbled and grateful. This is a proud moment for all of us at @ParamvahStudios. Many congratulations @Kiranraj61, the hardwork has paid off 🤗🤗♥️…
— Rakshit Shetty (@rakshitshetty) August 24, 2023
ದೆಹಲಿ: ತೆಲುಗು ಚಿತ್ರರಂಗದಲ್ಲಿ ಇದೇ ಮೊದಲು ಬಾರಿಗೆ ರಾಷ್ಟ್ರಪ್ರಶಸ್ತಿ ಪಡೆದಿದ್ದಾರೆ. ಹೌದು, 69 ವರ್ಷಗಳ ರಾಷ್ಟ್ರೀಯ ಪ್ರಶಸ್ತಿಗಳ ಇತಿಹಾಸದಲ್ಲಿ ಟಾಲಿವುಡ್‌ನಿಂದ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಲವು ತೆಲಗು ಚಿತ್ರಗಳು ರಾಷ್ಟ್ರಪ್ರಶಸ್ತಿ ಪಡೆದಿದ್ದರೂ, ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿರಲಿಲ್ಲ. 1997 ರಲ್ಲಿ ಹೀರೋ ನಾಗಾರ್ಜುನ ಅತ್ಯುತ್ತಮ ನಟನಾಗಿ ಆಯ್ಕೆಯಾಗಿದ್ದರು. ಇದೀಗ ಅಲ್ಲು ಅರ್ಜುನ್ ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿ ಪಡೆಯುವ ಮೂಲಕ ಸಂಚಲನ ಮೂಡಿಸಿದ್ದಾರೆ.
ದೆಹಲಿ: ನಾನ್ ಫೀಚರ್ ಸ್ಪೆಶಲ್ ಮೆನ್ಶನ್ ಚಿತ್ರವಾಗಿ ಅನಿರುದ್ಧ್ ವಿಷ್ಣುವರ್ಧನ್ ನಿರ್ದೇಶನ ಮಾಡಿದ್ದ ‘ಬಾಳೆ ಬಂಗಾರ’ ಡಾಕ್ಯುಮೆಂಟರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿದೆ.
ದೆಹಲಿ: ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಭಾವೈಕ್ಯತೆಯ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಇತ್ತ ರಾಜ್ಮೌಳಿ ನಿರ್ದೇಶನದ ‘ಆರ್ಆರ್ಆರ್’ ಸಿನಿಮಾವು ಅತ್ಯುತ್ತಮ ಜನಪ್ರಿಯ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ.
ದೆಹಲಿ: 2021ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರಕಟ ಮಾಡಿದ್ದು, ಪುಷ್ಪ ಸಿನಿಮಾ ನಟನೆಗಾಗಿ ಅಲ್ಲು ಅರ್ಜುನ್ಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ.
ದೆಹಲಿ: 2021ನೇ ಸಾಲಿನ ಅತ್ಯುತ್ತಮ ಗಾಯಕಿ ಪ್ರಶಸ್ತಿಯನ್ನು ಶ್ರೇಯಾ ಘೋಷಾಲ್ ಪಡೆದುಕೊಂಡಿದ್ದಾರೆ. ಜೊತೆಗೆ ಕಾಲ ಭೈರವಗೆ ಅತ್ಯುತ್ತಮ ಗಾಯಕ ಪ್ರಶಸ್ತಿ ದೊರೆತಿದೆ.
ದೆಹಲಿ: 2021ನೇ ಸಾಲಿನ ರಾಷ್ಟ್ರೀಯ ಚಲಚಚಿತ್ರ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಆಲಿಯಾ ಭಟ್, ಕೃತಿ ಸನಾನ್ಗೆ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ಗಂಗೂಬಾಯಿ ಸಿನಿಮಾದಲ್ಲಿನ ನಟನೆಗಾಗಿ ಆಲಿಯಾ ಭಟ್ಗೆ ಪ್ರಶಸ್ತಿ ಬಂದಿದ್ದು, ಪುಷ್ಪ ಸಿನಿಮಾ ನಟನೆಗಾಗಿ ಅಲ್ಲು ಅರ್ಜುನ್ಗೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.
ದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು ದೆಹಲಿಯಲ್ಲಿ ಘೋಷಣೆ ಮಾಡಲಾಗಿದ್ದು, ಇದೀಗ ಅತ್ಯುತ್ತಮ ಕನ್ನಡ ಚಲನಚಿತ್ರವಾಗಿ ‘777 ಚಾರ್ಲಿ’ ಪ್ರಶಸ್ತಿ ಪಡೆದುಕೊಂಡಿದೆ.
ದೆಹಲಿ: ಇಂದು ದೆಹಲಿಯಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, 28 ಭಾಷೆಗಳ 280 ಚಲನಚಿತ್ರಗಳು ಸ್ಪರ್ಧಿಸಿವೆ. ಇದೀಗ ಅತ್ಯುತ್ತಮ ಹಿಂದಿ ಚಲನಚಿತ್ರವಾಗಿ ‘ಸರ್ದಾರ್ ಉಧಮ್’ ಪ್ರಶಸ್ತಿ ಪಡೆದುಕೊಂಡಿದೆ.
ದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು ದೆಹಲಿಯಲ್ಲಿ ಘೋಷಣೆ ಮಾಡಲಾಗುವುದು. 2021ರಲ್ಲಿ ಬಿಡುಗಡೆ ಆದ ಅಥವಾ ಸೆನ್ಸಾರ್ ಆದ ಸಿನಿಮಾಗಳಲ್ಲಿ ಅತ್ಯುತ್ತಮವಾದ ಸಿನಿಮಾ, ನಟ-ನಟಿ ಹಾಗೂ ತಂತ್ರಜ್ಞರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗುವುದು. ದಕ್ಷಿಣ ಭಾರತದಿಂದ ಅತ್ಯುತ್ತಮ ಸಿನಿಮಾಗಳು ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೇಸ್ನಲ್ಲಿದೆ.
ಮೈಸೂರು: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ‘ ಸುಮಾರು 2 ಸಾವಿರ ಬಸ್ಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಹಾಸನ ಭಾಗದಿಂದ ಗೃಹಲಕ್ಷ್ಮೀ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಕರೆಸಲಾಗುವುದು ಎಂದರು.
ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಅಗಸ್ಟ್ 15 ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ಅಸ್ವಸ್ಥಗೊಂಡಿದ್ದ ದಂಪತಿಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಉಮಾ(48) ನಂಜುಂಡಪ್ಪ(55) ಮೃತ ದಂಪತಿಗಳು.
ಬಾಗಲಕೋಟೆ: ಸರ್ಕಾರದ ಎನ್ಇಪಿ ರದ್ದು ಮಾಡುವುದಾಗಿ ಹೇಳಿದ್ದು, ಈ ನಿರ್ಧಾರವನ್ನು ಖಂಡಿಸಿ ಇಂದು(ಆ.24) ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಎಬಿವಿಪಿ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡ: ಲೋಕಾಯುಕ್ತ ಬಲೆಗೆ ಧಾರವಾಡ ಡಿಡಿಪಿಯು ಕಚೇರಿ ಸಿಬ್ಬಂದಿ ಬಿದ್ದಿದ್ದಾರೆ. ಕಚೇರಿಯಲ್ಲೇ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ದಾಳಿ ಮಾಡಲಾಗಿದ್ದು, ಡಿಡಿಪಿಯು ಕಚೇರಿ ಸೆಕ್ಷನ್ ಆಧಿಕಾರಿ ದುರ್ಗದಾಸ್ ಮಸೂತಿ ಹಾಗೂ ಡಿಡಿಪಿಯು ಎಫ್ಡಿಎ ಸಹಾಯಕ ನಾಗರಾಜ್ ಹೂಗಾರ್ ಅವರು ನಿವೃತ್ತ ಉಪನ್ಯಾಸಕ ಸುಭಾಷ್ ಚವರೆಡ್ಡಿಯಿಂದ ಪಿಂಚಣಿ ನೀಡಲು ದಾಖಲೆ ಸರಿಪಡಿಸಿಕೊಡಲು 15,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ
ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಚಾಮರಾಜನಗರ: ಪ್ರಾಣಿ ದಾಳಿಯಿಂದ 3 ವರ್ಷದ ಮಗು ಸಾವನ್ನಪ್ಪಿರುವುದಾಗಿ ಆರೋಪಿಸಿ ಗ್ರಾಮಸ್ಥರೆಲ್ಲರೂ ಸೇರಿ ಜಿಲ್ಲೆಯ ಯಳಂದೂರಿನ ವಲಯ ಅರಣ್ಯಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಳೆದ ವಾರ ಯರಿಯೂರು ಗ್ರಾಮದಲ್ಲಿ ಪ್ರಾಣಿ ದಾಳಿಯಿಂದ ರುಕ್ಮಿಣಿ ಎಂಬ ಮಗು ಗಾಯಗೊಂಡಿತ್ತು. ನಿನ್ನೆ(ಆ.23) ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ಇದೀಗ ಪ್ರತಿಭಟನಾ ಸ್ಥಳಕ್ಕೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಂಜಾ ಚಾಕೊಲೇಟ್ ಮಾರಾಟ ಜಾಲ ಬೆಂಗಳೂರಿಗೂ ಕಾಲಿಟ್ಟಿದೆ. ಈ ಸಂಬಂಧ ಆರ್ಎಂಸಿ ಯಾರ್ಡ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಉತ್ತರ ಪ್ರದೇಶದಿಂದ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಯತ್ನಿಸಿದ್ದಾರೆ. ಮಹಾಕಾಲ್, ಆನಂದ್, ಚಾರ್ಮಿನಾರ್ ಹೆಸರಲ್ಲಿ ಗಾಂಜಾ ಚಾಕೊಲೇಟ್ ಮಾರಾಟಕ್ಕೆ ಯತ್ನಿಸಿದ್ದಾರೆ. ಶಮೀಮ್ ಅಖ್ತರ್ ಎಂಬಾತನನ್ನು ಬಂಧಿಸಿದ್ದು, 6 ಲಕ್ಷ ಮೌಲ್ಯದ ಚಾಕೊಲೇಟ್ ಜಪ್ತಿ ಮಾಡಲಾಗಿದೆ.
ಇಸ್ರೋದ ಐತಿಹಾಸಿಕ ಚಂದ್ರಯಾನ-3 ಯೋಜನೆ ಯಶಸ್ವಿ ಹಿನ್ನೆಲೆ ಪೀಣ್ಯದಲ್ಲಿನ ಇಸ್ರೋದ ISTRAC ಕೇಂದ್ರಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್ ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಬೆಳಗಾವಿಯಿಂದ ಶಿಫ್ಟ್ ವಿಚಾರಕ್ಕೆ ಸಂಬಂಧಿಸಿ ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಮೈಸೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮತ್ತೊಂದು ಕಾರ್ಯಕ್ರಮ ಆಯೋಜಿಸಲಾಗುವುದು. ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆ.30ರಂದು ಫಲಾನುಭವಿಗಳ ಬ್ಯಾಂಕ್ ಖಾತೆಗೆ ₹2000 ಜಮೆ ಆಗಲಿದೆ. ಫಲಾನುಭವಿಗಳ ಮೊಬೈಲ್ಗೆ ಕೂಡಲೇ ಮೆಸೇಜ್ ಬರಲಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ, ಹಣ ಬ್ಯಾಂಕ್ಗೆ ಡೆಪಾಸಿಟ್ ಆಗಿದೆ. ಸರ್ವರ್ ಸಮಸ್ಯೆಯಾದರೆ ಹಣ ಜಮೆ ತಡವಾಗಬಹುದು ಎಂದರು.
ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಚಾಲನೆ ಹಿನ್ನೆಲೆ ಮೈಸೂರು ಜಿ.ಪಂ. ಸಭಾಂಗಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದ್ದಾರೆ. ಮೈಸೂರು ವಿಭಾಗಿಯ ಮಟ್ಟದ ಅಧಿಕಾರಿಗಳ ಜೊತೆ ಡಿಕೆಶಿ ಸಭೆ ನಡೆಸಿದ್ದು ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಚಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ರವಿಶಂಕರ್ ಭಾಗಿಯಾಗಿದ್ದರು.
ಚಂದ್ರನಯಾನ 3 ಯಶಸ್ವಿಯಾದ ಹಿನ್ನೆಲೆ ಸರ್ಕಾರದ ವತಿಯಿಂದ ಇಸ್ರೋ ವಿಜ್ಞಾನಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳಿಗೆ ಸನ್ಮಾನ ಮಾಡಲು ಸರ್ಕಾರ ಚಿಂತಿಸಿದೆ. ಸೆಪ್ಟೆಂಬರ್ 2ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.
ಕಾವೇರಿ ನೀರು ವಿವಾದ ಸಂಬಂಧ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಸ್ಟಾಲಿನ್ ಭಾವಚಿತ್ರ ದಹಿಸಲು ವಾಟಾಳ್ ಮುಂದಾಗಿದ್ದಾರೆ. ಕರ್ನಾಟಕದಲ್ಲಿ ನೀರಿಗೆ ಅಭಾವ ಇದೆ. ನಮ್ಮ ರೈತರು ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗ ತಮಿಳುನಾಡಿಗೆ ನೀರು ಕೇಳೋದು ಸರಿಯಲ್ಲ. ಪ್ರತಿವರ್ಷ ತಮಿಳುನಾಡು-ಕರ್ನಾಟಕ ದ್ವೇಷ ಮಾಡ್ತಿದೆ. ಸ್ಟಾಲಿನ್ ರಾಜಕೀಯ ಕೈಬಿಡಬೇಕು ಅಂತಾ ಆಗ್ರಹಿಸಿ, ರಾಜ್ಯ ಸರ್ಕಾರವನ್ನು ಬೃಹನ್ನಳೆಗೆ ಹೋಲಿಸಿ ವಾಟಾಳ್ ಆಕ್ರೋಶ ಹೊರ ಹಾಕಿದ್ದಾರೆ.
ಆ.13 ರಂದು ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಜೂಜಾಟದ ಹಿನ್ನಲೆ ಗಲಾಟೆಯಾಗಿತ್ತು. ಗಲಾಟೆ ತಡೆಯಲು ವಿಫಲ ಹಾಗೂ ಕರ್ತವ್ಯಲೋಪದಡಿಯಲ್ಲಿ ಇಬ್ಬರು ಪೊಲೀಸರನ್ನ ಅಮಾನತು ಮಾಡಿದ ಕೊಪ್ಪಳ ಎಸ್ಪಿ ಯಶೋಧಾ ವಂಟಗೋಡಿ ಆದೇಶ ಹೊರಡಿಸಿದ್ದಾರೆ. ಹೆಡ್ ಕಾನ್ಸಟೇಬಲ್ ಸುರೇಶ್, ಕಾನ್ಸಟೇಬಲ್ ಶ್ರೀಕಾಂತ್ ರನ್ನ ಅಮಾನತು ಮಾಡಲಾಗಿದೆ. ಅಲ್ಲದೇ ಕಾರಟಗಿ ಠಾಣೆ ಇನ್ಸಪೆಕ್ಟರ್ ಸಿದ್ರಾಮಯ್ಯ ವಿರುದ್ದ ಶಿಸ್ತು ಕ್ರಮ ತೆಗೆದಕೊಳ್ಳುವಂತೆ ಬಳ್ಳಾರಿ ಐಜಿಪಿಗೆ ಕೊಪ್ಪಳ ಎಸ್ಪಿ ಯಶೋಧಾ ವಂಟಗೋಡಿ ವರದಿ ನೀಡಿದ್ದಾರೆ.
ಚಲಿಸುತ್ತಿದ್ದ ವಾಹನದ ಮೇಲೆ ಮರ ಬಿದ್ದು 8 ಜನರಿಗೆ ಗಾಯಗಳಾಗಿವೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಯಲಾಚಿಪಾಳ್ಯ ಗ್ರಾಮದ ಬಳಿ ಮರ ಬಿದ್ದಿದ್ದು ಟಾಟಾ ಏಸ್ ವಾಹನ ಸಂಪೂರ್ಣ ಜಖಂ ಆಗಿದೆ. ಘಟನೆಯಲ್ಲಿ 8 ಜನರಿಗೆ ಗಾಯಗಳಾಗಿದ್ದು ಡ್ರೈವರ್ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಎಲ್ಲ 8 ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಯಾವುದೇ ಕಂಡಿಷನ್ ಇಲ್ಲದೆಯೇ ಪಕ್ಷ ಸೇರ್ಪಡೆ ಆಗಿದ್ದೇನೆ. ಬಹಳ ದೊಡ್ಡ ಸಂಖ್ಯೆಯ ನಾಯಕರು ಜೊತೆಗಿದ್ದಾರೆ. ಬರುವ ದಿನಗಳಲ್ಲಿ ಪಂಚಾಯತಿ ಜಿಪಂ ತಾಪಂ ಚುನಾವಣೆಯಲ್ಲಿ ನನ್ನ ಎಲ್ಲ ಶ್ರಮ ಹಾಕ್ತೇನೆ. ಕೆಲವು ಜಿಲ್ಲಾ ನಾಯಕರು ಸಿಲ್ಲಿಯಾಗಿ ಮಾತಾಡಿರಬಹುದು. ಆ ಬಗ್ಗೆ ಜಿಲ್ಲಾಧ್ಯಕ್ಷರು ರಾಜ್ಯಾಧ್ಯಕ್ಷರು ಕ್ರಮ ವಹಿಸ್ತಾರೆ. ನಾನು ಹಿಂದೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಗಿದ್ದೆ. ಆದರೆ ಈಗ ಅಂತ ಯಾವ ಕಂಡಿಷನ್ ಕೂಡ ಹಾಕಿಲ್ಲ ಎಂದು ಪಕ್ಷ ಸೇರ್ಪಡೆ ಬಳಿಕ ಆಯನೂರು ಮಂಜುನಾಥ್ ತಿಳಿಸಿದರು.
ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳ ಈ ಸಾಧನೆ ಇಡೀ ದೇಶಕ್ಕೆ ಹೆಮ್ಮೆಯ ವಿಚಾರ. ನಮ್ಮ ಇಸ್ರೋ ವಿಜ್ಞಾನಿಗಳು ಹೊಸ ಇತಿಹಾಸ ಬರೆದಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತವರ ತಂಡಕ್ಕೆ ಅಭಿನಂದಿಸಿದ್ದೇನೆ. ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ವಿಜ್ಞಾನಿಗಳ ತಂಡಕ್ಕೆ ರಾಜ್ಯ ಸರ್ಕಾರದವತಿಯಿಂದ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.
ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿ ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ರಾಜ್ಯದ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದಿಸಿದರು. ಇಸ್ರೋ ವಿಜ್ಞಾನಿಗಳು ಇತಿಹಾಸದ ಪುಟ ಸೇರುವ ಸಾಧನೆ ಮಾಡಿದ್ದಾರೆ. ಇಡೀ ಪ್ರಪಂಚ ಭಾರತೀಯ ವಿಜ್ಞಾನಿಗಳನ್ನು ಹಾಡಿ ಹೊಗಳುತ್ತಿದ್ದಾರೆ. ದೂರದೃಷ್ಟಿ ಇಟ್ಟುಕೊಂಡು ನೆಹರು ಇಸ್ರೋ ಸಂಸ್ಥೆ ಸ್ಥಾಪನೆ ಮಾಡಿದ್ದರು. ಇಸ್ರೋ ಅಧ್ಯಕ್ಷ ಸೋಮನಾಥ ತಂಡಕ್ಕೆ ಅಭಿನಂದನೆಗಳು ಎಂದು ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರು ಗ್ರಾಮದಲ್ಲಿ ನೀರಿನ ಟ್ಯಾಂಕ್ ನಲ್ಲಿ ಅಪರೂಪದ ಮರನಾಗಿ ಪತ್ತೆಯಾಗಿದೆ. ನರಿ ಜಾತಿಗೆ ಸೇರಿದ ಅಳಿವಿನಂಚಿನಲ್ಲಿರುವ ಅಪರೂಪದ ಮರನಾಗಿ ಕಂಡು ಜನ ಸಂತಸಪಟ್ಟಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಮರನಾಗಿಯನ್ನ ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಕೇರಳದ ವಯನಾಡು ಭಾಗದಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕು ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯದ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ. ಜಲಾಶಯದ ಮಟ್ಟದಲ್ಲೂ ಗಣನೀಯ ಇಳಿಕೆ ಕಂಡು ಬಂದಿದೆ. 84 ಅಡಿ ಗರಿಷ್ಠ ಸಾಮರ್ಥ್ಯದ ಕಬಿನಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 75.72 ಅಡಿ. ಜಲಾಶಯದ ಇಂದಿನ ಒಳಹರಿವು 970 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಕಳೆದ ವರ್ಷ ಇದೇ ದಿನ 8,214 ಕ್ಯೂಸೆಕ್ ಒಳಹರಿವು ಇತ್ತು. ಜಲಾಶಯದ ಹೊರಹರಿವು 3,825 ಕ್ಯೂಸೆಕ್.
ವರಮಹಾಲಕ್ಷ್ಮೀ ಹಬ್ಬಕ್ಕೆ ಸಿಲಿಕಾನ್ ಸಿಟಿ ಜನರ ಸಿದ್ಧತೆ ಜೋರಾಗಿದೆ. ಕೆ.ಆರ್.ಮಾರ್ಕೆಟ್ ನಲ್ಲಿ ಹಬ್ಬದ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಹಬ್ಬದ ಹಿನ್ನೆಲೆ ಹಣ್ಣು, ಹೂವಿನ ದರ ಗಗನಕ್ಕೇರಿದೆ. ಹಬ್ಬದ ಸಂಭ್ರಮದಲ್ಲಿದ್ದವರಿಗೆ ಬೆಲೆಯೇರಿಕೆ ಬಿಸಿ ತಟ್ಟಿದೆ. ಬಜೆಟ್ ನೋಡಿಕೊಂಡು ಜನ ಖರೀದಿಗೆ ಮುಂದಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಚೆನ್ನೂರ್ ಗ್ರಾಮದ ಶಾಲೆಗೆ 21 ವರ್ಷದ ಬಳಿಕ ಬಿಸಿಯೂಟದ ಭಾಗ್ಯ ದೊರೆತಿದೆ. 21 ವರ್ಷದ ಬಳಿಕ ಸರ್ಕಾರಿ ಶಾಲೆಯ ಮಕ್ಕಳು ಬಿಸಿಯೂಟ ಸೇವಿಸಿದ್ದಾರೆ. 2002 ರಲ್ಲಿ ಬಿಸಿಯೂಟ ಸಹಾಯಕಿಯರ ನೇಮಕದ ವಿಚಾರದಲ್ಲಿ ಜಾತಿ ಸಂಘರ್ಷದಿಂದ 21 ವರ್ಷದ ಹಿಂದೆ ಬಿಸಿಯೂಟ ಬಂದ್ ಆಗಿತ್ತು. ಅಧಿಕಾರಿಗಳ ಸಂಧಾನದ ಬಳಿಕ ಈಗ ಮತ್ತೆ ಬಿಸಿಯೂಟ ಆರಂಭವಾಗಿದೆ.
ಕಲಬುರಗಿಯ ಶರಣನಗರದಲ್ಲಿರುವ KKRDB ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ಮನೆ ಬಳಿ ಮರಕ್ಕೆ ನೇಣುಬಿಗಿದುಕೊಂಡು ದೇವಪ್ಪ(35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದೇವಪ್ಪ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿ. ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ, ಮಗ ಮೃತಪಟ್ಟ ಘಟನೆ ನಡೆದಿದೆ. ತಂದೆ ಪುಟ್ಟರಾಜು(42), ಮಗ ಕೇಶವ(14) ಮೃತ ದುರ್ದೈವಿಗಳು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಠಾಣೆ ಪೊಲೀಸರು ನೋಟು ಬದಲಾವಣೆ ನೆಪದಲ್ಲಿ 10 ಲಕ್ಷ ಹಣ ದೋಚಿದ್ದ ಮೂವರನ್ನು ಬಂಧಿಸಿದ್ದಾರೆ. ಆಗಸ್ಟ್ 17ರಂದು ಲಕ್ಷ್ಮೀಪುರ ಬಳಿ ಆಂಧ್ರದ ರಾಮಾರೆಡ್ಡಿ ಮತ್ತು ಭಾನುಪ್ರಸಾದ್ ಎಂಬುವವರನ್ನು ನಂಬಿಸಿ ಆರೋಪಿಗಳು ಹಣ ದೋಚಿದ್ದರು. 2000 ರೂ. ಮುಖಬೆಲೆ ನೋಟು ಬದಲಾವಣೆ ನೆಪದಲ್ಲಿ 10%ನಂತೆ 10 ಕೋಟಿ ಬೇಕಾದ್ರೂ ಬದಲಾವಣೆ ಮಾಡಿ ಕೊಡ್ತೇವೆ ಎಂದು ನಂಬಿಸಿ ವಂಚಿಸಿದ್ದಾರೆ. ಇಬ್ಬರನ್ನು ನಂಬಿಸಿ ಹಣ ಪಡೆದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಪೊಲೀಸ್ ಕಾನ್ಸಟೇಬಲ್ ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಹೋದಾಗ ಹೃದಯಘಾತವಾಗಿ ಮೃತಪಟ್ಟಿದ್ದಾರೆ. ಗೋಗಿ ಠಾಣೆಯ ದೇವಿಂದ್ರಪ್ಪ (40) ಮೃತ ಕಾನ್ಸಟೇಬಲ್. ಕಳೆದ ಮೂರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ರು. ಜೂನ್ ನಿಂದ ಅನಾರೋಗ್ಯ ಹಿನ್ನಲೆ ರಜೆಯಲ್ಲಿದ್ರು.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಹಲಗೂರು ಗ್ರಾಮದ ಅಭಿಷೇಕ್ ಎಂಬ 29 ವರ್ಷದ ಯುವಕ ಆ.18ರಂದು ಬೈಕ್ ಅಪಘಾತದಲ್ಲಿ ತಲೆಗೆ ಪೆಟ್ಟು ಮಾಡಿಕೊಂಡಿದ್ದ. ನಾಲ್ಕು ದಿನ ಚಿಕಿತ್ಸೆ ನಂತರವೂ ಚೇತರಿಕೆ ಕಂಡು ಬಂದಿಲ್ಲ. ಮಿದುಳು ನಿಷ್ಕ್ರಿಯ ಹಿನ್ನೆಲೆ ಲಿವರ್, ಕಿಡ್ನಿ, ಹೃದಯದ ಕವಾಟ ಹಾಗೂ ಕಾರ್ನಿಯಾ ದಾನ ಮಾಡಲಾಗಿದೆ. ಮೈಸೂರಿನ ಯುವಕ ಐದು ಜನರ ಬಾಳಿಗೆ ಬೆಳಕಾಗಿದ್ದಾನೆ.
ಅಂತಾರಾಷ್ಟ್ರಿಯ ಮಟ್ಟದ ಕ್ರಿಮಿನಲ್ಗಳನ್ನ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೂವರು ವಿದೇಶಿ ಪ್ರಜೆಗಳು, ಆಶ್ರಯ ನೀಡಿದ್ದವನ ಬಂಧಿಸಲಾಗಿದೆ. ಶ್ರೀಲಂಕಾದ ಕಾಸಿನ್ ಕುಮಾರ್, ಅಮಿಲಾ ನುವಾನ್, ರಂಗ ಪ್ರಸಾದ್ ಹಾಗೂ ಬೆಂಗಳೂರಿನ ಜೈ ಪರಮೇಶ್ ಅಲಿಯಾಸ್ ಜಾಕ್ ಬಂಧಿತರು. ಪಾತಕಿ ಕಾಸಿನ್ ಕುಮಾರ್ ವಿರುದ್ಧ ಶ್ರೀಲಂಕಾದಲ್ಲಿ 4 ಕೊಲೆ ಪ್ರಕರಣ, ಮತ್ತೊಬ್ಬ ಪಾತಕಿ ಅಮಿಲಾ ನುವಾನ್ ಮೇಲೆ 5 ಕೊಲೆ ಕೇಸ್ಗಳಿವೆ. ರಂಗ ಪ್ರಸಾದ್ ವಿರುದ್ಧ ಹಲ್ಲೆ, ಕೊಲೆ ಕೇಸ್ ಇರುವ ಬಗ್ಗೆ ಮಾಹಿತಿ ಇದೆ. ಆರೋಪಿಗಳ ಬಳಿ 13 ಮೊಬೈಲ್, ಶ್ರೀಲಂಕಾದ ವಿವಿಧ ವಿಸಿಟಿಂಗ್ ಕಾರ್ಡ್, ಬಸ್ ಟಿಕೆಟ್, ಪೇಪರ್ ಕಟ್ಟಿಂಗ್ಸ್, ರೆಂಟಲ್ ಅಗ್ರಿಮೆಂಟ್ ಪ್ರತಿ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪತ್ತೆಯಾಗಿದೆ.
ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ತ್ರಿವಿಕ್ರಮನಂತೆ ಹೆಜ್ಜೆ ಇಟ್ಟಿದೆ. ಪ್ರಜ್ಞಾನ್ ರೋವರ್ ತನ್ನ ಕಾರ್ಯ ಆರಂಭಿಸಿದೆ. ಈ ಕಾರ್ಯದಲ್ಲಿ ಸಾವಿರಾರು ವಿಜ್ಞಾನಿಗಳು ಹಗಲಿರುಳಿ ಶ್ರಮಿಸಿದ್ದಾರೆ. ಇಸ್ರೋ ವಿಜ್ಞಾನಿಗಳ ತಂಡದಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ವಿಜ್ಞಾನಿ ಅಭಿಷೇಕ ದೇಶಪಾಂಡೆ ಭಾಗಿಯಾಗಿದ್ರು. 28 ವರ್ಷದ ಯುವ ವಿಜ್ಞಾನಿ ಚಂದ್ರಯಾನ 3 ರ ಯೋಜನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ವಿಕ್ರಮ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ನೆಲೆಯೂರಿದ್ದಕ್ಕೆ ಹೆಚ್ಚು ಖುಷಿ ಪಟ್ಟಿದ್ದಾರೆ.
ಚಂದ್ರನ ಅಂಗಳಕ್ಕೆ ಇಳಿಯುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿ ಹಿನ್ನೆಲೆ ಇಂದು ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಿಎಂಗೆ ವಿಜ್ಞಾನ & ತಂತ್ರಜ್ಞಾನ ಸಚಿವ ಬೋಸರಾಜು ಸಾಥ್ ನೀಡಲಿದ್ದಾರೆ.
Published On - 7:55 am, Thu, 24 August 23