ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ಮಾಡಿದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಯೋಜನೆಗಳನ್ನು ಘೋಷಿಸಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ಸ್ಥಾಪನೆ ಮಾಡುವುದಾಗಿ ಯಡಿಯೂರಪ್ಪ ಘೋಷಿಸಿದ್ದು, ಇದಕ್ಕಾಗಿ ₹50 ಕೋಟಿ ವ್ಯಯಿಸಲಾಗುವುದು. ಇದರಿಂದ 5 ಸಾವಿರ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ ಎಂದಿದ್ದಾರೆ ಬಿಎಸ್ವೈ.
ಈ ಬಾರಿಯೂ ವಲಯವಾರು ವಿಂಗಡಿಸಿ ಬಜೆಟ್ ಮಂಡನೆಯಾಗಿದ್ದು 5 ವಲಯಗಳಾಗಿ ವಿಂಗಡಿಸಲಾಗಿದೆ. ವಲಯ 1- ಕೃಷಿ ಮತ್ತು ಪೂರಕ ಚಟುವಟಿಕೆ, ವಲಯ 2 – ಆರ್ಥಿಕಾಭಿವೃದ್ಧಿ, ವಲಯ 3 – ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ವಲಯ 4 – ಬೆಂಗಳೂರು ಸಮಗ್ರ ಅಭಿವೃದ್ಧಿ, ವಲಯ 5 – ಸಂಸ್ಕೃತಿ, ಪರಂಪರೆ, ನೈಸರ್ಗಿಕ ಸಂಪನ್ಮೂಲ ಈ ರೀತಿಯಾಗಿ ವಲಯವಾರು ವಿಂಗಡಣೆ ಮಾಡಲಾಗಿದೆ.
ರಾಜ್ಯದ 4 ವಿಭಾಗಗಳಲ್ಲಿ ಮುರಾರ್ಜಿ ವಸತಿ ಶಾಲೆ ಆರಂಭ ಮಾಡಲಾಗುವುದು. ಎಸ್ಸಿ,ಎಸ್ಟಿ ಉದ್ಯಮಿಗಳ ಸಹಾಯ ಧನ ಯೋಜನೆ ವಿಸ್ತರಣೆ ಮಾಡಿದ್ದು, ಹೋಟೆಲ್, ಮಳಿಗೆ, ಫ್ರಾಂಚೈಸಿ ಸ್ಥಾಪಿಸಲು ಶೆಡ್ಯೂಲ್ ಬ್ಯಾಂಕ್ಗಳಿಂದ 1 ಕೋಟಿ ಸಾಲ ಪಡೆಯಲು ಅವಕಾಶವಿದೆ.
ಪರಿಶಿಷ್ಟ ಪಂಗಡದ ಆಶ್ರಮದ ಶಾಲೆಗಳಿಗೆ ವಾಲ್ಮೀಕಿ ಶಾಲೆಗಳೆಂದು ಮರು ನಾಮಕರಣ ಮಾಡಲಾಗುವುದು. ಹಾಸನದಲ್ಲಿ ಬಿ.ಆರ್.ಅಂಬೇಡ್ಕರ್ ಸ್ಮಾರಕ ಭವನ ಸ್ಥಾಪನೆ ಮಾಡಲಾಗುವುದು. ಶೋಷಿತ ಸಮುದಾಯಗಳ ಅಭಿವೃದ್ಧಿಗೆ 500 ಕೋಟಿ ರೂ ಅನುದಾನ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1,500 ಕೋಟಿ ನೀಡಲಾಗಿದ್ದು, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ 3,000 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಡಾ. ಡಿ.ಎಂ.ನಂಜುಂಡಪ್ಪ ವರದಿಯಂತೆ ಅನುದಾನ ಮೀಸಲಿರಿಸಲಾಗಿದೆ.
ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ವಿವಿಧ ಜಿಲ್ಲೆಗಳಲ್ಲಿ ಅನಾಥ ಗೋವುಗಳು ರಸ್ತೆಯ ಮೇಲೆ ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗಿತ್ತು.
Link: https://t.co/PkCTR7lkaw#KarnatakaBudget2021 #Budget2021 #BSYediyurappa #AnimalHusbandry
— TV9 Kannada (@tv9kannada) March 8, 2021
ಕಟ್ಟಡ ಕಾರ್ಮಿಕರ ಮಕ್ಕಳ ಸಂರಕ್ಷಣೆಗೆ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ
ಕಟ್ಟಡ ಕಾರ್ಮಿಕರ ಮಕ್ಕಳ ಸಂರಕ್ಷಣೆಗೆ 100 ಕಿತ್ತೂರು ರಾಣಿ ಶಿಶುಪಾಲನಾ ಕೇಂದ್ರ ಆರಂಭಿಸಲಾಗುವುದು. ಅದೇ ವೇಳೆ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ 25 ಸಂಚಾರಿ ಆರೋಗ್ಯ ತಪಾಸಣಾ ಕೇಂದ್ರ ಸ್ಥಾಪಿಸಲುದ್ದೇಶಿಸಿದ್ದು ಕಟ್ಟಡ ಕಾರ್ಮಿಕರಿಗೆ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಕಲಬುರಗಿ, ಬಳ್ಳಾರಿ, ಹಾಸನ, ಚಾಮರಾಜನಗರದಲ್ಲಿ ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸಲಾಗುವುದು. ಚರ್ಚ್ಗಳ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣಕ್ಕೆಮ ವೃದ್ಧಾಶ್ರಮಗಳಿಗೆ 200 ಕೋಟಿ ಅನುದಾನ ನೀಡಲಾಗಿದೆ. ರಾಜ್ಯದ 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಬೋಧನೆಗೆ ಅವಕಾಶ. ಜೈನ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 50 ಕೋಟಿ ಅನುದಾನ ನೀಡಲಾಗಿದೆ. ನುರಿತ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ 150 ಸರ್ಕಾರಿ ತರಬೇತಿ ಸಂಸ್ಥೆಗಳಿಗೆ 4636 ಕೋಟಿ ಅನುದಾನ. ಇದರಲ್ಲಿ 4080 ಕೋಟಿ ರೂಗಳನ್ನು ಟಾಟಾ ಟೆಕ್ನಾಲಜೀಸ್ಗೆ ಲಿಮೆಟೆಡ್ ಭರಿಸಲಿದೆ. ಶಿಶಿಕ್ಷು ತರಬೇತಿ ಕೇಂದ್ರಕ್ಕೆ 18 ಕೋಟಿ ರೂ ಅನುದಾನ ನೀಡಲಾಗಿದೆ.
ಇದನ್ನೂ ಓದಿ: 2021-22ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು? ಹೊಸ ಯೋಜನೆಗಳೇನು?
ಇದನ್ನೂ ಓದಿ: ಜಿಲ್ಲೆಗೊಂದು ಗೋಶಾಲೆ, ಮೇಕೆ-ಕುರಿ-ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ