ಬೆಂಗಳೂರು: ತಮ್ಮ 79ನೇ ಜನ್ಮದಿನದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಂಬರಲಿರುವ ರಾಜ್ಯ ಬಜೆಟ್ ಬಗ್ಗೆ ಮಾಹಿತಿ ಹಂಚಿಕೊಂಡರು.
ಈ ಬಗ್ಗೆ ಮಾತಾನಾಡಿದ ಬಿಎಸ್‌ವೈ, ಈ ಬಾರಿ ಜನರ ನಿರೀಕ್ಷೆಗೆ ತಕ್ಕಂತೆ ಒಳ್ಳೆಯ ಬಜೆಟ್ ಕೊಡುತ್ತೇನೆ. ಉಳಿದ 2 ವರ್ಷ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ರೈತರ ಕಲ್ಯಾಣ, ಜನ ನೆಮ್ಮದಿಯಿಂದ ಜೀವನ ಮಾಡಲು ಬೇಕಾದ ಎಲ್ಲ ಸೌಕರ್ಯ ಒದಗಿಸುವುದು ನಮ್ಮ ಗುರಿ ಎಂದರು. ಜೊತೆಗೆ ಪ್ರಧಾನಿ ಮೋದಿಯವರ ಸರ್ಕಾರದ ಬಗ್ಗೆ ಮಾತಾನಾಡಿದ ಬಿಎಸ್‌ವೈ, ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇನ್ನಷ್ಟು ಒಳ್ಳೆಯ ಕೆಲಸಗಳು ಆಗಲಿ. ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.
ಇದನ್ನೂ ಓದಿ: 79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ