ಬೆಂಗಳೂರು: ಕರ್ನಾಟಕದ ಬಜೆಟ್ನಲ್ಲಿ ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಬೆಂಗಳೂರಿನ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ನಮ್ಮ ಮೆಟ್ರೋ (Namma Metro) ಈಗಾಗಲೇ 2ನೇ ಹಂತದ ಕಾಮಗಾರಿ ಪೂರ್ಣಗೊಳಿಸಿ, ಪ್ರಯಾಣಿಕರ ಸಂಚಾರಕ್ಕೆ ಮುಕ್ತವಾಗಿದೆ. ಹಾಗೇ, ಬೆಂಗಳೂರು ನಮ್ಮ ಮೆಟ್ರೋ 3ನೇ ಹಂತ ಯೋಜನೆಗೆ ಈ ಬಾರಿಯ ಬಜೆಟ್ನಲ್ಲಿ (Budget 2022) 11,250 ಕೋಟಿ ರೂ. ಮೀಸಲಿಡಲಾಗಿದೆ. ನಮ್ಮ ಮೆಟ್ರೋ ರೈಲು ಯೋಜನೆ ವಿಸ್ತರಣೆ ಸ್ಕೀಮ್‌ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 15 ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ DPR ತಯಾರಿ ನಡೆಸಲಾಗಿದೆ. 55 ಕೋಟಿ ವೆಚ್ಚದಲ್ಲಿ ಹೊಸ ಮೆಟ್ರೋ ನಿಲ್ದಾಣಗಳ ಸಂಪರ್ಕ ಕಾಮಗಾರಿ ನಡೆಯಲಿದೆ. ವೈಟ್‌ಫೀಲ್ಡ್, ಕೆ.ಆರ್.ಪುರಂ, ಬೈಯ್ಯಪ್ಪನಹಳ್ಳಿ, ಯಶವಂತಪುರ ನಿಲ್ದಾಣ, ಜ್ಞಾನಭಾರತಿ, ಯಲಹಂಕ ರೈಲು ನಿಲ್ದಾಣಕ್ಕೆ ಮೆಟ್ರೋ ರೈಲು ನಿಲ್ದಾಣ ಸಂಪರ್ಕಕ್ಕೆ ಮೆಟ್ರೋ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai Budget) ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸಿಲ್ಕ್‌ಬೋರ್ಡ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAB)ಕ್ಕೆ ಮೆಟ್ರೋ ಮಾರ್ಗ 2025ರೊಳಗೆ ಪೂರ್ಣವಾಗಲಿದೆ. ಹೆಬ್ಬಾಳದಿಂದ ಜೆ.ಪಿ.ನಗರದವರೆಗೆ ಮೆಟ್ರೋ ಮಾರ್ಗ ಹಾಗೂ ಹೊಸಳ್ಳಿಯಿಂದ ಕಡಬಗೆರೆವರೆಗೆ ಮೆಟ್ರೋ ಮಾರ್ಗಗಳಿಗೆ ಡಿಪಿಆರ್ ಸಲ್ಲಿಸಲಾಗುವುದು. 3ನೇ ಹಂತದ ಮೆಟ್ರೋ ಕಾಮಗಾರಿಗೆ DPR ಸಲ್ಲಿಸುತ್ತೇವೆ. ಅದಕ್ಕಾಗಿ ಅಂದಾಜು ಮೊತ್ತ 11,250 ಕೋಟಿ ರೂ., 37 ಕಿ.ಮೀ. ಉದ್ದದ ಮೆಟ್ರೋ ಮಾರ್ಗಕ್ಕೆ ಡಿಪಿಆರ್, ಸರ್ಜಾಪುರದಿಂದ ಅಗರ, ಡೇರಿ ಸರ್ಕಲ್, ಹೆಬ್ಬಾಳ ಮಾರ್ಗಕ್ಕೆ 15 ಸಾವಿರ ಕೋಟಿ ರೂಪಾಯಿಯ ಡಿಪಿಆರ್ ಸಲ್ಲಿಸುತ್ತೇವೆ. ಬನಶಂಕರಿಯಲ್ಲಿ 45 ಕೋಟಿ ವೆಚ್ಚದ ಸ್ಕೈವಾಕ್ ನಿರ್ಮಾಣ ಮಾಡಲಾಗುವುದು. ಮೆಟ್ರೋ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕ ಕಾಮಗಾರಿಗೆ 55 ಕೋಟಿ ರೂ. ವೆಚ್ಚ ಘೋಷಿಸಲಾಗಿದೆ.
2022-23ನೇ ಸಾಲಿನಲ್ಲಿ 33 ಕಿ.ಮೀ ಮೆಟ್ರೋ ಮಾರ್ಗ ನಿರ್ಮಿಸಲಾಗುವುದು. ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ 58.19 ಕಿ.ಮೀ ಮೆಟ್ರೋ ಕಾಮಗಾರಿ ಆರಂಭವಾಗಿದ್ದು, 2025ರೊಳಗೆ ಪೂರ್ಣಗೊಳ್ಳಲಿದೆ. ಮೆಟ್ರೋ ಹಂತ್ರ-3 ಯೋಜನೆಯನ್ನು 11,250 ಕೋಟಿ ರೂ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಸಲ್ಲಿಸಲಾಗುವುದು. ಹೆಬ್ಬಾಳದಿಂದ – ಜೆಪಿ ನಗರದವರೆಗೆ 32 ಕಿ.ಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ-ಕಡಬಗೆರೆಗೆ 13 ಕಿ.ಮೀ ಮಾರ್ಗ ನಿರ್ಮಿಸಲಾಗುವುದು. 2022-23 ಸಾಲಿನಲ್ಲಿ 37 ಕಿ.ಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬ್ಅಳದವರೆಗೆ 15 ಸಾವಿರ ವೆಚ್ಚದಲ್ಲಿ 36 ಕಿ.ಮೀ ಹೊಸಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ ಕೈಗೊಳ್ಳಲಾಗುವುದು. ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ವೆಚ್ಚದಲ್ಲಿ ಸ್ಕೈವಾಕ್ (ಪಾದಾಚಾರಿ-ರಸ್ತೆಬದಿ ವ್ಯಾಪಾರಿಗಳ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು- ಬಸ್ ನಿಲ್ದಾಣ ದೊಂದಿಗೆ ಸಂಪರ್ಕಿಸಲು) ವ್ಯವಸ್ಥೆ ಕಲ್ಪಿಸಲಾಗುವುದು. ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ ವೆಚ್ಚದಲ್ಲಿ ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.
ತ್ಯಾಜ್ಯ ನೀರು ಸಂಸ್ಕರಣ ಘಟಕಕ್ಕೆ ಆದ್ಯತೆ:
ಬೆಂಗಳೂರಿನಲ್ಲಿ ಅಮೃತ್ ನಗರೋತ್ಥಾನ ಯೋಜನೆ ಅನುಷ್ಠಾನದ ಆಧಾರದಲ್ಲಿ ನಾಡಪ್ರಭು ಕೆಂಪೇಗೌಡ ಬಡಾವಣೆ ಜಾಗದಲ್ಲಿ ಸ್ಮಾರ್ಟ್ ಸಿಟಿ ಸ್ಥಾಪನೆ ಮಾಡಲಾಗುವುದು. ಬಾಕಿ ಇರುವ 1,297 ಎಕರೆಯ ಭೂಸ್ವಾಧೀನಗೊಳಿಸಿ ಸ್ಮಾರ್ಟ್ ಸಿಟಿ ನಿರ್ಮಿಸಲಾಗುವುದು. 1,500 ಕೋಟಿ ರೂ. ವೆಚ್ಚದಲ್ಲಿ 20 ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುವುದು. 20 ತ್ಯಾಜ್ಯ ನೀರು ಸಂಸ್ಕರಣಾ ಘಟಕ ಪುನರುಜ್ಜೀವನ, ಉನ್ನತೀಕರಣ ಮಾಡಲಾಗುವುದು. ಬೆಂಗಳೂರಿನ ವಿವಿಧಡೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಅಭಿವೃದ್ಧಿ ಮಾಡಲಾಗುವುದು. 312 ಕೋಟಿ ವೆಚ್ಚದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ ಮಾಡಲಾಗುವುದು. ಕೋರಮಂಗಲ ರಾಜಕಾಲುವೆ ಅಭಿವೃದ್ಧಿಗೆ 195 ಕೋಟಿ ರೂ. ಘೋಷಿಸಲಾಗಿದೆ. KR ಮಾರುಕಟ್ಟೆ ಜಂಕ್ಷನ್‌ನಿಂದ ಬೆಳ್ಳಂದೂರು ಕೆರೆವರೆಗೆ ಅಭಿವೃದ್ಧಿ ಮಾಡಲಾಗುವುದು. ಬೆಂಗಳೂರಿನ ಬೃಹತ್ ಮಳೆನೀರು ಕಾಲುವೆ, ರಾಜಕಾಲುವೆ ಅಭಿವೃದ್ಧಿ ಮಾಡಲಾಗುವುದು. ಅಮೃತ್ ನಗರೋತ್ಥಾನ ಯೋಜನೆ ಅಡಿಯಲ್ಲಿ 1,500 ಕೋಟಿ ರೂ. ಘೋಷಿಸಲಾಗಿದೆ.
73 ಕಿ.ಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ ಈಗಾಗಲೇ ಅನುಮೋದನೆಯಾಗಿದ್ದು, DBFOT ಮಾದರಿಯಲ್ಕಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು. ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಜ್ಕೆ ಬಿಬಿಎಂಪಿ ಬಿಡಿಎ ಜಂಟಿ ಕಾಮಗಾರಿ ನಡೆಸಲಾಗುವುದು. ಬಿಡಿಎ ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಮಾಡಲಾಗುವುದು. ಬೆಂಗಳೂರಿನ NGEFನ 105 ಎಕರೆ ಪ್ರದೇಶದಲ್ಲಿ ಸಿಂಗಾಪುರ್ ಮಾದರಿಯ ಗ್ರೀನ್ ಎಕ್ಸ್ ಪೋ ನಿರ್ಮಾಣ ಮಾಡಲಾಗುವುದು.
ಬೆಂಗಳೂರಿಗೆ 775 ದಶಲಕ್ಷ ಲೀಟರ್ ಕಾವೇರಿ ನೀರು ತರಲು 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ 5ನೇ ಹಂತ ಜಾರಿಯಲ್ಲಿದ್ದು, 2024-25 ರೊಳಗೆ ಪೂರ್ಣಗೊಳಿಸಲಾಗುವುದು. ಹಳೆಯ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣಕ್ಕೆ 1500 ಕೋಟಿ ರೂ ವೆಚ್ಚ ಮಾಡಲಾಗುವುದು. ಎತ್ತಿನಹೊಳೆಯಿಂದ 1.7 ಟಿ.ಎಂಸಿ ನೀರು ಬಳಸಿಕೊಳ್ಳಲು 312 ಕೋಟಿಯ ಟಿಜಿ ಹಳ್ಳಿ ಕಾಮಗಾರಿ 22-23ರಲ್ಲಿ ಮುಕ್ತಾಯವಾಗಲಿದೆ.
ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ.:
ನಗರದ ರಾಜಕಾಲುವೆ ಅಭಿವೃದ್ಧಿಪಡಿಸಿ ನಾಗರಿಕರ ವಿಹಾರ ತಾಣವಾಗಿಸಲು 195 ಕೋಟಿ ರೂ ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆಯನ್ನು ಅಭಿವೃದ್ಧಿ ಪಡಿಸಲಾಗ್ತಿದೆ. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ತಡೆಯಲು ರಾಜಕಾಲುವೆ ಅಭಿವೃದ್ಧಿಗೆ 1,500 ಕೋಟಿ ರೂ ಮೊತ್ತದಲ್ಲಿ ಯೋಜನೆ
ನಗರದ 4 ಭಾಗಗಳಲ್ಲಿ 500 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. 20 ಶಾಲೆಗಳನ್ನು ‘ಬೆಂಗಳೂರು ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸಲು 89 ಕೋಟಿ ಮೀಸಲಿಡಲಾಗುವುದು. ಮಡಿವಾಳ ಕೆರೆ- ಎಲೆಮಲ್ಲಪ್ಪಶೆಟ್ಟಿ ಕೆರೆ ಅಭಿವೃದ್ಧಿಗೆ ಪಾಲಿಕೆಯಿಂದ ರೂಪುರೇಷೆ ಸಿದ್ಧತೆ ಮಾಡಲಾಗುವುದು. ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂ ಅನುದಾನ ನೀಡಲಾಗಿದೆ.
ಇದನ್ನೂ ಓದಿ: Karnataka Budget 2022: ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ; ಉಚಿತ ಆನ್ಲೈನ್ ಕೋಚಿಂಗ್
Published On - 2:10 pm, Fri, 4 March 22