AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bommai Budget 2023: ಯುವಕರ ಕೌಶಲ್ಯ ವೃದ್ಧಿಗೆ “ಬದುಕುವ ದಾರಿ” ಹೊಸ ಯೋಜನೆ ಘೋಷಣೆ

ಶಾಲಾ ಶಿಕ್ಷಣದ ನಂತರ ವಿವಿಧ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದವರೆಸಲು ಸಾಧ್ಯವಾಗದೇ ಇರುವ ಯುವಕರ ಅನುಕೂಲಕ್ಕಾಗಿ ಬಜೆಟ್​ನಲ್ಲಿ "ಬದುಕುವ ದಾರಿ" ಎಂಬ ಹೊಸ ಯೋಜನೆಯನ್ನು ಘೋಷಿಸಿದೆ.

Bommai Budget 2023: ಯುವಕರ ಕೌಶಲ್ಯ ವೃದ್ಧಿಗೆ ಬದುಕುವ ದಾರಿ ಹೊಸ ಯೋಜನೆ ಘೋಷಣೆ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
| Updated By: Digi Tech Desk|

Updated on:Feb 17, 2023 | 2:49 PM

Share

ಬೆಂಗಳೂರು: ಶಾಲಾ ಶಿಕ್ಷಣದ ನಂತರ ವಿವಿಧ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದವರೆಸಲು ಸಾಧ್ಯವಾಗದೇ ಇರುವ ಯುವಕರ ಅನುಕೂಲಕ್ಕಾಗಿ ಬಜೆಟ್​ನಲ್ಲಿ “ಬದುಕುವ ದಾರಿ” ಎಂಬ ಹೊಸ ಯೋಜನೆಯನ್ನು ಬಜೆಟ್​​ನಲ್ಲಿ ಘೋಷಿಸಲಾಗಿದೆ. ಈ ಯೋಜನೆ ಅಡಿ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್​ ತರಬೇತಿ ಪಡೆಯಲು ಮಾಸಿಕ 1,500 ರೂ. ಗಳ ಶಿಷ್ಯವೇತನವನ್ನು ನೀಡಲು ನಿರ್ಧರಿಸಿದೆ.

ಈ ಯೋಜೆನಯ ಉಪಯೋಗಗಳು

1. ಮಾಸಿಕ 1,500 ರೂ ಶಿಷ್ಯವೇತನ

2. ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆ ನೀಡಲಾಗುತ್ತದೆ.

3. ಪದವಿ ಶಿಕ್ಷಣ ಮುಗಿಸಿ, 3 ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ನೀಡಲು “ಯುವಸ್ನೇಹಿ” ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡುತ್ತದೆ.

ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು “ಕಲಿಕೆ ಜೊತೆಗೆ ಕೌಶಲ್ಯ” ಹೊಸ ಕಾರ್ಯಕ್ರಮ ಜಾರಿ

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 1:48 pm, Fri, 17 February 23