AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agriculture Budget 2023: ಕೃಷಿ ಹೊಂಡ ನಿರ್ಮಾಣಕ್ಕೆ ಜಲನಿಧಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡುತ್ತಿದ್ದು, ರೈತರ ಭೂಮಿಯನ್ನು ಹಸಿರನ್ನಾಗಿಸುವ ಉದ್ದೇಶದಿಂದ ಕೃಷಿ ಹೊಂಡವನ್ನು ನಿರ್ಮಿಸಲು ಉತ್ತೇಜನ ನೀಡುವ ಸಲುವಾಗಿ ಜಲನಿಧಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

Agriculture Budget 2023: ಕೃಷಿ ಹೊಂಡ ನಿರ್ಮಾಣಕ್ಕೆ ಜಲನಿಧಿ ಹೊಸ ಯೋಜನೆ ಘೋಷಣೆ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 17, 2023 | 1:52 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡುತ್ತಿದ್ದು, ರೈತರ ಭೂಮಿಯನ್ನು ಹಸಿರನ್ನಾಗಿಸುವ ಉದ್ದೇಶದಿಂದ ಕೃಷಿ ಹೊಂಡವನ್ನು ನಿರ್ಮಿಸಲು ಉತ್ತೇಜನ ನೀಡುವ ಸಲುವಾಗಿ ಜಲನಿಧಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಮೊದಲ ಬಾರಿಗೆ ಹಸಿರು ಬಜೆಟ್ ಎಂದ ಬೊಮ್ಮಾಯಿ

ಪ್ರಪ್ರಥಮ ಬಾರಿಗೆ ನಾನು 100 ಕೋಟಿ ರೂ. ಅನುದಾನದಲ್ಲಿ ಹಸಿರು ಬಜೆಟ್ (Eco Budget) ಮಂಡಿಸಿದ್ದೇನೆ. ಅದರಂತೆ, ಪರಿಸರದ ಮೇಲೆ ಮಾನವ ನಿರ್ಮಿತ ಒತ್ತಡಗಳಿಂದ ಉಂಟಾದ ದುಷ್ಪರಿಣಾಮವನ್ನು ಸರಿದೂಗಿಸಲು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಬೋಳುಗುಡ್ಡ ಪ್ರದೇಶಗಳ ಪುನಶ್ಚೇತನ, ಕ್ಷೀಣಿಸಿದ ಅರಣ್ಯ ಪ್ರದೇಶದ ಮರುಸ್ಥಾಪನೆ, ಕರಾವಳಿ ಪ್ರದೇಶದಲ್ಲಿ ಕಾಂಡ್ಲಾ ಅರಣ್ಯೀಕರಣ ಮತ್ತು ಶೆಲ್ಟರ್‌ ಬೆಲ್ಟ್‌ ನಿರ್ವಹಣೆ ಅಡಿಯಲ್ಲಿ 3.211 ಹೆಕ್ಟೇರ್‌ ಪ್ರದೇಶದಲ್ಲಿ ಹಾಗೂ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ 168 ಕಿ.ಮೀ. ಉದ್ದದ ಅರಣ್ಯೀಕರಣ ಹಾಗೂ 25 ಲಕ್ಷ ಸಸಿಗಳನ್ನು ನೆಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ

ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆ, ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ಯೋಜನೆಯನ್ನು ವಿಸ್ತಣೆ ಮಾಡಲಾಗಿದೆ. ಇದಕ್ಕಾಗಿ ಹೆಚ್ಚುವರಿ 141 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್

ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಲು​ 40 ಕೋಟಿ ರೂ. ಮೀಸಲಿಡಲಾಗುವುದು. ಪರಿವರ್ತನೆಯಾಗುವ ವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುವುದು. ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜತೆ ಸಮನ್ವಯಗೊಳಿಸಿ ಈ ಯೋಜನೆ ಜಾರಿಗೊಳಿಸಲಾಗಿದೆ. ಮೀನುಗಾರಿಕೆ ಉತ್ತೇಜನಕ್ಕೆ ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 11:16 am, Fri, 17 February 23