Agriculture Budget 2023: ರೈತರಿಗಾಗಿ ಭೂಸಿರಿ ನೂತನ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡುತ್ತಿದ್ದು, ಸರ್ಕಾರ ರೈತರಿಗಾಗಿ ಭೂಸಿರಿ ಎಂಬ ನೂತನ ಯೋಜನೆ ಜಾರಿಗೆ ತರುತ್ತಿದೆ.

Agriculture Budget 2023: ರೈತರಿಗಾಗಿ ಭೂಸಿರಿ ನೂತನ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated By: ವಿವೇಕ ಬಿರಾದಾರ

Updated on: Feb 17, 2023 | 1:55 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿ ರೈತರಿಗಾಗಿ ಭೂಸಿರಿ ಎಂಬ ನೂತನ ಯೋಜನೆಯನ್ನು ಬಜೆಟ್​ನಲ್ಲಿ ಘೋಷಿಸಿದ್ದಾರೆ. ಈ ಯೋಜನೆ ಅಡಿ ಕಿಸಾನ್​ ಕ್ರೆಡಿಟ್​ ಕಾರ್ಡ್​​ ಹೊಂದಿರುವ ರೈತರಿಗೆ, 10,000 ರೂ. ಹೆಚ್ಚಿನ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. ಇದು ರೈತರು ಕ್ರಿಮಿನಾಶಕ, ರಸಗೊಬ್ಬರ, ಬೀಜ ಖರೀದಿಗೆ ಅನುಕೂಲಕರವಾಗಲಿದೆ. ರಾಜ್ಯ ಸರ್ಕಾರದ 2,500 ರೂ ಮತ್ತು ನಬಾರ್ಡ್​ ಯೋಜನೆ ಅಡಿ ನೀಡುವ 2,500 ರೂ. ನೀಡಲಾಗುವುದು. ಇದು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ.

ಕೃಷಿ ಹೊಂಡ ನಿರ್ಮಾಣಕ್ಕೆ ಜಲನಿಧಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡಿದ್ದು, ರೈತರ ಭೂಮಿಯನ್ನು ಹಸಿರನ್ನಾಗಿಸುವ ಉದ್ದೇಶದಿಂದ ಕೃಷಿ ಹೊಂಡವನ್ನು ನಿರ್ಮಿಸಲು ಉತ್ತೇಜನ ನೀಡುವ ಸಲುವಾಗಿ ಜಲನಿಧಿ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಕಳಸಾ ಬಂಡೂರಿ ನಾಲೆ ವಿಸ್ತರಣೆಗೆ 1,000 ಕೋಟಿ ರೂ.

ಕಳಸಾ ಬಂಡೂರಿ ನಾಲೆ ವಿಸ್ತರಣೆ ಯೋಜನೆಗೆ ಡಿಪಿಆರ್​​ಗೆ ಅನುಮೋದನೆ ಪಡೆಯಲಾಗಿದೆ. ಯೋಜನೆ ಅನುಷ್ಠಾನಕ್ಕೆ 1,000 ಕೋಟಿ ಅನುದಾನ ಘೋಷಿಸಲಾಗುಗತ್ತಿದೆ. ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಭದ್ರಾ ಮೇಲ್ದಂಡನೆ ಯೋಜನೆಗೆ 5,000 ಕೋಟಿ ರೂ. ಅನುದಾನ ಘೋಷಿಸಿರುವುದಕ್ಕೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇವೆ ಎಂದ ಬೊಮ್ಮಾಯಿ.

ಮೆಗಾ ಡೈರಿ ಸ್ಥಾಪನೆಗೆ 90 ಕೋಟಿ ರೂ.

ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಸರ್ಕಾರದಿಂದ 90 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು, ಬಳ್ಳಾರಿ ಜಿಲ್ಲೆಯಲ್ಲಿ ದಿನಂಪ್ರತಿ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

Published On - 11:01 am, Fri, 17 February 23