AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Feb 17, 2023 | 1:20 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಕಲಿಕೆ ಜೊತೆಗೆ ಕೌಶಲ್ಯ ಹೊಸ ಕಾರ್ಯಕ್ರಮ ಜಾರಿ

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Fri, 17 February 23

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ