Karnataka Budget 2023: ಬಜೆಟ್ ಸಿದ್ಧತೆಯಲ್ಲಿ ವ್ಯಸ್ತರಾದ ಸಿಎಂ ಸಿದ್ದರಾಮಯ್ಯ; ಈ ಬಾರಿ ಹೆಚ್ಚಲಿದೆ ಆಯವ್ಯಯದ ಗಾತ್ರ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಷದ ಫೆಬ್ರವರಿಯಲ್ಲಿ 3.09 ಲಕ್ಷ ಕೋಟಿ ರೂ.ಗಳ ಪೂರಕ ಬಜೆಟ್ ಮಂಡಿಸಿದ್ದರು. ಸಿದ್ದರಾಮಯ್ಯ ಬಜೆಟ್ ಗಾತ್ರವನ್ನು ಸುಮಾರು ಶೇ 8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಮತ್ತು 3.39 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸುವ ಸಾಧ್ಯತೆಯಿದೆ.

Karnataka Budget 2023: ಬಜೆಟ್ ಸಿದ್ಧತೆಯಲ್ಲಿ ವ್ಯಸ್ತರಾದ ಸಿಎಂ ಸಿದ್ದರಾಮಯ್ಯ; ಈ ಬಾರಿ ಹೆಚ್ಚಲಿದೆ ಆಯವ್ಯಯದ ಗಾತ್ರ
ಸಿದ್ದರಾಮಯ್ಯ
Follow us
Ganapathi Sharma
|

Updated on: Jun 29, 2023 | 4:50 PM

ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಬಜೆಟ್ (Karnataka Budget 2023) ಮಂಡನೆ ಮಾಡಲಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಅವರು ಮಂಡನೆ ಮಾಡುತ್ತಿರುವ ಏಳನೇ ಬಜೆಟ್ ಇದಾಗಲಿದ್ದು, ಒಟ್ಟಾರೆಯಾಗಿ ಅವರು ಮಂಡಿಸುತ್ತಿರುವ 14ನೇ ಬಜೆಟ್ ಇದಾಗಿರಲಿದೆ. ಬಜೆಟ್ ಗಾತ್ರ 3.39 ಲಕ್ಷ ಕೋಟಿ ರೂ. ಇರಬಹುದು ಎಂದು ಮುಖ್ಯಮಂತ್ರಿ ಸುಳಿವು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಷದ ಫೆಬ್ರವರಿಯಲ್ಲಿ 3.09 ಲಕ್ಷ ಕೋಟಿ ರೂ.ಗಳ ಪೂರಕ ಬಜೆಟ್ ಮಂಡಿಸಿದ್ದರು. ಸಿದ್ದರಾಮಯ್ಯ ಬಜೆಟ್ ಗಾತ್ರವನ್ನು ಸುಮಾರು ಶೇ 8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಮತ್ತು 3.39 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸುವ ಸಾಧ್ಯತೆಯಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಿಗೆ ಅವಕಾಶ ಕಲ್ಪಿಸಿರುವುದು ಬಜೆಟ್ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಸಿದ್ದರಾಮಯ್ಯನವರ ಪ್ರಕಾರ, ಐದು ಜನಪರ ಯೋಜನೆಗಳಿಗೆ ಬೊಕ್ಕಸದಿಂದ 59,000 ಕೋಟಿ ರೂ. ವ್ಯಯವಾಗಲಿದೆ.

ಕಳೆದ 10 ದಿನಗಳಿಂದ ಮುಖ್ಯಮಂತ್ರಿಗಳು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಸಭೆಗಳಿಗೆ ದಿನದ ಉತ್ತರಾರ್ಧವನ್ನು ಮೀಸಲಿಟ್ಟಿದ್ದಾರೆ. ವಿವಿಧ ಇಲಾಖೆಗಳಿಗೆ ಲಭ್ಯವಿರುವ ಹಣವನ್ನು ಮರುಹೊಂದಿಸುವಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: ನನ್ನ ಬಜೆಟ್ ಗಾತ್ರ ಬೊಮ್ಮಾಯಿ ಮಂಡಿಸಿದ್ದಕ್ಕಿಂತಲೂ 35,000 ಕೋಟಿ ರೂ. ಹೆಚ್ಚಿನದ್ದು; ಸಿದ್ದರಾಮಯ್ಯ

ಮುಖ್ಯಮಂತ್ರಿಯವರು ಬಿಎಸ್ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾದ ಕ್ಷೇತ್ರವಾರು ನಿಧಿ ಹಂಚಿಕೆಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಮತ್ತು ಬೊಮ್ಮಾಯಿ ಅವಧಿಯಂತೆ ಇಲಾಖಾವಾರು ನಿಧಿ ಹಂಚಿಕೆಯನ್ನು ಪುನರಾರಂಭಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ‘ನ್ಯೂಸ್9’ ವರದಿ ಮಾಡಿದೆ. ಕ್ಷೇತ್ರವಾರು ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ಜುಲೈ 3 ರಂದು ರಾಜ್ಯಪಾಲರ ಭಾಷಣದೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಿದ್ದರಾಮಯ್ಯ ಅವರು ಜುಲೈ 7 ರಂದು ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್