Karnataka Budget 2023: ಯುವನಿಧಿಗೆ ಅನುದಾನ ಘೋಷಿಸದ ಸಿದ್ದರಾಮಯ್ಯ; ಸದ್ಯಕ್ಕೆ ಯೋಜನೆ ಜಾರಿ ಅನುಮಾನ
ಯುವ ನಿಧಿ ಯೋಜನೆಯಡಿ, ಪದವೀಧರರಿಗೆ ಎರಡು ವರ್ಷಗಳ ಅವಧಿಗೆ ತಿಂಗಳಿಗೆ 3,000 ರೂ. ಗೌರವಧನ ಮತ್ತು ಡಿಪ್ಲೋಮಾ ಹೊಂದಿರುವವರಿಗೆ ತಿಂಗಳಿಗೆ 1,500 ರೂಪಾಯಿ ಮೊತ್ತವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು.

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಬಜೆಟ್ನಲ್ಲಿಯೂ (Karnataka Budget 2023)ಅನುದಾನಗಳನ್ನು ಘೋಷಿಸಿದೆ. ಆದರೆ, ನಿರುದ್ಯೋಗಿ ಯುವಕರಿಗೆ ಧನ ಸಹಾಯ ನೀಡುವ ‘ಯುವ ನಿಧಿ’ ಗ್ಯಾರಂಟಿ ಜಾರಿಗೆ ಸಿದ್ದರಾಮಯ್ಯ (Siddaramaiah) ಅವರು ಶುಕ್ರವಾರ ಮಂಡಿಸಿದ ಬಜೆಟ್ನಲ್ಲಿ ಅನುದಾನವನ್ನೇ ಘೋಷಿಸಿಲ್ಲ. ಇದು ಯೋಜನೆಯ ಅನುಷ್ಠಾನದ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.
ಗೃಹಲಕ್ಷ್ಮೀ ಯೋಜನೆ ಕುರಿತು ಬಜೆಟ್ನಲ್ಲಿ ಮುಖ್ಯಮಂತ್ರಿ ಪ್ರಸ್ತಾಪಿಸಿದರೆ, ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿಗಳ ಭಾಗವಾಗಿರುವ ಈ ಯೋಜನೆಗೆ ಬಜೆಟ್ನಲ್ಲಿ ಅನುದಾನ ಹಂಚಿಕೆ ಮಾಡಲಾಗಿಲ್ಲ.
ಇದನ್ನೂ ಓದಿ: Karnataka Budget 2023: ಸಿದ್ದರಾಮಯ್ಯ ಬಜೆಟ್ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ
ಬಜೆಟ್ನಲ್ಲಿ ಗೃಹಲಕ್ಷ್ಮೀ ಯೋಜನೆಗೆ 30,000 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದರೆ, ಅನ್ನಭಾಗ್ಯ ಯೋಜನೆಗೆ ವಾರ್ಷಿಕ 10,000 ಕೋಟಿ ರೂಪಾಯಿ ಘೋಷಿಸಲಾಗಿದೆ. ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯದ 40 ಲಕ್ಷ ಬಿಪಿಎಲ್ ಫಲಾನುಭವಿಗಳಿಗೆ ನೀಡಲು 1,680 ಕೋಟಿ ಮೀಸಲಿಡಲಾಗುವುದು ಎಂದೂ ಬಜೆಟ್ನಲ್ಲಿ ಭರವಸೆ ನೀಡಲಾಗಿದೆ.
ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ