AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಮಧುಮೇಹ, ಅಧಿಕ ರಕ್ತದೊತ್ತಡ ರೋಗಿಗಳ ಮನೆ ಬಾಗಿಲಿಗೆ ಔಷಧಿ ವಿತರಣೆ, ಬಜೆಟ್​ನಲ್ಲಿ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಜು.07) ರಂದು 2023-24ನೇ ಸಾಲಿನ ಬಜೆಟ್​​ ಮಂಡನೆ ಮಾಡಿದರು. ಈ ಆಯವ್ಯಯದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅದರಲ್ಲಿ ಔಷಧಿಗಳನ್ನು ಮನೆ ಬಾಗಿಲಿಗೆ ತಲುಪಿಸುವುದು ಬಜೆಟ್​​ನ ಕೇಂದ್ರಬಿಂದುವಾಗಿದೆ.

Karnataka Budget 2023: ಮಧುಮೇಹ, ಅಧಿಕ ರಕ್ತದೊತ್ತಡ ರೋಗಿಗಳ ಮನೆ ಬಾಗಿಲಿಗೆ ಔಷಧಿ ವಿತರಣೆ, ಬಜೆಟ್​ನಲ್ಲಿ ಘೋಷಣೆ
ಸಾಂರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jul 08, 2023 | 11:32 AM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ (ಜು.07) ರಂದು 2023-24ನೇ ಸಾಲಿನ ಬಜೆಟ್ (Karnataka Budget 2023)​​ ಮಂಡನೆ ಮಾಡಿದರು. ಈ ಆಯವ್ಯಯದಲ್ಲಿ ಆರೋಗ್ಯ ಕ್ಷೇತ್ರಕ್ಕೆ (Health Department) ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅದರಲ್ಲಿ ಔಷಧಿಗಳನ್ನು ಮನೆ ಬಾಗಿಲಿಗೆ ತಲುಪಿಸುವುದು, ಸರ್ಕಾರಿ ಆಸ್ಪತ್ರೆಗಳ ನವೀಕರಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಸಂಭಂದಿಸಿದ ಎರಡು ಹೊಸ ಯೋಜನೆಗಳನ್ನು ಪರಿಚಯಿಸಿರುವುದು ಬಜೆಟ್​​ನ ಕೇಂದ್ರಬಿಂದುವಾಗಿದೆ.

ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು.

ಪಿಪಿಪಿ ಮಾದರಿಯಲ್ಲಿ ಕೆಲವು ಜಿಲ್ಲಾ ಆಸ್ಪತ್ರೆಗಳಲ್ಲಿ ಈ ಹಿಂದೆ 15 ಸಿಟಿ ಸ್ಕ್ಯಾನರ್​​ಗಳು ಮತ್ತು ಆರು ಎಂಆರ್​ಐ ಸ್ಕ್ಯಾನರ್​ಗಳನ್ನು ಸ್ಥಾಪಿಸಲಾಗಿತ್ತು. ಇದೀಗ ಅವುಗಳನ್ನು ಎಲ್ಲ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು.

ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.

ಇದನ್ನೂ ಓದಿ: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

ಕ್ಷಯರೋಗದ ಸಮುದಾಯ ಮಟ್ಟದ ರೋಗನಿರ್ಣಯವನ್ನು ಬೆಂಬಲಿಸಲು, ಎಂಟು ಜಿಲ್ಲೆಗಳಿಗೆ ತಲಾ ಎರಡು ಕೈಯಲ್ಲಿ ಹಿಡಿಯುವ ಎಕ್ಸ್-ರೇ ಯಂತ್ರಗಳನ್ನು ಒದಗಿಸಲು 3 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಹೆಚ್ಚುವರಿಯಾಗಿ, ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲು 8 ಕೋಟಿ ರೂ., ಆರೋಗ್ಯ-ತಂತ್ರಜ್ಞಾನ ಮತ್ತು ಮೆಡ್-ಟೆಕ್‌ನಲ್ಲಿ ಹೊಸ ಸೆಂಟರ್ ಆಫ್ ಎಕ್ಸಲೆನ್ಸ್‌ನ ಕೆಲಸವನ್ನು ಪ್ರಾರಂಭಿಸಲು ರೂ 10 ಕೋಟಿ ಮತ್ತು ಸಂಶೋಧನೆಯನ್ನು ಬೆಂಬಲಿಸಲು ಜೈವಿಕ-ಬ್ಯಾಂಕ್‌ಗೆ ರೂ 2 ಕೋಟಿಗಳನ್ನು ನಿಗದಿಪಡಿಸಲಾಗಿದೆ.

ಮುಖ್ಯ ಹಂಚಿಕೆಗಳು

  • 25 ಕೋಟಿ ರೂ.: ರಕ್ತಹೀನತೆ ವಿರುದ್ಧ ಹೊಸ ಕಾರ್ಯಕ್ರಮ
  • 21 ಕೋಟಿ ರೂ.: ಆಶಾಕಿರಣ ಕಾರ್ಯಕ್ರಮ ನೇತ್ರ ಶಿಬಿರ ಹಾಗೂ ಶಸ್ತ್ರ ಚಿಕಿತ್ಸೆಗೆ
  • 92 ಕೋಟಿ ರೂ.: 219 ಡಯಾಲಿಸಿಸ್ ಕೇಂದ್ರಗಳ ಕಾರ್ಯಾಚರಣೆ
  • 85 ಕೋಟಿ ರೂ.: ಇಎಸ್‌ಐ ಆಸ್ಪತ್ರೆಗಳ ಅಭಿವೃದ್ಧಿ
  • 3 ಕೋಟಿ ರೂ.: ಇಎಸ್‌ಐ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗ ಆರಂಭ
  • 3 ಕೋಟಿ ರೂ.: ಟಿಬಿ ರೋಗನಿರ್ಣಯಕ್ಕೆ ಕೈಯಲ್ಲಿ ಹಿಡಿಯುವ ಎಕ್ಸ್ ರೇ ಯಂತ್ರಗಳು
  • 6 ಕೋಟಿ ರೂ.: ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್‌ಗಳು
  • 25 ಕೋಟಿ ರೂ.: ಕಾ-ಬಿಎಚ್‌ಐ ಅನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವುದು
  • 70 ಕೋಟಿ ರೂ.: 23 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಪಕರಣಗಳು ಮತ್ತು ಸಿಬ್ಬಂದಿಗಳನ್ನು ಒದಗಿಸುವುದು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್