AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget PDF Download: ಕರ್ನಾಟಕ ಬಜೆಟ್​ ಪಿಡಿಎಫ್ ಕಾಪಿ ಇಲ್ಲಿ ಲಭ್ಯ

ಕರ್ನಾಟಕ ಬಜೆಟ್ 2023 ಪಿಡಿಎಫ್ ಕಾಪಿ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು 2023 - 2024 ನೇ ಶಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಒಟ್ಟು ಬಜೆಟ್ 30,9182 ಕೋಟಿ ರೂ. ಆಗಿದೆ.

Karnataka Budget PDF Download: ಕರ್ನಾಟಕ ಬಜೆಟ್​ ಪಿಡಿಎಫ್ ಕಾಪಿ ಇಲ್ಲಿ ಲಭ್ಯ
ಕರ್ನಾಟಕ ಬಜೆಟ್ 2023 ಪಿಡಿಎಫ್
ನಯನಾ ಎಸ್​ಪಿ
|

Updated on:Feb 17, 2023 | 12:51 PM

Share

ರಾಜ್ಯ ವಿಧಾನಮಂಡಲದ ಅಧಿವೇಶನ (State Budget Session) ಇಂದಿನಿಂದ ಅರಂಭವಾಗಿದೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಮಂಡಿಸಲಿರುವ ಕೊನೆಯ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡುತ್ತಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಇದಾಗಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆಯನ್ನು ಈಗಾಗಲೇ ಮಾಡಿದ್ದಾರೆ. ಇಂದು (ಫೆಬ್ರವರಿ 17 ) ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೆ ತೆರಳುವ ಮುನ್ನ ಬೆಂಗಳೂರಿನ ಆರ್. ಟಿ. ನಗರದ ಮುತ್ತಪ್ಪ ಬ್ಲಾಕ್‌ನ ಶ್ರೀ ಕಂಠೇಶ್ವರ ದೇವಾಲಯ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆಯನ್ನೂ ಮಾಡಿಸಿದರು.

ಜಂಟಿ ಸದನವನ್ನು ಉದ್ದೇಶಿಸಿ ಮಾತಾಡಲು ಕರ್ನಾಟಕ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ವಿಧಾನಸೌಧಕ್ಕೆ ಆಗಮಿಸಿದರು. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ಬಸವರಾಜ ಹೊರಟ್ಟಿ ಮೊದಲಾದವರು ಕೂಡ ಬಂದಿದ್ದರು. ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಮೊದಲಿಗೆ ಸಂಪ್ರದಾಯದಂತೆ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ ಭಾಷಣಕ್ಕೆ ಅನುಮೋದನೆ ಪಡೆದುಕೊಂಡರು. ನಂತರ 10.15ಕ್ಕೆ ಬಜೆಟ್ ಭಾಷಣವನ್ನು ಆರಂಭಿಸಿದರು.

ಇದನ್ನೂ ಓದಿ: ಮಹಿಳಾ ಕೃಷಿ ಕಾರ್ಮಿಕರ ಆರ್ಥಿಕ ಸುಧಾರಣೆಗಾಗಿ “ನಮ್ಮ ಶಕ್ತಿ” ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್‌ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಇಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದ 2023 ಬಜೆಟ್‌ನ ಕನ್ನಡ ಪ್ರತಿಯನ್ನು ಇಲ್ಲಿ ಡೌನ್‌ಲೋಡ್ ಮಾಡಿ

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Fri, 17 February 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ