
ರಾಜ್ಯ ವಿಧಾನಮಂಡಲದ ಅಧಿವೇಶನ (State Budget Session) ಇಂದಿನಿಂದ ಅರಂಭವಾಗಿದೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಮಂಡಿಸಲಿರುವ ಕೊನೆಯ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಇದಾಗಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆಯನ್ನು ಈಗಾಗಲೇ ಮಾಡಿದ್ದಾರೆ. ಇಂದು (ಫೆಬ್ರವರಿ 17 ) ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೆ ತೆರಳುವ ಮುನ್ನ ಬೆಂಗಳೂರಿನ ಆರ್. ಟಿ. ನಗರದ ಮುತ್ತಪ್ಪ ಬ್ಲಾಕ್‌ನ ಶ್ರೀ ಕಂಠೇಶ್ವರ ದೇವಾಲಯ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆಯನ್ನೂ ಮಾಡಿಸಿದರು.
ಜಂಟಿ ಸದನವನ್ನು ಉದ್ದೇಶಿಸಿ ಮಾತಾಡಲು ಕರ್ನಾಟಕ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ವಿಧಾನಸೌಧಕ್ಕೆ ಆಗಮಿಸಿದರು. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ಬಸವರಾಜ ಹೊರಟ್ಟಿ ಮೊದಲಾದವರು ಕೂಡ ಬಂದಿದ್ದರು. ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಮೊದಲಿಗೆ ಸಂಪ್ರದಾಯದಂತೆ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಭಾಷಣಕ್ಕೆ ಅನುಮೋದನೆ ಪಡೆದುಕೊಂಡರು. ನಂತರ 10.15ಕ್ಕೆ ಬಜೆಟ್ ಭಾಷಣವನ್ನು ಆರಂಭಿಸಿದರು.
ಇದನ್ನೂ ಓದಿ: ಮಹಿಳಾ ಕೃಷಿ ಕಾರ್ಮಿಕರ ಆರ್ಥಿಕ ಸುಧಾರಣೆಗಾಗಿ “ನಮ್ಮ ಶಕ್ತಿ” ಹೊಸ ಯೋಜನೆ ಘೋಷಣೆ
ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್‌ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಇಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ಬಜೆಟ್ ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
Published On - 12:47 pm, Fri, 17 February 23