Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪಿಸಲಾಗಿದೆ. 11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.

Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jul 07, 2023 | 2:52 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ (Tax Revision)  ಮೂಲಕ ಆದಾಯ ಹೆಚ್ಚಳದ ಗುರಿ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದಾಯದ ಅವಶ್ಯಕತೆ ಇದ್ದು, ಹಲವು ಮೂಲಗಳಿಂದ ಇದನ್ನು ಸಂಗ್ರಹಿಸಲು ಸಿದ್ದರಾಮಯ್ಯ ಬಜೆಟ್​​ನಲ್ಲಿ ಗುರಿ ಹಾಕಿಕೊಂಡಿದ್ದಾರೆ.

ಅತ್ಯಧಿಕ ತೆರಿಗೆ ಪಾವತಿಸುವವರಿಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 10ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175 ರಿಂದ 185ಕ್ಕೆ ಹೆಚ್ಚಳವಾಗಲಿದೆ.

ಪರಿಷ್ಕರಣೆಯಾಗಲಿದೆ ಸ್ಥಿರಾಸ್ತಿ ಮಾರ್ಗಸೂಚಿ ದರ

ಎಲ್ಲ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ 2019ರ ನಂತರ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರಲಿಲ್ಲ. ಪ್ರಸ್ತುತ ಮಾರುಕಟ್ಟೆ ದರದಲ್ಲಿ ವ್ಯತ್ಯಾಸವಾಗಿರುವುದರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಆದರೆ, ಎಷ್ಟು ಪ್ರಮಾಣದಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: Liquor Prices in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪಿಸಲಾಗಿದೆ. 11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ. ಕರ್ನಾಟಕ ಮೋಟಾರು ವಾಹನ ನೋಂದಣಿ ತೆರಿಗೆ ಹೆಚ್ಚಳಕ್ಕೆ ಉದ್ದೇಶಿಸಲಾಗಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಳ ಮಾಡಲಾಗುತ್ತದ ಎಂಬ ಮಾಹಿತಿ ನೀಡಿಲ್ಲ.

ಗಣಿ ಮತ್ತು ಭೂವಿಜ್ಞಾನ ಕ್ಷೇತ್ರದಿಂದ 9,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.

ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ