Karnataka Budget 2023: ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು “ಕಲಿಕೆ ಜೊತೆಗೆ ಕೌಶಲ್ಯ” ಹೊಸ ಕಾರ್ಯಕ್ರಮ ಜಾರಿ
ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ "ಕಲಿಕೆ ಜೊತೆಗೆ ಕೌಶಲ್ಯ" ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ.
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.
ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.
ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್ನಲ್ಲಿ ಸಾರ್ವಜನಿಕ ಬಸ್ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ
Published On - 1:19 pm, Fri, 17 February 23