Karnataka Budget 2023: ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು “ಕಲಿಕೆ ಜೊತೆಗೆ ಕೌಶಲ್ಯ” ಹೊಸ ಕಾರ್ಯಕ್ರಮ ಜಾರಿ

| Updated By: Digi Tech Desk

Updated on: Feb 17, 2023 | 2:51 PM

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ "ಕಲಿಕೆ ಜೊತೆಗೆ ಕೌಶಲ್ಯ" ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ.

Karnataka Budget 2023: ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಕಲಿಕೆ ಜೊತೆಗೆ ಕೌಶಲ್ಯ ಹೊಸ ಕಾರ್ಯಕ್ರಮ ಜಾರಿ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 1:19 pm, Fri, 17 February 23