ಬಜೆಟ್ 2023: ಆರ್ಥಿಕ ದುರ್ಬಲ ವರ್ಗದವರಿಗೆ “ನಮ್ಮ ನೆಲೆ” ಹೊಸ ಯೋಜನೆಯಡಿ ಮನೆ ಹಂಚಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಬಜೆಟ್​​ನಲ್ಲಿ ಆರ್ಥಿಕವಾಗಿ ದುರ್ಬಲ ಹೊಂದಿದವರಿಗೆ ಮನೆಗಳನ್ನು ನೀಡುಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ.

ಬಜೆಟ್ 2023: ಆರ್ಥಿಕ ದುರ್ಬಲ ವರ್ಗದವರಿಗೆ ನಮ್ಮ ನೆಲೆ ಹೊಸ ಯೋಜನೆಯಡಿ ಮನೆ ಹಂಚಿಕೆ
ಸಾಂಧರ್ಬಿಕ ಚಿತ್ರ
Edited By:

Updated on: Feb 17, 2023 | 2:52 PM

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಬಜೆಟ್​​ನಲ್ಲಿ ಆರ್ಥಿಕವಾಗಿ ದುರ್ಬಲ ಹೊಂದಿದವರಿಗೆ ಮನೆಗಳನ್ನು ನೀಡುಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ. ಈ ಹಿನ್ನೆಲೆ “ನಮ್ಮ ನೆಲೆ” ಎಂಬ ಹೊಸ ಯೋಜನೆಯನ್ನು ಸಿಎಂ ಬೊಮ್ಮಾಯಿ ಜಾರಿಗೆ ತಂದಿದ್ದಾರೆ.

ಈ ಯೋಜನೆಯ ಉಪಯೋಗ

ರಾಜ್ಯ ಗೃಹ ಮಂಡಳಿ ಅಭಿವೃದ್ಧಿಪಡಿಸುವ ನಿವೇಶನಗಳಲ್ಲಿ, ಮೂರನೇ ಒಂದು ಭಾಗವನ್ನು ಅಂದರೆ 10 ಸಾವಿರ ಮನೆಗಳನ್ನು ಆರ್ಥಿಕ ದುರ್ಬಲ ವರ್ಗದವರಿಗೆ ನೀಡಲಾಗುತ್ತದೆ.

ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರು, ಗ್ರಂಥ ಪಾಲಕರ ಗೌರವಧನ 1000 ರೂ. ಹೆಚ್ಚಳಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಇದಕ್ಕಾಗಿ 775 ಕೋಟಿ ರೂ. ಅನುದಾನ ಹೆಚ್ಚಳ ಮಾಡಲಾಗಿದೆ.

ಬರಲಿದೆ ಮಕ್ಕಳ ಬಸ್; 100 ಕೋಟಿ ಅನುದಾನ

ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಮಕ್ಕಳ ಬಸ್​ ಯೋಜನೆ ಆರಂಭಿಸಲಾಗುವುದು. 100 ಕೋಟಿ ವೆಚ್ಚದಲ್ಲಿ ಮಕ್ಕಳ ಬಸ್​ ಯೋಜನೆ ಅನುಷ್ಠಾನಗೊಳ್ಳಲಿದ್ದು, 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಭಿವೃದ್ದಿ ಆಕಾಂಕ್ಷಿ ತಾಲೂಕೂಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಟಿಕತೆಗೆ 3000 ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಸರ್ಕಾರಿ ಮಹಿಳಾ ಕಾಲೇಜುಗಳಲ್ಲಿ ಯೋಗ

ಎಲ್ಲ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Fri, 17 February 23