ವಧು ವರರಿಗೆ ಗುಡ್ ನ್ಯೂಸ್: ವಿವಾಹ ನೋಂದಾಣಿ ಮತ್ತಷ್ಟು ಸರಳೀಕರಣಗೊಳಿಸಿದ ಸಿದ್ದರಾಮಯ್ಯ
marriage registration : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಾಹ ನೋಂದಾಣಿಗೆ ಮತ್ತಷ್ಟು ಸರಳೀಕರಣಗೊಳಿಸಿದ್ದಾರೆ.
ಬೆಂಗಳೂರು: ವಿವಾಹ ನೋಂದಾಣಿಗೆಗೆ(marriage registration) ಇನ್ಮುಂದೆ ಮತ್ತಷ್ಟು ಸರಳೀಕರಣವಾಗಲಿದೆ. ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯಬೇಕಿತ್ತು. ಆದ್ರೆ, ಇದೀಗ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಹೌದು.. ಈಗ ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಜೊತೆಗೆ ಗ್ರಾಮ ಪಂಚಾಯತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Karnataka Budget 2023 Live: ಬಿಸಿಯೂಟ ಯೋಜನೆಗೆ 280 ಕೋಟಿ ರೂ. ನೀಡಲು ನಿರ್ಧಾರ
ಹೀಗಾಗಿ ಇನ್ಮುಂದೆ ರಿಜಿಸ್ಟರ್ ಮ್ಯಾರೇಜ್ ಆಗುವವರು ತಮ್ಮ ಗ್ರಾಮ ಪಂಚಾತಿಗಳಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಈ ಮೊದಲು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಯಬೇಕಿತ್ತು. ಇದೀಗ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಚಾಯಿತಿಗಳಲ್ಲಿ ವಿವಾಹ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಾಹ ನೋಂದಾಣಿ ಮಾಡಿಕೊಳ್ಳುವವರಿಗೆ ಅನುಕೂಲವಾಗಲಿದೆ. ಕಚೇರಿಯಿಂದ ಕಚೇರಿಗೆ ಅಲೆಯುವುದು, ಗಂಟೆಗಟ್ಟಲೇ ಕಾಯುವುದು ತಪ್ಪುತ್ತದೆ.
ಇನ್ನಷ್ಟು ಬಜೆಟ್ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ