Karnataka Budget 2023: ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ, ಸಿದ್ದರಾಮಯ್ಯ ಘೋಷಣೆ

ಕರ್ನಾಟಕದ 2023-24ನೇ ಸಾಲಿನ ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಆರೋಗ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ಪ್ರಮುಖವಾಗಿ ಡಯಾಲಿಸಿಸ್‌ ಕೇಂದ್ರಗಳ ಹೆಚ್ಚಳ, ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆಯಂತಹ ಮಹತ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಇನ್ನು ಹಲವು ಕೊಡುಗೆಗಳನ್ನು ಬಜೆಟ್​​ನಲ್ಲಿ ನೀಡಿದ್ದು, ಈ ಕುರಿತ ವರದಿ ಇಲ್ಲಿದೆ

Karnataka Budget 2023: ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ, ಸಿದ್ದರಾಮಯ್ಯ ಘೋಷಣೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 08, 2023 | 10:24 AM

ಬೆಂಗಳೂರು: ಕರ್ನಾಟಕದ 2023-24ನೇ ಸಾಲಿನ ಆಯವ್ಯಯವನ್ನು (Karnataka Budget 2023) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ್ದು, ಆರೋಗ್ಯ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ. ಪ್ರಮುಖವಾಗಿ ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ, ಡಯಾಲಿಸಿಸ್‌ (Dialysis) ಕೇಂದ್ರಗಳ ಹೆಚ್ಚಳ ಮತ್ತು ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವಂತಹ ಮಹತ್ವ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದರ ಜೊತೆಗೆ ಇನ್ನು ಅನೇಕ ಕೊಡುಗೆಗಳನ್ನು ಬಜೆಟ್​​ನಲ್ಲಿ ನೀಡಿದ್ದು, ಈ ಕುರಿತ ವರದಿ ಇಲ್ಲಿದೆ

  1. ಏಕಬಳಕೆಯ ಡಯಾಲೈಸರ್‌ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  2. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ ಸಮುದಾಯ ಆರೋಗ್ಯ ಕೇಂದ್ರಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  3. ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 25 ಕೋಟಿ ರೂ. ಗಳನ್ನು ಒದಗಿಸಲಾಗುವುದು.
  4. ರಾಜ್ಯವು ಕಳೆದ ವರ್ಷ ನಿಮ್ಹಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ʻಬ್ರೈನ್‌ ಹೆಲ್ತ್‌ ಇನಿಶಿಯೇಟಿವ್‌ʼ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು.
  5. ಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
  6. ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು.
  7. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು.
  8. ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.
  9. ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್‌ ಮತ್ತು ಆರು ಎಂ.ಆರ್‌.ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು.
  10. ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.
  11. ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿಯನ್ನು (Karnataka Digital Health Society) ಸ್ಥಾಪನೆ ಮಾಡಲಾಗುವುದು.

ಇದನ್ನೂ ಓದಿ: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

ವೈದ್ಯಕೀಯ ಶಿಕ್ಷಣ

  1. ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು.
  2. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು. ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  3. NIMHANS ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಜೊತೆಯಲ್ಲಿ ನಾನ್‌ ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ (NAFLD) ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸಲಾಗುವುದು.
  4. ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳನ್ನು ಸ್ಥಾಪಿಸಲಾಗುವುದು.
  5. ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ (Trauma Care Center) ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಸಾವಿರಾರು ಬಡಜನರಿಗೆ ಕೈಗೆಟಕುವ ದರದಲ್ಲಿ ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆ ನೀಡುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (Kidwai Memorial Institute of Oncology) ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯ ಕಲಬುರಗಿ ಮತ್ತು ಮೈಸೂರಿನಲ್ಲಿರುವ ಪ್ರಾದೇಶಿಕ ಘಟಕಗಳಲ್ಲಿ ಸೌಲಭ್ಯಗಳ ಸುಧಾರಣೆಗೆ 20 ಕೋಟಿ ರೂ. ಒದಗಿಸಲಾಗುವುದು.
  6. ಚಿತ್ರದುರ್ಗದ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಯನ್ನು ಐದು ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಜೆಟ್​​ ಮಂಡನೆ ಲೈವ್​ ಆಗಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 3:25 pm, Fri, 7 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್