Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದು, ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ ಅಡಿ ʻಸ್ವಾವಲಂಬಿ ಸಾರಥಿʼ ಎಂಬ ಹೊಸ ಯೋಜನೆಯನ್ನು ಪರಿಚಯಿಸಿದ್ದಾರೆ. ಏನಿದರ ವಿಶೇಷತೆ ಇಲ್ಲಿದೆ.

Karnataka Budget 2023: ಎಸ್‌ಸಿ,ಎಸ್‌ಟಿ ಸಮುದಾಯಗಳ ಯುವಜನರ ಸ್ವಯಂ ಉದ್ಯೋಗಕ್ಕೆ ಸ್ವಾವಲಂಬಿ ಸಾರಥಿ; ಬಜೆಟ್​​ನಲ್ಲಿ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 07, 2023 | 5:04 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2023-24ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದು, ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಸಮಾಜ ಕಲ್ಯಾಣ ಇಲಾಖೆ (Social Welfare department) ಅಡಿ ʻಸ್ವಾವಲಂಬಿ ಸಾರಥಿʼ ಎಂಬ ಹೊಸ ಯೋಜನೆಯನ್ನು  ಪರಿಚಯಿಸಿದ್ದಾರೆ. ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.75 ರಷ್ಟು ಅಂದರೇ ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

ಇನ್ನು ಸಮಾಜ ಕಲ್ಯಾಣ ಇಲಾಖೆ ಅಡಿ ಅನೇಕ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭ್ಯುದಯಕ್ಕೆ ಅನೇಕ ಕೊಡುಗೆಗಳನ್ನು ರಾಜ್ಯ ಸರ್ಕಾರ ನೀಡಿದ್ದು, ಈ ಕುರಿತ ವರದಿ ಇಲ್ಲಿದೆ.

ಇದನ್ನೂ ಓದಿ: ಹಠಾತ್ ಹೃದಯಾಘಾತ ತಪ್ಪಿಸಲು ಮುಂದಾದ ಸರ್ಕಾರ; ಪುನೀತ್ ಸ್ಮರಣಾರ್ಥ ಹೊಸ ಯೋಜನೆ ಜಾರಿಗೆ

  1. ಈ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ 24,333 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ 9,960 ಕೋಟಿ ರೂ. ಸೇರಿದಂತೆ ಒಟ್ಟಾರೆ 34,294 ಕೋಟಿ ರೂ.ಗಳಿಗೆ ಹೆಚ್ಚಿಸಿ, 4,079 ಕೋಟಿ ರೂ.ಗಳ ಹೆಚ್ಚುವರಿ ಅನುದಾನವನ್ನು ಒದಗಿಸಿರುತ್ತೇನೆ. ಇದು ಈ ಸಮುದಾಯಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ನಮ್ಮ ಸರ್ಕಾರವು ನೀಡುವ ಆದ್ಯತೆಗೆ ಸ್ಪಷ್ಟ ನಿದರ್ಶನವಾಗಿದೆ.
  2. SCSP/TSP ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳ ಒಳಿತಿಗೇ ಬಳಕೆಯಾಗಬೇಕೆನ್ನುವುದು ನಮ್ಮ ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ದಲಿತ ಸಂಘಟನೆಗಳು ಮತ್ತು ಚಿಂತಕರ ಬಹುದಿನಗಳ ಒತ್ತಾಯದನ್ವಯ ಕಾಯ್ದೆಯ ಸೆಕ್ಷನ್‌ 7(ಡಿ) ಅನ್ನು ಕೈಬಿಡಲಾಗುವುದು.
  3. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಹತ್ತು ಕ್ರೈಸ್‌ ವಸತಿ ಶಾಲೆಗಳಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಉತ್ತಮ ಗುಣಮಟ್ಟದ ಕ್ರೀಡಾ ಸೌಲಭ್ಯವನ್ನು ಒದಗಿಸಲು ತಲಾ ಎರಡು ಕೋಟಿ ರೂ.ಗಳಂತೆ ಒಟ್ಟು 20 ಕೋಟಿ ರೂ. ನೀಡಲಾಗುವುದು.
  4. ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿಶ್ವದಲ್ಲಿ 250 ರೊಳಗೆ University Ranking ಹೊಂದಿರುವ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಕೈಗೊಳ್ಳುವ ಸಲುವಾಗಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಕ್ಕನುಗುಣವಾಗಿ ವ್ಯಾಸಂಗದ ಸಂಪೂರ್ಣ ವೆಚ್ಚವನ್ನು ಸರ್ಕಾರದ ವತಿಯಿಂದ ಭರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗೆ ಇನ್ನೂ ಹೆಚ್ಚಿನ ಪ್ರಾತಿನಿಧ್ಯ ನೀಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 36 ಕೋಟಿ ರೂ. ಅನುದಾನ ಒದಗಿಸಲಾಗಿದೆ.
  5. ISEC ಸಂಸ್ಥೆಯಲ್ಲಿ Ph.D. ಮಾಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಬಿ.ಆರ್. ಅಂಬೇಡ್ಕರ್‌ ಫೆಲೋಶಿಪ್‌ ನೀಡಲು ಎರಡು ಕೋಟಿ ರೂ. Corpus Fund ನೀಡಲಾಗುವುದು.
  6. ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲದ ಶೇ.75 ರಷ್ಟು, ಗರಿಷ್ಠ ನಾಲ್ಕು ಲಕ್ಷ ರೂ. ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು.
  7. ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಎರಡು ಕೋಟಿ ರೂ.ವರೆಗೆ ಸರ್ಕಾರದಿಂದ ಸಮಾನಾಂತರ ಖಾತ್ರಿ ನೀಡುವ ಯೋಜನೆ ಜಾರಿಯಲ್ಲಿದ್ದು, ಸಮಾನಾಂತರ ಖಾತ್ರಿಯನ್ನು ರಾಷ್ಟ್ರೀಕೃತ ಬ್ಯಾಂಕ್​ಗಳಿಂದ ಪಡೆಯುವ ಸಾಲಕ್ಕೂ ವಿಸ್ತರಿಸಲಾಗುವುದು.
  8. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಉದ್ಯಮಶೀಲತೆ ಅಭಿವೃದ್ಧಿ ಕಾರ್ಯಕ್ರಮದಡಿ (ಇಡಿಪಿ) ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.
  9. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಂದು ಲಕ್ಷ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುವುದು.
  10. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ವಾಣಿಜ್ಯ ಬ್ಯಾಂಕ್‌ಗಳಿಂದ ಪಡೆಯುವ ಸಾಲಕ್ಕೆ ಗರಿಷ್ಠ ಶೇ.20ರಷ್ಟು ಅಥವಾ ಒಂದು ಲಕ್ಷ ರೂ.ಗಳು ಮೀರದಂತೆ ಸಾಲ ಸಹಾಯಧನ ನೀಡಲಾಗುವುದು.
  11. ಚರ್ಮ ಆಧಾರಿತ ಸಾಂಪ್ರದಾಯಿಕ ಕುಶಲಕರ್ಮಿಗಳ ಕುಟುಂಬಗಳ 100 ಯುವಜನರಿಗೆ ಚರ್ಮ ಉದ್ಯಮದಲ್ಲಿನ ಹೊಸ ತಂತ್ರಜ್ಞಾನಗಳು, ವಿನ್ಯಾಸಗಳು ಹಾಗೂ ಮಾರುಕಟ್ಟೆಯ ಬೇಡಿಕೆಗಳಿಗೆ ಪರಿಚಯಿಸಲು ಚರ್ಮ ಆಧಾರಿತ ಕೈಗಾರಿಕೆಗಳಲ್ಲಿ ಮುಂಚೂಣಿಯಲ್ಲಿರುವ ರಾಜ್ಯಗಳಾದ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಕಳುಹಿಸಲಾಗುವುದು.
  12. ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಿರಿಯ ನಾಗರಿಕರ ಆರೈಕೆ ಮತ್ತು ನೆರವಿಗಾಗಿ ವೃದ್ಧಾಶ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಪರಿಹಾರ ಸಮಿತಿ (CRC) ಮತ್ತು NGO ಗಳ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.
  13. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯವನ್ನು ದೌರ್ಜನ್ಯ ತಡೆ ಅಧಿನಿಯಮದಡಿ ರಕ್ಷಣಾ ಕೋಶವನ್ನಾಗಿ ಘೋಷಿಸಲಾಗಿದೆ. ಈ ಕೋಶವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯ ಕ್ರಮವಹಿಸಲಾಗುವುದು.
  14. ಪರಿಶಿಷ್ಟ ಪಂಗಡಗಳ ಜನಾಂಗದಲ್ಲಿ ಸೋಲಿಗ ಸಮುದಾಯ ಒಳಗೊಂಡಂತೆ ಜೇನುಕುರುಬ, ಕಾಡುಕುರುಬ, ಕೊರಗ, ಇರುಳಿಗ, ಬೆಟ್ಟಕುರುಬ ಇತ್ಯಾದಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಮಗ್ರ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  15. ರಾಜ್ಯದ ೮ ಜಿಲ್ಲೆಗಳಲ್ಲಿ ವಾಸಿಸುತ್ತಿರುವ 11 ಬುಡಕಟ್ಟು ಪಂಗಡಗಳಾದ ಕೊರಗ, ಜೇನುಕುರುಬ, ಸೋಲಿಗ, ಎರವ, ಕಾಡುಕುರುಬ, ಮಲೆಕುಡಿಯ, ಸಿದ್ಧಿ, ಹಸಲರು, ಗೌಡಲು, ಗೊಂಡ ಮತ್ತು ಬೆಟ್ಟಕುರುಬ ಜನಾಂಗದ ಕುಟುಂಬಗಳಿಗೆ ಪೌಷ್ಟಿಕ ಆಹಾರ ಯೋಜನೆಯನ್ನು ವಾರ್ಷಿಕ ಆರು ತಿಂಗಳುಗಳಿಗೆ ನೀಡಲಾಗುತ್ತಿದ್ದು, ಇದನ್ನು 12 ತಿಂಗಳಿಗೆ ವಿಸ್ತರಿಸಲಾಗುವುದು. ಇದಕ್ಕೆ ವಾರ್ಷಿಕವಾಗಿ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  16. ಅರಣ್ಯ ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗಾಗಿ ಬುಡಕಟ್ಟು ಪ್ರದೇಶಗಳಲ್ಲಿ 100 ಅರಣ್ಯ ಉತ್ಪನ್ನ ಘಟಕಗಳನ್ನು TRIFED ಸಮನ್ವಯದಲ್ಲಿ ಸ್ಥಾಪಿಸಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Fri, 7 July 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್